Breaking News

Laxminews 24x7

ಯಲ್ಲಮ್ಮ ದೇವಿ ಭಕ್ತರಿಗೆ ದಾಸೋಹ ವ್ಯವಸ್ಥೆ, ಸ್ವಚ್ಛತೆಗೆ ಆದ್ಯತೆ ನೀಡಿ: ಸಿಎಂ

ಬೆಳಗಾವಿ: ಶ್ರೀರೇಣುಕಾ ಯಲ್ಲಮ್ಮ ದೇವಿ ಸನ್ನಿಧಿಗೆ ಪ್ರತೀ ವರ್ಷ 1.5 ಯಿಂದ 2 ಕೋಟಿ ಭಕ್ತರು ಬರುವುದರಿಂದ ಆರೋಗ್ಯಕರ ದಾಸೋಹ ವ್ಯವಸ್ಥೆ ಮತ್ತು ವೈಜ್ಞಾನಿಕ ಪದ್ಧತಿಯ ಕಸ ವಿಲೇವಾರಿ ವ್ಯವಸ್ಥೆ ರೂಪಿಸಬೇಕು. ಹಾಗೆಯೇ ಬರುವ ಭಕ್ತರಿಗೆ ತಾಯಿಯ ದರ್ಶನ ಕಡ್ಡಾಯ ಸಿಗುವ ವ್ಯವಸ್ಥೆಯ ಪ್ರಥಮ ಆದ್ಯತೆಯಲ್ಲಿ ಒದಗಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದರು.   ಶ್ರೀ ಕ್ಷೇತ್ರ ಯಲ್ಲಮ್ಮನಗುಡ್ಡದಲ್ಲಿ ರವಿವಾರ ಶ್ರೀರೇಣುಕಾ ಯಲ್ಲಮ್ಮ ದೇವಸ್ಥಾನ ಅಭಿವೃದ್ಧಿ ಪ್ರಾಧಿಕಾರ ಮತ್ತು ರೇಣುಕಾ ಯಲ್ಲಮ್ಮ …

Read More »

ಭಾರೀ ಮಳೆ; ವಾಹನ ಸಂಚಾರ ಅಸ್ತವ್ಯಸ್ತ

ಬೆಳ್ತಂಗಡಿ: ತಾಲೂಕಿನ ಹಲವೆಡೆ ರವಿವಾರ ಸಂಜೆ ಭಾರೀ ಮಳೆಯಾ ಗಿದ್ದು, ವಾಹನ ಸಂಚಾರ ಅಸ್ತವ್ಯಸ್ತವಾಗಿ ಅಲ್ಲಲ್ಲಿ ರಸ್ತೆ ತಡೆಯುಂಟಾದ ಘಟನೆ ನಡೆದಿದೆ. ತಾಲೂಕಿನಾದ್ಯಂತ ಮುಂಜಾನೆ ಬಿಸಿಲಿನ ವಾತಾವರಣ ಕಂಡುಬಂದರೆ, ಮಧ್ಯಾಹ್ನ ಬಳಿಕ ನಿರಂತರ ಮಳೆಯಾಗುತ್ತಿದೆ. ರವಿವಾರ ಸಂಜೆ ಸುಮಾರು 5 ಗಂಟೆಯಿಂದ ಧರ್ಮಸ್ಥಳ, ಉಜಿರೆ, ಮುಂಡಾಜೆ ಸಹಿತ ತಾಲೂಕಿನಾದ್ಯಂತ ಹಲವಡೇ ತಾಸುಗಟ್ಟಲೆ ಭಾರೀ ಮಳೆ ಸುರಿದಿದೆ. ಉಜಿರೆ ಕೆಳಗಿನ ಪೇಟೆ ಸಹಿತ ಅಲ್ಲಲ್ಲಿ ರಸ್ತೆಯಲ್ಲಿ ನೀರು ನಿಂತು ವಾಹನ ಸಂಚಾರ ಅಸ್ತವ್ಯಸ್ತವಾಗಿದೆ. …

Read More »

ಶೀಘ್ರ ರಾಜಕಾರಣಿ, ಅಧಿಕಾರಿಗಳಿಗೆ ನೋಟಿಸ್‌?

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧದ ಮುಡಾ ಹಗರಣದಲ್ಲಿ ನಡೆದಿದೆ ಎನ್ನಲಾದ ಅಕ್ರಮದ ಬಗ್ಗೆ ಸಾಕ್ಷ್ಯ ಕಲೆ ಹಾಕುವಲ್ಲಿ ಜಾರಿ ನಿರ್ದೇಶನಾಲಯ (ಇ.ಡಿ.)ದ ಅಧಿಕಾರಿಗಳು ನಿರತರಾಗಿದ್ದು, ಈ ಸಂಬಂಧ ಶೀಘ್ರದಲ್ಲೇ ಕೆಲವು ಅಧಿಕಾರಿಗಳಿಗೆ ನೋಟಿಸ್‌ ನೀಡಿ ವಿಚಾರಣೆ ನಡೆಸುವ ಸಾಧ್ಯತೆಗಳಿವೆ.   ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರು ಇ.ಡಿ.ಗೆ ಸಿಎಂ ಸಿದ್ದರಾಮಯ್ಯ, ಅವರ ಪತ್ನಿ ಪಾರ್ವತಿ ಮತ್ತಿತರರ ವಿರುದ್ಧ ನೀಡಿರುವ ದೂರಿನ ಅನ್ವಯ ಇಸಿಐಆರ್‌ (ಪ್ರಕರಣ) ದಾಖಲಿಸಲಾಗಿದೆ. ತನಿಖೆ …

Read More »

ಮುಂದಿನ ಸುತ್ತಿನ ವಿಧಾನಸಭಾ ಚುನಾವಣೆ: ಜಾರ್ಖಂಡ್ ಮತ್ತು ಮಹಾರಾಷ್ಟ್ರದಲ್ಲಿ

ಮುಂದಿನ ಸುತ್ತಿನ ವಿಧಾನಸಭಾ ಚುನಾವಣೆ: ಜಾರ್ಖಂಡ್ ಮತ್ತು ಮಹಾರಾಷ್ಟ್ರದಲ್ಲಿ ನವದೆಹಲಿ: ಚುನಾವಣಾ ವೇಳಾಪಟ್ಟಿಗಳನ್ನು ಇನ್ನೂ ಘೋಷಿಸದಿದ್ದರೂ, ಜಾರ್ಖಂಡ್ ಮತ್ತು ಮಹಾರಾಷ್ಟ್ರದಲ್ಲಿ ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳನ್ನು (ಸಿಆರ್ಪಿಎಫ್) ಚುನಾವಣಾ ಪೂರ್ವ ನಿಯೋಜನೆಗೆ ಮುಂಚಿತವಾಗಿ ನಿಯೋಜಿಸುವಂತೆ ಭಾರತದ ಚುನಾವಣಾ ಆಯೋಗ (ಇಸಿಐ) ಕೇಂದ್ರ ಗೃಹ ಸಚಿವಾಲಯಕ್ಕೆ (ಎಂಎಚ್‌ಎ) ವಿನಂತಿಸುವುದರೊಂದಿಗೆ ಮುಂದಿನ ಸುತ್ತಿನ ವಿಧಾನಸಭಾ ಚುನಾವಣೆಗೆ ಸಿದ್ಧತೆಗಳು ಪ್ರಾರಂಭವಾಗಿವೆ. ನವೆಂಬರ್-ಡಿಸೆಂಬರ್ನಲ್ಲಿ ಉಭಯ ರಾಜ್ಯಗಳು ವಿಧಾನಸಭಾ ಚುನಾವಣೆಗೆ ಹೋಗಲಿರುವುದರಿಂದ, ಜಾರ್ಖಂಡ್ನಲ್ಲಿ ಸಿಎಪಿಎಫ್ಗಳ 100 ತುಕಡಿಗಳನ್ನು …

Read More »

ಕೊಲ್ಕತ್ತಾ ವೈದ್ಯೆಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ: ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಮತ್ತೊಬ್ಬ ಕಿರಿಯ ವೈದ್ಯ ಆಸ್ಪತ್ರೆಗೆ ದಾಖಲು

ನವದೆಹಲಿ:ಅಕ್ಟೋಬರ್ 5 ರಿಂದ ಉಪವಾಸ ಮಾಡುತ್ತಿದ್ದ ಕಿರಿಯ ವೈದ್ಯರನ್ನು ಆರೋಗ್ಯ ಹದಗೆಟ್ಟ ಕಾರಣ ಭಾನುವಾರ ರಾತ್ರಿ ಆಸ್ಪತ್ರೆಗೆ ಕರೆದೊಯ್ಯಲಾಯಿತು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಎನ್‌ಆರ್‌ಎಸ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಪುಲಸ್ತ ಆಚಾರ್ಯ ಅವರಿಗೆ ತೀವ್ರ ಹೊಟ್ಟೆ ನೋವು ಕಾಣಿಸಿಕೊಂಡಿದ್ದರಿಂದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಈ ಘಟನೆಯು ಪ್ರತಿಭಟನೆಯ ಸಮಯದಲ್ಲಿ ಆಸ್ಪತ್ರೆಗೆ ದಾಖಲಾದ ಕಿರಿಯ ವೈದ್ಯರ ಸಂಖ್ಯೆಯನ್ನು ನಾಲ್ಕಕ್ಕೆ ಹೆಚ್ಚಿಸಿತು. ಆರಂಭದಲ್ಲಿ, ಆಗಸ್ಟ್ನಲ್ಲಿ ಅತ್ಯಾಚಾರಕ್ಕೊಳಗಾಗಿ ಕೊಲೆಯಾದ ಆರ್ಜಿ ಕಾರ್ ಆಸ್ಪತ್ರೆಯ …

Read More »

ಇಂದು ಸಿಎಂ ಸಿದ್ದರಾಮಯ್ಯ `ಬಳ್ಳಾರಿ ಜಿಲ್ಲೆ’ ಪ್ರವಾಸ

ಬಳ್ಳಾರಿ : ಅ.14 ರ ಇಂದು ಬೆಳಿಗ್ಗೆ 10 ಗಂಟೆಗೆ ಬೆಂಗಳೂರಿನ ಹೆಚ್.ಎ.ಎಲ್ ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದ ಮೂಲಕ ಹೊರಟು ಬೆಳಿಗ್ಗೆ 10.50 ಗಂಟೆಗೆ ತೋರಣಗಲ್ಲಿನ ಜಿಂದಾಲ್ ಏರ್‌ಸ್ಟ್ರಿಪ್ ಗೆ ಆಗಮಿಸುವರು. ಬಳಿಕ ಮುಖ್ಯಮಂತ್ರಿಗಳು ಬೆಳಿಗ್ಗೆ 11.15 ಗಂಟೆಗೆ ಸಂಡೂರಿಗೆ ಆಗಮಿಸಿ, ಬಳ್ಳಾರಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯಿತಿ ಇವರ ವತಿಯಿಂದ ಸಂಡೂರು ಪಟ್ಟಣದ ಅಗ್ನಿಶಾಮಕದಳ ಮುಂಭಾಗದ ವಿಶ್ವಾಸ್ ಯು.ಲಾಡ್ ಮೈದಾನದ ಆವರಣದಲ್ಲಿ ಆಯೋಜಿಸಿರುವ ಸಂಡೂರು ತಾಲ್ಲೂಕಿನ ಸಾಧನಾ …

Read More »

ಸತೀಶ್ ಜಾರಕಿಹೊಳಿ ಮುಂದಿನ ಸಿಎಂ ಕೂಗು ಶುರುವಾಗಿದೆ

ಭವಿಷ್ಯದ ಮುಂದಿನ ಮುಖ್ಯಮಂತ್ರಿ `ಸತೀಶ್ ಜಾರಕಿಹೊಳಿ’ : ಬೆಳಗಾವಿಯಲ್ಲಿ ರಾರಾಜಿಸಿದ ಬ್ಯಾನರ್! ಬೆಳಗಾವಿ : ಮುಡಾ ಸಂಕಷ್ಟದ ನಡುವೆ ಇಂದು ಸಿಎಂ ಸಿದ್ದರಾಮಯ್ಯ ಅವರು ಬೆಳಗಾವಿ ಪ್ರವಾಸ ಕೈಗೊಂಡಿದ್ದು, ಬೆಳಗಾವಿ ಪ್ರವಾಸದ ಹೊತ್ತಲ್ಲೇ ಸತೀಶ್ ಜಾರಕಿಹೊಳಿ ಮುಂದಿನ ಸಿಎಂ ಕೂಗು ಶುರುವಾಗಿದೆ. ಹೌದು, ಇಂದು ಸಿಎಂ ಸಿದ್ದರಾಮಯ್ಯ ಅವರು ಬೆಳಗಾವಿ ಜಿಲ್ಲೆ ಪ್ರವಾಸ ಕೈಗೊಂಡಿದ್ದು, ಈ ಬೆನ್ನಲ್ಲೇ ಬೆಳಗಾವಿಯ ಚೆನ್ನಮ್ಮ ಸರ್ಕಲ್ ನಲ್ಲಿ ಸತೀಶ್ ಜಾರಕಿಹೊಳಿ ಭವಿಷ್ಯದ ಮುಖ್ಯಮಂತ್ರಿ ಎಂಬ …

Read More »

ಮಹಾರಾಷ್ಟ್ರ ಮಾಜಿ ಸಚಿವ ಬಾಬಾ ಸಿದ್ದಿಕಿ ಗುಂಡಿಕ್ಕಿ ಹತ್ಯೆ: ವಿವಿಧ ಕೋನಗಳಿಂದ ಪೊಲೀಸರಿಂದ ತನಿಖೆ ಆರಂಭ

ಮುಂಬೈ: ಮಹಾರಾಷ್ಟ್ರದ ಮಾಜಿ ಸಚಿವ ಬಾಬಾ ಸಿದ್ದಿಕ್ ಅವರ ಹತ್ಯೆಯ ಕುರಿತು ಪೊಲೀಸರು ವಿವಿಧ ಕೋನಗಳಲ್ಲಿ ತನಿಖೆಯನ್ನು ಪ್ರಾರಂಭಿಸಿದ್ದಾರೆ,ಸುಫಾರಿ ಹತ್ಯೆ, ಉದ್ಯಮ ವೈಷಮ್ಯ ಅಥವಾ ಕೊಳೆಗೇರಿ ಪುನರ್ವಸತಿ ಯೋಜನೆಗೆ ಸಂಬಂಧಿಸಿದಂತೆ ಬೆದರಿಕೆಯೇ ಕಾರಣವಾಗಿರಬಹುದು ಎಂದು ಶಂಕಿಸಲಾಗಿದೆ. ಮುಂಬೈನಲ್ಲಿ ನಿನ್ನೆ ಶನಿವಾರ ರಾತ್ರಿ ಮೂವರು ದುಷ್ಕರ್ಮಿಗಳ ಗುಂಡಿಗೆ ಬಲಿಯಾದ ಎನ್‌ಸಿಪಿ ನಾಯಕ ಸಿದ್ದಿಕ್ (66ವ) ಅವರ ಮೃತದೇಹವನ್ನು ಲೀಲಾವತಿ ಆಸ್ಪತ್ರೆಯಿಂದ ಇಂದು ಭಾನುವಾರ ಬೆಳಗ್ಗೆ 6 ಗಂಟೆ ಸುಮಾರಿಗೆ ಕೂಪರ್ ಆಸ್ಪತ್ರೆಗೆ ಮರಣೋತ್ತರ …

Read More »

ಚಿನ್ನದ ಬೆಲೆ 1 ಲಕ್ಷ ರೂಪಾಯಿ ಸಮೀಪಕ್ಕೆ, ಶುರುವಾಯ್ತು ಹೊಸ ಆತಂಕ!

ಚಿನ್ನದ ಬೆಲೆಯಲ್ಲಿ ಇದೀಗ ಭಾರಿ ಏರಿಕೆ ಕಂಡುಬರುತ್ತಿದೆ. ಅದರಲ್ಲೂ ಇಸ್ರೇಲ್ & ಇರಾನ್ ನಡುವೆ ಇನ್ನೇನು ಯುದ್ಧ ಶುರುವಾಯ್ತು ಅಂತಾ ಹೇಳಿದಾಗ ಚಿನ್ನದ ಬೆಲೆಯಲ್ಲಿ ಭರ್ಜರಿ ಏರಿಕೆ ಕೂಡ ಕಂಡುಬರುತ್ತಿದೆ. ಬಂಗಾರಕ್ಕೆ ವಿಪರೀತ ಡಿಮ್ಯಾಂಡ್ ಬಂದಿರುವ ಹಿನ್ನೆಲೆ ಈ ರೀತಿಯಾಗಿ ಚಿನ್ನದ ಬೆಲೆ ಏರಿಕೆ ಕಾಣುತ್ತಿದೆ. ಇನ್ನೇನು 1 ಲಕ್ಷ ರೂಪಾಯಿ ಸಮೀಪಕ್ಕೆ ಚಿನ್ನ ಬಂದು ಕೂತಿದೆ. ಹಾಗಾದ್ರೆ ಚಿನ್ನದ ಬೆಲೆ ಶೀಘ್ರದಲ್ಲೇ 1 ಲಕ್ಷ ರೂಪಾಯಿ ಆಗುತ್ತಾ? ಇದು …

Read More »

ನ.20 ರೊಳಗೆ ‘HSRP’ ನಂಬರ್ ಪ್ಲೇಟ್ ಅಳವಡಿಸಿಕೊಳ್ಳದಿದ್ದರೆ ದಂಡ ಫಿಕ್ಸ್!

ಬೆಂಗಳೂರು: ವಾಹನಗಳಿಗೆ ಹೆಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಕೆಯನ್ನು ಕಡ್ಡಾಯಗೊಳಿಸಲಾಗಿತ್ತು. ಅಳವಡಿಸದೇ ಇದ್ದರೇ ದಂಡ ಕಟ್ಟೋದಕ್ಕೆ ರೆಡಿಯಾಗಿ ಎನ್ನಲಾಗಿತ್ತು. ಆದರೇ ಈಗ ವಾಹನ ಸವಾರರಿಗೆ ಬಿಗ್ ರಿಲೀಫ್ ಎನ್ನುವಂತೆ ನವೆಂಬರ್.20ರವರೆಗೆ ಹೆಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಕೆಗೆ ಹೈಕೋರ್ಟ್ ಗಡುವು ವಿಸ್ತರಿಸಿದೆ.   ಅತಿ ಸುರಕ್ಷಿತ ನೋಂದಣಿ ಫಲಕ (High Security Registration Plates- HSRP) ಅಳವಡಿಕೆಗೆ ಕಾಲಾವಕಾಶ ನೀಡುವಂತೆ ಹೈಕೋರ್ಟ್ ನಲ್ಲಿ ಸಲ್ಲಿಸಿದ್ದಂತ …

Read More »