Breaking News

Laxminews 24x7

ಅಕ್ರಮ ಬಾಂಗ್ಲಾ ವಲಸಿಗರ ಪತ್ತೆಗೆ ಮುಂದಾದ ಪುನೀತ್​​​ ಕೆರೆಹಳ್ಳಿ ಮತ್ತೆ ಬಂಧನ

ನೆಲಮಂಗಲ: ಅಕ್ರಮ ಬಾಂಗ್ಲಾದೇಶ ವಲಸಿಗರ ಪತ್ತೆ ಕಾರ್ಯಾಚರಣೆಗೆ ಮುಂದಾದ ರಾಷ್ಟ್ರ ರಕ್ಷಣಾ ಪಡೆಯ ಮುಖಂಡ ಪುನೀತ್ ಕೆರೆಹಳ್ಳಿಯನ್ನು ಪೊಲೀಸರು ಬಂಧಿಸಿದ್ದಾರೆ. ಸೋಲದೇವನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಕೆಂಪಾಪುರದಲ್ಲಿ ಅಕ್ರಮ ಬಾಂಗ್ಲಾ ವಲಸಿಗರು ಇದ್ದಾರೆ ಎಂಬ ಆರೋಪದ ಹಿನ್ನೆಲೆ ಪುನೀತ್ ಕೆರೆಹಳ್ಳಿ ಅಲ್ಲಿಗೆ ತೆರಳಿದ್ದರು. ಹಸನ್ ಎಂಬಾತ ಅಕ್ರಮ ಬಾಂಗ್ಲಾ ವಲಸಿಗ ಎಂದು ಪುನೀತ್ ಕೆರೆಹಳ್ಳಿ ಆರೋಪಿಸಿದ್ದಲ್ಲದೆ, ಈ ಸಂಬಂಧ ಸೋಲದೇವನಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ದೂರು ನೀಡಿ ಠಾಣೆಯಿಂದ ಹೋಗುತ್ತಿದ್ದ …

Read More »

ದಾವಣಗೆರೆ | ಸ್ನೇಹಿತೆಯೊಂದಿಗಿದ್ದ ಯುವಕನ ವಿಡಿಯೋ ಮಾಡಿ ಸುಲಿಗೆ – ಇಬ್ಬರು ಅರೆಸ್ಟ್‌

ದಾವಣಗೆರೆ: ಸ್ನೇಹಿತೆಯೊಂದಿಗಿದ್ದ ಯುವಕನನ್ನು ಬೆದರಿಸಿ ಸುಲಿಗೆ ಮಾಡಿದ ಇಬ್ಬರು ಕಿರಾತಕರನ್ನು ನ್ಯಾಮತಿ  ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಶಿವಮೊಗ್ಗ  ತಾಲೂಕಿನ ಚಿಕೋನಹಳ್ಳಿಯ ಅಣ್ಣಪ್ಪನಾಯ್ಕ (27) ಹಾಗೂ ಚೇತನ್ (26) ಎಂದು ಗುರುತಿಸಲಾಗಿದೆ. ಇಬ್ಬರು ಸೇರಿ ಕಲ್ಪಗಿರಿ ರಂಗನಾಥ ಸ್ವಾಮಿ ದೇವಸ್ಥಾನದ ಬೆಟ್ಟದ ವಿಂಡ್‌ ಫ್ಯಾನ್‌ ಬಳಿ ಬಂದಿದ್ದ ಶಿವಮೊಗ್ಗ ಮೂಲದ ಯುವಕ – ಯುವತಿಯ ವಿಡಿಯೋ ಮಾಡಿದ್ದರು. ಬಳಿಕ ಬೆದರಿಸಿ ಹಣ ಸುಲಿಗೆ ಮಾಡಿದ್ದರು. ಹಣ ಕಳೆದುಕೊಂಡ ಯುವಕ …

Read More »

ರಬಕವಿಯಲ್ಲಿ ಮುಖಕ್ಕೆ ಮಾಸ್ಕ್, ಕೈಯಲ್ಲಿ ಕೋಲು ಹಿಡಿದು ಸಂಚರಿಸಿದ ಕಳ್ಳರು

ಬಾಗಲಕೋಟೆ: ರಬಕವಿಯಲ್ಲಿ  ಮುಖಕ್ಕೆ ಮಾಸ್ಕ್ ಕೈಯಲ್ಲಿ ಕೋಲು ಹಿಡಿದು 6 ಜನ ಕಳ್ಳರು ಸಂಚರಿಸಿದ್ದಾರೆ. ಜ.19ರ ಮಧ್ಯರಾತ್ರಿ 2 ಗಂಟೆಯ ವೇಳೆಗೆ ವಿದ್ಯಾನಗರ, ಬಸವನಗರದಲ್ಲಿ ಕಳ್ಳತನಕ್ಕೆ ಹೊಂಚು ಹಾಕಿ ಓಡಾಡಿದ್ದಾರೆ. 6 ಜನ ಕಳ್ಳರು ಓಡಾಡುತ್ತಿರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಸಿಸಿ ಕ್ಯಾಮೆರಾದ ದೃಶ್ಯ ನೋಡಿ ಸಾರ್ವಜನಿಕರಲ್ಲಿ ಭಯ ಆವರಿಸಿದೆ. ಕೂಡಲೇ ಪೊಲೀಸರು ಕಳ್ಳರನ್ನು ಪತ್ತೆ ಹಚ್ಚಿ ಬಂಧಿಸಬೇಕೆಂದು ಜನರು ಆಗ್ರಹಿಸಿದ್ದಾರೆ.  

Read More »

ಮುಡಾ ಹಗರಣದಲ್ಲಿ ಸಿಎಂಗೆ ಕ್ಲೀನ್‌ಚಿಟ್‌ – ಜ.28ಕ್ಕೆ ಆದೇಶ ಮುಂದೂಡಿಕೆ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧದ ಮುಡಾ ಹಗರಣದಲ್ಲಿ  ಲೋಕಾಯುಕ್ತ ನೀಡಿರುವ ಕ್ಲೀನ್‌ಚಿಟ್ ಕುರಿತು ಇಂದು ಪ್ರಕಟವಾಗಬೇಕಿದ್ದ ಆದೇಶ ಜ.28ಕ್ಕೆ ಮುಂದೂಡಿಕೆಯಾಗಿದೆ. ಲೋಕಾಯುಕ್ತ ಪೊಲೀಸರು ಸಿಎಂ ಸಿದ್ದರಾಮಯ್ಯ, ಪತ್ನಿ ಪಾರ್ವತಿ ಸೇರಿ ನಾಲ್ವರ ವಿರುದ್ಧ ಬಿ ರಿಪೋರ್ಟ್ ಸಲ್ಲಿಸಿದ್ದರು. ಈ ಬಿ-ರಿಪೋರ್ಟ್ ಪ್ರಶ್ನಿಸಿ ದೂರುದಾರ ಸ್ನೇಹಮಯಿ ಕೃಷ್ಣ  ಕೋರ್ಟ್ ಮೆಟ್ಟಿಲೇರಿದ್ದರು. ವಾದ ಆಲಿಸಿದ್ದ ಜನಪ್ರತಿನಿಧಿಗಳ ನ್ಯಾಯಾಲಯ ಇಂದಿಗೆ ಆದೇಶ ಕಾಯ್ದಿರಿಸಿತ್ತು. ಜ.28ರ ಆದೇಶದಲ್ಲಿ ನ್ಯಾಯಾಲಯ ಬಿ-ರಿಪೋರ್ಟ್ ಒಪ್ಪಿದರೆ ಸಿಎಂ ಕುಟುಂಬಕ್ಕೆ ಬಿಗ್ …

Read More »

ಸಿವಿಲ್ ಸೇವಾ ಹುದ್ದೆಗಳ ನೇಮಕಾತಿಗೆ 5 ವರ್ಷ ವಯೋಮಿತಿ ಸಡಿಲಿಕೆ; ಸಂಪುಟ ಒಪ್ಪಿಗೆ

ಬೆಂಗಳೂರು: ಕರ್ನಾಟಕ ಸಿವಿಲ್ ಸೇವಾ ಹುದ್ದೆಗಳ ನೇಮಕಾತಿಗೆ ಎಲ್ಲಾ ವರ್ಗದ ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆಗೆ ಸಚಿವ ಸಂಪುಟ ಒಪ್ಪಿಗೆ ನೀಡಿದೆ. 2027ರ ಡಿಸೆಂಬರ್ 31 ರವರೆಗೆ ಹೊರಡಿಸಲಾಗಿರುವ ಎಲ್ಲಾ ಅಧಿಸೂಚನೆಗಳಿಗೆ ಅನ್ವಯ ಆಗುವಂತೆ ತೀರ್ಮಾನ ಕೈಗೊಳ್ಳಲಾಗಿದೆ. ಸಾಮಾನ್ಯ ವರ್ಗಕ್ಕೆ ಈಗ ಇರುವ 35 ವರ್ಷದ ವಯೋಮಿತಿ ಇದ 40 ವರ್ಷಕ್ಕೆ ಅನ್ವಯ ಆಗುವಂತೆ ವಿಸ್ತರಣೆಯಾಗಿದೆ. ಎಸ್‌ಸಿ, ಎಸ್‌ಟಿ ಅಭ್ಯರ್ಥಿಗಳಿಗೆ ಈಗ ಇರುವ 38 ವರ್ಷ ವಯೋಮಿತಿ 43 …

Read More »

ರಾಜ್ಯಪಾಲರ ಭಾಷಣದ ಮೊದಲ 11 ಪ್ಯಾರಾಗಳಲ್ಲಿ ವಿಬಿ ಜಿ ರಾಮ್​ ಜಿ ಕಾಯ್ದೆ ಟೀಕಿಸಿ ಕೇಂದ್ರ ಸರ್ಕಾರದ ವಿರುದ್ಧ ಕಟು ಟೀಕೆ

ಬೆಂಗಳೂರು : ರಾಜ್ಯಪಾಲರು ಹಾಗೂ ಸರ್ಕಾರದ ಸಂಘರ್ಷದ ಮಧ್ಯೆ ರಾಜ್ಯಪಾಲರ ಭಾಷಣವನ್ನು ಸದನದಲ್ಲಿ ಮಂಡಿಸಲಾಯಿತು. ಜಂಟಿ ಅಧಿವೇಶನದಲ್ಲಿ ರಾಜ್ಯಪಾಲರು ಸರ್ಕಾರ ಸಿದ್ಧಪಡಿಸಿದ ಭಾಷಣದ ಪ್ರತಿಯನ್ನು‌ ಮಂಡಿಸಿ, ಅದರಲ್ಲಿನ ಅಂಶವನ್ನು ಓದದೇ ತಾವೇ ಬರೆದು ತಂದ ಪ್ಯಾರಾವನ್ನು ಓದಿ ಸದನದಿಂದ ತೆರಳಿದರು. ಬಳಿಕ ಪುನಾರಂಭಗೊಂಡ ಕಲಾಪದಲ್ಲಿ ಸರ್ಕಾರ ಸಿದ್ಧಪಡಿಸಿದ ರಾಜ್ಯಪಾಲರ ಭಾಷಣವನ್ನು ವಿಧಾನಸಭೆ ಕಾರ್ಯದರ್ಶಿ ಎಂ. ಕೆ. ವಿಶಾಲಾಕ್ಷಿ ಮಂಡನೆ ಮಾಡಿದರು. ಭಾಷಣದ 11 ಪ್ಯಾರಾ ವಿಬಿ ಜಿ ರಾಮ್ ಜಿ ವಿರುದ್ಧ …

Read More »

ಗ್ಯಾರಂಟಿ ಯೋಜನೆಗಳಿಂದ ಶೇ.89 ರಷ್ಟು ಫಲಾನುಭವಿಗಳ ಕೌಟುಂಬಿಕ ಸಂಬಂಧಗಳಲ್ಲಿ ಸುಧಾರಣೆ: ರಾಜ್ಯಪಾಲರ ಭಾಷಣದಲ್ಲಿ ಉಲ್ಲೇಖ

ಬೆಂಗಳೂರು: ಗ್ಯಾರಂಟಿ ಯೋಜನೆಗಳಿಂದ ಶೇ.89 ರಷ್ಟು ಫಲಾನುಭವಿಗಳು ಕೌಟುಂಬಿಕ ಸಂಬಂಧಗಳಲ್ಲಿ ಸುಧಾರಣೆ ಕಂಡಿದ್ದೇವೆ ಎಂದಿದ್ದಾರೆ ಎಂದು ರಾಜ್ಯ ಸರ್ಕಾರ ರಾಜ್ಯಪಾಲರ ಭಾಷಣದಲ್ಲಿ ಪ್ರಸ್ತಾಪಿಸಿದೆ‌. ರಾಜ್ಯಪಾಲರ ಭಾಷಣದಲ್ಲಿ ರಾಜ್ಯ ಸರ್ಕಾರ ಪಂಚ ಗ್ಯಾರಂಟಿ‌ ಸೇರಿದಂತೆ ಸರ್ಕಾರದ ಪ್ರಮುಖ ಸಾಧನೆಗಳ ಬಗ್ಗೆ ಪ್ರಸ್ತಾಪಿಸಲಾಗಿದೆ. ಒಟ್ಟು 46 ಪುಟಗಳ 122 ಪ್ಯಾರಾಗಳ ಭಾಷಣದಲ್ಲಿ ಕೆಂದ್ರ ಸರ್ಕಾರದ ವಿರುದ್ಧ ಕಟು ಟೀಕೆಯ ಜೊತೆಗೆ ರಾಜ್ಯ ಸರ್ಕಾರಗಳ ಯೋಜನೆ, ಸಾಧನೆಗಳ ಬಗ್ಗೆ ಪ್ರಸ್ತಾಪ ಮಾಡಲಾಗಿದೆ. ಗೃಹ ಜ್ಯೋತಿ, ಗೃಹಲಕ್ಷ್ಮಿ, …

Read More »

ತವರು ಮನೆಯಲ್ಲಿದ್ದ ಪತ್ನಿ ಕರೆಯಲು ಬಂದು ಮಾವನ ಕೊಂದ ಅಳಿಯ

ಹುಬ್ಬಳ್ಳಿ/ಚಿಕ್ಕಮಗಳೂರು: ತವರು ಮನೆಯಿಂದ ಹೆಂಡತಿಯನ್ನು ಕರೆದುಕೊಂಡು ಹೋಗಲು ಬಂದ ವ್ಯಕ್ತಿ ಕ್ಷುಲ್ಲಕ ಕಾರಣಕ್ಕೆ ಮಾವನನ್ನು ಕಲ್ಲಿನಿಂದ ಹೊಡೆದು ಕೊಲೆ ಮಾಡಿರುವ ಘಟನೆ ನಗರದ ಗೌಶಿಯಾ ಟೌನ್‌ ಪ್ರದೇಶದಲ್ಲಿ ತಡರಾತ್ರಿ ನಡೆದಿದೆ. ಅಹ್ಮದ್ ರಜಾಕ್ ಶಹಪೂರ್ (48) ಮೃತ ದುರ್ದೈವಿ. ಇವರು ಹಳೆ ಹುಬ್ಬಳ್ಳಿ ನಿವಾಸಿಯಾಗಿದ್ದು, ಖಾಸಗಿ ಹೋಟೆಲ್ ಒಂದರಲ್ಲಿ ಅಡುಗೆ ಕೆಲಸ ಮಾಡಿಕೊಂಡು ಜೀವನ ನಡೆಸುತ್ತಿದ್ದರು. ಆರೋಪಿಯನ್ನು ಸದ್ದಾಂ ಎಂದು ಗುರುತಿಸಲಾಗಿದೆ. ಈತ ಮೃತ ಅಹ್ಮದ್ ರಜಾಕ್ ಅವರ ಸಹೋದರನ ಮಗಳ …

Read More »

ಗವರ್ನರ್ V/S ಗವರ್ನಮೆಂಟ್‌: ಭಾಷಣದ ಕೆಲ ಸಾಲು ಬದಲಾವಣೆಗೆ ನಿರ್ಧಾರ; ಒಪ್ಪದಿದ್ದರೆ ಕಾನೂನು ಹೋರಾಟವೆಂದ ಸರ್ಕಾರ

ಬೆಂಗಳೂರು: ರಾಜ್ಯ ಸರ್ಕಾರ ಹಾಗೂ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್​ ನಡುವೆ ಸಂಘರ್ಷ ಶುರುವಾದಂತಿದೆ‌. ಇಂದು ವಿಶೇಷ ಅಧಿವೇಶನಕ್ಕಾಗಿ ಮಂಡಿಸಬೇಕಾದ ಭಾಷಣದಲ್ಲಿ ಕೆಲ ಆಕ್ಷೇಪಾರ್ಹ ಅಂಶಗಳ ಕೈಬಿಡಬೇಕೆಂಬ ರಾಜ್ಯಪಾಲರ ಸೂಚನೆಯನ್ನು ಸರ್ಕಾರ ತಿರಸ್ಕರಿಸಿದೆ‌. ಈ ಮಧ್ಯೆ ಅಧಿವೇಶನಕ್ಕೆ ರಾಜ್ಯಪಾಲರು ಬಾರದಿದ್ದರೆ ಕಾನೂನು ಹೋರಾಟಕ್ಕೆ ಸರ್ಕಾರ ಸಜ್ಜುಗೊಂಡಿದೆ. ರಾಜ್ಯ ಸರ್ಕಾರ ಸಿದ್ದಪಡಿಸಿದ ಭಾಷಣದಲ್ಲಿ ಕೇಂದ್ರದ ವಿರುದ್ಧ ಧೋರಣೆಗಳಿರುವ 11 ಪ್ಯಾರಾಗಳನ್ನು ಕೈ ಬಿಡಬೇಕೆಂದು ಸರ್ಕಾರಕ್ಕೆ ಸೂಚಿಸಿದ್ದರು. ಈ ಸಂಬಂಧ ಕಾನೂನು ಸಚಿವ ಹೆಚ್.ಕೆ‌.ಪಾಟೀಲ್ …

Read More »

ಈ ಬಾರಿ ದೆಹಲಿಯಲ್ಲಿ ನಡೆಯಲಿರುವ ಗಣರಾಜ್ಯೋತ್ಸವ ಪರೆಡ್​​​ನಲ್ಲಿ ಕರ್ನಾಟಕದ ಸ್ತಬ್ಧಚಿತ್ರ

ದೆಹಲಿ: ಜನವರಿ 26ರಂದು ದೆಹಲಿಯಲ್ಲಿ ನಡೆಯಲಿರುವ ಗಣರಾಜ್ಯೋತ್ಸವ ಪರೇಡ್​​​ನಲ್ಲಿ ಈ ಬಾರಿ ಕರ್ನಾಟಕದ ಸ್ತಬ್ಧಚಿತ್ರಗಳ ಪ್ರದರ್ಶನಕ್ಕೆ ಅವಕಾಶ ಸಿಕ್ಕಿದೆ. ಈ ಹಿಂದೆಯೂ ಗಣರಾಜ್ಯೋತ್ಸವ ಪರೇಡ್​​​ನಲ್ಲಿ ಹಲವಾರು ಬಾರಿ ಅವಕಾಶಗಳು ಸಿಕ್ಕಿತು. ಇದೀಗ ಮತ್ತೊಮ್ಮೆ ಕರ್ನಾಟಕಕ್ಕೆ ಅವಕಾಶ ಸಿಕ್ಕಿದೆ. ಈ ಬಾರಿ ವಿಶೇಷ ಸ್ತಬ್ಧಚಿತ್ರಗಳನ್ನು ಕರ್ನಾಟಕ ನೀಡಿಲಿದೆ. ಇದಕ್ಕೂ ಮುನ್ನ ಇದರ ಪರೇಡ್​​​ ಅಭ್ಯಾಸಗಳು ನಡೆಯಲಿದೆ ಎಂದು ಹೇಳಲಾಗಿದೆ. ದೆಹಲಿಯ ಕರ್ತವ್ಯ ಪಥದಲ್ಲಿ ಈ ಪರೇಡ್​​​ ನಡೆಯಲಿದೆ. ಈ ಬಾರಿ ಟ್ಯಾಬ್ಲೋ …

Read More »