Breaking News

Laxminews 24x7

ಗ್ಯಾಸ್‌ ಸಮಸ್ಯೆ – ನಮ್ಮ ಕೈಯಲ್ಲಿ ಏನೂ ಇಲ್ಲ, ಕೇಂದ್ರ ಮುನ್ನೆಚ್ಚರಿಕೆ ವಹಿಸಬೇಕಿತ್ತು: ಡಿಕೆಶಿ

ಬೆಂಗಳೂರು: ರಾಜ್ಯದಲ್ಲಿ ಅಡುಗೆ ಅನಿಲ (LPG), ಆಟೋ ಗ್ಯಾಸ್ ಸಮಸ್ಯೆಯಾಗಿದ್ದು, ನಮ್ಮ ಕೈಯಲ್ಲಿ ಏನೂ ಇಲ್ಲ. ಈ ಸಮಸ್ಯೆಯನ್ನು ಕೇಂದ್ರ ಸರ್ಕಾರ ಬಗೆಹರಿಸಬೇಕು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್  ಹೇಳಿದ್ದಾರೆ. ಬೆಂಗಳೂರಲ್ಲಿ  ಮಾಧ್ಯಮಗಳ ಜೊತೆ ಅವರು ಮಾತನಾಡಿದರು. ಈ ವೇಳೆ ಆಟೋ ಚಾಲಕರಿಗೆ ತೊಂದರೆ ಆಗುತ್ತಿದೆ. ಹೋಟೆಲ್‌ನವರಿಗೆ ತೊಂದರೆಯಾಗಿದೆ. ಮನೆಯಲ್ಲಿ ಹೇಗೋ ಸ್ಟೌವ್‌ನಲ್ಲಿ ಅಡುಗೆ ಮಾಡಿಕೊಳ್ಳುತ್ತಿದ್ದಾರೆ. ಹೋಟೆಲ್‌ನಲ್ಲಿ ಪಾಪ ಹೇಗೋ ಮಾಡಿಕೊಳ್ಳುತ್ತಿದ್ದಾರೆ. ಗ್ಯಾಸ್‌ ಸಮಸ್ಯೆಯನ್ನು ಕೂಡಲೇ ಕೇಂದ್ರ ಸರ್ಕಾರ ಬಗೆಹರಿಸಬೇಕು. …

Read More »

50,000 ಲಂಚ ಸ್ವೀಕರಿಸುವಾಗ ʻಲೋಕಾʼ ಬಲೆಗೆ ಬಿದ್ದ ಕಂದಾಯ ನಿರೀಕ್ಷಕ

  ದಾವಣಗೆರೆ: ನಗರದಲ್ಲಿ ವೈದ್ಯರೊಬ್ಬರಿಂದ 50,000 ರೂ. ಲಂಚ ಸ್ವೀಕರಿಸುತ್ತಿದ್ದ ಕಂದಾಯ ನಿರೀಕ್ಷನೊಬ್ಬ ಲೋಕಾಯುಕ್ತ ಬಲೆಗೆ ಬಿದ್ದಿದ್ದಾನೆ. ಲೋಕಾಯುಕ್ತ ಬಲೆಗೆ ಬಿದ್ದ ಕಂದಾಯ ನಿರೀಕ್ಷಕನನ್ನು ಚಂದ್ರಪ್ಪ ಎಂದು ಗುರುತಿಸಲಾಗಿದೆ. ಈತ ಭೂಮಿ ಸರ್ವೇ ಮಾಡಲು ವೈದ್ಯರ ಬಳಿ 50,000 ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದ. ಕಚೇರಿಯಲ್ಲಿ ಲಂಚ ಸ್ವೀಕರಿಸುವಾಗ ಈತ ಲೋಕಾಯುಕ್ತ ಬಲೆಗೆ ಬಿದ್ದಿದ್ದಾನೆ. ದಾವಣಗೆರೆ ಲೋಕಾಯುಕ್ತ ಎಸ್ಪಿ ಎಂ.ಎಸ್ ಕೌಲಾಪುರೆ, ಡಿವೈಎಸ್‌ಪಿ ಕಲಾವತಿ ನೇತ್ರತ್ವದಲ್ಲಿ ಇನ್ಸ್‌ಪೆಕ್ಟರ್ ಗುರುಬಸವರಾಜ್ ಪ್ರಭು …

Read More »

ಮಹಿಳಾ ಕಸ್ಟಮ್ಸ್ ಅಧಿಕಾರಿಗೆ ಬ್ಲ್ಯಾಕ್‌ಮೇಲ್, ಅತ್ಯಾಚಾರ ಆರೋಪ – ಉದ್ಯಮಿ ಅರೆಸ್ಟ್

ಬೆಂಗಳೂರು: ಮಹಿಳಾ ಕಸ್ಟಮ್ಸ್ ಅಧಿಕಾರಿಗೆ  ಬ್ಲ್ಯಾಕ್‌ಮೇಲ್, ಲೈಂಗಿಕ ದೌರ್ಜನ್ಯ ಆರೋಪದಡಿ ಉದ್ಯಮಿಯೋರ್ವನನ್ನು  ಬೆಂಗಳೂರು ಪೊಲೀಸರು  ಬಂಧಿಸಿದ್ದಾರೆ. ಉದ್ಯಮಿ ಎಂ.ಕೃಪಲಾನಿ ಎಂಬಾತನನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ಮಹಿಳಾ ಅಧಿಕಾರಿಗೆ ಬ್ಲ್ಯಾಕ್‌ಮೇಲ್ ಮಾಡಿ ಲೈಂಗಿಕ ದೌರ್ಜನ್ಯ ಎಸಗಿದ್ದಲ್ಲದೆ ಹೇಳಿದಂತೆ ಕೇಳದಿದ್ದರೆ ಖಾಸಗಿ ಫೋಟೋ, ವೀಡಿಯೋ ವೈರಲ್ ಮಾಡುವುದಾಗಿ ಆರೋಪಿ ಬೆದರಿಕೆ ಹಾಕಿದ್ದ ಎನ್ನಲಾಗಿದೆ. ಕೃಪಲಾನಿ ಕಿರುಕುಳಕ್ಕೆ ಬೇಸತ್ತು ಮಹಿಳಾ ಅಧಿಕಾರಿ ಕೊನೆಗೂ ಪೊಲೀಸರಿಗೆ ದೂರು ನೀಡಿದ್ದು, ಯಲಹಂಕ ಠಾಣೆಯಲ್ಲಿ ಈತನ ವಿರುದ್ಧ ಅತ್ಯಾಚಾರದ …

Read More »

ದಾವಣಗೆರೆಯಲ್ಲಿ ಪ್ರಚಾರದ ವೇಳೆ ಮುಸ್ಲಿಮರಿಂದ ‘ಗೋ ಬ್ಯಾಕ್ ಕಾಂಗ್ರೆಸ್’ ಪ್ರತಿಭಟನೆ

ದಾವಣಗೆರೆ: ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆ  ಹಿನ್ನೆಲೆ ಪ್ರಚಾರದ ವೇಳೆ ಮುಸ್ಲಿಮರು ‘ಗೋ ಬ್ಯಾಕ್ ಕಾಂಗ್ರೆಸ್’ ಪ್ರತಿಭಟನೆ ನಡೆಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು  ಪ್ರಚಾರದ ವೇಳೆ ಮುಸ್ಲಿಮರು ‘ಗೋ ಬ್ಯಾಕ್’ ಎಂದು ಘೋಷಣೆ ಕೂಗಿದ್ದಾರೆ. ದಾವಣಗೆರೆಯ ಬಾಷಾ ನಗರ ಮುಸ್ಲಿಂ ರಸ್ತೆಯಲ್ಲಿ ಪ್ರಚಾರದ ಸಂದರ್ಭದಲ್ಲಿ ಘಟನೆ ನಡೆದಿದ್ದು, ಸಾವಿರಾರು ಮುಸ್ಲಿಮರು ‘ಗೋ ಬ್ಯಾಕ್, ಗೋ ಬ್ಯಾಕ್ ಕಾಂಗ್ರೆಸ್’ ಎಂದು ಘೋಷಣೆ ಕೂಗಿದ್ದಾರೆ. ಈ ಬಾರಿ ಕಾಂಗ್ರೆಸ್‌ನಿಂದ ಅಲ್ಪಸಂಖ್ಯಾತರಿಗೆ ಟಿಕೆಟ್ …

Read More »

ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್‌ – ಹಿಂದೂ ಯುವತಿ ಮೇಲೆ ಅತ್ಯಾಚಾರ ಆರೋಪ

ಹುಬ್ಬಳ್ಳಿ:‌ ಜಿಮ್‌ ಟ್ರೈನರ್‌ ಸಮೀರ್ ಮುಲ್ಲಾ ಲವ್‌ ಜಿಹಾದ್‌ ಪ್ರಕರಣ  ರಾಜ್ಯಾದ್ಯಂತ ಸದ್ದು ಮಾಡುತ್ತಿರುವಾಗಲೇ ಅಂತಹದ್ದೇ ಮತ್ತೊಂದು ಪ್ರಕರಣ ಹುಬ್ಬಳ್ಳಿಯಲ್ಲಿ ಬೆಳಕಿಗೆ ಬಂದಿದೆ. ಮುಸ್ಲಿಂ ಯುವಕನೊಬ್ಬ ಹಿಂದೂ ಯುವತಿ ಮೇಲೆ ಅತ್ಯಾಚಾರ ಎಸಗಿರುವ ಆರೋಪ ಕೇಳಿಬಂದಿದ್ದು, ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಸಮೀರ್‌ ಪ್ರಕರಣದ ಬಳಿಕ ಧೈರ್ಯದಿಂದ ಹೊರ ಬಂದ ಸಂತ್ರಸ್ತ ಯುವತಿ ಹಿಂದೂಪರ ಸಂಘಟನೆಗಳ ನೆರವಿನಿಂದ ಕೇಶ್ವಾಪುರ ಠಾಣೆಯಲ್ಲಿ ದಾಖಲಿಸಿದ್ದಾರೆ. ಯುವತಿ ನೀಡಿದ ದೂರಿನ ಆಧಾರದ ಮೇಲೆ ಆರೋಪಿ …

Read More »

ಬಾದಾಮಿಗೆ ಕೈ ಕೊಟ್ಟು ಓಡಿ ಹೋದ ಸಿದ್ದರಾಮಯ್ಯ: ಆರ್.ಅಶೋಕ್ ವ್ಯಂಗ್ಯ

ಬಾಗಲಕೋಟೆ: ಸಿದ್ದರಾಮಯ್ಯ ಅವರ ನಿಜ ಬಣ್ಣ ಮೈಸೂರಿನಲ್ಲಿ ಗೊತ್ತಾಗಿ ಅಲ್ಲಿನ ಮತದಾರರು ಸೋಲಿಸಿದರು. ಆಗ ಬಾದಾಮಿಗೆ ಓಡಿ ಬಂದರು. ಬಾದಾಮಿ ಕೈ ಹಿಡಿಯಿತು. ಆದರೆ ಇಲ್ಲಿಗೂ ಕೈ ಕೊಟ್ಟು ಓಡಿ ಹೋದರು. ಈಗ ಮತ್ತೆ ಬಾಗಲಕೋಟೆಗೆ ಬಂದಿದ್ದಾರೆ. ಇಲ್ಲಿಗೂ ಕೈ ಕೊಡುತ್ತಾರೆ ಎಂದು ವಿರೋಧಪಕ್ಷದ ನಾಯಕ ಆರ್.ಅಶೋಕ್ ಅವರು ವ್ಯಂಗ್ಯವಾಡಿದರು. ಇಂದು ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಆಗ ಚುನಾವಣೆಗೆ ಬಾದಾಮಿಗೆ ಬಂದಿದ್ದರು. ಈಗ ಮತ್ತೆ ಬಂದಿದ್ದಾರೆ. ಬಾದಾಮಿ …

Read More »

ಚರಂತಿಮಠರಿಗೆ ಮತ ನೀಡಿ ಅಭಿವೃದ್ಧಿಗೆ ಕೈಜೋಡಿಸಿ: ಆರ್.ಅಶೋಕ, ಬಸವರಾಜ ಬೊಮ್ಮಾಯಿ ಮನವಿ

ಬಾಗಲಕೋಟೆ: ಅಭಿವೃದ್ಧಿ ಮಾಡಿದವರಿಗೆ ಜನರು ಮತ ನೀಡಬೇಕು. ದೇಶದ ಪ್ರಧಾನಿಯಾಗಿ ನರೇಂದ್ರ ಮೋದಿ ಅವರು ಉತ್ತಮ ಆಡಳಿತ ನೀಡುತ್ತಿದ್ದಾರೆ. ಅವರ ನಾಯಕತ್ವದಲ್ಲಿ ಕೆಲಸ ಮಾಡುವ ಅವಕಾಶವನ್ನು ಬಿಜೆಪಿ ಅಭ್ಯರ್ಥಿ ಚರಂತಿಮಠರಿಗೆ ನೀಡಬೇಕು ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ ಮನವಿ ಮಾಡಿದರು. ತಾಲೂಕಿನ ಬಸರಿಕಟ್ಟೆ, ಕಡಿವಾಲ ಕಲ್ಲಾಪುರ, ಸುರಳಿಕಲ್ಲ, ಗ್ರಾಮದಲ್ಲಿ ಚರಂತಿಮಠ ಪರ ಮತಯಾಚನೆ ನಡೆಸಿ ಮಾತನಾಡಿದ ಅವರು, ಮನೆಮನೆಗಳಿಂದ ಮಹಿಳೆಯರು ಸೇರಿದಂತೆ ಹೆಚ್ಚಿನ ಸಂಖ್ಯೆಯಲ್ಲಿ ಮತದಾನ ಮಾಡಿದರೆ …

Read More »

ರೇಣುಕಾಸ್ವಾಮಿ ಕೊಲೆ ಪ್ರಕರಣ – ದರ್ಶನ್ ಜೈಲು ಸೇರಿ ಒಂದು ವರ್ಷ ಪೂರ್ಣ

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ  ನಟ ದರ್ಶನ್  ಜೈಲಿಗೆ ಸೇರಿ ಒಂದು ವರ್ಷ ಪೂರ್ಣಗೊಂಡಿದೆ. ಗೆಳತಿ ಪವಿತ್ರಾ ಗೌಡಗೆ  ಕೆಟ್ಟ ಪದ ಬಳಸಿದಾ ಎಂಬ ಕಾರಣಕ್ಕೆ ಚಿತ್ರದುರ್ಗದ ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ ಕೊಲೆ ಮಾಡಿದ ಪ್ರಕರಣದಲ್ಲಿ ನಟ ದರ್ಶನ್ ಜೈಲು ಸೇರಿದ್ದರು. ಕೊಲೆ ಆರೋಪ ಬಂದು 20 ತಿಂಗಳು ಆಗಿದೆ. ಆದರೆ, ಜೈಲು ಸೇರಿ ಒಟ್ಟು 365 ದಿನ ಕಳೆದಿದೆ. ಮೊದಲ ಬಾರಿ 2024 ಜೂನ್ 11 ರಂದು ಮೈಸೂರಿನಲ್ಲಿ …

Read More »

ಗ್ಯಾರಂಟಿ ಯೋಜನೆಗಳಿಗೆ SC/ST ಹಣ ಬಳಸುತ್ತಿಲ್ಲ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಹರಿಹರ : ಗ್ಯಾರಂಟಿ ಯೋಜನೆಗಳಿಗೆ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಕ್ಕೆ ಮೀಸಲಾಗಿರುವ ಹಣವನ್ನು ಬಳಸಿಕೊಂಡಿಲ್ಲ. ಈ ಕುರಿತು ಸುಖಾ ಸುಮ್ಮನೆ ಆರೋಪಿಸುತ್ತಿರುವ ಬಿಜೆಪಿಯವರು, ಈ ಸಮುದಾಯಗಳಿಗೆ ನೀಡಿರುವ ಕೊಡುಗೆ ಏನು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಪ್ರಶ್ನಿಸಿದರು. ಹರಿಹರದ ಹಳೇ ಹರ್ಲಾಪುರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವರು, ಗ್ಯಾರಂಟಿ ಯೋಜನೆಗಳನ್ನು ವಿರೋಧ ಪಕ್ಷದವರು ಅನಾವಶ್ಯಕವಾಗಿ ಟೀಕಿಸುತ್ತಿದ್ದಾರೆ ಎಂದರು.‌ ಸಮರ್ಥ್ ಗೆಲುವು ಶತಸಿದ್ಧ ಶಾಮನೂರು …

Read More »

ಅಣ್ಣಾಮಲೈಗೆ ಕೈ ತಪ್ಪಿದ ಟಿಕೆಟ್

ಚೆನ್ನೈ: ತಮಿಳುನಾಡು ವಿಧಾನಸಭಾ ಚುನಾವಣೆಗೆ ಬಿಜೆಪಿ ತನ್ನ 27 ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಗಮನಾರ್ಹ ಸಂಗತಿಯೆಂದರೆ ಮಾಜಿ ಐಪಿಎಸ್ ಅಧಿಕಾರಿ, ಮಾಜಿ ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಅವರನ್ನು ಕಣಕ್ಕಿಳಿಸಲಾಗಿಲ್ಲ. ರಾಜ್ಯ ಬಿಜೆಪಿ ಅಧ್ಯಕ್ಷ ನೈನಾರ್ ನಾಗೇಂದ್ರನ್ ಸತ್ತೂರ್ ನಿಂದ ಸ್ಪರ್ಧಿಸಲಿದ್ದಾರೆ.ಕೇಂದ್ರ ಸಚಿವ ಎಲ್. ಮುರುಗನ್ ಅವನಶಿಯಿಂದ (SC) ಕಣಕ್ಕಿಳಿಯಲಿದ್ದಾರೆ.ಕೊಯಮತ್ತೂರು (ಉತ್ತರ) ಕ್ಷೇತ್ರದಿಂದ ಕೊಯಮತ್ತೂರು ದಕ್ಷಿಣ ಕ್ಷೇತ್ರದ ಹಾಲಿ ಶಾಸಕಿ ವನತಿ ಶ್ರೀನಿವಾಸನ್ ಅವರನ್ನು ಕಣಕ್ಕಿಳಿಸಲಾಗಿದೆ. ಅವಡಿ ಎಂ. ರಾಜಸಿಂಹ …

Read More »