Breaking News

Laxminews 24x7

ದಸರಾ ರಜೆ ಹೊತ್ತಲ್ಲೇ ಪದವಿ ಪರೀಕ್ಷೆ- ಮಂಗಳೂರಿನ ಸೈಂಟ್ ಆಗ್ನೆಸ್ ಕಾಲೇಜಿನ ವಿದ್ಯಾರ್ಥಿಗಳ ಪ್ರತಿಭಟನೆ

ಮಂಗಳೂರು: ದಸರಾ ಸಂಭ್ರಮದ ನಡುವೆಯೇ ಕಾಲೇಜು ಆಡಳಿತ ಮಂಡಳಿಯು ಪದವಿ ಸೆಮಿಸ್ಟರ್ ಪರೀಕ್ಷೆಗಳನ್ನು ನಿಗದಿಪಡಿಸಿರುವುದನ್ನು ವಿರೋಧಿಸಿ, ನಗರದ ಖ್ಯಾತ ಸೈಂಟ್ ಆಗ್ನೆಸ್  ಕಾಲೇಜಿನ ವಿದ್ಯಾರ್ಥಿಗಳು ಪರೀಕ್ಷೆ ಬಹಿಷ್ಕರಿಸಿ ಕಾಲೇಜು ಗೇಟ್ ಎದುರು ಬೃಹತ್ ಪ್ರತಿಭಟನೆ ನಡೆಸಿದ್ದಾರೆ. ಮಂಗಳೂರಿನ ಬೆಂದೂರ್‌ವೆಲ್ ಬಳಿಯಿರುವ ಸೈಂಟ್ ಆಗ್ನೆಸ್ ಕಾಲೇಜಿನಲ್ಲಿ ಇಂದಿನಿಂದ ಅಕ್ಟೋಬರ್ 28ರವರೆಗೆ ಪದವಿ ವಿದ್ಯಾರ್ಥಿಗಳಿಗೆ ಸೆಮಿಸ್ಟರ್ ಪರೀಕ್ಷೆಗಳನ್ನು ಆಯೋಜಿಸಲಾಗಿದೆ. ಮಂಗಳೂರು ದಸರಾ ಕರಾವಳಿಯ ಪ್ರಮುಖ ಹಬ್ಬವಾಗಿದ್ದು, ಎಲ್ಲೆಡೆ ಸಂಭ್ರಮ ಮನೆಮಾಡಿದೆ. ಆದರೆ ಕಾಲೇಜು …

Read More »

ಈ ಸರ್ಕಾರವೂ ಬೀಳುತ್ತೆ, ಪ್ರಜಾಪ್ರಭುತ್ವ ಮರುಸ್ಥಾಪನೆಯಾಗಲಿದೆ: CJP ಪ್ರತಿಭಟನೆ ಬೆನ್ನಲ್ಲೇ ರಾಹುಲ್‌ ಗಾಂಧಿ ಪ್ರತಿಕ್ರಿಯೆ

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‌ ಕುಮಾರ್‌ ರಾಜೀನಾಮೆ ಕೊಡೋದಷ್ಟೇ ಅಲ್ಲ, ಈ ಸರ್ಕಾರ ಶೀಘ್ರವೇ ಬೀಳಲಿದೆ. ದೇಶದಲ್ಲಿ ಪ್ರಜಾಪ್ರಭುತ್ವವನ್ನು ಮರುಸ್ಥಾಪಿಸಲಾಗುತ್ತದೆ ಎಂದು ರಾಹುಲ್‌ ಗಾಂಧಿ ಹೇಳಿದ್ದಾರೆ. ಈ ಕುರಿತು ಸಂಸತ್ತಿನ ಸೆಂಟ್ರಲ್‌ ಹಾಲ್‌ನಲ್ಲಿ ಇಂಡಿಯಾ ಮೈತ್ರಿಕೂಟದ ಸಂಸದರನ್ನು ಉದ್ದೇಶಿಸಿ ಮಾತನಾಡಿರುವ ವಿಡಿಯೋ ತುಣುಕನ್ನು ರಾಹುಲ್‌ ಗಾಂಧಿ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಹಂಚಿಕೊಂಡಿದ್ದಾರೆ. ಜ್ಞಾನೇಶ್‌ ಕುಮಾರ್‌ ರಾಜೀನಾಮೆಗೆ ಒತ್ತಾಯಿಸಿ ದೆಹಲಿಯ ಜಂತರ್‌ ಮಂತರ್‌ನಲ್ಲಿ ಕಾಕ್ರೋಚ್‌ ಜನತಾ ಪಾರ್ಟಿ (CJP) ಪ್ರತಿಭಟನೆ …

Read More »

ಮಹಾರಾಷ್ಟ್ರ | ಕಾಲುಗಳಿಗೆ ಸರಪಳಿ, ಬೀಗ ಬಿಗಿದ ಸ್ಥಿತಿಯಲ್ಲಿ ದಂಪತಿಯ ಮೃತದೇಹ ಪತ್ತೆ

ಮುಂಬೈ: ಮಹಾರಾಷ್ಟ್ರದ  ಧುಳೆ  ಜಿಲ್ಲೆಯ ತಾಪಿ ನದಿಯ ತಳದಲ್ಲಿ ದಂಪತಿಯ ಮೃತದೇಹ ಪತ್ತೆಯಾಗಿದ್ದು, ಕಾಲುಗಳಿಗೆ ಸರಪಳಿ, ಅದಕ್ಕೆ ಬೀಗ ಬಿಗಿದಿರುವುದು ಅನುಮಾನಕ್ಕೆ ಕಾರಣವಾಗಿದೆ. ಪತ್ತೆಯಾದ ಈ ದಂಪತಿಯನ್ನು ಮೂಲತಃ ಜಲಗಾಂವ್ ಜಿಲ್ಲೆಯ ಅಮಲ್ನೇರ್ ತಾಲೂಕಿನವರಾದ ಶ್ಯಾಮ್ ಹರಿ ಪಾಟೀಲ್ ಮತ್ತು ಸಪ್ನಾ ಪಾಟೀಲ್ ಎಂದು ಗುರುತಿಸಲಾಗಿದೆ. ಇಬ್ಬರು ಕೇವಲ ಕೆಲವು ತಿಂಗಳ ಹಿಂದೆಯಷ್ಟೇ ಪ್ರೀತಿಸಿ ಮದುವೆಯಾಗಿದ್ದರು ಎಂದು ತಿಳಿದುಬಂದಿದೆ. ಎರಡು ಮೃತದೇಹಗಳು ತಾಪಿ ನದಿಯ ತಳದಲ್ಲಿ ಸಿಕ್ಕಿವೆ. ಶವಗಳ ಕಾಲಿಗೆ …

Read More »

ಬೆಂಗ್ಳೂರಲ್ಲಿ ಪೊಲೀಸ್ ಕಮಿಷನರ್ ನೈಟ್ ರೌಂಡ್ಸ್ – 8000 ಸಿಬ್ಬಂದಿಯಿಂದ ಪಬ್‌ಗಳ ಮೇಲೆ ದಾಳಿ

ಬೆಂಗಳೂರು: ನಗರದಲ್ಲಿ ಪೊಲೀಸ್ ಕಮಿಷನರ್ ಸೀಮಂತ್ ಕುಮಾರ್ ಸಿಂಗ್ ನೇತೃತ್ವದಲ್ಲಿ ಪಬ್‌ಗಳ ಮೇಲೆ ದಾಳಿ ನಡೆದಿದೆ. ರಾತ್ರಿ ವೇಳೆ ಪಬ್‌ , ಕ್ಲಬ್, ರೆಸ್ಟೋರೆಂಟ್‌ಗಳ ಮೇಲೆ ದಾಳಿ  ನಡೆಸಿ ಪರಿಶೀಲನೆ ನಡೆಸಲಾಗಿದೆ. ಅಪ್ರಾಪ್ತ ಮಕ್ಕಳ ಬಳಕೆ, ಅವಧಿ ಮೀರಿದ ಬಳಿಕ ವ್ಯವಹಾರ ಹಾಗೂ ಅಕ್ರಮ ಚಟುವಟಿಕೆಗಳ ಪತ್ತೆಗೆ ಈ ವಿಶೇಷ ಕಾರ್ಯಾಚರಣೆ ನಡೆಸಲಾಗಿದೆ. ನಗರ ಪೊಲೀಸ್ ಆಯುಕ್ತರ ಜೊತೆ ಸಿಸಿಬಿ ಹಾಗೂ ಎಲ್ಲಾ ವಿಭಾಗದ ಡಿಸಿಪಿ ಹಾಗೂ ಇತರೆ 8000 …

Read More »

ಭಾಲ್ಕಿಯ ಸಹಕಾರಿ ಬ್ಯಾಂಕ್ ಮೇಲೆ ಇಡಿ ದಾಳಿ ಅಂತ್ಯ

ಬೀದರ್: ರಾಜ್ಯದಲ್ಲಿ ಭಾರೀ ಸದ್ದು ಮಾಡಿರುವ ಕರ್ನಾಟಕ ಲೋಕಸೇವಾ ಆಯೋಗದ  ಪಶುವೈದ್ಯರ ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ, ಜಾರಿ ನಿರ್ದೇಶನಾಲಯದ  ಅಧಿಕಾರಿಗಳು ಬೀದರ್ ಜಿಲ್ಲೆಯ ಭಾಲ್ಕಿಯಲ್ಲಿ ನಡೆಸಿದ ಶೋಧ ಕಾರ್ಯ ಕೊನೆಗೂ ಅಂತ್ಯಗೊಂಡಿದೆ. ಭಾಲ್ಕಿಯಲ್ಲಿರುವ ‘ಓಂ ಲಕ್ಷ್ಮಿ ಸೌಹಾರ್ದ ಸಹಕಾರಿ ಬ್ಯಾಂಕ್’ ಮೇಲೆ ದಾಳಿ ನಡೆಸಿದ್ದ ಇಡಿ ತಂಡ, ಸತತ 10 ಗಂಟೆಗಳ ಕಾಲ ಮಹತ್ವದ ದಾಖಲೆಗಳನ್ನು ಪರಿಶೀಲಿಸಿದೆ. ಶುಕ್ರವಾರ ಸಂಜೆಯಿಂದ ಆರಂಭವಾದ ಕಾರ್ಯಾಚರಣೆ ತಡರಾತ್ರಿ 2 ಗಂಟೆಯವರೆಗೂ ಮುಂದುವರಿಯಿತು. …

Read More »

ರೇಣುಕಾಸ್ವಾಮಿ ಕೊಲೆ ಪ್ರಕರಣ – ಪಿಎಸ್‌ಐ ವಿನಯ್‌ಗೆ ಸಂಕಷ್ಟ? – ತನಿಖಾ ತಂಡದ ವಿರುದ್ಧವೇ ಇಲಾಖಾ ತನಿಖೆ

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಷ್ ಮಾಫಿ ಸಾಕ್ಷಿ ಹೇಳಿಕೆ ಬೆನ್ನಲ್ಲೇ ಪಿಎಸ್‌ಐ ವಿನಯ್‌ ಅವರಿಗೆ ಸಂಕಷ್ಟ ಎದುರಾಗುವ ಸಾಧ್ಯತೆ ಇದೆ. ತನಿಖೆಯಲ್ಲಿ ಹಲವು ಸಾಕ್ಷಿಗಳನ್ನ ಸೃಷ್ಟಿಸಲಾಗಿದೆ. ಆರೋಪಿ ಸ್ಥಾನದಿಂದ ಪಿಎಸ್‌ಐ ವಿನಯ್‌ ಅವರನ್ನು ತಪ್ಪಿಸಲಾಗಿದೆ. ಪ್ರಕರಣದಲ್ಲಿ ವಿನಯ್ ಕೂಡ ಭಾಗಿ ಆಗಿದ್ದಾರೆ ಎಂದು ಆರೋಪಿಸಲಾಗಿದೆ. ಪ್ರಕರಣದ ತನಿಖೆಯಲ್ಲಿ ಲೋಪ ಪ್ರಶ್ನಿಸಿ ಸ್ನೇಹಮಯಿ ಕೃಷ್ಣ ದೂರು ಹಿನ್ನೆಲೆ, ಜಂಟಿ ಪೊಲೀಸ್ ಆಯುಕ್ತ ವಂಶಿ ಕೃಷ್ಣ ನೇತೃತ್ವದಲ್ಲಿ ಇಲಾಖಾ ತನಿಖೆಗೆ ಸೂಚನೆ …

Read More »

ಮಸೀದಿ ಛಾವಣಿ ಮೇಲೆ ನಿಂತು ಬಿಯರ್‌ ಕುಡಿದ ಕಾನ್ಸ್‌ಟೇಬಲ್‌ – ವಿಡಿಯೋ ವೈರಲ್‌ ಬೆನ್ನಲ್ಲೇ ಸಸ್ಪೆಂಡ್‌

ಕಲಬುರಗಿ: ಕರ್ತವ್ಯದಲ್ಲಿದ್ದ ಮಹಾಗಾಂವ್ ಠಾಣೆ ಕಾನ್ಸ್‌ಟೇಬಲ್‌ ಒಬ್ಬರು ಮಸೀದಿ ಛಾವಣಿ ನಿಂತು ಬಿಯರ್‌ ಕುಡಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ವಿಡಿಯೋ ವೈರಲ್‌ ಆದ ಬೆನ್ನಲ್ಲೇ ಅವರನ್ನು ಅಮಾನತು  ಮಾಡಲಾಗಿದೆ. ಕಮಲಾಪುರ‌  ತಾಲೂಕಿನ ಮಹಾಗಾಂವ್ ಪೊಲೀಸ್  ಠಾಣೆ ಪೇದೆ ಹಣಮಂತ ಅವರು ಹರಸೂರು ಗ್ರಾಮದ ಮಸೀದಿ ಮೇಲೆ ನಿಂತು ಬಿಯರ್‌ ಕುಡಿದಿದ್ದರು. ಇದನ್ನು ಗ್ರಾಮಸ್ಥರು ವಿಡಿಯೋ ಮಾಡಿ, ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದರು. ವಿಡಿಯೋ ವೈರಲ್‌ ಆದ ಬೆನ್ನಲ್ಲೆ ಅವರ …

Read More »

ಮಂಡ್ಯ ಎಎಸ್‌ಪಿ ಸಿ.ಇ.ತಿಮ್ಮಯ್ಯ ನಿಧನ

ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57) ಅವರು ಇಂದು ನಿಧನರಾಗಿದ್ದಾರೆ. ಕಳೆದ ಕೆಲವು ದಿನಗಳಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಮಂಡ್ಯದ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಕೊನೆಯುಸಿರೆಳೆದಿದ್ದಾರೆ. ಕಳೆದ ಮೂರು ವರ್ಷಗಳಿಂದ ಮಂಡ್ಯ ಜಿಲ್ಲೆಯಲ್ಲಿ ಅಪರ ಪೊಲೀಸ್ ಅಧೀಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದ ತಿಮ್ಮಯ್ಯ ಅವರು ಕರ್ತವ್ಯನಿಷ್ಠ ಅಧಿಕಾರಿಯಾಗಿ ಹೆಸರುವಾಸಿಯಾಗಿದ್ದರು. ಜಿಲ್ಲೆಯಲ್ಲಿ ನಡೆದ ಶ್ರೀರಂಗಪಟ್ಟಣದ ಹನುಮ ಸಂಕೀರ್ತನಾ ಯಾತ್ರೆ, …

Read More »

ಲಕ್ಕುಂಡಿ ಗ್ರಾಮ ಪಂಚಾಯತ ಮಾಜಿ ಸದಸ್ಯನ ಭೀಕರ ಕೊಲೆ

ಗದಗ: ಗದಗ  ಜಿಲ್ಲೆ ಲಕ್ಕುಂಡಿ ಗ್ರಾಮದ ಹೊರವಲಯದಲ್ಲಿ ಮಾಜಿ ಗ್ರಾಮ ಪಂಚಾಯಿತಿ ಸದಸ್ಯನನ್ನು ಭೀಕರವಾಗಿ ಕೊಲೆ ಮಾಡಲಾಗಿದೆ. ಬಸವಣ್ಣೆಪ್ಪ ಮಾಡಲಗೇರಿ (62) ಕೊಲೆಯಾದ ದುರ್ದೈವಿ. ಜಮೀನಿನಿಂದ ಮನೆಗೆ ವಾಪಸ್‌ ಬರುತ್ತಿದ್ದ ವೇಳೆ ದುಷ್ಕರ್ಮಿಗಳು ಬೈಕ್‌ ಅಡ್ಡಗಟ್ಟಿ ಹತ್ಯೆ ಮಾಡಿದ್ದಾರೆ. ರಾತ್ರಿ ವೇಳೆ ಜಮೀನಿನಿಂದ ಮನೆಗೆ ಬರುತ್ತಿದ್ದ ಬಸವಣ್ಣೆಪ್ಪ ಅವರನ್ನು ಲಕ್ಕುಂಡಿ-ಸಂಭಾಪೂರ ಮಾರ್ಗದಲ್ಲಿ ಅಡ್ಡಗಟ್ಟಲಾಗಿದೆ. ಬಳಿಕ ಅವರ ಕತ್ತು ಸೀಳಿ, ತಲೆಗೆ ಬಲವಾಗಿ ಹೊಡೆದು ಕೊಲೆ ಮಾಡಲಾಗಿದೆ ಎಂದು ತಿಳಿದುಬಂದಿದೆ. ಹತ್ಯೆ …

Read More »

ಯೂಟ್ಯೂಬರ್ ಧ್ರುವ್ ರಾಠಿ ಪೊಲೀಸ್ ವಶಕ್ಕೆ

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ಹಾಗೂ ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ ವಿರೋಧಿಸಿ ಕಾಕ್ರೋಚ್ ಜನತಾ ಪಾರ್ಟಿ ಜಂತರ್ ಮಂತರ್‌ನಲ್ಲಿ ಹಮ್ಮಿಕೊಂಡಿರುವ ಬೃಹತ್ ಪ್ರತಿಭಟನೆಯಲ್ಲಿ ಭಾಗವಹಿಸಲು ಆಗಮಿಸಿದ್ದ ಖ್ಯಾತ ಯೂಟ್ಯೂಬರ್ ಧ್ರುವ್ ರಾಠಿ ಅವರನ್ನು ದೆಹಲಿ ಪೊಲೀಸರು ಶನಿವಾರ ಬೆಳಿಗ್ಗೆ ವಶಕ್ಕೆ ಪಡೆದಿದ್ದಾರೆ. ತಡರಾತ್ರಿಯಿಂದಲೇ ಸುಮಾರು 50ಕ್ಕೂ ಹೆಚ್ಚು ಪೊಲೀಸರು ರಾಠಿ ತಂಗಿದ್ದ ಗುರುಗ್ರಾಮದ ನಿವಾಸದ ಹೊರಗೆ ಕಾವಲು ಕಾಯುತ್ತಿದ್ದರು. ಬೆಳಿಗ್ಗೆ …

Read More »