Breaking News

Laxminews 24x7

ಸಿದ್ದರಾಮಯ್ಯ ನಂತರ ರಾಜ್ಯದಲ್ಲಿ ಅಂತಹ ನಾಯಕರಿದ್ದರೆ ಅದು ಸತೀಶ್ ಜಾರಕಿಹೊಳಿ ಮಾತ್ರ: ಶಾಸಕ ಹೆಚ್.ಡಿ.ತಮ್ಮಯ್ಯ ಹೇಳಿಕೆ

ಚಿಕ್ಕಮಗಳೂರು: ಸಿಎಂ ಸಿದ್ದರಾಮಯ್ಯ ನಂತರ ರಾಜ್ಯ ಕಾಂಗ್ರೆಸ್ ನಲ್ಲಿ ಅಂತಹ ಮತ್ತೊಬ್ಬ ನಾಯಕನಿದ್ದರೆ ಅದು ಸಚಿವ ಸತೀಶ್ ಜಾರಕಿಹೊಳಿ ಮಾತ್ರ ಎಂದು ಕಾಂಗ್ರೆಸ್ ಶಾಸಕ ಹೆಚ್.ಡಿ.ತಮ್ಮಯ್ಯ ತಿಳಿಸಿದ್ದಾರೆ. ಚಿಕ್ಕಮಗಳೂರಿನ ತರಿಕೆರೆ ತಾಲೂಕಿನಲ್ಲಿ ನಡೆದ ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ ವೇಳೆ ಮಾತನಾಡಿದ ಹೆಚ್.ಡಿ.ತಮ್ಮಯ್ಯ, ಸಚಿವ ಸತೀಶ್ ಜಾರಕಿಹೊಳಿ ಪರ ಬ್ಯಾಟಿಂಗ್ ಮಾಡಿದ್ದಾರೆ.   ರಾಜ್ಯದಲ್ಲಿ ಸಿದ್ದರಾಮಯ್ಯ ಹೊರತುಪಡಿಸಿದರೆ ಸತೀಶ್ ಜಾರಕಿಹೊಳಿಯವರೇ ಭವಿಷ್ಯದ ನಾಯಕರು. ಸತೀಶ್ ಜಾರಕಿಹೊಳಿಯವರ ರೀತಿ ಸರಳ-ಸಜ್ಜನ ಮನುಷ್ಯ ಮತ್ತೊಬ್ಬರಿಲ್ಲ. ಸಿದ್ದರಾಮಯ್ಯ …

Read More »

ಅತ್ಯಾಚಾರ ಆರೋಪ : ಶಾಸಕ ವಿನಯ್ ಕುಲಕರ್ಣಿ ವಿರುದ್ಧ ‘FIR’ ದಾಖಲು!

ಅತ್ಯಾಚಾರ ಆರೋಪ : ಶಾಸಕ ವಿನಯ್ ಕುಲಕರ್ಣಿ ವಿರುದ್ಧ ‘FIR’ ದಾಖಲು! ಬೆಂಗಳೂರು : ಕಾಂಗ್ರೆಸ್ ಶಾಸಕ ವಿನಯ ಕುಲಕರ್ಣಿ ರೈತ ಮುಖಂಡೆಯ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಈ ಹಿನ್ನೆಲೆಯಲ್ಲಿ ಸಂತ್ರಸ್ತೆ ಮಹಿಳೆ ಇಂದು ಬೆಂಗಳೂರಿನ ಸಂಜಯ್ ನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿರುವ ಹಿನ್ನೆಲೆಯಲ್ಲಿ ಎಫ್‌ಐಆರ್ ದಾಖಲಾಗಿದೆ.   ಹೌದು ರೈತ ಮುಖಂಡ ಮಹಿಳೆಯ ಮೇಲೆ ಅತ್ಯಾಚಾರ ಆರೋಪ ಹಿನ್ನೆಲೆಯಲ್ಲಿ ಕಾಂಗ್ರೆಸ್ ಶಾಸಕ …

Read More »

ಶಾಸಕ ಮುನಿರತ್ನ ಬಳಿ ನಾಲ್ವರು ಮಾಜಿ `CM’ ಗಳ ಖಾಸಗಿ ವಿಡಿಯೋಗಳಿವೆ : ಅತ್ಯಾಚಾರ ಸಂತ್ರಸ್ತೆ ಮಹಿಳೆಯಿಂದ ಗಂಭೀರ ಆರೋಪ!

ಬೆಂಗಳೂರು : ಬಿಜೆಪಿ ಶಾಸಕ ಮುನಿರತ್ನ ಅವರು ಹಲವು ಮಾಜಿ ಮುಖ್ಯಮಂತ್ರಿಗಳಿಗೆ ಹನಿಟ್ರಾಪ್ ಮಾಡಿಸಿದ್ದಾರೆ ಎಂದು ಅತ್ಯಾಚಾರ ಸಂತ್ರಸ್ತೆ ಸ್ಪೋಟಕ ಹೇಳಿಕೆ ನೀಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂತ್ರಸ್ತೆ ಮಹಿಳೆ, ಮುನಿರತ್ನ ಬಳಿ ನಾಲ್ವರ ಮಾಜಿ ಸಿಎಂಗಳ ವಿಡಿಯೋಗಳು ಇವೆ. ಇವುಗಳನ್ನು ಬಳಸಿಕೊಂಡು ಅವರು ಹನಿಟ್ರ್ಯಾಪ್ ಮಾಡಿಸಿದ್ದಾರೆ. ವಿಡಿಯೋ ತೋರಿಸಿವೇ ಅವರು ಮಂತ್ರಿ ಆಗಿದ್ದರು. ನಾಲ್ವರು ಮಾಜಿ ಸಿಎಂ ಖಾಸಗಿ ವಿಡಿಯೋ ಇದೆ; ಆ ವಿಡಿಯೋ ಬಳಸಿಕೊಂಡು ರಾಜಕೀಯ ಲಾಭ ಪಡೆದಿದ್ದಾರೆ …

Read More »

ಶಾಲಾ ಶಿಕ್ಷಕಿಯ ನಗ್ನ ವಿಡಿಯೋ ಮಾಡಿ `ಸೆಕ್ಸ್’ ಗೆ ಒತ್ತಾಯಿಸಿದ `SSLC’ ವಿದ್ಯಾರ್ಥಿಗಳು!

ಆಘಾತಕಾರಿ ಘಟನೆಯೊಂದರಲ್ಲಿ, 10 ನೇ ತರಗತಿಯ ವಿದ್ಯಾರ್ಥಿಗಳು ತಮ್ಮ ತರಗತಿಯ ಶಿಕ್ಷಕಿ ಸ್ನಾನಗೃಹದಲ್ಲಿ ಸ್ನಾನ ಮಾಡುತ್ತಿದ್ದಾಗ ರಹಸ್ಯವಾಗಿ ವಿಡಿಯೋ ಮಾಡಿ, ಲೈಂಗಿಕ ಕ್ರಿಯೆಗೆ ಸಹಕರಿಸುವಂತೆ ಬೆದರಿಕೆ ಹಾಕಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಉತ್ತರ ಪ್ರದೇಶದ ಮಥುರಾದ ಖಾಸಗಿ ಶಾಲೆಯೊಂದರಲ್ಲಿ ಶಿಕ್ಷಕಿಯಾಗಿ ಕೆಲಸ ಮಾಡುತ್ತಿರುವ ಮಹಿಳೆಯೊಬ್ಬರು ರಜೆಯ ಸಮಯದಲ್ಲಿ ಸರಿಯಾಗಿ ಓದದ ವಿದ್ಯಾರ್ಥಿಗಳನ್ನು ಕರೆಸಿ ಟ್ಯೂಷನ್ ಕೊಡಿಸಲು ಯತ್ನಿಸಿದ್ದಾರೆ. ಶಿಕ್ಷಕಿ ಸ್ನಾನ ಮಾಡುತ್ತಿದ್ದಾಗ ವಿದ್ಯಾರ್ಥಿಯೊಬ್ಬ ತನ್ನ ಮೊಬೈಲ್‌ನಲ್ಲಿ ವಿಡಿಯೋ ರೆಕಾರ್ಡ್ …

Read More »

KSRTC New Volvo 9600 Bus: ರಸ್ತೆಗಳಿಯಲಿವೇ ‘ಐರಾವತ ಕ್ಲಬ್ ಕ್ಲಾಸ್ 2.0’ ಬಸ್‌: ರಾಮಲಿಂಗಾ ರೆಡ್ಡಿ

ಬೆಂಗಳೂರು, ಅಕ್ಟೋಬರ್ 07: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC) ಹೊಸ ಬಸ್ ಖರೀದಿ ಪ್ರಕ್ರಿಯೆ ಮುಂದುವರೆಸಿದೆ. ಜನ ಸಾಮಾನ್ಯರಿಗೆ ಉತ್ತಮ ಅನುಭವ ನೀಡುವ ಉದ್ದೇಶದಿಂದ ಹೊಸ 9600 ವೋಲ್ವೊ ಮಲ್ಟಿಎಕ್ಸೆಲ್ ಮಾದರಿಯ ‘ಐರಾವತ ಕ್ಲಬ್ ಕ್ಲಾಸ್ 2.0’ ಬಸ್‌ಗಳನ್ನು ಖರೀದಿಸುತ್ತಿದೆ. ಈಗಾಗಲೇ ಒಂದನ್ನು ಪ್ರಾಯೋಗಿಕವಾಗಿ ಪರಿಶೀಲಿಸಿರುವ ಸಾರಿಗೆ ಸಚಿವರು ಇಂದು ಖುದ್ದು ತಯಾರಿಕಾ ಘಟಕ್ಕೆ ಭೇಟಿ ನೀಡಿ ವೀಕ್ಷಿಸಿದ್ದಾರೆ. ಹೌದು, ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿಯವರು ಸೋಮವಾರ …

Read More »

ರಾಜ್ಯದಲ್ಲಿ ಈಗ ಚುನಾವಣೆ ನಡೆದರೆ ಬಿಜೆಪಿ ಅನಾಯಾಸ ಗೆಲುವು ಸಾಧಿಸುತ್ತೆ : ಜಗದೀಶ್ ಶೆಟ್ಟರ್

ಬೆಳಗಾವಿ : ಅಕಸ್ಮಾತ್ ಈಗ ಏನಾದರೂ ಕರ್ನಾಟಕದಲ್ಲಿ ಅಸೆಂಬ್ಲಿ ಚುನಾವಣೆ ನಡೆದರೆ, ಬಿಜೆಪಿ ಅನಾಯಾಸವಾಗಿ ಗೆಲ್ಲುತ್ತದೆ ಎಂದು ಬೆಳಗಾವಿ ಬಿಜೆಪಿ ಸಂಸದ ಜಗದೀಶ್ ಶೆಟ್ಟರ್ ತಿಳಿಸಿದರು. ಇಂದು ಹರಿಯಾಣ ವಿಧಾನಸಭಾ ಚುನಾವಣೆ ಫಲಿತಾಂಶದ ಕುರಿತು ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಭ್ರಷ್ಟ ಆಡಳಿತದಿಂದ ಜನ ಬೇಸತ್ತು ಹೋಗಿದ್ದಾರೆ, ಈ ಸರ್ಕಾರದಲ್ಲಿ ನಡೆದಷ್ಟು ದೊಡ್ಟ ಹಗರಣಗಳು ಬೇರೆ ಯಾವುದೇ ಸರ್ಕಾರದಲ್ಲಿ ನಡೆದಿಲ್ಲ, ಒಂದು ವೇಳೆ ಈಗೇನಾದರೂ ಕರ್ನಾಟಕದಲ್ಲಿ ಅಸೆಂಬ್ಲಿ ಚುನಾವಣೆ …

Read More »

ಅಗತ್ಯ ದಾಖಲೆ ನೀಡುವಂತೆ ಮುಡಾಕ್ಕೆ ಜಾರಿ ನಿರ್ದೇಶನಾಲಯ ಸೂಚನೆ?

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ದೂರಿಗೆ ಸಂಬಂಧಿಸಿ ಅಗತ್ಯ ದಾಖಲೆಗಳನ್ನು ನೀಡುವಂತೆ ಜಾರಿ ನಿರ್ದೇಶನಾಲಯವು ಇಲ್ಲಿನ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ಸೂಚಿಸಿದೆ ಎನ್ನಲಾಗಿದೆ. ‘ಇ.ಡಿ. ಬೆಂಗಳೂರು ಕಚೇರಿಯಿಂದ ಮುಡಾ ಕಚೇರಿಗೆ ಪತ್ರ ರವಾನೆಯಾಗಿದ್ದು, ಲೋಕಾಯುಕ್ತದಲ್ಲಿ ಸಿದ್ದರಾಮಯ್ಯ ಸೇರಿದಂತೆ ನಾಲ್ವರು ಆರೋಪಿಗಳ ವಿರುದ್ಧ ದಾಖಲಾದ ಎಫ್‌ಐರ್‌ಗೆ ಸಂಬಂಧಿಸಿ ಎಲ್ಲ ದಾಖಲೆಗಳ ದೃಢೀಕೃತ ಪ್ರತಿಗಳನ್ನು ಒದಗಿಸುವಂತೆ ಕೇಳಿದೆ’ ಎಂದು ಮೂಲಗಳು ತಿಳಿಸಿವೆ. ಆದರೆ ಮುಡಾ ಅಧಿಕಾರಿಗಳು ಇದನ್ನು ಖಚಿತಪಡಿಸಿಲ್ಲ. ಮುಡಾ ವ್ಯಾಪ್ತಿಯಲ್ಲಿ ‘ಸೆಟ್ಲ್‌ಮೆಂಟ್ …

Read More »

ಮೈಸೂರು ದಸರಾ | ಜಂಬೂಸವಾರಿಗೆ 50 ಸ್ತಬ್ಧಚಿತ್ರ

ಮೈಸೂರು: ‘ದಸರಾ ಮಹೋತ್ಸವದ ಜಂಬೂಸವಾರಿಯಲ್ಲಿ 50 ಸ್ತಬ್ಧಚಿತ್ರಗಳು ಪ್ರದರ್ಶನಗೊಳ್ಳಲಿದ್ದು, ಕಲೆ, ವಾಸ್ತುಶಿಲ್ಪ, ಪ್ರವಾಸೋದ್ಯಮ, ಜಾನಪದ, ಸಮಾನತೆ, ಭ್ರಾತೃತ್ವ ಹಾಗೂ ಸಂವಿಧಾನದ ಮಹತ್ವ ಮೊದಲಾದ ವಿಷಯಗಳಿಗೆ ಆದ್ಯತೆ ನೀಡಲಾಗಿದೆ’ ಎಂದು ದಸರಾ ಸ್ತಬ್ಧಚಿತ್ರ ಉಪ ಸಮಿತಿ ಅಧ್ಯಕ್ಷ ಪ್ರಶಾಂತ್ ತಿಳಿಸಿದರು. ನಗರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ನಗರದ ಬಂಡೀಪಾಳ್ಯದ ಎಪಿಎಂಸಿ ಯಾರ್ಡ್‌ನಲ್ಲಿ ಸ್ತಬ್ಧಚಿತ್ರ ನಿರ್ಮಾಣ ಭರದಿಂದ ಸಾಗಿದ್ದು, ಶೇ 80ರಷ್ಟು ಮುಗಿದಿದೆ. ಅ.11ರ ರಾತ್ರಿ ಅರಮನೆ ಆವರಣ ಪ್ರವೇಶಿಸಲಿವೆ. ಪ್ರದರ್ಶನದಲ್ಲಿ …

Read More »

ಹೆಬ್ಬಾವಿನ ಮರಿ ರಕ್ಷಣೆ

ಬಿಡದಿ: ಶ್ಯಾನಮಂಗಲ ಗ್ರಾಮದ ವೆಂಕಟೇಶ್ ಎಂಬುವವರ ಜಮೀನಿನಲ್ಲಿ ಹೆಬ್ಬಾವಿನ ಮರಿಯನ್ನು ಸೋಮವಾರ ಹಿಡಿದು ರಕ್ಷಿಸಲಾಗಿದೆ. ಕೆಲಸದ ನಿಯಮಿತ ವೆಂಕಟೇಶ್ ಜಮೀನಿಗೆ ತೆರಳುತ್ತಿದ್ದಾಗ ದೈತ್ಯ ಗಾತ್ರದ ಹೆಬ್ಬಾವಿನ ಮರಿಯನ್ನು ಕಂಡು ಗಾಬರಿಯಾಗಿದ್ದಾರೆ. ನಂತರ ಅರಣ್ಯ ಇಲಾಖೆಗೆ ಕರೆ ಮಾಡಿ ತಿಳಿಸಿದ್ದಾರೆ. ಉರಗ ರಕ್ಷಕರಾದ ಶಶಿಕುಮಾರ್ ಸ್ಥಳಕ್ಕೆ ಬಂದು, ಸುಮಾರು 10 ಅಡಿ ಉದ್ದ 14 ಕೆಜಿ ತೂಕದ ಹೆಬ್ಬಾವಿನ ಮರಿಯನ್ನು ರಕ್ಷಿಸಿ, ಹಂದಿಗುಂದಿ ಅರಣ್ಯಕ್ಕೆ ಸುರಕ್ಷಿತವಾಗಿ ಬಿಡಲಾಗಿದೆ.

Read More »

HC ಮಹದೇವಪ್ಪ ಸೇರಿದಂತೆ ಕಾಂಗ್ರೆಸ್ ನಾಯಕರ ನಿವಾಸಗಳಿಗೆ ಭೇಟಿ ನೀಡಿದ ಜಾರಕಿಹೊಳಿ

ಮೈಸೂರು: ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಅವರು ನಗರದಲ್ಲಿ ಮಂಗಳವಾರ ಸಚಿವ ಎಚ್.ಸಿ. ಮಹದೇವಪ್ಪ ಸೇರಿದಂತೆ ಕಾಂಗ್ರೆಸ್ ನಾಯಕರ ನಿವಾಸಗಳಿಗೆ ಭೇಟಿ ಕೊಟ್ಟು ಪ್ರತ್ಯೇಕವಾಗಿ ಚರ್ಚಿಸಿದರು. ಮುಖ್ಯಮಂತ್ರಿ ಬದಲಾವಣೆಯ ಊಹಾಪೋಹಗಳು ಹಾಗೂ ದಲಿತ ಮುಖ್ಯಮಂತ್ರಿ ಕೂಗಿನ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ತವರು ಜಿಲ್ಲೆಯಲ್ಲಿ ಅವರ ಭೇಟಿ ಮಹತ್ವ ಪಡೆದುಕೊಂಡಿದೆ.   ಸೋಮವಾರ ಶ್ರೀರಂಗಪಟ್ಟಣ ದಸರಾದ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡಿದ್ದ ಅವರು, ಮಂಗಳವಾರ ಬೆಳಿಗ್ಗೆ ಮೈಸೂರಿನಲ್ಲಿರುವ ಸಮಾಜಕಲ್ಯಾಣ ಸಚಿವ ಮಹದೇವಪ್ಪ ನಿವಾಸಕ್ಕೆ …

Read More »