Breaking News
Home / Laxminews 24x7 (page 80)

Laxminews 24x7

ಎಸ್ಸೆಸ್ಸೆಲ್ಸಿ ಪರೀಕ್ಷೆ: ವಿದ್ಯಾರ್ಥಿನಿ ಅಸ್ವಸ್ಥ

ಬೆಳಗಾವಿ: ಇಲ್ಲಿನ ಅಂಜುಮನ್‌ ಇಂಗ್ಲಿಷ್‌ ಮಾಧ್ಯಮ ಪ್ರೌಢಶಾಲೆಯ ಕೇಂದ್ರದಲ್ಲಿ ಮಂಗಳವಾರ ನಡೆದ ಎಸ್ಸೆಸ್ಸೆಲ್ಸಿ ಗಣಿತ ವಿಷಯದ ಪರೀಕ್ಷೆಯಲ್ಲಿ ಅನಾರೋಗ್ಯದಿಂದ ಅಸ್ವಸ್ಥಗೊಂಡ ವಿದ್ಯಾರ್ಥಿನಿ ಪ್ರಜ್ಞೆ ತಪ್ಪಿದ ಘಟನೆ ನಡೆಯಿತು. ಕೇಂದ್ರದ ಮುಖ್ಯ ಅಧೀಕ್ಷಕ ಎಸ್.ಎಸ್.ಹಾದಿಮನಿ ಮತ್ತಿತರರು ತಕ್ಷಣವೇ ಕರೆ ಮಾಡಿ, ಆಂಬುಲೆನ್ಸ್‌ ಕರೆಯಿಸಿದರು. ಅಸ್ವಸ್ಥಗೊಂಡ ವಿದ್ಯಾರ್ಥಿನಿಗೆ ತ್ವರಿತವಾಗಿ ಪ್ರಥಮ ಚಿಕಿತ್ಸೆ ಕೊಡಿಸಿದರು. ನಂತರ ಚೇತರಿಸಿಕೊಂಡ ವಿದ್ಯಾರ್ಥಿನಿ ಪರೀಕ್ಷೆ ಬರೆದಳು. ಪರೀಕ್ಷಾ ಕೇಂದ್ರಕ್ಕೆ ಸಿಇಒ ಭೇಟಿ: ಬೆಳಗಾವಿಯ ಸೇಂಟ್ ಝೇವಿಯರ್ಸ್ ಪ್ರೌಢಶಾಲೆಯ ಪರೀಕ್ಷಾ …

Read More »

ಕೊಳವೆಬಾವಿ ದುರಂತ: ವಿಜಯಪುರದಲ್ಲಿ ಇದೆ ಮೊದಲಲ್ಲ!

ವಿಜಯಪುರ: ಜಿಲ್ಲೆಯಲ್ಲಿ ಕೊಳವೆಬಾವಿ ದುರಂತ ಸಂಭವಿಸುತ್ತಿರುವುದು ಇದೆ ಮೊದಲಲ್ಲ. ಈ ಹಿಂದೆ ಇದೇ ರೀತಿ ಎರಡು ಪ್ರಕರಣಗಳು ಘಟಿಸಿದ್ದ ಕಹಿ ಅನುಭವಗಳು ಜಿಲ್ಲೆಯ ಜನರ ಸ್ಮೃತಿಪಟಲದಲ್ಲಿವೆ. ಈ ಮೊದಲು 2008ರಲ್ಲಿ ಇಂಡಿ ತಾಲ್ಲೂಕಿನ ದೇವರ ನಿಂಬರಗಿ ಗ್ರಾಮದಲ್ಲಿ ಕಾಂಚನಾ ಎಂಬ ಬಾಲಕಿ ಮತ್ತು 2014ರಲ್ಲಿ ನಾಗಠಾಣ ಸಮೀಪದ ದ್ಯಾಬೇರಿ ಗ್ರಾಮದಲ್ಲಿ, ಯಾದಗಿರಿ ಜಿಲ್ಲೆಯಿಂದ ಕೂಲಿಗೆ ಬಂದಿದ್ದ ಹನುಮಂತ ಪಾಟೀಲ ಎಂಬುವವರ ಮೂರು ವರ್ಷದ ಹೆಣ್ಣು ಮಗು ಅಕ್ಷತಾ ಕೊಳವೆಬಾವಿಗೆ ಆಕಸ್ಮಿಕವಾಗಿ …

Read More »

ಕಲಬುರಗಿ | ಶ್ರೇಯಾಂಕಗೆ ತವರಲ್ಲಿ ಅದ್ದೂರಿ ಸ್ವಾಗತ

ಜೇವರ್ಗಿ(ಕಲಬುರಗಿ ಜಿಲ್ಲೆ): ಮಹಿಳಾ ಪ್ರೀಮಿಯರ್‌ ಲೀಗ್‌ (ಡಬ್ಲ್ಯುಪಿಎಲ್‌) ಕ್ರಿಕೆಟ್‌ ಟೂರ್ನಿಯಲ್ಲಿ ಪ್ರಶಸ್ತಿ ವಿಜೇತ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮಹಿಳಾ ತಂಡದ ಆಟಗಾರ್ತಿ ಶ್ರೇಯಾಂಕ ಪಾಟೀಲ ಅವರನ್ನು ಸ್ವಗ್ರಾಮ ಕೋಳಕೂರಿನಲ್ಲಿ ಬುಧವಾರ ಗ್ರಾಮಸ್ಥರು ಅದ್ದೂರಿಯಾಗಿ ಸ್ವಾಗತಿಸಿದರು. ಶ್ರೇಯಾಂಕ ಮೂಲತಃ ಕಲಬುರಗಿ ಜಿಲ್ಲೆಯ ಕೋಳಕೂರ ಗ್ರಾಮದವರು. ತವರಿಗೆ ಬಂದ ಅವರನ್ನು ಗ್ರಾಮದ ಹೊರವಲಯದಿಂದ ಸಿದ್ಧಬಸವೇಶ್ವರ ದೇವಸ್ಥಾನದವರೆಗೆ ಭವ್ಯ ಮೆರವಣಿಗೆ ಮೂಲಕ ಕರೆತರಲಾಯಿತು. ಮೆರವಣಿಗೆ ಬಳಿಕ ಶ್ರೇಯಾಂಕ ಪಾಟೀಲ ಸಿದ್ಧಬಸವೇಶ್ವರರ ದರ್ಶನ ಪಡೆದರು. ಮೆರವಣಿಗೆಯಲ್ಲಿ …

Read More »

ತಡರಾತ್ರಿ ಜಾಗತಿಕವಾಗಿ `Whats App’ ಸ್ಥಗಿತ : ಬಳಕೆದಾರರ ಪರದಾಟ

ನವದೆಹಲಿ: ಮೆಸೇಜಿಂಗ್ ಅಪ್ಲಿಕೇಶನ್ ವಾಟ್ಸಾಪ್ ಜಾಗತಿಕ ಸ್ಥಗಿತವನ್ನು ಅನುಭವಿಸಿದ್ದು, ಅಸಂಖ್ಯಾತ ಬಳಕೆದಾರರಿಗೆ ಬುಧವಾರ ರಾತ್ರಿ 11:45 ರ ಸುಮಾರಿಗೆ ಸೇವೆಯನ್ನು ಪ್ರವೇಶಿಸಲು ಸಾಧ್ಯವಾಗಲಿಲ್ಲ. ಅಪ್ಲಿಕೇಶನ್ಗೆ ಲಾಗ್ ಇನ್ ಮಾಡಲು ಅಥವಾ ಪ್ಲಾಟ್ಫಾರ್ಮ್ನ ಬ್ರೌಸರ್ ಆಧಾರಿತ ಆವೃತ್ತಿಯಾದ ವಾಟ್ಸಾಪ್ ವೆಬ್ ಅನ್ನು ಪ್ರವೇಶಿಸಲು ಪ್ರಯತ್ನಿಸುತ್ತಿರುವ ಬಳಕೆದಾರರು ಪ್ರಸ್ತುತ ಸೇವೆ ಲಭ್ಯವಿಲ್ಲ ಎಂದು ಸೂಚಿಸುವ ದೋಷ ಸಂದೇಶವನ್ನು ಎದುರಿಸಿದ್ದಾರೆ. ಇಂಟರ್ನೆಟ್ ಸ್ಥಗಿತವನ್ನು ಮೇಲ್ವಿಚಾರಣೆ ಮಾಡುವ ವೆಬ್ಸೈಟ್ ಡೌನ್ಡೆಟೆಕ್ಟರ್ನಲ್ಲಿ ವರದಿಗಳ ಹೆಚ್ಚಳಕ್ಕೆ ಈ ಅಡ್ಡಿಯು …

Read More »

ಬತ್ತಿದ ಕೃಷ್ಣೆ; ನೀರಿಗಾಗಿ ಹಾಹಾಕಾರ,ರಾಶಿ, ರಾಶಿ ಮೀನುಗಳ ಮಾರಣ ಹೋಮ

ಅಡಹಳ್ಳಿ: ಮಳೆ ಕೊರತೆ ಹಾಗೂ ಬಿಸಿಲಿನ ಹೊಡೆತಕ್ಕೆ ಹಿಪ್ಪರಗಿ ಅಣೆಕಟ್ಟೆ ಕೆಳಭಾಗದ ಅಥಣಿ ತಾಲೂಕಿನಲ್ಲಿ ಕೃಷ್ಣಾ ನದಿ ಸಂಪೂರ್ಣ ಬರಿದಾಗಿದ್ದು, ನೀರಿಲ್ಲದೇ ರಾಶಿ, ರಾಶಿ ಮೀನುಗಳ ಮಾರಣ ಹೋಮವಾಗಿದೆ. ಅಥಣಿ ತಾಲೂಕಿನ ಕೃಷ್ಣಾ ನದಿ ತೀರದ ಸವದಿ, ಶಿರಹಟ್ಟಿ, ಬಳವಾಡ, ಝುಂಜರವಾಡ ಸೇರಿದಂತೆ ತಾಲೂಕಿನ ಪೂರ್ವ ಭಾಗದ ಹಲವಾರು ಗ್ರಾಮಗಳಲ್ಲಿ ನೀರಿನ ಹಾಹಾಕಾರ ಆರಂಭವಾಗಿದೆ. ಮಳೆಗಾಲ ಆರಂಭವಾಗಲು ಎರಡೂವರೆ ತಿಂಗಳು ಬಾಕಿ ಇದ್ದು, ಈಗಲೇ ನೀರಿನ ಸಮಸ್ಯೆ ಶುರುವಾಗಿದೆ. ಜನ-ಜಾನುವಾರುಗಳ ಗತಿ …

Read More »

ತೆರೆದ ಕೊಳವೆ ಬಾವಿಗೆ ಬಿದ್ದ ಮಗು! 12 ಗಂಟೆಗಳಿಂದ ನಿರಂತರ ಕಾರ್ಯಾಚರಣೆ, ಬದುಕಿಗಾಗಿ ಪ್ರಾರ್ಥನೆ

ವಿಜಯಪುರ: ಆಟವಾಡುವ ಗುಂಗಿನಲ್ಲಿ ತೆರೆದಿದ್ದ ಕೊಳವೆ ಬಾವಿಗೆ ಎರಡು ವರ್ಷದ ಮಗುವೊಂದು ಆಯಾತಪ್ಪಿ ಬಿದ್ದ ಘಟನೆ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಲಚ್ಯಾಣದಲ್ಲಿ ಸಂಭವಿಸಿದೆ. ಸತತ 12 ಗಂಟೆಗಳಿಂದ ಕಾರ್ಯಾಚರಣೆ ನಡೆಸುತ್ತಿರುವ ರಕ್ಷಣಾ ತಂಡಕ್ಕೆ ಮಗುವನ್ನು ಹೊರತೆಗೆಯುವುದು ದೊಡ್ಡ ಸವಾಲಾಗಿದ್ದು, ಸದ್ಯ ಕಾರ್ಯಾಚರಣೆ ಕೆಲಸ ಮುಂದುವರೆದಿದೆ. ಭೀಮಾತೀರದಲ್ಲಿ ಹೃದಯ ವಿದ್ರಾವಕ ಘಟನೆಯೊಂದು ಸಂಭವಿಸಿದ್ದು, 2 ವರ್ಷದ ಬಾಲಕ ಸಾತ್ವಿಕ್​ ತೆರೆದ ಕೊಳವೆ ಬಾವಿಗೆ ಬಿದ್ದಿದ್ದಾನೆ. ಮಗುವಿನ ಕಾಲುಗಳ ಅಲುಗಾಟ ದೃಶ್ಯದಲ್ಲಿ ಸೆರೆಯಾಗಿದ್ದು, …

Read More »

ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಮಂಜುನಾಥ್‌ ಎಂಬ 4 ಜನ ನಾಮಪತ್ರ ಸಲ್ಲಿಕೆ!

ಬೆಂಗಳೂರು : ರಾಜ್ಯದಲ್ಲಿ ಭಾರೀ ಕುತೂಹಲ ಮೂಡಿಸಿರುವ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಡಾ.ಸಿ.ಎನ್. ಮಂಜುನಾಥ್ ಅವರು ಇಂದು ನಾಮಪತ್ರ ಸಲ್ಲಿಸಲಿದ್ದಾರೆ. ಇಂದು ಮೈತ್ರಿ ಅಭ್ಯರ್ಥಿ ಡಾ.ಸಿ.ಎನ್‌. ಮಂಜುನಾಥ್‌ ಅವರು ನಾಮಪತ್ರ ಸಲ್ಲಿಸಲಿದ್ದು, ಇದಕ್ಕೂ ಮುನ್ನ ದಿನ ಬುಧವಾರ ಮಂಜುನಾಥ್‌ ಹೆಸರಿನಲ್ಲಿ ಒಟ್ಟು 4 ಮಂದಿ ನಾಮಪತ್ರ ಸಲ್ಲಿಸಿದ್ದಾರೆ. ಬಹುಜನ್‌ ಭಾರತ ಪಕ್ಷದ ಅಭ್ಯರ್ಥಿ ಮಂಜುನಾಥ್‌ ಸಿ.ಎನ್‌., ಸ್ವಾತಂತ್ರತ್ರ್ಯ ಅಭ್ಯರ್ಥಿಗಳಾಗಿ ಮಂಜುನಾಥ್‌ ಎನ್‌, ಮಂಜುನಾಥ್‌ ಸಿ, …

Read More »

ರಾಹುಲ್ ಗಾಂಧಿ ‘ಭಾರತ್ ಜೋಡೋ ಯಾತ್ರೆ’ ಯಲ್ಲಿ ಭಾಗಿಯಾದ ಟ್ರಕ್ ಗಳ ಬಾಡಿಗೆ ಪಾವತಿಸಿಲ್ಲ : ಟ್ರಕ್ ಮಾಲೀಕರ ಆರೋಪ

ನವದೆಹಲಿ : ರಾಹುಲ್ ಗಾಂಧಿ ಅವರ ಭಾರತ್ ಜೋಡೋ ನ್ಯಾಯ್ ಯಾತ್ರೆಯಲ್ಲಿ ಕಂಟೈನರ್ ಟ್ರಕ್ಗಳನ್ನು ಒದಗಿಸಿದ ಟ್ರಕ್ ಮಾಲೀಕರು, ಸಾರಿಗೆ ಕಂಪನಿಯು ಲಕ್ಷಾಂತರ ರೂಪಾಯಿಗಳ ಬಾಕಿಯನ್ನು ಪಾವತಿಸಿಲ್ಲ ಎಂದು ಆರೋಪಿಸಿದ್ದಾರೆ. ಬುಲಂದ್ಶಹರ್ನಲ್ಲಿ ರಾಹುಲ್ ಗಾಂಧಿ ಅವರ ‘ಭಾರತ್ ಜೋಡೋ ನ್ಯಾಯ್ ಯಾತ್ರೆ’ಯಲ್ಲಿ ಭಾಗವಹಿಸಿದ ಕಂಟೈನರ್ ಟ್ರಕ್ ವಾಹನ ನಿರ್ವಾಹಕರು ತಮಗೆ ಇದುವರೆಗೆ ಬಾಡಿಗೆ ಪಾವತಿಸಿಲ್ಲ ಎಂದು ಆರೋಪಿಸಿದ್ದಾರೆ.   ನೊಂದ ಟ್ರಕ್ ಮಾಲೀಕರು ನ್ಯಾಯಕ್ಕಾಗಿ ಒತ್ತಾಯಿಸುತ್ತಿದ್ದಾರೆ, ಬಾಕಿ ಪಾವತಿಸದ ಕಾರಣ …

Read More »

BY ರಾಘವೇಂದ್ರ ಚುನಾವಣೆಯಲ್ಲಿ ಸೋಲಲಿ ಎಂಬ ಅಪೇಕ್ಷೆ ಅಮಿತ್ ಶಾಗೆ ಇರಬಹುದು : ಕೆ.ಎಸ್ ಈಶ್ವರಪ್ಪ

ನವದೆಹಲಿ : ಲೋಕಸಭೆ ಚುನಾವಣೆಗೆ ತಮ್ಮ ಮಗನಿಗೆ ಟಿಕೆಟ್ ಕೈತಪ್ಪಿರುವ ಹಿನ್ನೆಲೆಯಲ್ಲಿ ಬಂಡಾಯವೆದ್ದಿರುವ ಬಿಜೆಪಿಯ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಪಕ್ಷೇತರವಾಗಿ ಸ್ಪರ್ಧಿಸಲು ನಿರ್ಧರಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಅವರು ನಿನ್ನೆ ಕೇಂದ್ರ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಲು ದೆಹಲಿಗೆ ತೆರಳಿದರು.ಆದರೆ ಅಮಿತ್ ಶಾ ಅವರು ಈಶ್ವರಪ್ಪ ಅವರ ಭೇಟಿಯನ್ನು ನಿರಾಕರಿಸಿದ ಹಿನ್ನೆಲೆಯಲ್ಲಿ ಇದೀಗ ಅವರು ವಾಪಸ್ ಆಗಿದ್ದಾರೆ. ಅಮಿತ್ ಶಾ ಬೇಟಿಗೆ ಸಮಯ ಸಿಗದ ಕಾರಣ ಇದೀಗ …

Read More »

ಬೆಳಗಾವಿಯಲ್ಲಿ ಕಾಂಗ್ರೆಸ್ ಶಾಸಕ ಲಕ್ಷ್ಮಣ ಸವದಿ ಆಪ್ತನ ಭೀಕರ ಹತ್ಯೆ : ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ

ಬೆಳಗಾವಿ : ಇತಿಗೆ ಕಲಬುರ್ಗಿಯ ಸಂಸದ ಉಮೇಶ್ ಜಾಧವ್ ಅವರ ಪರಮಾಪ್ತ ಗಿರೀಶ್ ಚಕ್ರ ಹತ್ಯೆ ಮಾಸುವ ಮುನ್ನವೇ ಇದೀಗ ಬೆಳಗಾವಿ ಜಿಲ್ಲೆಯಲ್ಲಿ ಕಾಂಗ್ರೆಸ್ ಶಾಸಕ ಲಕ್ಷ್ಮಣ ಸವದಿ ಪರಮಾಪ್ತ ಅಣ್ಣಪ್ಪ ಬಸಪ್ಪ ನಿಂಬಾಳ ಎಂಬವರನ್ನು ಭೀಕರವಾಗಿ ಹತ್ಯೆ ಮಾಡಲಾಗಿದೆ ಎಂದು ತಿಳಿದು ಬಂದಿದೆ. ಹೌದು ಅಥಣಿ ಕಾಂಗ್ರೆಸ್ ಶಾಸಕ ಲಕ್ಷ್ಮಣ ಸವದಿ ಆಪ್ತ ಅಣ್ಣಪ್ಪ ಬಸಪ್ಪ ನಿಂಬಾಳ (58) ಎಂಬವರನ್ನು ನಡುರಸ್ತೆಯಲ್ಲೇ ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ. …

Read More »