ಬೆಂಗಳೂರು, ಸೆಪ್ಟೆಂಬರ್ 20: ಜಾತಿ ನಿಂದನೆ ಆರೋಪದಡಿ ಜೈಲು ಸೇರಿದ್ದ ಶಾಸಕ ಮುನಿರತ್ನ ವಿರುದ್ಧ ಅತ್ಯಾಚಾರ ಪ್ರಕರಣವು ದಾಖಲಾಗಿದೆ. ಸಂತ್ರಸ್ತೆ ನೀಡಿರುವ ದೂರಿನಲ್ಲಿ ಭಯಾನಕ ಅಂಶ ಬೆಚ್ಚಿಬೀಳಿಸುವಂತಿದೆ. ಸಂತ್ರಸ್ತೆಯನ್ನು ಮುಂದಿಟ್ಟುಕೊಂಡು ಮುನಿರತ್ನ ಹನಿಟ್ರ್ಯಾಪ್ ಮಾಡಿಸುತ್ತಿದ್ದನಂತೆ. ತನಗೆ ಆಗದವರನ್ನು ಮಟ್ಟ ಹಾಕಲು ಹನಿಟ್ರ್ಯಾಪ್ ಮಾಡಿ ಅವರಿಗೆ ಏಡ್ಸ್ ಸೋಂಕಿತರ ರಕ್ತ ಇಂಜೆಕ್ಟ್ ಮಾಡಿಸುತ್ತಿದ್ದ ಎಂಬ ಸ್ಪೋಟಕ ಮಾಹಿತಿ ಬಹಿರಂಗವಾಗಿದೆ. ಮುನಿರತ್ನನ ಈ ಭಯಾನಕ ಕೃತ್ಯಕ್ಕೆ ಹಲವರು ಬಲಿಯಾಗಿದ್ದಾರೆ. ತನ್ನ ಎದುರಾಳಿಗಳನ್ನ ಮಟ್ಟ …
Read More »ಕಟ್ಟಡ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್: ಶೈಕ್ಷಣಿಕ ಸಹಾಯಧನಕ್ಕೆ ಅರ್ಜಿ ಆಹ್ವಾನ
ಬೆಂಗಳೂರು: ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ವತಿಯಿಂದ ನೋಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಮಕ್ಕಳಿಂದ ಶೈಕ್ಷಣಿಕ ಸಹಾಯಧನಕ್ಕೆ ಅರ್ಜಿ ಆಹ್ವಾನಿಸಿದೆ. 2024- 25 ನೇ ಸಾಲಿಗೆ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಶೈಕ್ಷಣಿಕ ಧನ ಸಹಾಯ ನೀಡಲಾಗುವುದು. ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ನವೆಂಬರ್ 30 ಅರ್ಜಿ ಸಲ್ಲಿಕೆಗೆ ಕೊನೆಯ ದಿನವಾಗಿದೆ. ಈಗಾಗಲೇ ಸರ್ಕಾರದ ವಿವಿಧ …
Read More »ಅಥಣಿ | ಕೃಷ್ಣಾ ಸಹಕಾರ ಸಕ್ಕರೆ ಕಾರ್ಖಾನೆಗೆ ₹65.86 ಲಕ್ಷ ಲಾಭ: ಪರಪ್ಪಾ ಸವದಿ
ಅಥಣಿ: ಈಚಿನ ವರ್ಷಗಳಲ್ಲಿ ಅಥಣಿ ತಾಲ್ಲೂಕಿನ 5 ಸಕ್ಕರೆ ಕಾರ್ಖಾನೆಗಳಲ್ಲಿಯೇ ಪ್ರತಿ ಟನ್ ಕಬ್ಬಿಗೆ ಅತಿ ಹೆಚ್ಚು ಬೆಲೆ ಪಾವತಿಸಲಾಗಿದೆ ಎಂದು ಸಕ್ಕರೆ ಕಾರ್ಖಾನೆ ಅಧ್ಯಕ್ಷ ಪರಪ್ಪ ಸವದಿ ಹೇಳಿದರು. ಅವರು ಕೃಷ್ಣಾ ಸಹಕಾರ ಸಕ್ಕರೆ ಕಾರ್ಖಾನೆಯ 32ನೇ ಸಾಮಾನ್ಯ ಸಭೆಯಲ್ಲಿ ಮಾತನಾಡಿ, ‘ಕಳೆದ ಹಂಗಾಮಿನಲ್ಲಿ ಪೂರೈಕೆಯಾದ ಪ್ರತಿ ಟನ್ ಕಬ್ಬಿಗೆ ನಮ್ಮ ಕಾರ್ಖಾನೆಯಿಂದ ಕೇಂದ್ರ ಸರ್ಕಾರ ನಿಗದಿ ಪಡಿಸಿದ ಎಫ್.ಆರ್.ಪಿ ದರಕ್ಕಿಂತ ಹೆಚ್ಚಿನ ಬಿಲ್ಲನ್ನು ನಿಗದಿತ ಅವಧಿಯಲ್ಲಿಯೇ ಪಾವತಿಸಲಾಗಿದೆ’ ಎಂದರು. …
Read More »ಸಂಕೇಶ್ವರ | ತರಕಾರಿ ಪೇಟೆ ಎಪಿಎಂಸಿಗೆ ಸ್ಥಳಾಂತರ: ಡಿ.ಸಿ ಆದೇಶ
ಸಂಕೇಶ್ವರ: ಸಂಕೇಶ್ವರದ ದುರದುಂಡೀಶ್ವರ ಮಠದ ಜಾಗದಲ್ಲಿ ನಡೆಯುತ್ತಿದ್ದ ಖಾಸಗಿ ತರಕಾರಿ ಪೇಟೆಯನ್ನು ತಕ್ಷಣವೇ ಕೃಷಿ ಉತ್ಪನ್ನ ಮಾರುಕಟ್ಟೆಗೆ (ಎ.ಪಿ.ಎಂ.ಸಿ) ಸ್ಥಳಾಂತರಿಸಬೇಕು ಎಂದು ಬೆಳಗಾವಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಮೌಖಿಕ ಆದೇಶ ನೀಡಿದರು. ಪಟ್ಟಣದ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಗುರುವಾರ ಪ್ರತಿಭಟನೆ ನಡೆಸುತ್ತಿದ್ದ ತರಕಾರಿ ಬೆಳೆಗಾರರ ಮನವಿ ಸ್ವೀಕರಿಸಿ ಮಾತನಾಡಿದ ಅವರು, ರಾಜ್ಯ ಸರ್ಕಾರದ ಕೃಷಿ ಉತ್ಪನ ಮಾರಾಟದ ನಿಯಮಾವಳಿಗೆ ಅನುಸಾರವಾಗಿ ಖಾಸಗಿ ತರಕಾರಿ ಪೇಟೆಯನ್ನು ಎ.ಪಿ.ಎಂ.ಸಿ ಗೆ ಸ್ಥಳಾಂತರ ಮಾಡಲಾಗುವುದು …
Read More »ಸಕ್ಕರೆ ಕಾರ್ಖಾನೆ ಅವ್ಯವಹಾರ: ತನಿಖೆಗೆ ಆಗ್ರಹಿಸಿ ಸೆ.20ರಂದು ಧರಣಿ
ಕಿತ್ತೂರು: ತಾಲ್ಲೂಕಿನ ಎಂ.ಕೆ. ಹುಬ್ಬಳ್ಳಿಯ ಮಲಪ್ರಭಾ ಸಹಕಾರ ಸಕ್ಕರೆ ಕಾರ್ಖಾನೆಯಲ್ಲಿ (ರಾಣಿ ಶುಗರ್) ನಡೆದಿದೆ ಎನ್ನಲಾದ ಕೋಟ್ಯಂತರ ರೂಪಾಯಿಗಳ ಅವ್ಯವಹಾರ ಖಂಡಿಸಿ ಸೆ.20ರ ಬೆಳಿಗ್ಗೆ 10 ಗಂಟೆಯಿಂದ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ಮಾಡುವುದಾಗಿ ರೈತ ಸಂಘಟನೆಗಳ ಒಕ್ಕೂಟದ ಮುಖಂಡರು ಘೋಷಿಸಿದ್ದಾರೆ. ಡೊಂಬರಕೊಪ್ಪ ಪ್ರವಾಸಿ ಮಂದಿರದಲ್ಲಿ ಗುರುವಾರ ರೈತ ಮುಖಂಡರ ಸಭೆಯಲ್ಲಿ ಒಕ್ಕೂಟದ ಅಧ್ಯಕ್ಷ ಬೀರಪ್ಪ ದೇಶನೂರ, ಮುಖಂಡರಾದ ಬಸನಗೌಡ ಪಾಟೀಲ, ಬಸವರಾಜ ಮೊಕಾಶಿ ಮಾತನಾಡಿ, ‘ಕಳೆದ ಹಂಗಾಮಿನಲ್ಲಿ ಸಕ್ಕರೆ ಇಳುವರಿಯನ್ನು …
Read More »ಒಂದು ದೇಶ, ಒಂದು ಚುನಾವಣೆ ಸಮರ್ಥ ನಿರ್ಧಾರ: ಈರಣ್ಣ ಕಡಾಡಿ
ಮೂಡಲಗಿ: ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದ ಎನ್‌ಡಿಎ ಸರ್ಕಾರವು ‘ಒಂದು ದೇಶ, ಒಂದು ಚುನಾವಣೆ’ ನಿರ್ಣಯ ಒಂದು ಸಮರ್ಥ ನಿರ್ಧಾರ ಮಾತ್ರವಲ್ಲದೆ, ಚುನಾವಣೆ ವ್ಯವಸ್ಥೆಯಲ್ಲಿ ಕ್ರಾಂತಿಕಾರಿ ಹೆಜ್ಜೆಯಾಗಿದೆ ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಕೇಂದ್ರ ಸರ್ಕಾರದ ಕ್ರಮ ಸ್ವಾಗತಿಸಿದ್ದಾರೆ. ಗುರುವಾರ ಪ್ರಕಟಣೆ ನೀಡಿರುವ ಅವರು, ಮೊದಲ ಹಂತದಲ್ಲಿ ಲೋಕಸಭೆ ಮತ್ತು ಎಲ್ಲ ರಾಜ್ಯಗಳ ವಿಧಾನಸಭೆಗಳಿಗೆ ಏಕಕಾಲದಲ್ಲಿ ಚುನಾವಣೆ ನಡೆಸುವುದು ಮತ್ತು ಈ ಸಾರ್ವತ್ರಿಕ ಚುನಾವಣೆ ನಡೆದ 100 ದಿನಗಳ …
Read More »ಕಲಾವಿದರ ಮಾಸಾಶನ ₹3 ಸಾವಿರಕ್ಕೆ ಹೆಚ್ಚಳ: ಸಿದ್ದರಾಮಯ್ಯ ಭರವಸೆ
ಬೆಂಗಳೂರು: ‘ಸಂಕಷ್ಟದಲ್ಲಿರುವ ಕಲಾವಿದರಿಗೆ ನೀಡಲಾಗುತ್ತಿರುವ ಮಾಸಾಶನವನ್ನು ಮುಂದಿನ ವರ್ಷದಿಂದ ₹ 3 ಸಾವಿರಕ್ಕೆ ಹೆಚ್ಚಿಸಲಾಗುತ್ತದೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು. ಕರ್ನಾಟಕ ನಾಟಕ ಅಕಾಡೆಮಿ ನಗರದಲ್ಲಿ ಗುರುವಾರ ಹಮ್ಮಿಕೊಂಡ ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ 2022-23ನೇ ಸಾಲಿನ, 2023-24ನೇ ಸಾಲಿನ ಹಾಗೂ 2024-25ನೇ ಸಾಲಿನ ಪ್ರಶಸ್ತಿ ವಿತರಿಸಿ, ಮಾತನಾಡಿದರು. ‘ಸದ್ಯ ಪ್ರತಿ ತಿಂಗಳು ₹ 2 ಸಾವಿರ ಮಾಸಾಶನ ನೀಡಲಾಗುತ್ತಿದೆ. 12 ಸಾವಿರಕ್ಕೂ ಅಧಿಕ ಕಲಾವಿದರು ಮಾಸಾಶನ …
Read More »ದರ್ವೇಶ ಸಂಸ್ಥೆಯ ₹500 ಕೋಟಿಗೂ ಅಧಿಕ ವಂಚನೆ ಕೇಸ್: ಆರೋಪಿಗಳ ಜಾಮೀನು ಅರ್ಜಿ ವಜಾ
ರಾಯಚೂರು: ಸಾರ್ವಜನಿಕರ ₹ 500 ಕೋಟಿಗೂ ಅಧಿಕ ಹಣ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ವೇಶ ಸಂಸ್ಥೆಯ ಪಾಲುದಾರರು ಹಾಗೂ ಏಜೆಂಟರು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಇಲ್ಲಿಯ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ವಜಾಗೊಳಿಸಿದೆ. ದರ್ವೇಶ ಸಂಸ್ಥೆಯ ಪಾಲುದಾರರಾದ ಮಹ್ಮದ್ ಹುಸೇನ್ ಸುಜಾ, ಸೈಯದ್ ವಾಸಿಂ, ಸೈಯದ್ ಮಿಸ್ಕಿನ್ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ ಹಾಗೂ ನ್ಯಾಯಾಂಗ ಬಂಧನಲ್ಲಿರುವ ದರ್ವೇಶ ಕಂಪನಿ ಏಜೆಂಟರಾದ ಅಜರ್ ಪಾಷಾ, ಸೈಯದ್ ಮೋಸಿನ್, ಶೇಖ್ ಮುಜಾಮಿಲ್ …
Read More »ನಿವೇಶನ ವಿವಾದ: ಎರಡು ಗುಂಪುಗಳ ನಡುವೆ ಗಲಾಟೆ; ಕೊಂಡಸಕೊಪ್ಪದಲ್ಲಿ ಪೊಲೀಸ್ ಕಾವಲು
ಬೆಳಗಾವಿ: ತಾಲ್ಲೂಕಿನ ಕೊಂಡಸಕೊಪ್ಪ ಗ್ರಾಮದಲ್ಲಿ ಗುರುವಾರ ನಿವೇಶನ ವಿಚಾರಕ್ಕೆ ನಡೆದ ಜಗಳದಲ್ಲಿ, ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಸೇರಿ ನಾಲ್ವರ ಮೇಲೆ ಹಲ್ಲೆ ಮಾಡಲಾಗಿದೆ. ಬಸ್ತವಾಡ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ವಿಠ್ಠಲ ಸಾಂಬ್ರೇಕರ್ ಅವರ ತಲೆಗೆ ತೀವ್ರ ಗಾಯವಾಗಿದ್ದು, ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಇವರ ಮೂವರು ಸ್ನೇಹಿತರು ಚಿಕಿತ್ಸೆ ಪಡೆದು ಮರಳಿದ್ದಾರೆ. ಕೊಂಡಸಕೊಪ್ಪದವರಾದ ಪುಂಡಲೀಕ ಕುಡಚೇಕರ, ಭೀಮಾ ದೇಮನ್ನವರ, ನಾಗಪ್ಪ ವಾಳಕೆ, ಗಜು ಡೋಂಗ್ರೆ, ಮೋನಪ್ಪ ಗುಜರಾನಟ್ಟಿ, ಶಂಕರ ಪಾಟೀಲ ಆರೋಪಿಗಳು. ಈಗಾಗಲೇ …
Read More »74.87 ಕೋಟಿ ವಂಚನೆ: 14 ಸಿಬ್ಬಂದಿ ವಿರುದ್ಧ ದೂರು
ಬೆಳಗಾವಿ: ‘ಗೋಕಾಕದ ಮಹಾಲಕ್ಷ್ಮಿ ಅರ್ಬನ್ ಕೋ-ಆಪ್ ಕ್ರೆಡಿಟ್ ಬ್ಯಾಂಕ್‌ನಲ್ಲಿ ₹74.87 ಕೋಟಿ ವಂಚನೆ ಆಗಿದೆ. ಬ್ಯಾಂಕ್‌ನ ವ್ಯವಸ್ಥಾಪಕ, ಗುಮಾಸ್ತ ಸೇರಿ 14 ಆರೋಪಿಗಳ ವಿರುದ್ಧ ಪ್ರಕರಣ ದಾಖಲಾಗಿದ್ದು, ಅವರ ಬಂಧನಕ್ಕೆ ಮೂರು ತಂಡ ರಚಿಸಲಾಗಿದೆ’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಭೀಮಾಶಂಕರ ಗುಳೇದ ತಿಳಿಸಿದರು. ‘ಪ್ರಕರಣ ಸಂಬಂಧ ಬ್ಯಾಂಕ್‌ನ ಅಧ್ಯಕ್ಷ ಜಿತೇಂದ್ರ ಬಾಳಾಸಾಹೇಬ ಮಾಂಗಳೇಕರ ದೂರು ದಾಖಲಿಸಿದ್ದಾರೆ. ದೊಡ್ಡ ಮೊತ್ತದ ಪ್ರಕರಣವಾದ್ದರಿಂದ ಇದನ್ನು ಸಿಐಡಿಗೆ ಹಸ್ತಾಂತರಿಸಲು ಪತ್ರ ಬರೆಯಲಾಗಿದೆ. …
Read More »
Laxmi News 24×7