ಬೆಂಗಳೂರು: ಕರ್ನಾಟಕ ಮಾದರ ಮಹಾಸಭಾದ ರಾಜ್ಯ ಕಾರ್ಯಕಾರಣಿ ಹಾಗೂ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಪಧಾದಿಕಾರಿಗಳ ಸಭೆಯನ್ನು ನಗರದ ಅರಮನೆ ಮೈದಾನದ ಗಾಯತ್ರಿ ವಿಹಾದಲ್ಲಿ ಆಯೋಜಿಸಿದ್ದು ಕಾರ್ಯಕ್ರಮ ವನ್ನು ಮಾನ್ಯ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಹಾಗೂ ಮಾದರ ಮಹಾಸಭಾದ ಅಧ್ಯಕ್ಷರಾದ ಕೆಹೆಚ್. ಮುನಿಯಪ್ಪ ರವರು ಕಾರ್ಯಕ್ರಮವನ್ನು ಉದ್ಘಾಟಿಸಿದರು ನಂತರ ಸರ್ಕಾರದ ಸಚಿವರಾದ ಯೋಜನಾ ಸಚಿವ ಡಿ.ಸುಧಾಕರ್ ರವರ ನಿಧನದ ಹಿನ್ನಲೆಯಲ್ಲಿ ಅವರ ಆತ್ಮಕ್ಕೆ ಶಾಂತಿಯನ್ನು ಕೊರಲು …
Read More »ಬಡವರ ಪರ ನಿರಂತರವಾಗಿ ಸೇವೆ ಸಲ್ಲಿಸುತ್ತಿದ್ದ ಉತ್ತಮ ಆಡಳಿತಗಾರ ಡಿ.ಸುಧಾಕರ್ ಅವರ ಅಗಲಿಕೆ ನೋವುಂಟು ಮಾಡಿದೆ ಆಹಾರ ಸಚಿವ ಕೆಹೆಚ್. ಮುನಿಯಪ್ಪ
ಬೆಂಗಳೂರು:ಯೋಜನಾ ಸಚಿವ ಡಿ.ಸುಧಾಕರ್ ರವರು ನಮ್ಮನ್ನು ಹಗಲಿರುವುದು ನನಗೆ ನೋವುಂಟು ಮಾಡಿದೆ ಸರಳ ಸಜ್ಜನಿಕೆ ರಾಜಕಾರಣಿ ಅತ್ಯುತ್ತಮ ಆಡಳಿತಗಾರ ನಾನು ಸಂಸತ್ತಿನಲ್ಲಿದ್ದಾಗ ಅವರು ನನ್ನ ಮಾತನಾಡದೆ ಬರುತ್ತಿರಲಿಲ್ಲಾ ಅವರಿಗೂ ನನಗೂ ಅವಿನಾಭಾವ ಸಂಭಂದವಿತ್ತು ಅವರು ಅನಾರೊಗ್ಯ ಹಿನ್ನಲೆಯಲ್ಲಿ ಆಸ್ಪತ್ರೆಗೆ ಬೇಟಿ ನೀಡಿ ಅವರ ಯೋಗಕ್ಷೇಮ ವಿಚಾರಿಸಿದ್ದೆ ಅವರು ಸದಾ ಬಡವರ ಪರವಾಗಿ ಕೆಲಸಮಾಡುತ್ತಿದ್ದರು ಹಲವಾರು ಜನರಿಗೆ ಸಹಾಕರಿ ಸಹಾಯಸ್ತರಾಗಿದ್ದವರು ಇಂದು ಅವರ ನಿಧನದ ಸುದ್ದಿ ತಿಳಿದು ನನಗೆ ನೊವುಂಟು ಮಾಡಿದೆ …
Read More »ನೀರು ಕುಡಿಯಲು ಬಂದು ಗಾಯಗೊಂಡಿದ್ದ ಕಾಡಾನೆ ಸಾವು
ಚಾಮರಾಜನಗರ: ಕೆಲ ದಿನಗಳ ಹಿಂದಷ್ಟೇ ನೀರು ಕುಡಿಯಲು ಬಂದು ಗಾಯಗೊಂಡಿದ್ದ ಕಾಡಾನೆ (ಗಂಡಾನೆ) ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಗೋಪಿನಾಥಂನ ಕಾವೇರಿ ವನ್ಯಧಾಮದಲ್ಲಿ ನಡೆದಿದೆ. ಗೋಪಿನಾಥಂ ಜಲಾಶಯದಲ್ಲಿ ನೀರು ಕುಡಿಯಲು ಬಂದಿದ್ದ ವೇಳೆ ಗಂಡಾನೆ ಗಾಯಗೊಂಡಿತ್ತು. ಈ ವಿಷಯವನ್ನು ಸ್ಥಳೀಯರು ಅರಣ್ಯ ಸಿಬ್ಬಂದಿ ಗಮನಕ್ಕೆ ತಂದಿದ್ದರು. ಅರಣ್ಯ ಇಲಾಖೆ ಕೂಡ ಕಾಳಜಿ ವಹಿಸಿ ಚಿಕಿತ್ಸೆ ಕೊಡಿಸುತ್ತಿತ್ತು. ಆದ್ರೆ ಚಿಕಿತ್ಸೆ ಫಲಕಾರಿಯಾಗದೇ ಕಾಡಾನೆ ಸಾವನ್ನಪ್ಪಿದೆ. ಘಟನೆಯಿಂದ ಸ್ಥಳೀಯರು, …
Read More »ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನ – 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ!
ಬೆಳಗಾವಿ: ಪ್ರಿಯಕರನ ಜೊತೆ ಓಡಿಹೋಗಲು ಪತಿ ಮನೆಗೆ ಕನ್ನ ಹಾಕಿದ್ದ ಪತ್ನಿಯನ್ನ ಪೊಲೀಸರು ಬಂಧಿಸಿರುವ ಘಟನೆ ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಹೊಸಕೋಟಿ ಗ್ರಾಮದಲ್ಲಿ ನಡೆದಿದೆ. ಪ್ರಿಯಕರನ ಜೊತೆ ಸೇರಿದ ಹೈನಾತಿ ಹೆಂಡ್ತಿ ಗಂಡನ ಮನೆಯಲ್ಲಿಯೇ 21 ಲಕ್ಷ ಮೌಲ್ಯದ 154.6 ಗ್ರಾಂ ಚಿನ್ನಾಭರಣ ಕಳ್ಳತನ ಮಾಡಿದ್ದಾಳೆ. ಸದ್ಯ ಪೊಲೀಸರ ಅತಿಥಿಯಾಗಿದ್ದಾಳೆ. ಹಣಮಂತ ಮಾರಾಪೂರ, ಹಸೀನಾ ನದಾಫ್ ಬಂಧಿತರು. ಬಂಧಿತರಿಂದ 11 ಸಾವಿರ ಮೌಲ್ಯದ 45 ಗ್ರಾಂ ಬೆಳ್ಳಿಯ ಆಭರಣ …
Read More »ತಾಯಿಯ ಚಿಕಿತ್ಸೆಗಾಗಿ ಆಸ್ಪತ್ರೆಗೆ ಬಂದಿದ್ದ ಅಪ್ರಾಪ್ತೆಯ ಮೇಲೆ ರೇಪ್ – ಮತ್ತು ಬರುವ ಔಷಧಿ ನೀಡಿ ಸರ್ಕಾರಿ ನೌಕರನಿಂದ ದುಷ್ಕೃತ್ಯ
ಬಳ್ಳಾರಿ: ತಾಯಿಯ ಚಿಕಿತ್ಸೆಗಾಗಿ ಆಸ್ಪತ್ರೆಗೆ ಬಂದಿದ್ದ ಅಪ್ರಾಪ್ತ ಬಾಲಕಿಗೆ ಮತ್ತು ಬರುವ ಔಷಧಿ ನೀಡಿ ಡಿ-ಗ್ರೂಪ್ ನೌಕರ ಅತ್ಯಾಚಾರ ಎಸಗಿರುವ ಘಟನೆ ವಿಜಯನಗರ ಜಿಲ್ಲೆಯ ಹೊಸಪೇಟೆಯ ಸರ್ಕಾರಿ ಆಸ್ಪತ್ರೆಯೊಂದರಲ್ಲಿ ನಡೆದಿದೆ. ಆಸ್ಪತ್ರೆಯ ಡಿ-ಗ್ರೂಪ್ ನೌಕರ ಅಜಯ್ ಮದಕರಿ (37) ದುಷ್ಕೃತ್ಯ ಎಸಗಿದ್ದಾನೆ. ಈ ಸಂಬಂಧ ಹೊಸಪೇಟೆ ಬಡಾವಣೆ ಠಾಣೆಯಲ್ಲಿ ತಾಯಿ ದೂರು ದಾಖಲಿಸಿದ್ದು, ದೂರಿನ ಆಧಾರದ ಮೇಲೆ ಆರೋಪಿಯನ್ನು ಬಂಧಿಸಿದ್ದಾರೆ. ಚಿಕಿತ್ಸೆಗೆಂದು ಅಪ್ರಾಪ್ತ ಬಾಲಕಿ ತಾಯಿಯನ್ನು ಸರ್ಕಾರಿ ಆಸ್ಪತ್ರೆಗೆ ಕರೆತಂದಿದ್ದಳು. ಈ …
Read More »ಬಿಟ್ ಕಾಯಿನ್ ಬಹುಕೋಟಿ ಹಗರಣ ಕೇಸ್ – ಇಡಿಯಿಂದ ಮೂವರು ಅರೆಸ್ಟ್
ಬೆಂಗಳೂರು: ಬಿಟ್ ಕಾಯಿನ್ ಬಹುಕೋಟಿ ಹಗರಣ ಪ್ರಕರಣ ಸಂಬಂಧ ಇಡಿ ಇದೀಗ ಮೂವರು ಆರೋಪಿಗಳನ್ನು ಬಂಧಿಸಿದೆ. ಶ್ರೀಕಿ @ ಶ್ರೀಕೃಷ್ಣ, ರಾಬಿನ್ ಖಂಡೇವಾಲ ಮತ್ತು ಸುನೀಶ್ ಹೆಗ್ಡೆ ಬಂಧಿತ ಆರೋಪಿಗಳು. ಶುಕ್ರವಾರ (ಮೇ 8) ರಾತ್ರಿ ಇಡಿ ಅಧಿಕಾರಿಗಳು ಮೂವರು ಆರೋಪಿಗಳನ್ನು ಬಂಧಿಸಿದ್ದು, ಇಂದು (ಮೇ 9) ಬೆಳಿಗ್ಗೆ ನ್ಯಾಯಾಧೀಶರ ಮನೆಗೆ ಹಾಜರುಪಡಿಸಿದ್ದಾರೆ. ಸದ್ಯ ಆರೋಪಿಗಳನ್ನು ಇಡಿ ಅಧಿಕಾರಿಗಳು 10 ದಿನ ಕಸ್ಟಡಿಗೆ ಪಡೆದುಕೊಂಡಿದ್ದಾರೆ.
Read More »ಬೀದರ್‌ನಲ್ಲಿ ಬೀದಿ ನಾಯಿ ದಾಳಿಗೆ 5 ತಿಂಗಳ ಕಂದಮ್ಮ ದುರ್ಮರಣ
ಬೀದರ್: ಬೀದಿ ನಾಯಿ ದಾಳಿಗೆ 5 ತಿಂಗಳ ಹಸೂಗೂಸು ದುರಂತ ಅಂತ್ಯ ಕಂಡ ಘಟನೆ ಬೀದರ್ ಜಿಲ್ಲೆಯ ಹುಮ್ನಾಬಾದ್ ತಾಲೂಕಿನ ದುಬಲಗುಂಡಿ ಗ್ರಾಮದಲ್ಲಿ ನಡೆದಿದೆ. 5 ತಿಂಗಳ ಶಿವಾನಿ ಮೃತ ಕಂದಮ್ಮ. ಸುಧಾ ಹಾಗೂ ಸಿದ್ದಪ್ಪ ದಂಪತಿಗೆ ಸೇರಿದ ಹಸೂಗೂಸು ಸಾವನ್ನಪ್ಪಿದೆ. ಮನೆಯ ಪಡಸಾಲೆಯಲ್ಲಿ ಮಗುವನ್ನ ಮಲಗಿಸಿ ತಾಯಿ ಕೆಲಸ ಮಾಡುತ್ತಿದ್ದಾಗ ಏಕಾಏಕಿ ಮನೆಗೆ ನುಗ್ಗಿ ಹಸುಗೂಸನ್ನ ನಾಯಿ ಮನಬಂದಂತೆ ಕಚ್ಚಿ ಬಿಸಾಕಿದೆ. ಅರಜೀವಾವಸ್ಥೆಯಲ್ಲಿದ್ದ ಮಗು ಚಿಕಿತ್ಸೆ ಫಲಕಾರಿಯಾಗದೆ ಬೀದರ್‌ನ …
Read More »ಲಿವ್ ಇನ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ – ಇತ್ತ ಪತಿ, ಎರಡು ಮಕ್ಕಳ ಬಿಟ್ಟು ಜೊತೆಗಿದ್ದವ್ಳು ಎಸ್ಕೇಪ್
ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಬೆಂಗಳೂರಿನ ಶ್ರೀಗಂಧ ನಗರದಲ್ಲಿ ನಡೆದಿದೆ. ಚಿತ್ರದುರ್ಗ ಮೂಲದ ತಿಪ್ಪೇಸ್ವಾಮಿ (28) ಮೃತ ಯುವಕ. ದಾವಣಗೆರೆ ಮೂಲದ ಮಹಿಳೆ ಹಾಗೂ ಮೃತ ಯುವಕ ಒಂದೇ ಗಾರ್ಮೆಂಟ್ಸ್‌ನಲ್ಲಿ ಕೆಲಸ ಮಾಡುತ್ತಿದ್ದಾಗ ಇನ್‌ಸ್ಟಾಗ್ರಾಮ್ ಮುಖಾಂತರ ಪರಿಚಯವಾಗಿ ಪ್ರೀತಿಯಲ್ಲಿ ಬಿದ್ದಿದ್ದರು. ಮಹಿಳೆಗೆ ಮದುವೆಯಾಗಿದ್ದು, ಎರಡು ಮಕ್ಕಳಿದ್ದಾರೆ. ಸದ್ಯ ಪತಿ ಹಾಗೂ ಮಕ್ಕಳನ್ನು ಬಿಟ್ಟು ಬಂದಿದ್ದಳು. ಕಳೆದ ಎರಡು ತಿಂಗಳ ಹಿಂದೆ ಬೆಂಗಳೂರಿನ ಶ್ರೀಗಂಧ …
Read More »ಪುದುಚೇರಿಯ ಶನೇಶ್ವರ ದೇವಸ್ಥಾನಕ್ಕೆ ಡಿಸಿಎಂ ಭೇಟಿ
ಬೆಂಗಳೂರು: ತಮಿಳುನಾಡು ಕಾಂಗ್ರೆಸ್ಶಾಸಕರು ಬೆಂಗಳೂರಿಗೆ ಬಂದ ಬಗ್ಗೆ ಹರಡಿರುವ ವದಂತಿಗಳೆಲ್ಲಾ ಸುಳ್ಳು, ಯಾವ ರೆಸಾರ್ಟ್‌ಗೂ ಬಂದಿಲ್ಲ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಸ್ಪಷ್ಟನೆ ನೀಡಿದರು. ನೆರೆರಾಜ್ಯ ತಮಿಳುನಾಡಿನ ಕಾಂಗ್ರೆಸ್ ಶಾಸಕರು ಹೈಜಾಕ್ ಭೀತಿಯಿಂದ ಬೆಂಗಳೂರಿನ ರೆಸಾರ್ಟ್‌ಗೆ ಶಿಫ್ಟ್ ಆಗುತ್ತಿದ್ದಾರೆ ಎಂಬ ವದಂತಿಗಳ ಕುರಿತು ಅವರು ಪ್ರತಿಕ್ರಿಯಿಸಿದರು. ಪುದುಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಬಗ್ಗೆ ಹರಿದಾಡುತ್ತಿರುವ ಸುದ್ದಿಗಳೆಲ್ಲವೂ ಸುಳ್ಳು ಎಂದು ಸ್ಪಷ್ಟಪಡಿಸಿದರು. ಈಗಲ್ಟನ್ ರೆಸಾರ್ಟ್ ರಿಪೇರಿಗಾಗಿ ಮುಚ್ಚಿದೆ ಎಂದು ಕೇಳಿಬರುತ್ತಿರುವ …
Read More »ಕೆರೆಯಲ್ಲಿ ಈಜಲು ಹೋದ ಅಣ್ಣ-ತಮ್ಮ ನೀರುಪಾಲು
ಕೋಲಾರ: ಕೆರೆಯಲ್ಲಿಈಜಲು ಹೋದ ಅಣ್ಣ-ತಮ್ಮ ಇಬ್ಬರೂ ನೀರುಪಾಲಾಗಿರುವ ಘಟನೆ ಕೋಲಾರದಲ್ಲಿ ನಡೆದಿದೆ. ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಲಕ್ಷ್ಮಿಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪಚ್ಚರಮಾಕಲಹಳ್ಳಿ ಬಳಿ ಈ ದುರ್ಘಟನೆ ಸಂಭವಿಸಿದೆ. ಮಾಹಿತಿಯ ಪ್ರಕಾರ, ಗಾರೆ ಕೆಲಸಕ್ಕೆಂದು ಪಚ್ಚರಮಾಕಲಹಳ್ಳಿಗೆ ತೆರಳಿದ್ದ ಯುವಕರು ಮಧ್ಯಾಹ್ನದ ತೀವ್ರ ಬಿಸಿಲಿನ ತಾಪಮಾನದಿಂದಾಗಿ ಸಮೀಪದ ಕೆರೆಯಲ್ಲಿ ಈಜಲು ಇಳಿದಿದ್ದಾರೆ. ಈ ವೇಳೆ ನೀರಿನ ಆಳ ಅಂದಾಜಿಸಲು ಸಾಧ್ಯವಾಗದೆ ಇಬ್ಬರೂ ಮುಳುಗಿ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಇನ್ನೂ ಮೃತಪಟ್ಟ ಯುವಕರನ್ನು …
Read More »
Laxmi News 24×7