ಬೆಂಗಳೂರು : ರಾಜ್ಯ ಸರ್ಕಾರಿ ಪ್ರಥಮ ದರ್ಜೆ, ಪಾಲಿಟೆಕ್ನಿಕ್, ಎಂಜಿನಿಯರಿಂಗ್ ಕಾಲೇಜುಗಳು ಮತ್ತು ವಿಶ್ವೇಶ್ವರಯ್ಯ ಎಂಜಿನಿಯರಿಂಗ್ ಕಾಲೇಜು ವಿಶ್ವವಿದ್ಯಾಲಯದಲ್ಲಿ(ಯುವಿಸಿಇ) ಖಾಲಿ ಇರುವ ಒಟ್ಟು 2000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಅನುಮತಿ ನೀಡಿದೆ. ಪ್ರಥಮ ದರ್ಜೆ ಕಾಲೇಜುಗಳಲ್ಲಿನ 825 ಸಹಾಯಕ ಪ್ರಾಧ್ಯಾಪಕ ಹುದ್ದೆ, ಪಾಲಿಟೆಕ್ನಿಕ್‌ಗಳಲ್ಲಿನ 941 ಉಪನ್ಯಾಸಕರ ಹುದ್ದೆ, ಎಂಜಿನಿಯರಿಂಗ್ ಕಾಲೇಜುಗಳಿಗೆ 186 ಸಹಾಯಕ ಪ್ರಾಧ್ಯಾಪಕ ಹುದ್ದೆ ಮತ್ತು ಯುವಿಸಿಇಯ 47 ಬೋಧಕ ಹುದ್ದೆಗಳು ಸೇರಿ ಪ್ರಸಕ್ತ ಸಾಲನ ಬಜೆಟ್‌ನಲ್ಲಿ ಘೋಷಿಸಿರುವಂತೆ …
Read More »ಕರ್ನಾಟಕ ರಾಜ್ಯಪಾಲರ ಸಹಿ ದುರ್ಬಳಕೆ, ಸುಳ್ಳು ನೇಮಕಾತಿ ಆದೇಶ!
ಬೆಂಗಳೂರು: ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರ ಸಹಿ ನಕಲು ಮಾಡಿ ಖೊಟ್ಟಿ ಲೆಟರ್‌ಹೆಡ್ ಬಳಸುತ್ತಿದ್ದ ನಕಲಿ ಐಪಿಎಸ್, ಐಎಎಸ್ ಅಧಿಕಾರಿ ಎಚ್.ಎನ್. ಸುಜಯೇಂದ್ರ (45) ಎಂಬಾತನ ವಿರುದ್ಧ ವಿಜಯನಗರ ಠಾಣೆ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ಪ್ರದೀಪ್ ನೀಡಿದ ದೂರಿನನ್ವಯ ಸುಜಯೇಂದ್ರ ವಿರುದ್ಧ ಪ್ರಕರಣ ದಾಖಲಿಸಿ ತನಿಖೆ ಕೈಗೆತ್ತಿಕೊಂಡಿದ್ದಾರೆ. ರಾಜ್ಯಪಾಲರ ಹೆಸರಿನ ಲೆಟರ್‌ಹೆಡ್ ಬಳಸಿರುವ ಸುಜಯೇಂದ್ರ, ರಾಜ್ಯಪಾಲರ ಸಹಿ ನಕಲು ಮಾಡಿ ವೆಲ್ಲೂರ್ ಇನ್ಸ್‌ಟಿಟ್ಯೂಟ್ ಆಫ್ ಟೆಕ್ನಾಲಜಿ …
Read More »ಸ್ವ ಉದ್ಯೋಗ ಒದಗಿಸಲು ಒತ್ತು ನೀಡಿ
ಬೆಳಗಾವಿ: ಗ್ರಾಮೀಣ ಭಾಗದ ಸ್ವಸಹಾಯ ಸಂಘದ ಮಹಿಳೆಯರಿಗೆ ಸ್ವ ಉದ್ಯೋಗ ಒದಗಿಸಲು ಅಗತ್ಯ ಕ್ರಮ ವಹಿಸಬೇಕು. ಅಲ್ಲದೆ, ಹೊಸ ಕಾರ್ಯಕ್ರಮ ರೂಪಿಸಬೇಕು ಎಂದು ಜಿಪಂ ಸಿಇಒ ರಾಹುಲ ಶಿಂಧೆ ಹೇಳಿದರು. ನಗರದ ಜಿಪಂ ಸಭಾಂಗಣದಲ್ಲಿ ಬುಧವಾರ ಹಮ್ಮಿಕೊಂಡಿದ್ದ ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು,ಸ್ವಸಹಾಯ ಸಂಘದ ಮಹಿಳೆಯರ ಆರ್ಥಿಕ ಏಳ್ಗೆಗೆ ನೆರವಾಗುವ ನಿಟ್ಟಿನಲ್ಲಿ ಕುಕ್ಕುಟ ಸಂಜೀವಿನಿ ಯೋಜನೆಯಡಿ ಸ್ವಸಹಾಯ ಸಂಘದ ಮಹಿಳೆಯರಿಂದ ಪ್ರತಿ ತಾಲೂಕಿಗೆ …
Read More »ಗದಗ: ರೋಣ ಜಿಗಳೂರು ಕ್ರಾಸ್ ಬಳಿ ಕ್ರೂಸರ್-ಲಾರಿ ಭೀಕರ ಅಪಘಾತ, ಮೂವರು ಸಾವು
ಗದಗ: ಕ್ರೂಸರ್ ವಾಹನ ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿ, 10ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ ಗದಗ ಜಿಲ್ಲೆಯ ರೋಣ ತಾಲೂಕಿನ ಜಿಗಳೂರು ಕ್ರಾಸ್ ಬಳಿ ನಡೆದಿದೆ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಗಜೇಂದ್ರಗಡದ ಶಿವಾಜಿ ನಗರ ನಿವಾಸಿಗಳಾದ ಕೂಲಿ ಕಾರ್ಮಿಕರು ಕ್ರೂಸರ್ ವಾಹನದಲ್ಲಿ ಕೆಲಸಕ್ಕಾಗಿ ರೋಣ ಕಡೆಗೆ ತೆರಳುತ್ತಿದ್ದ ವೇಳೆ ಲಾರಿ ಡಿಕ್ಕಿಯಾದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. …
Read More »ಸಮುದಾಯದ ಹಿತಕ್ಕಾಗಿ ಲಿಂಗಾಯತ ಕಾಂಗ್ರೆಸ್ ಪಕ್ಷದ ಶಾಸಕರ ಸಭೆ: ಎಂ.ಬಿ.ಪಾಟೀಲ್
ಬೆಂಗಳೂರು: ಸಮುದಾಯದ ಹಿತಾಸಕ್ತಿ ರಕ್ಷಣೆಗಾಗಿ ಸೋಮವಾರ ರಾತ್ರಿ ಕಾಂಗ್ರೆಸ್ ಪಕ್ಷದ ಲಿಂಗಾಯತ ಶಾಸಕರ ಸಭೆ ನಡೆದಿರುವುದು ನಿಜ. ಇದರಲ್ಲಿ ನಾಯಕತ್ವದ ವಿಚಾರವಾಗಲಿ, ವೈಯಕ್ತಿಕ ಅಜೆಂಡಾಗಳಾಗಲಿ ಇರಲಿಲ್ಲ. ಎಲ್ಲಾ ಸಮುದಾಯಗಳ ಶಾಸಕರೂ ಹೀಗೆ ಆಗಿಂದಾಗ್ಗೆ ಸಭೆ ಸೇರುವುದು ಸರ್ವೇ ಸಾಮಾನ್ಯ ಎಂದು ಲಿಂಗಾಯತ ಸಮುದಾಯದ ಮುಖಂಡರೂ ಆಗಿರುವ ಬೃಹತ್ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಸ್ಪಷ್ಟಪಡಿಸಿದ್ದಾರೆ. ಬುಧವಾರ ವಿಧಾನಸೌಧದ ಆವರಣದಲ್ಲಿ ತಮ್ಮನ್ನು ಭೇಟಿ ಮಾಡಿದ ಮಾಧ್ಯಮ ಪ್ರತಿನಿಧಿಗಳು ಕೇಳಿದ ಪ್ರಶ್ನೆಗಳಿಗೆ ಅವರು ಉತ್ತರಿಸಿದ್ದಾರೆ. …
Read More »ಕೋಲಾರದಲ್ಲಿ 20 ಸಾವಿರ ಹೆಲ್ಮೆಟ್ ಉಚಿತ ವಿತರಣೆ; ಮುಗಿಬಿದ್ದ ಬೈಕ್ ಸವಾರರು
ಕೋಲಾರ: ಕೋಲಾರ ಜಿಲ್ಲೆಯ ಮುಳಬಾಗಿಲು ಪಟ್ಟಣದ ಮೈದಾನ ಜಾತ್ರೆಯಂತಾಗಿತ್ತು. ಡಿಸೆಂಬರ್ 1 ರಿಂದ ಜಿಲ್ಲೆಯಲ್ಲಿ ಬೈಕ್ ಸವಾರರಿಗೆ ಹೆಲ್ಮೆಟ್ ಕಡ್ಡಾಯ ರೂಲ್ಸ್ ಜಾರಿಮಾಡಲಾಗಿದೆ. ಹೀಗಾಗಿ ಮುಳಬಾಗಿಲು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ, ಕಳೆದ ಚುನಾವಣೆಯಲ್ಲಿ ಪರಾಭವಗೊಂಡಿದ್ದ ಆದಿನಾರಾಯಣ ನೇತೃತ್ವದಲ್ಲಿ ಬುಧವಾರ 25 ಸಾವಿರ ಉಚಿತ ಹೆಲ್ಮೆಟ್ ವಿತರಣೆ ಕಾರ್ಯಕ್ರಮ ಆಯೋಜಿಸಲಾಗಿತ್ತು. ಜೀವಸಂಜೀವಿನಿ ಕಾರ್ಯಕ್ರಮಕ್ಕೆ ಕೋಲಾರ ಶಾಸಕ ಕೊತ್ತೂರು ಮಂಜುನಾಥ್ ಚಾಲನೆ ನೀಡಿದರು. ಬೈಕ್ಗಳಲ್ಲಿ ಬಂದಿದ್ದ ಸವಾರರಿಗೆ ಹೆಲ್ಮೆಟ್ ವಿತರಿಸಲು 16 ಕೌಂಟರ್ ಓಪನ್ …
Read More »ಫೆ.9ರಿಂದ ಮೆಟ್ರೋ ದರ ಏರಿಕೆಗೆ ಸರ್ಕಾರ ಒಪ್ಪಿಗೆ?
ಬೆಂಗಳೂರು: ಮೆಟ್ರೋ ಪ್ರಯಾಣಿಕರಿಗೆ ಮತ್ತೊಮ್ಮೆ ಶಾಕ್ ಎದುರಾಗಿದೆ. ಫೆಬ್ರವರಿ 9ರಿಂದ ಮತ್ತೆ ಮೆಟ್ರೋ ದರ ಏರಿಕೆಯಾಗುವ ಸಾಧ್ಯತೆ ಇದೆ. ಮೆಟ್ರೋ ದರ ಏರಿಕೆಗೆ ಸರ್ಕಾರ ಅನುಮೋದನೆ ನೀಡಿದೆ ಎನ್ನಲಾಗಿದೆ. ಬಿಎಂಆರ್‌ಸಿಎಲ್ ಬೋರ್ಡ್ ಮೀಟಿಂಗ್‌ನಲ್ಲಿ ಶೇ.5 ರಷ್ಟು ದರ ಏರಿಕೆ ಮಾಡಲು ತೀರ್ಮಾನಿಸಲಾಗಿದೆ. ದರ ಏರಿಕೆ ಸಮಿತಿಯ ಶಿಫಾರಸ್ಸಿನಂತೆ ಪ್ರತಿ ವರ್ಷ ಫೆಬ್ರವರಿಯಲ್ಲಿ ದರ ಏರಿಕೆ ಮಾಡಬೇಕು. ಕಳೆದ ವರ್ಷ ಫೆಬ್ರವರಿ 9ರಂದು 100%ರಷ್ಟು ಟಿಕೆಟ್ ದರ ಏರಿಕೆ ಆಗಿತ್ತು. ಪ್ರಯಾಣಿಕರ …
Read More »ಕರೆಂಟ್, ಮೂಲಭೂತ ಸೌಕರ್ಯ ಇಲ್ಲ – ದುಬಾರೆ ಸಾಕಾನೆ ಶಿಬಿರದ ಮಾವುತ, ಕಾವಾಡಿಗಳ ಸಮಸ್ಯೆ
ಮಡಿಕೇರಿ: ದೂರದಿಂದ ಬಂದು ದೋಣಿಯಲ್ಲಿ ವಿಹರಿಸಿ, ಆನೆ ಸಫಾರಿ ಮಾಡಿ ಒಂದಷ್ಟು ಹೊತ್ತು ನಿಸರ್ಗದ ಮಡಿಲಲ್ಲಿ ಮೈಮರೆತು ನೀರಾಟವಾಡಿ ತಮ್ಮ ಊರುಗಳಿಗೆ ಹಿಂದಿರುಗುವ ಪ್ರವಾಸಿಗರಿಗೆ ದುಬಾರೆ ಒಂದು ಅದ್ಭುತ ತಾಣ. ಇಷ್ಟೊಂದು ಖ್ಯಾತಿ ಪಡೆದ ಪ್ರವಾಸಿ ತಾಣ ಮೂಲಭೂತ ಸೌಕರ್ಯದಿಂದ ವಂಚಿತವಾಗಿದೆ. ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನಲ್ಲಿರುವ ದುಬಾರೆ ಆನೆ ಶಿಬಿರದಲ್ಲಿ ಸಾಕಾನೆಗಳಿವೆ. ಇಷ್ಟೊಂದು ಖ್ಯಾತಿ ಪಡೆದ ಪ್ರವಾಸಿ ತಾಣ ಮಾತ್ರ ಮೂಲಭೂತ ಸೌಕರ್ಯದಿಂದ ವಂಚಿತವಾಗಿದೆ ಎಂಬುದು ಇಲ್ಲಿಗೆ ಭೇಟಿ …
Read More »ವಿಜಯಪುರ | ಸರ್ವಿಸ್ ಸೆಂಟರ್‌ನಲ್ಲಿ ಅಗ್ನಿ ಅವಘಡ – 20ಕ್ಕೂ ಹೆಚ್ಚು ಕಾರುಗಳು ಭಸ್ಮ
ವಿಜಯಪುರ: ನಗರದ ಹೊರವಲಯದಲ್ಲಿರುವ ಸರ್ವಿಸ್ ಸೆಂಟರ್ ಒಂದರಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ 20ಕ್ಕೂ ಹೆಚ್ಚು ಕಾರುಗಳು ಸುಟ್ಟು ಕರಕಲಾಗಿವೆ. ರಾಷ್ಟ್ರೀಯ ಹೆದ್ದಾರಿ 50ರಲ್ಲಿರುವ ಹಣಮಂತ ಕನಮಡಿ ಎಂಬವರಿಗೆ ಸೇರಿದ ಹೆಚ್‌ಎಂಕೆ ಕಾರ್ ಸರ್ವಿಸ್ ಸೆಂಟರ್‌ನಲ್ಲಿ ಈ ಅಗ್ನಿ ದುರಂತ ಸಂಭವಿಸಿದೆ. ರಿಪೇರಿ ಹಾಗೂ ಸರ್ವಿಸ್‌ಗಾಗಿ ಬಂದಿದ್ದ 20ಕ್ಕೂ ಹೆಚ್ಚು ಕಾರುಗಳು ಸುಟ್ಟು ಕರಕಲಾಗಿವೆ. ಅಗ್ನಿ ಅವಘಡಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ …
Read More »ನಾನು ಜೀವನದ ಕೊನೆಗಾಲದಲ್ಲಿದ್ದೇನೆ, ಈ ವೃದ್ಧನ ಮನವಿಗೆ ಸ್ಪಂದಿಸಿ ಕರ್ನಾಟಕ ರಕ್ಷಿಸಿ: ಹೆಚ್‌ಡಿಡಿ
ನವದೆಹಲಿ: ರಾಜ್ಯ ಎದುರಿಸುತ್ತಿರುವ ನೀರಾವರಿ ಬಿಕ್ಕಟ್ಟಿನ ಬಗ್ಗೆ ರಾಜ್ಯಸಭೆಯಲ್ಲಿ ಗದ್ಗದಿತರಾಗಿ ಮಾತಾನಾಡಿದ ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹೆಚ್.ಡಿ.ದೇವೇಗೌಡರು, ಕರ್ನಾಟಕದಲ್ಲಿ ಕುಡಿಯುವ ನೀರಿನ ಸಮಸ್ಯೆ ಗಂಭೀರವಾಗಿದೆ. ದಯಮಾಡಿ ಪರಿಹರಿಸಿ ಎಂದು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿಕೊಂಡರು. ರಾಜ್ಯಸಭೆಯಲ್ಲಿ ಬುಧವಾರ ನಡೆದ ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯ ಚರ್ಚೆಯಲ್ಲಿ ಪಾಲ್ಗೊಂಡು ಮಾಜಿ ಪ್ರಧಾನಿಗಳು ಮಾತನಾಡಿದರು. ರಾಜ್ಯದ ಅನೇಕ ನೀರಾವರಿ ಯೋಜನೆಗಳು ನೆನೆಗುದಿಗೆ ಬಿದ್ದಿವೆ. ಆ ಎಲ್ಲಾ ಯೋಜನೆಗಳಿಗೆ …
Read More »
Laxmi News 24×7