Breaking News

Laxminews 24x7

ಕಾರು- ಪಿಕಪ್ ಡಿಕ್ಕಿ: ಇಬ್ಬರು ಸಾವು

ಕಲಬುರಗಿ: ರಾಷ್ಟ್ರೀಯ ಹೆದ್ದಾರಿ ಕಲಬುರಗಿ- ಜೇವರ್ಗಿ ನಡುವಿನ ಫರಹತಾಬಾದ್ ನ ಖಣಿ ಬಳಿ ನ.5ರ ಮಂಗಳವಾರ ರಾತ್ರಿ ಕಾರು ಹಾಗೂ ಪಿಕಪ್ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿ ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿದ ಘಟನೆ ನಡೆದಿದೆ. ಕಾರು ಹಾಗೂ ಪಿಕಪ್ ನಲ್ಲಿದ್ದ ತಲಾ ಒಬ್ಬರು ಸಾವನ್ನಪ್ಪಿದ್ದಾರೆ. ಕಾರಿನಲ್ಲಿದ್ದ ಕಲಬುರಗಿ ನಗರದ ಜನತಾ ಲೇಔಟ್‌ ನ ನಿವಾಸಿ ಮುರುಗೇಶ ಚಂದ್ರಶೇಖರ ಉಪ್ಪಿನ (42) ಹಾಗೂ ಶಹಾಬಾದ್ ನ ನಿವಾಸಿ ಧೂಳಮ್ಮ ಯಮನಪ್ಪ ಪೂಜಾರಿ …

Read More »

ಲೋಕಾಯುಕ್ತ ಕ್ಲೀನ್ ಚಿಟ್ ಕೊಟ್ಟರೂ ಸಿಎಂಗೆ ಗಂಡಾಂತರ ತಪ್ಪಿದ್ದಲ್ಲ: ವಿಜಯೇಂದ್ರ

ಹಾವೇರಿ: ಮುಡಾ ಭೂ ಹಗರಣದ ತನಿಖೆಯನ್ನು ಲೋಕಾಯುಕ್ತದವರು ಒತ್ತಡದಲ್ಲಿ ಮಾಡುತ್ತಿದ್ದಾರೆ. ಯಾವ ಪ್ರಶ್ನೆಗೆ ಏನು ಉತ್ತರ ಕೊಡಬೇಕು ಎನ್ನುವುದು ಮೊದಲೇ ಸಿದ್ದವಾಗಿದೆ. ಲೋಕಾಯುಕ್ತ ಕ್ಲೀನ್ ಚಿಟ್ ಕೊಟ್ಟರೂ ಸಿದ್ದರಾಮಯ್ಯ ಗಂಡಾಂತರದಿಂದ ಪಾರಾಗಲು ಸಾಧ್ಯವಿಲ್ಲ” ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿಕೆ ನೀಡಿದ್ದಾರೆ.   ಬಂಕಾಪುರದಲ್ಲಿ ಬುಧವಾರ(ನ) ಸುದ್ದಿಗಾರರೊಂದಿಗೆ ಮಾತನಾಡಿ ‘ಸಿಎಂ ಸಿದ್ದರಾಮಯ್ಯ ಮುಡಾ ಹಗರಣದಲ್ಲಿ ಆರೋಪಿ ನಂಬರ್ 1. ಅವರ ಅಕ್ಕಪಕ್ಕದಲ್ಲಿ ಜಮೀರ್ ಇರಬೇಕು ಇಲ್ಲದಿದ್ದರೆ ಭ್ರಷ್ಟರು ಇರಬೇಕು. ಚುನಾವಣೆ ಸಂದರ್ಭದಲ್ಲಿ …

Read More »

ಸಾಲಬಾಧೆ; ರೈತ ಮಹಿಳೆ ಸಾವು

ರಿಪ್ಪನ್‌ಪೇಟೆ: ಹೆದ್ದಾರಿಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಲ್ಲೂರು ಗ್ರಾಮದ ರೈತ ಮಹಿಳೆ ಮೋಹಿನಿ (65) ಸಾಲಬಾಧೆಯಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅಕಾಲಿಕ ಮಳೆಯಿಂದಾಗಿ ಭತ್ತ, ಶುಂಠಿ ಬೆಳೆ ಹಾನಿಯಾಗಿತ್ತು. ಸಹಕಾರ ಸಂಘದಲ್ಲಿ ಮಾಡಿದ ಸಾಲ ತಿರುವಳಿ ಮಾಡುವ ಕುರಿತು ಖಿನ್ನತೆಗೆ ಒಳಗಾಗಿದ್ದರು. ಸೋಮವಾರ ಮನೆಯಲ್ಲಿ ವಿಷ ಸೇವಿಸಿದ್ದ ಅವರನ್ನು ತಕ್ಷಣ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮಂಗಳವಾರ ಮೃತಪಟ್ಟಿದ್ದಾರೆ. ತಳಲೆ ಸಹಕಾರ ಬ್ಯಾಂಕ್‌ ಮತ್ತು ಜಿಲ್ಲಾ ಸಹಕಾರ ಸಂಘದ ಸ್ವಸಹಾಯ ಸಂಘ …

Read More »

S.D.A. ಆತ್ಮಹತ್ಯೆ ನನ್ನ ಪಿ.ಎ ಭಾಗಿಯಾದ ವಿಚಾರ ಗೊತ್ತಿಲ್ಲ: ಹೆಬ್ಬಾಳಕರ

ಬೆಳಗಾವಿ: ‘ತಹಶೀಲ್ದಾರ್‌ ಕಚೇರಿಯಲ್ಲಿ ಆತ್ಮಹತ್ಯೆ ಮಾಡಿಕೊಂಡ ರುದ್ರಣ್ಣ ಯಡವಣ್ಣವರ ಅವರ ಪ್ರಕರಣದಲ್ಲಿ ನನ್ನ ಆಪ್ತ ಸಹಾಯಕ ಸೋಮು ಬಾಗಿಯಾದ ಬಗ್ಗೆ ನನಗೆ ಏನೂ ಗೊತ್ತಿಲ್ಲ. ಈ ವಿಚಾರದಲ್ಲಿ ನಿಷ್ಪಕ್ಷಪಾತ ತನಿಖೆಯಾಗಬೇಕು. ನೊಂದ ಕುಟುಂಬಕ್ಕೆ ನ್ಯಾಯ ಸಿಗಬೇಕು’ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ ಪ್ರತಿಕ್ರಿಯಿಸಿದರು.   ನಗರದಲ್ಲಿ ಬುಧವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ‘ನಮ್ಮ ಕೆಲಸಕ್ಕೆ ಅನುಕೂಲವಾಗಲಿ ಎಂಬ ಕಾರಣಕ್ಕೆ ಪಿ.ಎ.ಗಳನ್ನು ನೇಮಕ ಮಾಡಿಕೊಂಡಿರುತ್ತೇವೆ. ಸಚಿವರಿಗೆ ಹತ್ತು …

Read More »

ವಿದೇಶದಲ್ಲಿ 15 ದಿನ ಅಧ್ಯಯನ ಕೈಗೊಳ್ಳಲಿರುವ ರಾಣಿ ಚನ್ನಮ್ಮ ವಿವಿಯ ವಿದ್ಯಾರ್ಥಿಗಳು

ಬೆಳಗಾವಿ: ‘ಬ್ರಿಟಿಷ್‌ ಕೌನ್ಸಿಲ್‌ನವರು ರಾಜ್ಯ ಉನ್ನತ ಶಿಕ್ಷಣ ಪರಿಷತ್‌ ಸಹಯೋಗದಲ್ಲಿ ಇಂಗ್ಲೆಂಡ್‌ನ ಯೂನಿವರ್ಸಿಟಿ ಆಫ್‌ ಈಸ್ಟ್‌ ಲಂಡನ್‌ಗೆ ನ.9ರಿಂದ 23ರವರೆಗೆ ಹಮ್ಮಿಕೊಂಡಿರುವ ಅಧ್ಯಯನ ಪ್ರವಾಸಕ್ಕೆ ಇಲ್ಲಿನ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ (ಆರ್‌ಸಿಯು) ಐದು ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ’ ಎಂದು ಕುಲಪತಿ ಪ್ರೊ.ಸಿ.ಎಂ.ತ್ಯಾಗರಾಜ ಹೇಳಿದರು.   ಇಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಅಧ್ಯಯನ ‍ಪ್ರವಾಸಕ್ಕೆ ವಿದ್ಯಾರ್ಥಿಗಳ ಆಯ್ಕೆಗಾಗಿ ಸರ್ಕಾರದ ನಿರ್ದೇಶನದಂತೆ ಪರೀಕ್ಷೆ ಸಂಘಟಿಸಿದ್ದೆವು. ಇದರಲ್ಲಿ ಬೆಳಗಾವಿಯ ಸಂಗೊಳ್ಳಿ ರಾಯಣ್ಣ ಪ್ರಥಮ ದರ್ಜೆ ಕಾಲೇಜಿನ …

Read More »

ಮನೆ-ಮನೆಗೆ ಭೇಟಿ ನೀಡಿ ಜಾನುವಾರುಗಳ ಮಾಹಿತಿ ಸಂಗ್ರಹಿಸಿ: ಬಾಲಚಂದ್ರ ಜಾರಕಿಹೊಳಿ

ಗೋಕಾಕ- ಪ್ರತಿ ಮನೆ-ಮನೆಗೆ ಭೇಟಿ ನೀಡಿ ಜಾನುವಾರುಗಳ ನಿಖರವಾದ ಮಾಹಿತಿಯನ್ನು ಸಂಗ್ರಹಿಸಿ ಗಣತಿ ಕಾರ್ಯವನ್ನು ಯಶಸ್ವಿಗೊಳಿಸುವಂತೆ ಶಾಸಕ ಮತ್ತು ಬೆಳಗಾವಿ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ (ಬೆಮ್ಯುಲ್) ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚಿಸಿದರು. ಇಲ್ಲಿಯ ಎನ್‌ಎಸ್‌ಎಫ್ ಕಾರ್ಯಾಲಯದಲ್ಲಿ ಕಳೆದ ಸೋಮವಾರದಂದು ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯಿಂದ ನಡೆಯುತ್ತಿರುವ ೨೧ ನೇ ರಾಷ್ಟೀಯ ಜಾನುವಾರು ಗಣತಿ ಕಾರ್ಯಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, …

Read More »

ಕಬ್ಬಿನ ದರ ಘೋಷಿಸಿ ಕಾರ್ಖಾನೆ ಪ್ರಾರಂಭಿಸಿ’

ಕಾಗವಾಡ: ರಾಜ್ಯ ಸರ್ಕಾರ ಕಬ್ಬಿನ ಕಾರ್ಖಾನೆಗಳನ್ನು ನ.8ರ ನಂತರ ಪ್ರಾರಂಭಿಸಲು ಆದೇಶ ನೀಡಿದ್ದು, ತಾಲ್ಲೂಕಿನ ಕೆಲ ಕಾರ್ಖಾನೆಗಳು ಈಗಾಗಲೇ ಪ್ರಾರಂಭಗೊಂಡಿವೆ‌. ಕಬ್ಬಿನ ದರ ಘೋಷಣೆ ಮಾಡದೇ ಕಾರ್ಖಾನೆಗಳು ಪ್ರಾರಂಭಿಸಿಸಬಾರದೆಂದು ಆಗ್ರಹಿಸಿ ತಾಲ್ಲೂಕಿನ ಕಬ್ಬು ಬೆಳೆಗಾರ ರೈತರು ಮಂಗಳವಾರ ತಹಶೀಲ್ದಾರ್ ರಾಜೇಶ ಬುರ್ಲಿ ಮತ್ತು ಕಾಗವಾಡ ಪಿಎಸ್‌ಐ ಜಿ.ಜಿ ಬಿರಾದರ ಅವರಿಗೆ ಮನವಿ ಸಲ್ಲಿಸಿದರು.   ರೈತ ಮುಖಂಡ ಸುರೇಶ ಚೌಗುಲೆ ಮಾತನಾಡಿ, ಈ ಮೊದಲು ರಾಜ್ಯ ಸರ್ಕಾರ ನ.15 ರ …

Read More »

ಮಹಾರಾಷ್ಟ್ರ ಗೆಲ್ಲಲು 10 ಗ್ಯಾರಂಟಿಗಳ ಕೊಟ್ಟ ʼಮಹಾಯುತಿʼ!

ಮುಂಬೈ: ಜಾರ್ಖಂಡ್‌ ಚುನಾವಣೆಗಾಗಿ “ಇಂಡಿಯಾ’ ಒಕ್ಕೂಟ 7 ಗ್ಯಾರಂಟಿಗಳನ್ನು ಬಿಡುಗಡೆ ಮಾಡಿರುವಂತೆಯೇ, ನ.20ರಂದು ನಡೆಯಲಿರುವ ಮಹಾರಾಷ್ಟ್ರ ಚುನಾವಣೆಗಾಗಿ ಬಿಜೆಪಿ, ಏಕನಾಥ ಶಿಂಧೆ ಬಣ ಶಿವಸೇನೆ, ಅಜಿತ್‌ ಪವಾರ್‌ ನೇತೃತ್ವದ ಎನ್‌ಸಿಪಿಯನ್ನೊಳಗೊಂಡ “ಮಹಾಯುತಿ’ 10 ಗ್ಯಾರಂಟಿಗಳನ್ನು ಬಿಡುಗಡೆ ಮಾಡಿದೆ.   “ಲಡ್ಕಿ ಬಹೆನ್‌ ಯೋಜನೆ’ ಅನ್ವಯ ನೀಡುವ ಮಾಸಿಕ ಮೊತ್ತವನ್ನು ಈಗಿನ 1500 ರೂ.ಗಳಿಂದ 2100 ರೂ.ಗೆ ಹೆಚ್ಚಿಸುವ ಭರವಸೆ ನೀಡಲಾಗಿದೆ. 25 ಲಕ್ಷ ಉದ್ಯೋಗ ಸೃಷ್ಟಿ, ರೈತರ ಸಾಲಮನ್ನಾ, ಪಿಎಂ ಕಿಸಾನ್‌ …

Read More »

ಬರಾಕ್‌ ಒಬಾಮಾ ಆಹ್ವಾನಕ್ಕೆ ಸರಕಾರ ತೀರ್ಮಾನ

ಬೆಂಗಳೂರು: ಬೆಳಗಾವಿಯಲ್ಲಿ ನಡೆಯುವ ವಿಧಾನ ಮಂಡಲದ ಜಂಟಿ ಅಧಿವೇಶನ ಹಾಗೂ ಕಾಂಗ್ರೆಸ್‌ ಅಧಿವೇಶನದ ಶತಮಾನೋತ್ಸವಕ್ಕೆ ಅಮೆರಿಕದ ಮಾಜಿ ಅಧ್ಯಕ್ಷ ಬರಾಕ್‌ ಒಬಾಮಾ ಅವರನ್ನು ಆಹ್ವಾನಿಸಲು ರಾಜ್ಯ ಸರಕಾರ ತೀರ್ಮಾನಿಸಿದೆ. ಡಿ. 9ರಿಂದ ಬೆಳಗಾವಿ ಜಂಟಿ ಅಧಿವೇಶನ ಪ್ರಾರಂಭವಾಗುವ ಸಾಧ್ಯತೆ ಇದೆ. ಜತೆಗೆ ಶತಮಾನೋತ್ಸವ ಕಾರ್ಯಕ್ರಮದ ಉದ್ಘಾಟನೆಯನ್ನು ಒಬಾಮಾ ಅವರೇ ನೆರವೇರಿಸುವ ಸಾಧ್ಯತೆ ಇದೆ. ಭಾಗವಹಿಸುವ ಕುರಿತಂತೆ ಒಬಾಮಾ ಅವರಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ ಎಂದು ಉನ್ನತ ಮೂಲಗಳು ತಿಳಿಸಿವೆ.

Read More »

ಹಗುರವಾಗಿ ಕಾರು ಚಲಾಯಿಸಿ ಎಂದಿದ್ದಕ್ಕೆ ಹಲ್ಲೆ ಮಾಡಿದ ಗಾಯಕ ಮಾಳು ನಿಪನಾಳ

ಬೆಳಗಾವಿ: ಹಗುರವಾಗಿ ಕಾರು ಚಲಾಯಿಸಿ ಎಂದಿದ್ದಕ್ಕೆ ಯುವಕ ಹಾಗೂ ಈತನ ಸಹೋದರಿ ಮೇಲೆ ‘ನಾ ಡ್ರೈವರ್’ ಹಾಡಿನ ಖ್ಯಾತಿಯ ಗಾಯಕ ಮಾಳು ನಿಪನಾಳ ಹಲ್ಲೆ ಮಾಡಿದ್ದು, ಗಾಯಗೊಂಡ ಇಬ್ಬರೂ ಆಸ್ಪತ್ರೆಗೆ ದಾಖಲಾಗಿದ್ದಾರೆ. ಶೇಖಪ್ಪ ಹಕ್ಯಾಗೋಳ ಹಾಗೂ ಸಹೋದರಿಗೆ ಗಾಯವಾಗಿದ್ದು, ಚಿಕ್ಕೋಡಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.   ರಾಯಬಾಗ ತಾಲೂಕಿನ ನಿಪನಾಳ ಗ್ರಾಮದ ಹೊರವಲಯದಲ್ಲಿ ಯುವಕ ಹಾಗೂ ಆತನ ಸಹೋದರಿ ಬೈಕ್ ಮೇಲೆ ಸಂಚರಿಸುತ್ತಿದ್ದರು. ಈ ವೇಳೆ ನಾ ಡ್ರೈವರ್ ಹಾಡಿನ ಗಾಯಕ …

Read More »