Breaking News

Laxminews 24x7

ಜನರಿಗೆ ಗುಡ್ ನ್ಯೂಸ್: ಸರ್ಕಾರದಿಂದ ಇ-ಕೆವೈಸಿ ಆ್ಯಪ್ ಬಿಡುಗಡೆ

ಬೆಂಗಳೂರು: ಸರ್ಕಾರ ಜನರಿಗೆ ಗುಡ್ ನ್ಯೂಸ್ ನೀಡಿದ್ದು, ಆನ್‌ಲೈನ್ ಫಟಾಫಟ್ ಅಂತ ಇ-ಕೆವೈಸಿ  ಮಾಡಲು ಇದೀಗ ಹೊಸ ಆಪ್ ಬಿಡುಗಡೆ ಮಾಡಿದೆ. ಈಗಾಗಲೇ ಸರ್ವರ್ ಸಮಸ್ಯೆಯಿಂದ ಇ-ಕೆವೈಸಿಗಾಗಿ ಗಂಟೆಗಟ್ಟಲೇ ಕ್ಯೂನಲ್ಲಿ ನಿಲ್ಲಬೇಕಾದ ಪರಿಸ್ಥಿತಿ ಎದುರಾಗಿದ್ದು, ಹೀಗಾಗಿ ಇದನ್ನು ತಪ್ಪಿಸಲು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯಿಂದ ಆಪ್ ರಿಲೀಸ್ ಮಾಡಿದೆ. ಈ ಆಪ್‌ಗೆ ಅನ್ನಸೇವೆ ಎಂದು ಹೆಸರಿಡಲಾಗಿದ್ದು, ಎಂಟು ಜಿಲ್ಲೆಗೆ ಮಾತ್ರ ಲಾಂಚ್ ಮಾಡಲಾಗಿದೆ. ಈ ಆಪ್ ಮೂಲಕ ಮನೆಯಲ್ಲಿ …

Read More »

ಇಬ್ಬರನ್ನು ಬಲಿ ಪಡೆದಿದ್ದ ‘ಶೌರ್ಯ’ ಸೆರೆಹಿಡಿದ ಏಳೇ ತಿಂಗಳಲ್ಲಿ ಸಾವು

ಶಿವಮೊಗ್ಗ: ಬಾಳೆಹೊನ್ನೂರು ಭಾಗದಲ್ಲಿ ಇಬ್ಬರು ಕಾರ್ಮಿಕರನ್ನು ಬಲಿ ಪಡೆದಿದ್ದ ಕಾಡಾನೆ  ಶೌರ್ಯ (32) ಶಿವಮೊಗ್ಗದ  ಸಕ್ರೆಬೈಲು  ಆನೆ ಬಿಡಾರದಲ್ಲಿ ಮೃತಪಟ್ಟಿದೆ. 2026ರ ಫೆಬ್ರವರಿಯಲ್ಲಿ ಚಿಕ್ಕಮಗಳೂರು ಜಿಲ್ಲೆಯ ಬಾಳೆಹೊನ್ನೂರು ಭಾಗದಲ್ಲಿ ನಡೆದ ಕಾಡಾನೆ ದಾಳಿಗಳ ಬಳಿಕ ಶೌರ್ಯ ಆನೆಯನ್ನು ಸೆರೆಹಿಡಿಯಲಾಗಿತ್ತು. ಬಳಿಕ ಸಕ್ರೆಬೈಲು ಆನೆ ಬಿಡಾರಕ್ಕೆ ತಂದು ಪಳಗಿಸಲಾಗಿತ್ತು. ಸೆರೆ ಕಾರ್ಯಾಚರಣೆ ಹಾಗೂ ತರಬೇತಿ ವೇಳೆ ಆನೆ ಗಾಯಗೊಂಡಿತ್ತು ಎಂದು ತಿಳಿದು ಬಂದಿದೆ. ತರಬೇತಿ ವೇಳೆ ಆನೆಯ ಕಾಲು ಹಾಗೂ ದೇಹದ …

Read More »

ಬಸ್ ನಿಲ್ದಾಣದಲ್ಲಿ ಹುಡುಗಿಯರ ಫೋಟೋ ತೆಗೆಯುತ್ತಿದ್ದ ವ್ಯಕ್ತಿಗೆ ಧರ್ಮದೇಟು – ಮೊಬೈಲ್‌ನಲ್ಲಿ ಅಶ್ಲೀಲ ಚಿತ್ರಗಳು ಪತ್ತೆ

ಕೊಪ್ಪಳ: ಇಲ್ಲಿನ ಗಂಗಾವತಿ ಬಸ್ ನಿಲ್ದಾಣದಲ್ಲಿ  ಹುಡುಗಿಯರ ಫೋಟೋ ಕ್ಲಿಕ್ಕಿಸುತ್ತಿದ್ದ ವ್ಯಕ್ತಿಗೆ ಸಾರ್ವಜನಿಕರಿಗೆ ಧರ್ಮದೇಟು ನೀಡಿರುವ ಘಟನೆ ನಡೆದಿದೆ. ರಾಯಚೂರು ಜಿಲ್ಲೆಯ ಮಾನ್ವಿ ನಿವಾಸಿಯೊಬ್ಬ ಗಂಗಾವತಿ ಬಸ್ ನಿಲ್ದಾಣದಲ್ಲಿ ಮೊಬೈಲ್‌ನಲ್ಲಿ ಯುವತಿಯರ ಫೋಟೋ ಸೆರೆಹಿಡಿಯುತ್ತಿದ್ದ. ಈ ವೇಳೆ ಗಮನಿಸಿದ ಮಹಿಳೆಯರು ಆತನಿಗೆ ಪ್ರಶ್ನೆ ಮಾಡಿದ್ದಾರೆ. ಬಳಿಕ ಸ್ಥಳದಲ್ಲಿದ್ದ ಸಾರ್ವಜನಿಕರು ವ್ಯಕ್ತಿಗೆ ಧರ್ಮದೇಟು ನೀಡಿದ್ದಾರೆ.  ಆನಂತರ ಆತನ ಮೊಬೈಲ್ ಪರಿಶೀಲಿಸಿದಾಗ ಮಹಿಳೆಯರ ಹಾಗೂ ವಿದ್ಯಾರ್ಥಿನಿಯರ ಫೋಟೋಗಳು ಪತ್ತೆಯಾಗಿವೆ. ಅಲ್ಲದೆ ಆತ ಅಶ್ಲೀಲ …

Read More »

ಪರಪ್ಪನ ಅಗ್ರಹಾರದಲ್ಲಿ ಮತ್ತೆ ಮೊಬೈಲ್, ಸಿಮ್‌ ಪತ್ತೆ; ಆರೋಪಿಗಳ ವಿರುದ್ಧ FIR

ಬೆಂಗಳೂರು: ಪರಪ್ಪನ ಅಗ್ರಹಾರ  ಕೇಂದ್ರ ಕಾರಾಗೃಹದಲ್ಲಿ ಮತ್ತೆ ನಿಷೇಧಿತ ವಸ್ತುಗಳು ಪತ್ತೆಯಾಗಿವೆ. ಜೈಲಿನೊಳಗೆ ಒಂದು ಮೊಬೈಲ್ ಫೋನ್ ಹಾಗೂ ಮೂರು ಸಿಮ್‌ಕಾರ್ಡ್‌ಗಳು ಪತ್ತೆಯಾಗಿದ್ದು, ಈ ಸಂಬಂಧ ಆರೋಪಿತರ ವಿರುದ್ಧ ಪ್ರಕರಣ ದಾಖಲಾಗಿದೆ. ಜೈಲಿನೊಳಗೆ ನಿಷೇಧಿತ ವಸ್ತುಗಳು ಹೇಗೆ ಪ್ರವೇಶಿಸಿದವು ಎಂಬ ಬಗ್ಗೆಯೂ ತನಿಖೆ ನಡೆಯುತ್ತಿದೆ. ಮೊಬೈಲ್ ಹಾಗೂ ಸಿಮ್‌ಗಳನ್ನು ಜೈಲಿನೊಳಗೆ ಬಿಟ್ಟ ಅಧಿಕಾರಿಗಳ ವಿರುದ್ಧವೂ ಕ್ರಮಕ್ಕೆ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇನ್ನು ಜೈಲಿನೊಳಗೆ ಮೊಬೈಲ್ ಬಳಸುತ್ತಿದ್ದ ಆರೋಪಿತರ ವಿರುದ್ಧವೂ …

Read More »

ಕುರುಡುಮಲೆ ಗಣಪತಿಗೆ ಪೂಜೆ ಸಲ್ಲಿಸಿ ರಾಜ್ಯ ಪ್ರವಾಸಕ್ಕೆ ವಿಜಯೇಂದ್ರ ಚಾಲನೆ

ಕೋಲಾರ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ  ಅವರು ರಾಜ್ಯ ಪ್ರವಾಸಕ್ಕೆ ಚಾಲನೆ ನೀಡಿದ್ದು, ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಪ್ರಸಿದ್ಧ ಕುರುಡುಮಲೆ ಗಣಪತಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ ಸಾರ್ವಜನಿಕ ಜೀವನದ 25 ವರ್ಷಗಳ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿರುವ ‘ಸೇವಾ ಸಂಕಲ್ಪ ಅಭಿಯಾನ’ ಹಾಗೂ ‘ಬೂತ್ ವಿಜಯ ಸಂಕಲ್ಪ ಯಾತ್ರೆ’ಯ ಭಾಗವಾಗಿ ವಿಜಯೇಂದ್ರ ರಾಜ್ಯ ಪ್ರವಾಸ ಕೈಗೊಂಡಿದ್ದಾರೆ. ಅ.1ರಿಂದ ಆರಂಭವಾಗಿರುವ ಈ ಅಭಿಯಾನದಲ್ಲಿ ಮೊದಲ …

Read More »

ರಾಜ್ಯದಲ್ಲಿ 1 ಕೋಟಿ ಮತದಾರರ ಹೆಸರು SIR ನೆಪದಲ್ಲಿ ಡಿಲೀಟ್ ಆಗಿದೆ: ಡಿಕೆಶಿ

ಬೆಂಗಳೂರು: ರಾಜ್ಯದಲ್ಲಿ 1 ಕೋಟಿ ಮತದಾರರ ಹೆಸರು SIR ನೆಪದಲ್ಲಿ ಡಿಲೀಟ್ ಆಗಿದೆ ಎಂದು ಸಿಎಂ ಡಿ.ಕೆ ಶಿವಕುಮಾರ್‌  ಹೇಳಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಎಸ್‌ಐಆರ್‌ ಪ್ರಕ್ರಿಯೆ ಬಗ್ಗೆ ಅವರು ವಿಡಿಯೋ ಹಂಚಿಕೊಂಡಿದ್ದಾರೆ. ವಿಡಿಯೋದಲ್ಲಿ ಎಸ್‌ಐಆರ್‌ನಿಂದ  ದೇಶದಲ್ಲಿ ಬಹುದೊಡ್ಡ ಬದಲಾವಣೆ ಆಗುತ್ತಿರುವುದನ್ನು ಎಲ್ಲರೂ ಗಮನಿಸಿದ್ದೀರಿ. ಇಡೀ ದೇಶ ಎಸ್‌ಐಆರ್ ಪದ್ಧತಿ ನೋಡಿ ತಲ್ಲಣಗೊಂಡಿದೆ. ನಾನು ಸಿಎಂ ಆಗಿ, ಪ್ರಜಾಸೇವಕನಾಗಿ ನಿಮ್ಮ ಮತವನ್ನ ಕಾಪಾಡಲು ಪ್ರಯತ್ನ ಮಾಡುತ್ತಿದ್ದೇನೆ. ಆದರೂ ಕೂಡ ಇದರಲ್ಲಿ ವಿಫಲನಾಗಿದ್ದೇನೆ. …

Read More »

ವಿಧಾನಸೌಧದ ಮೆಟ್ಟಿಲು ಮೇಲೆ ಉರ್ದು ಹಬ್ಬ ಆಚರಣೆಗೆ ಕರವೇ ವಿರೋಧ

ಬೆಂಗಳೂರು: ವಿಧಾನಸೌಧದ ಮೆಟ್ಟಿಲು ಮೇಲೆ ಉರ್ದು ಹಬ್ಬ ಆಚರಣೆಗೆ ಕರ್ನಾಟಕ ರಕ್ಷಣಾ ವೇದಿಕೆ  ತೀವ್ರ ವಿರೋಧ ವ್ಯಕ್ತಪಡಿಸಿದೆ. ಈ ಕುರಿತು ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಹಂಚಿಕೊಂಡಿರುವ ಕರವೇ ರಾಜ್ಯಾಧ್ಯಕ್ಷ ನಾರಾಯಣಗೌಡ, ವಿಧಾನಸೌಧದ ಮೆಟ್ಟಿಲುಗಳ ಮೇಲೆ ರಾಜ್ಯ ಸರ್ಕಾರ ಉರ್ದು ಹಬ್ಬ ಆಯೋಜಿಸುವ ನಿರ್ಧಾರ ಮಾಡಿದೆ ಎಂಬ ಮಾಧ್ಯಮ ವರದಿಗಳನ್ನು ಗಮನಿಸಿದೆ. ಇದೊಂದು ಅವಿವೇಕದ, ಅಪ್ರಬುದ್ಧ, ದುರಹಂಕಾರದ ನಡೆ. ಏನು ಮಾಡಿದರೂ ನಡೆಯುತ್ತದೆ ಎಂಬ ಅಧಿಕಪ್ರಸಂಗದ ನಿಲುವು. ಸರ್ಕಾರವೇ ಮುಂದೆ ನಿಂತು …

Read More »

ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ವಿನಯ್ ಕುಲಕರ್ಣಿಗೆ ಮತ್ತೆ ಸಂಕಷ್ಟ?

ನವದೆಹಲಿ: ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಶಾಸಕ ವಿನಯ್ ಕುಲಕರ್ಣಿಗೆ ಮತ್ತೆ ಸಂಕಷ್ಟ ಎದುರಾಗಬಹುದಾದ ಸಾಧ್ಯತೆ ಇದೆ. ವಿನಯ್ ಕುಲಕರ್ಣಿಗೆ ಜಾಮೀನು ನೀಡಿರುವುದಕ್ಕೆ ಸುಪ್ರೀಂ ಕೋರ್ಟ್ ಆಕ್ಷೇಪ ವ್ಯಕ್ತಪಡಿಸಿದ್ದು, ಕೊಲೆ ಕೇಸ್ ಹೊಂದಿರುವವರು ವಿಧಾನಸಭೆ ಪ್ರವೇಶಿಸಬೇಕೇ ಎಂದೂ ಖಾರವಾಗಿ ಪ್ರಶ್ನಿಸಿದೆ. ಶಾಸಕ ವಿನಯ್ ಕುಲಕರ್ಣಿಗೆ ಹೈಕೋರ್ಟ್ ನೀಡಿದ್ದ ಜಾಮೀನು ಪ್ರಶ್ನಿಸಿ ರಾಜ್ಯ ಸರ್ಕಾರ ಹಾಗೂ ಯೋಗೇಶ್ ಗೌಡ ಅವರ ಸಹೋದರ ಗುರುನಾಥ್ ಗೌಡ ಸುಪ್ರೀಂ ಕೋರ್ಟ್ …

Read More »

ಹೈದರಾಬಾದ್‌ನಲ್ಲಿ ಭೀಕರ ಹಿಟ್‌ & ರನ್‌ – 8 ಮಂದಿಗೆ ಗುದ್ದಿದ ಕಾರು; ಮೂವರ ಸ್ಥಿತಿ ಗಂಭೀರ

ಹೈದರಾಬಾದ್‌: ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ 8 ಕಾರ್ಮಿಕರಿಗೆ ಕಾರು ಗುದ್ದಿಕೊಂಡು  ಹೋದ ಭೀಕರ ಘಟನೆ ಹೈದರಾಬಾದ್‌ನ  ಕುಶೈಗುಡ ಪೊಲೀಸ್ ಠಾಣಾ ವ್ಯಾಪ್ತಿಯ ಕಮಲಾ ನಗರದಲ್ಲಿ ನಡೆದಿದೆ. ಈ ಘಟನೆಯಲ್ಲಿ ಎಂಟು ಮಂದಿ ಗಾಯಗೊಂಡಿದ್ದು, ಮೂವರ ಸ್ಥಿತಿ ಗಂಭೀರವಾಗಿದೆ. ಕಾರು ಡಿಕ್ಕಿಯಾದ ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಸೆ.29ರ ಮುಂಜಾನೆ ಬಿಹಾರ ಮೂಲದ ಕಾರ್ಮಿಕರು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದರು. ಈ ವೇಳೆ, ಹಿಂದಿನಿಂದ ವೇಗವಾಗಿ ಬಂದ ಕಾರು ಪಾದಾಚಾರಿಗಳಿಗೆ ಡಿಕ್ಕಿಯಾಗಿದೆ. ಕಾರು …

Read More »

ರಕ್ತದೊತ್ತಡ – ಕೇದಾರನಾಥ ಯಾತ್ರೆಗೆ ತೆರಳಿದ್ದ ಹೊನ್ನಾಳಿ ಮೂಲದ ಮಹಿಳೆ ಸಾವು

ದಾವಣಗೆರೆ: ರಕ್ತದೊತ್ತಡದಿಂದ  ಕೇದಾರನಾಥ ಯಾತ್ರೆಗೆ ತೆರಳಿದ್ದ ದಾವಣಗೆರೆ ಜಿಲ್ಲೆಯ ಹೊನ್ನಾಳಿ ( ಮೂಲದ ಮಹಿಳೆ ಸಾವನ್ನಪ್ಪಿದ್ದಾರೆ. ಹೊನ್ನಾಳಿ ಪಟ್ಟಣದ ಹಿರೇಕಲ್ಮಠದ ನಿವಾಸಿ ನಾಗರತ್ನಮ್ಮ (62) ಮೃತ ದುರ್ದೈವಿ. ವೇದಮೂರ್ತಿ ಅನ್ನದಾನಯ್ಯ ಶಾಸ್ತ್ರಿಗಳ ಧರ್ಮಪತ್ನಿ ನಾಗರತ್ನಮ್ಮ ಪತಿ ಜೊತೆ ಬೆಂಗಳೂರು ಮೂಲದ ಟ್ರಾವೆಲ್ ಏಜೆನ್ಸಿ ಮೂಲಕ ಉತ್ತರಾಖಂಡದಲ್ಲಿರುವ ಕೇದಾರನಾಥ ಯಾತ್ರೆಗೆ ತೆರಳಿದ್ದರು. ಬದರಿನಾಥ ಹಾಗೂ ಕೇದಾರನಾಥ ಪ್ರವಾಸ ಮುಗಿಸಿಕೊಂಡು ವಾಪಸ್ಸಾಗುವ ವೇಳೆ ರಕ್ತದೊತ್ತಡ ಹೆಚ್ಚಾಗಿ ಮೃತಪಟ್ಟಿದ್ದಾರೆ.

Read More »