Breaking News

Laxminews 24x7

SIR ಪ್ರಕ್ರಿಯೆಯಲ್ಲಿ ನಾವ್ಯಾರು ಕೈ ಹಾಕಿಲ್ಲ, ಆದ್ರೆ ಆಯೋಗ ಮಾಡ್ತಿರೋ ಅಭಿಯಾನದಲ್ಲಿ ಭಿನ್ನಾಭಿಪ್ರಾಯ ಇದೆ: ಡಿಕೆಶಿ

ಬೆಂಗಳೂರು: SIR ಪ್ರಕ್ರಿಯೆಯಲ್ಲಿ ರಾಜ್ಯ ಸರ್ಕಾರ ಯಾವುದೇ ರೀತಿಯ ಮಧ್ಯಪ್ರವೇಶ ಮಾಡಿಲ್ಲ. ಆದರೆ ಚುನಾವಣಾ ಆಯೋಗ ಈ ಅಭಿಯಾನವನ್ನು ನಡೆಸುತ್ತಿರುವ ರೀತಿಯ ಬಗ್ಗೆ ಮಾತ್ರ ನಮಗೆ ಭಿನ್ನಾಭಿಪ್ರಾಯ ಇದೆ ಎಂದು ಮುಖ್ಯಮಂತ್ರಿ  ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. SIR ಪ್ರಕ್ರಿಯೆಯಲ್ಲಿ ಲೋಪಗಳಾಗಿವೆ ಎಂಬ ವಿಪಕ್ಷಗಳ ಆರೋಪದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಈ ವಿಚಾರದಲ್ಲಿ ಈಗಾಗಲೇ ನ್ಯಾಯಾಲಯದಲ್ಲಿ ವಾದ ಮಾಡಿದ್ದೇವೆ. ಈಗ ಕೋರ್ಟ್ ತೀರ್ಪು ನೀಡಿದೆ. ಎಲ್ಲರಿಗೂ ಮತದಾನದ ಹಕ್ಕು ಸಿಗಬೇಕು ಎಂಬ …

Read More »

ಪತ್ನಿ-ನಾದಿನಿಯ ಕತ್ತು ಕೊಯ್ದು ಭೀಕರ ಕೊಲೆ – ಮೂವರು ಮಕ್ಕಳೊಂದಿಗೆ ಪತಿ ಎಸ್ಕೇಪ್

ಚಿಕ್ಕಬಳ್ಳಾಪುರ: ಅಕ್ಕ-ತಂಗಿಯರನ್ನು ಕತ್ತು ಕೊಯ್ದು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಚಿಕ್ಕಬಳ್ಳಾಪುರಜಿಲ್ಲೆಯ ಚಿಂತಾಮಣಿ ನಗರದ ಜೆ.ಜೆ. ಕಾಲೋನಿಯಲ್ಲಿ ನಡೆದಿದೆ. 25 ವರ್ಷದ ಶಮಾ ಮತ್ತು 21 ವರ್ಷದ ರೇಷ್ಮಾ ಕೊಲೆಯಾದ ಅಕ್ಕ-ತಂಗಿ ಮಹಿಳೆಯರು. ಮಾಹಿತಿ ತಿಳಿಯುತ್ತಿದ್ದಂತೆ ಚಿಂತಾಮಣಿ ನಗರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತರು ಹಿಂದೂ ಧರ್ಮದಿಂದ ಮುಸ್ಲಿಂ ಧರ್ಮಕ್ಕೆ ಮತಾಂತರವಾಗಿದ್ದರು ಎಂದು ತಿಳಿದುಬಂದಿದೆ. ಮೃತ ಶಮಾ ಅವರ ಪತಿ ಏಜಾಜ್ ಮೇಲೆಯೇ ಕೊಲೆ …

Read More »

ಮೊಬೈಲ್ ಟಾರ್ಚ್‌ ಹಿಡಿದು KKRTC ಬಸ್‌ ಚಾಲನೆ – ಮೂವರು ಅಮಾನತು

ಕಲಬುರಗಿ: ಟಾರ್ಚ್‌ ಹಿಡಿದು ಬಸ್‌ ಚಲಾಯಿಸಿದ್ದ KKRTC ಅಧಿಕಾರಿಗಳು ಚಾಲಕ ಸೇರಿ ಮೂವರು ಸಿಬ್ಬಂದಿಯನ್ನು ಅಮಾನತು  ಮಾಡಿದ್ದಾರೆ. KKRTC ಬಸ್‌ ಕಲಬುರಗಿಯಿಂದ ಚಿಂಚೋಳಿಗೆ ಸಂಚರಿಸುತ್ತಿತ್ತು. ಈ ವೇಳೆ ಮೊಬೈಲ್‌ ಟಾರ್ಚ್‌ ಹಿಡಿದು ಸುಮಾರು 90 ಕಿಲೋಮೀಟರ್ ದೂರ ಬಸ್‌ ಚಲಾಯಿಸಿದ್ದರು.  ಎಚ್ಚೆತ್ತ ಕೆಕೆಆರ್‌ಟಿಸಿ ಅಧಿಕಾರಿಗಳು ಇಲಾಖಾ ತನಿಖೆ ನಡೆಸಿದ್ದರು. ತನಿಖೆಯಲ್ಲಿ ಡಿಪೋ ಸಿಬ್ಬಂದಿ ಹಾಗೂ ಚಾಲಕನ ಅಜಾಗೃತೆ ಘಟನೆಗೆ ಕಾರಣ ಎನ್ನುವುದು ದೃಢವಾಗಿದೆ. ತನಿಖೆಯ ವರದಿ ಬೆನ್ನಲ್ಲೇ ಅಧಿಕಾರಿಗಳು ತಾಂತ್ರಿಕ …

Read More »

ರಾಮ ಮಂದಿರ ದೇಣಿಗೆ ಹಗರಣ| ಚಂಪತ್ ರಾಯ್ ರಾಜೀನಾಮೆ ಅಂಗೀಕಾರ; ಬಜರಂಗ್ ಬಾಗ್ರ ಹೊಸ ಪ್ರಧಾನ ಕಾರ್ಯದರ್ಶಿ

ಅಯೋಧ್ಯೆ: ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ಅವರ ರಾಜೀನಾಮೆಯನ್ನು ಟ್ರಸ್ಟ್ ಅಧಿಕೃತವಾಗಿ ಅಂಗೀಕರಿಸಿದೆ. ಚಂಪತ್ ರಾಯ್ ಅವರ ಸ್ಥಾನಕ್ಕೆ ಬಜರಂಗ್ ಬಾಗ್ರ  ಅವರನ್ನು ಹೊಸ ಪ್ರಧಾನ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಲಾಗಿದೆ. ರಾಮಮಂದಿರದ ಕಾಣಿಕೆ ಮತ್ತು ದೇಣಿಗೆ ಹಣ ದುರುಪಯೋಗವಾಗಿರುವ ಆರೋಪದ ಹಿನ್ನೆಲೆಯಲ್ಲಿ ಇವರಿಬ್ಬರೂ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಿದ್ದರು. ಸೋಮವಾರ ನಡೆದ ಟ್ರಸ್ಟ್‌ನ ಪ್ರಮುಖ ಸಭೆಯಲ್ಲಿ …

Read More »

ಶ್ರೀಲಂಕಾ ಜೈಲಿನಲ್ಲಿ ಗ್ಯಾಂಗ್ ವಾರ್ – ಭೀಕರ ಘರ್ಷಣೆಗೆ 25 ಕೈದಿಗಳು ಬಲಿ, 100ಕ್ಕೂ ಹೆಚ್ಚು ಜನರಿಗೆ ಗಾಯ

ಕೊಲಂಬೊ: ಶ್ರೀಲಂಕಾದ ಜೈಲಿನಲ್ಲಿ ಕೈದಿಗಳ ಎರಡು ಗುಂಪಿನ ಮಧ್ಯೆ ಗಲಾಟೆಯಾದ ಪರಿಣಾಮ 25 ಮಂದಿ ಸಾವನ್ನಪ್ಪಿದ್ದು, 100ಕ್ಕೂ ಹೆಚ್ಚು ಜನರಿಗೆ ಗಾಯಗೊಂಡಿದ್ದಾರೆ. ಕೊಲಂಬೊದ ನೆಗೊಂಬೊ ಜೈಲಿನಲ್ಲಿ ಈ ರಕ್ತಪಾತ ನಡೆದಿದೆ. ಜೈಲಿನಲ್ಲಿ ಶಿಕ್ಷೆ ಅನುಭವಿಸುತ್ತಿರುವ ಅಪರಾಧಿಗಳು ಮತ್ತು ವಿಚಾರಣಾಧೀನ ಕೈದಿಗಳ ನಡುವೆ ಭಾನುವಾರವೇ (ಜು.5) ಈ ಗಲಾಟೆ ಆರಂಭವಾಗಿತ್ತು ಎಂದು ಮೂಲಗಳು ತಿಳಿಸಿವೆ. ಕೈದಿಗಳ ನಡುವಿನ ಈ ಮಾರಾಮಾರಿಗೆ ನಿಖರವಾದ ಕಾರಣ ಏನೆಂಬುದು ತಿಳಿದುಬಂದಿಲ್ಲ. ಸದ್ಯ ಅಧಿಕಾರಿಗಳು ಜೈಲಿನ ಆವರಣವನ್ನು …

Read More »

ಕಾಲ್ನಡಿಗೆಯಲ್ಲೇ ಬೆಟ್ಟ ಏರಿ ತಿರುಪತಿ ದರ್ಶನ ಪಡೆದ ಕರ್ನಾಟಕದ 116 ವರ್ಷದ ವೃದ್ಧೆ; ಹಾಡಿಹೊಗಳಿದ ಆಂಧ್ರ ಸಿಎಂ

ತಿರುಪತಿ: ಕರ್ನಾಟಕದ 116 ವರ್ಷದ ನವನೀತಮ್ಮ  ಕಾಲ್ನಡಿಗೆಯಲ್ಲೇ ತಿರುಮಲ ಬೆಟ್ಟ ಏರಿ ಶ್ರೀ ವೆಂಕಟೇಶ್ವರ ಸ್ವಾಮಿಯ ದರ್ಶನ ಪಡೆದಿದ್ದಾರೆ. ಅವರ ಈ ಅಪರೂಪದ ಭಕ್ತಿ ಮತ್ತು ಸಾಧನೆ ದೇಶಾದ್ಯಂತ ಮೆಚ್ಚುಗೆಗೆ ಪಾತ್ರವಾಗಿದ್ದು, ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು  ಎಕ್ಸ್‌ (X) ನಲ್ಲಿ ಪೋಸ್ಟ್‌ ಮಾಡುವ ಮೂಲಕ ಅವರನ್ನು ಹಾಡಿಹೊಗಳಿದ್ದಾರೆ. ಕುಟುಂಬದ ಸದಸ್ಯರೊಂದಿಗೆ ನವನೀತಮ್ಮ ತಿರುಮಲದ ಮೆಟ್ಟಿಲುಗಳನ್ನು ಏರಿ ಸ್ವಾಮಿಯ ದರ್ಶನ ಪಡೆದಿದ್ದಾರೆ. ವಯಸ್ಸು ಎಷ್ಟೇ ಆಗಿದ್ದರೂ ಭಕ್ತಿ ಮತ್ತು …

Read More »

ಕಲ್ಲು ಕ್ವಾರಿ ದುರಂತಕ್ಕೆ NHRC ಸ್ವಯಂಪ್ರೇರಿತ ದೂರು – ರಾಜ್ಯ ಸರ್ಕಾರಕ್ಕೆ ನೋಟಿಸ್

ನವದೆಹಲಿ: ಬೆಂಗಳೂರಿನ ಕಲ್ಲು ಕ್ವಾರಿಯಲ್ಲಿ ಭಾರೀ ಗ್ರಾನೈಟ್ ಬಂಡೆ ಕುಸಿದು ಏಳು ವಲಸೆ ಕಾರ್ಮಿಕರು ಮೃತಪಟ್ಟಿದ್ದು, ಐವರು ಗಾಯಗೊಂಡಿರುವ ದುರಂತ ಪ್ರಕರಣವನ್ನು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ  ಸ್ವಯಂಪ್ರೇರಿತವಾಗಿ ದೂರು ದಾಖಲಿಸಿಕೊಂಡಿದೆ. ಈ ಸಂಬಂಧ ಆಯೋಗವು, ಕರ್ನಾಟಕ ಸರ್ಕಾರದ  ಮುಖ್ಯ ಕಾರ್ಯದರ್ಶಿಗೆ ನೋಟಿಸ್ ಜಾರಿಗೊಳಿಸಿ, ಘಟನೆಯ ಕುರಿತು ಸಮಗ್ರ ವರದಿಯನ್ನು ಎರಡು ವಾರದೊಳಗೆ ಸಲ್ಲಿಸುವಂತೆ ನಿರ್ದೇಶಿಸಿದೆ. ಜು.2ರಂದು ಬೆಂಗಳೂರಿನ  ಕಲ್ಲುಕ್ವಾರಿಯಲ್ಲಿ ಈ ದುರಂತ ಸಂಭವಿಸಿತ್ತು. ಭಾರೀ ಗ್ರಾನೈಟ್ ಬಂಡೆ ಏಕಾಏಕಿ …

Read More »

ಪತ್ನಿ ಮನೆಗೆ ಬರಲಿಲ್ಲವೆಂದು ಡಬಲ್‌ ಮರ್ಡರ್‌; ಕೊಲೆ ಬಳಿಕ ಪೊಲೀಸರಿಗೆ ಶರಣಾದ ಗಂಡ

ಚಿಕ್ಕಬಳ್ಳಾಪುರ: ಚಿಂತಾಮಣಿ  ನಗರದ ಜೆಜೆ ಕಾಲೋನಿಯಲ್ಲಿ ನಡೆದಿದ್ದ ಅಕ್ಕ-ತಂಗಿಯ ಭೀಕರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೊಸ ಮಾಹಿತಿ ಹೊರಬಿದ್ದಿದೆ. ಪತ್ನಿ ತವರು ಮನೆಯಿಂದ ಮತ್ತೆ ಮನೆಗೆ ಬರಲು ನಿರಾಕರಿಸಿದ್ದಕ್ಕೆ ಕೋಪಗೊಂಡ ಪತಿ ಏಜಾಜ್, ಪತ್ನಿ ಶಮಾ ಹಾಗೂ ಆಕೆಯ ತಂಗಿ ರೇಷ್ಮಾಳನ್ನು ಕತ್ತು ಕೊಯ್ದು ಹತ್ಯೆ ಮಾಡಿರುವುದಾಗಿ ಪೊಲೀಸ್ ತನಿಖೆಯಲ್ಲಿ ತಿಳಿದುಬಂದಿದೆ. ಪೊಲೀಸರ ಮಾಹಿತಿ ಪ್ರಕಾರ, ಶಮಾ ಮತ್ತು ಏಜಾಜ್‌ಗೆ ಎಂಟು ವರ್ಷಗಳ ಹಿಂದೆ ಮದುವೆಯಾಗಿದ್ದು, ಮೂವರು ಮಕ್ಕಳಿದ್ದಾರೆ. ಕಳೆದ …

Read More »

SIR ಸರ್ವೆ ವೇಳೆ ಮತ್ತೊಬ್ಬ BLO ಹೃದಯಾಘಾತದಿಂದ ಸಾವು

ಬೀದರ್: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ  ಸರ್ವೆ ಕಾರ್ಯದ ವೇಳೆ ಬಿಎಲ್‌ಒ ಹೃದಯಾಘಾತದಿಂದ ಮೃತಪಟ್ಟ ಘಟನೆ ಬೀದರ್ಜಿಲ್ಲೆಯ ಅಮಲಾಪುರ ಗ್ರಾಮದಲ್ಲಿ ನಡೆದಿದೆ. 45 ವರ್ಷದ ಸುನೀಲ್ ಮೃತ BLO. ಭಾಲ್ಕಿ ತಾಲೂಕಿನ ಮೂಲದ ಸುನೀಲ್ ಅವರು ಕಳೆದ ಹಲವು ದಿನಗಳಿಂದ SIR ಕಾರ್ಯದಲ್ಲಿ ತೊಡಗಿಕೊಂಡಿದ್ದರು. ಅಮಲಾಪುರ ಗ್ರಾಮದ 33ನೇ ಬೂತ್‌ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಅವರಿಗೆ ತೀವ್ರ ಎದೆನೋವು ಕಾಣಿಸಿಕೊಂಡಿದ್ದು, ಬಳಿಕ ಕುಸಿದು ಬಿದ್ದಿದ್ದಾರೆ. ಸ್ಥಳೀಯರು ತಕ್ಷಣವೇ ಅವರನ್ನು …

Read More »

ಕಾಂಗ್ರೆಸ್‌ಗೆ ಬಿಗ್ ಶಾಕ್ – ಜಾರಕಿಹೊಳಿ ಆಪ್ತ, ಕುರುಬ ಸಮುದಾಯದ ಪ್ರಭಾವಿ ಮುಖಂಡ ಸದಾಶಿವ ದೇಶಿಂಗೆ ಬಿಜೆಪಿಗೆ ಸೇರ್ಪಡೆ

ಬೆಂಗಳೂರು: ಬೆಳಗಾವಿ  ಜಿಲ್ಲೆಯ ಪ್ರಭಾವಿ ನಾಯಕ, ಕೆಎಂಎಫ್ ಮಾಜಿ ನಿರ್ದೇಶಕ ಹಾಗೂ ಸಚಿವ ಸತೀಶ್ ಜಾರಕಿಹೊಳಿ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ಕುರುಬ ಸಮುದಾಯದ  ಹಿರಿಯ ಮುಖಂಡ ಸದಾಶಿವ ದೇಶಿಂಗೆಅವರು ಕಾಂಗ್ರೆಸ್ ತೊರೆದು ಅಧಿಕೃತವಾಗಿ ಬಿಜೆಪಿ ಸೇರ್ಪಡೆಯಾಗಿದ್ದಾರೆ. ಮಲ್ಲೇಶ್ವರಂನಲ್ಲಿರುವ ರಾಜ್ಯ ಬಿಜೆಪಿ ಕಚೇರಿಯಲ್ಲಿ ನಡೆದ ವಿಶೇಷ ಕಾರ್ಯಕ್ರಮದಲ್ಲಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ದೇಶಿಂಗೆ ಅವರಿಗೆ ಪಕ್ಷದ ಬಾವುಟ ನೀಡಿ, ಹೆಗಲಿಗೆ ಕಂಬಳಿ ಹೊದೆಸುವ ಮೂಲಕ ಆತ್ಮೀಯವಾಗಿ ಪಕ್ಷಕ್ಕೆ …

Read More »