Breaking News

Laxminews 24x7

ಕೇರಳಂ ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಕಾಂಗ್ರೆಸ್‌ ನಾಯಕ ತಿರುವಾಂಚೂರ್ ರಾಧಾಕೃಷ್ಣನ್ ಆಯ್ಕೆ

ತಿರುನಂತಪುರಂ: ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಶಾಸಕರೂ ಆಗಿರುವ ತಿರುವನಂಚೂರು ರಾಧಾಕೃಷ್ಣನ್  ಶುಕ್ರವಾರ (ಇಂದು) ಕೇರಳಂ 16ನೇ ವಿಧಾನಸಭೆಗೆ ನೂತನ ಸ್ಪೀಕರ್ ಆಗಿ ಆಯ್ಕೆಯಾಗಿದ್ದಾರೆ. ಹಂಗಾಮಿ ಸ್ಪೀಕರ್ ಜಿ. ಸುಧಾಕರನ್ ಮತ ಚಲಾಯಿಸದ ಕಾರಣ ರಾಧಾಕೃಷ್ಣನ್ 101 ಮತಗಳನ್ನ ಪಡೆದು ಸ್ಪೀಕರ್‌ ಸ್ಥಾನಕ್ಕೆ ಆಯ್ಕೆಯಾದರು. 140 ಸದಸ್ಯರಲ್ಲಿ ಹಂಗಾಮಿ ಸ್ಪೀಕರ್ ಜಿ. ಸುಧಾಕರನ್ ಚುನಾವಣಾ ಅಧಿಕಾರಿ ಆಗಿದ್ದ ಕಾರಣ ಮತದಾನದಿಂದ ದೂರ ಉಳಿದಿದ್ದರು. ಚಲಾವಣೆಯಾದ 139 ಮತಗಳಲ್ಲಿ, ಯುಡಿಎಫ್‌ನಿಂದ ಕಣಕ್ಕಿಳಿದ …

Read More »

ಕರ್ನಾಟಕದ ನಾಲ್ಕು ಸೇರಿ 24 ರಾಜ್ಯಸಭಾ ಸ್ಥಾನಗಳಿಗೆ ಚುನಾವಣಾ ದಿನಾಂಕ ಘೋಷಣೆ

ನವದೆಹಲಿ: ಮಲ್ಲಿಕಾರ್ಜುನ ಖರ್ಗೆ, ಹೆಚ್.ಡಿ.ದೇವೇಗೌಡ, ಈರಣ್ಣ ಕಡಾಡಿ, ನಾರಾಯಣ್ ಅವರಿಂದ ತೆರವಾಗುವ ನಾಲ್ಕು ರಾಜ್ಯಸಭಾ ಸ್ಥಾನಗಳಿಗೆ ಚುನಾವಣಾ ದಿನಾಂಕ ಘೋಷಣೆಯಾಗಿದೆ. ಜೂನ್‌ 18 ರಂದು ಚುನಾವಣೆ ನಡೆಯಲಿದ್ದು, ಅಂದೇ ಫಲಿತಾಂಶ ಹೊರಬೀಳಲಿದೆ. ಜೂನ್ 8 ಕ್ಕೆ ನಾಮಪತ್ರ ಸಲ್ಲಿಕೆಗೆ ಕಡೆಯ ದಿನಾಂಕ, ಜೂನ್ 9 ನಾಮಪತ್ರ ಪರಿಶೀಲನೆ, ಜೂನ್ 11 ನಾಮಪತ್ರ ಹಿಂಪಡೆಯಲು ಕಡೆಯ ದಿನವಾಗಿದೆ. ಕರ್ನಾಟಕ ಸೇರಿ ಹತ್ತು ರಾಜ್ಯಗಳಲ್ಲಿ ಖಾಲಿಯಾಗಲಿರುವ ಹುದ್ದೆಗಳಿಗೆ ಚುನಾವಣೆ ನಡೆಯಲಿದೆ. ಒಟ್ಟು 24 …

Read More »

ಗಂಡನ ಕಿರುಕುಳಕ್ಕೆ ಬೇಸತ್ತು ನಾಲ್ಕು ತಿಂಗಳ ಗರ್ಭಿಣಿ ಆತ್ಮಹತ್ಯೆ

ಕಲಬುರಗಿ: ಪ್ರೀತಿಸಿ ಮದುವೆಯಾದ ಪತಿಯ ನಿರಂತರ ಕಿರುಕುಳಕ್ಕೆ ಬೇಸತ್ತು 4 ತಿಂಗಳ ಗರ್ಭಿಣಿಯೊಬ್ಬರು ತವರು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಲಬುರಗಿ ತಾಲ್ಲೂಕಿನ ಔರಾದ್ (ಬಿ) ಗ್ರಾಮದಲ್ಲಿ ನಡೆದಿದೆ. ಗ್ರಾಮದ ನಿವಾಸಿ ಶೃತಿ (22) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಎರಡು ವರ್ಷಗಳ ಹಿಂದೆ ಈಕೆ ಗೋಪಾಲ್ ಎಂಬಾತನನ್ನು ಪ್ರೀತಿಸಿ ಮದುವೆಯಾಗಿದ್ದರು. ಆದರೆ, ವಿವಾಹದ ಬಳಿಕ ಕುಡಿತ, ಜೂಜಾಟ ಹಾಗೂ ದುಶ್ಚಟಗಳಿಗೆ ದಾಸನಾಗಿದ್ದ ಗೋಪಾಲ್, ಸಾಲ ತೀರಿಸಲು ಮನೆ …

Read More »

ಧಾರವಾಡ ಪ್ರತ್ಯೇಕ ಮಹಾನಗರ ಪಾಲಿಕೆ ರಚನೆಗೆ ಅನುಮೋದನೆ ರಾಜ್ಯಪಾಲರಿಗೆ ಸಚಿವ ಸಂತೋಷ್‌ ಲಾಡ್‌ ಮನವಿ

ಬೆಂಗಳೂರು,  ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜಿಸಿ ಧಾರವಾಡಕ್ಕೆ ಪ್ರತ್ಯೇಕ ಪಾಲಿಕೆ ರಚನೆ ಪ್ರಸ್ತಾವಕ್ಕೆ ಅನುಮೋದನೆ ನೀಡಬೇಕು ಎಂದು ರಾಜ್ಯಪಾಲರಿಗೆ ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್‌ ಎಸ್‌ ಲಾಡ್‌ ಅವರು ಮನವಿ ಮಾಡಿದ್ದಾರೆ. ಧಾರವಾಡ ಶಾಸಕರ ನಿಯೋಗದೊಂದಿಗೆ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರನ್ನು ಲೋಕಭವನದಲ್ಲಿ ಇಂದು ಭೇಟಿ ಮಾಡಿ ಸಚಿವರು ಮನವಿ ಸಲ್ಲಿಸಿದರು. ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವ ಲಾಡ್‌ ಅವರು, ಪ್ರತ್ಯೇಕ ಧಾರವಾಡ …

Read More »

ಅಬಕಾರಿ ಪೊಲೀಸರ ಭರ್ಜರಿ ಕಾರ್ಯಾಚರಣೆ: ಸ್ಪಿರೀಟ್ ಸಾಗಿಸುತ್ತಿದ್ದ ಟ್ಯಾಂಕರ್ ವಶಕ್ಕೆ

ಬೆಳಗಾವಿ:  ಟ್ಯಾಂಕರ್ ನಲ್ಲಿ ಅಕ್ರಮವಾಗಿ ಸ್ವೀರಿಟ್ ಸಾಗಿಸುತ್ತಿದ್ದ ವೇಳೆ ಅಬಕಾರಿ ಪೊಲೀಸರು ದಾಳಿ ಮಾಡಿ ಟ್ಯಾಂಕರ್ ವಶಕ್ಕೆ ಪಡೆದಿದ್ದಾರೆ. ಬೆಳಗಾವಿ ಜಿಲ್ಲೆಯ ಖಾನಾಪೂರ ತಾಲೂಕಿನ ಜಾಂಬೋಟಿಯಿಂದ ಕಣಕುಂಬಿಗೆ ಹೋಗುವ ರಸ್ತೆಯಲ್ಲಿ ಟ್ಯಾಂಕರ್ ವಶಕ್ಕೆ ಪಡೆಯಲಾಗಿದೆ. ಟ್ಯಾಂಕರ್ ನಲ್ಲಿ 14,000.ಲೀ ಸ್ವೀರಿಟ್ ಅಕ್ರಮವಾಗಿ ಮಾರಾಟಕ್ಕಾಗಿ ಸಾಗಾಣಿಕೆ ಮಾಡಲಾಗುತಿತ್ತು. ಟ್ಯಾಂಕರ್ ಚಾಲಕ ಸಿದ್ದರಾಜು ಪುಟ್ಟಸ್ವಾಮಿ ಶೆಟ್ಟಿ (47) ವಿರುದ್ಧ ಬಿಎನ್ಎಸ್‌ಎಸ್ ಕಾಯ್ದೆ 2023ರ ಕಲಂ 35(3)ರನ್ವಯ ಮುಂದಿನ ತನಿಖೆಗೆ ಹಾಜರಾಗಲು ನೋಟಿಸ್ ಜಾರಿ …

Read More »

ಪಂತನಗರದಲ್ಲಿ ₹3.50 ಕೋಟಿ ವೆಚ್ಚದ ರಸ್ತೆ-ಚರಂಡಿ ಕಾಮಗಾರಿಗಳಿಗೆ ಚಾಲನೆ

ಬೆಳಗಾವಿ ಗ್ರಾಮೀಣ ಕ್ಷೇತ್ರದ ಪಂತ ಬಾಳೇಕುಂದ್ರಿ ಗ್ರಾಮದ ಪಂತನಗರದಲ್ಲಿ ಸುಮಾರು ₹3.50 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ನೂತನ ಡಾಂಬರ್, ಕಾಂಕ್ರೀಟ್ ರಸ್ತೆ ಹಾಗೂ ಚರಂಡಿ ಕಾಮಗಾರಿಗಳಿಗೆ ಬುಧವಾರ ಭೂಮಿ ಪೂಜೆ ನೆರವೇರಿಸಿ ಚಾಲನೆ ನೀಡಲಾಯಿತು. ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ವಿಶೇಷ ಪ್ರಯತ್ನದಿಂದ ಈ ಮಹತ್ವದ ಕಾಮಗಾರಿಗಳಿಗೆ ಅನುದಾನ ಮಂಜೂರಾಗಿದ್ದು, ಸ್ಥಳೀಯರಲ್ಲಿ ಸಂತಸ ಮೂಡಿಸಿದೆ.ಈ ಸಂದರ್ಭದಲ್ಲಿ ನಾಗೇಶ್ ದೇಸಾಯಿ, ಅಪ್ಸರ್ ಜಮಾದಾರ್, ಬಸವರಾಜ ಮ್ಯಾಗೋಟಿ, ಸಣ್ಣಯಲ್ಲಪ್ಪ ತಳವಾರ, ಸದಾಶಿವ ಹಿಟ್ಟಣಗಿ, …

Read More »

ಬೆಳಗಾವಿಯಲ್ಲಿ ಮೇ. 25 ರಂದು ನೇರ ಸಂದರ್ಶನ

ಬೆಳಗಾವಿ: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಬೆಳಗಾವಿ, ವತಿಯಿಂದ ಮೇ. 25 2026 ರ ಬೆಳಗ್ಗೆ 9.30 ರಿಂದ ಮದ್ಯಾಹ್ನ 2 ಗಂಟೆಯವರೆಗೆ ಎಸ್.ಎಸ್.ಎಲ್.ಸಿ, ಐಟಿಐ, ಪಿಯುಸಿ, ಡಿಪ್ಲೋಮಾ ಪುರುಷ ಅಭ್ಯರ್ಥಿಗಳಿಗಾಗಿ ಖಾಸಗಿ ಕಂಪನಿಗಳಿಂದ “ನೇರ ಸಂದರ್ಶನ” ವನ್ನು ಬೆಳಗಾವಿಯ ಹೊನಗಾ ಜಿನಾಬಕೂಲ್ ಫೋರ್ಜ, ಪೈ.ಲಿ.ನಲ್ಲಿ ಆಯೋಜಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು https://tinyurl.com/ysb458p9 ಈ ವೆಬ್‌ಸೈಟನಲ್ಲಿ ಹೆಸರು ನೊಂದಾಯಿಸಿ ಕೊಳ್ಳಬಹುದಾಗಿದೆ. ಅಭ್ಯರ್ಥಿಗಳಿಗೆ ಉದ್ಯೋಗಾವಕಾಶವು ಉಚಿತವಾಗಿದ್ದು, ಇನ್ನುಳಿದ ಯಾವುದೇ ಸೌಲಭ್ಯಗಳು ಇರುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ …

Read More »

ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಳಗಾವಿ: ಬೆಳಗಾವಿ ಮಹಾನಗರ ಪಾಲಿಕೆಗೆ ಹಂಚಿಕೆ ಮಾಡಲಾಗಿರುವ 24 ಪೌರಕಾರ್ಮಿಕರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಹಾಗೂ ಪೌರಕಾರ್ಮಿಕರ ವಿಶೇಷ ನೇಮಕಾತಿ 2022 ಹಾಗೂ ಸಂಖ್ಯಾತಿರಿಕ್ತ ಪೌರಕಾರ್ಮಿಕರ ನೇಮಕಾತಿ 2023ರಲ್ಲಿ ಬಾಕಿ ಉಳಿದ ಪರಿಶಿಷ್ಠ ಪಂಗಡದ ಒಟ್ಟು 13 ಬ್ಯಾಕಲಾಗ್ ಹುದ್ದೆಗಳಿಗೆ ಪರಿಶಿಷ್ಠ ಪಂಗಡದ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ನಮೂನೆಗಳನ್ನು ಮೇ.20 2026 ರಿಂದ ಜೂನ್ 19 2026 ರವರೆಗೆ ಬೆಳಗಾವಿ ಮಹಾನಗರ ಪಾಲಿಕೆಯ ಆಡಳಿತ …

Read More »

ಶೂಟೌಟ್ ಮಾಡಿಕೊಂಡು ಬೆಳಗಾವಿಯ ಖ್ಯಾತ ವೈದ್ಯ ಆತ್ಮಹತ್ಯೆಗೆ ಶರಣು

ಬೆಳಗಾವಿ : ಕ್ಯಾನ್ಸರ್ ರೋಗದಿಂದ ಬಳಲುತ್ತಿದ್ದ ಹಿರಿಯ ವೈದ್ಯರೊಬ್ಬರು ಗುಂಡು ಹಾರಿಸಿಕೊಂಡು ಆತ್ಮಹತ್ಯೆ  ಮಾಡಿಕೊಂಡಿರುವ ದುರ್ಘಟನೆ ಬೆಳಗಾವಿ ನಗರದಲ್ಲಿ ಇಂದು ಬೆಳ್ಳಂ ಬೆಳಿಗ್ಗೆ ನಡೆದಿದೆ. ಡಾ. ದಿನೇಶ್ ಲಕ್ಷ್ಮಣ ಭಟ್ಕಳ (79) ಆತ್ಮಹತ್ಯೆ ಮಾಡಿಕೊಂಡ ವೈದ್ಯರು. ಅವರು ಮೂಲತಃ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನವರಾಗಿದ್ದು ಹಲವು ವರ್ಷಗಳಿಂದ ಬೆಳಗಾವಿಯ ಕೆಎಲ್ಇ ಆಸ್ಪತ್ರೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು. ಡಾ. ಭಟ್ಕಳ ಅವರು ತಮ್ಮ ಮನೆಯ ಬಾಲ್ಕನಿಯಲ್ಲಿ ತಾವೇ ತಮ್ಮ ಮೇಲೆ ಗುಂಡು ಹಾರಿಸಿಕೊಂಡು …

Read More »

ಕ್ಷುಲ್ಲಕ ಕಾರಣಕ್ಕೆ ಗಂಡ ಹೆಂಡತಿ ಜಗಳ ಕೊಲೆಯಲ್ಲಿ ಅಂತ್ಯ..

ಗದಗ ಜಿಲ್ಲೆಯ Nargund ತಾಲೂಕಿನ ರಡ್ಡೆರನಾಗನೂರು ಗ್ರಾಮದಲ್ಲಿ ಗಂಡ-ಹೆಂಡತಿ ಜಗಳ ಕೊಲೆಯಲ್ಲಿ ಅಂತ್ಯಗೊಂಡಿದೆ. ವಿಶ್ವನಾಥ ಹಾದಿಮನಿ (28) ಎಂಬಾತನನ್ನು ಪತ್ನಿ ಕವಿತಾ ಹಾದಿಮನಿ ಕಬ್ಬಿಣದ ರಾಡ್ (ಹಾರಿ) ನಿಂದ ತಲೆಗೆ ಹೊಡೆದು ಹತ್ಯೆ ಮಾಡಿದ್ದಾಳೆ ಎನ್ನಲಾಗಿದೆ. 2022ರಲ್ಲಿ ಪ್ರೀತಿಸಿ ಮದುವೆಯಾಗಿದ್ದ ದಂಪತಿ ನಡುವೆ ಮದುವೆಯ ನಂತರ ಕಲಹ ಶುರುವಾಗಿತ್ತು. ಕಳೆದ ಎರಡು ವರ್ಷಗಳಿಂದ ಕವಿತಾ ತವರು ಮನೆಯಲ್ಲಿ ವಾಸವಾಗಿದ್ದಳು. ಇತ್ತೀಚೆಗೆ ಕುಟುಂಬ ಕಾರ್ಯಕ್ರಮದ ನಿಮಿತ್ತ ಗಂಡನ ಮನೆಗೆ ಬಂದಿದ್ದ ವೇಳೆ …

Read More »