Breaking News

Laxminews 24x7

D.K. Shivakumar 15 ದಿನಗಳಲ್ಲಿ ಮತ್ತೆ ತಿಹಾರ್‌ ಜೈಲಿಗೆ: ಯತ್ನಾಳ್‌

ಬೆಳಗಾವಿ: ಡಿಸಿಎಂ ಡಿ.ಕೆ.ಶಿವಕುಮಾರ್‌ ವಿರುದ್ಧ ನಾನು ಸಲ್ಲಿಸಿರುವ ಅರ್ಜಿ ಬಗ್ಗೆ ಸುಪ್ರೀಂ ಕೋರ್ಟ್‌ ತೀರ್ಪು ನೀಡಲಿದ್ದು 15 ದಿನಗಳ ಒಳಗೆ ಡಿಕೆಶಿ ಮತ್ತೆ ತಿಹಾರ್‌ ಜೈಲಿಗೆ ಹೋಗಲಿದ್ದಾರೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಹೇಳಿದರು. ಸುದ್ದಿಗಾರರ ಜತೆ ಮಾತನಾಡಿ, ಈಗಾಗಲೇ ಡಿಕೆಶಿ ವಿರುದ್ಧದ ಕೇಸ್‌ ಸುಪ್ರೀಂ ಕೋರ್ಟ್‌ನಲ್ಲಿ ವಜಾ ಮಾಡಲಾಗಿದೆ. ಇನ್ನು 15 ದಿನಗಳಲ್ಲಿ ಸುಪ್ರೀಂ ಕೋರ್ಟ್‌ ತೀರ್ಪು ನೀಡಿದರೆ ಡಿಕೆಶಿ ಮತ್ತೆ ಜೈಲಿಗೆ ಹೋಗಬೇಕಾಗುತ್ತದೆ. ಬಿಜೆಪಿಯಲ್ಲಿ ತಪ್ಪು …

Read More »

ಅಪಾಯ ಮಟ್ಟ ಮೀರಿದ ಕೃಷ್ಣೆ-ಉಪನದಿಗಳು

ಚಿಕ್ಕೋಡಿ: ಕೃಷ್ಣಾ ನದಿ ಉಗಮಸ್ಥಾನ ಮಹಾಬಳೇಶ್ವರ, ಕೊಯ್ನಾ, ನವಜಾ ಮತ್ತು ಕಾಳಮ್ಮವಾಡಿ ಜಲಾನಯನ ಪ್ರದೇಶದಲ್ಲಿ ಹಾಗೂ ರಾಜ್ಯದ ಗಡಿ ಭಾಗದ ನಿಪ್ಪಾಣಿ, ಚಿಕ್ಕೋಡಿ, ರಾಯಬಾಗ ಮತ್ತು ಹುಕ್ಕೇರಿ ಭಾಗದಲ್ಲಿಯೂ ನಿರಂತರವಾಗಿ ಮಳೆ ಆಗುತ್ತಿದೆ. ಹೀಗಾಗಿ ಕೃಷ್ಣಾ ಮತ್ತು ಉಪನದಿಗಳಿಗೆ 1.05 ಲಕ್ಷ ಕ್ಯೂಸೆಕ್‌ ನೀರು ಹರಿದು ಬರುತ್ತಿದೆ. ದೂಧಗಂಗಾ ಮತ್ತು ವೇದಗಂಗಾ ನದಿಗಳು ಒಡಲು ದಾಟಿ ಹರಿದು ಪಕ್ಕದ ಬೆಳೆಗಳಿಗೆ ನುಗ್ಗಿವೆ. ಮಹಾರಾಷ್ಟ್ರದ ಕೊಂಕಣ ಭಾಗದ ಮಹಾಬಳೇಶ್ವರ, ಕೊಯ್ನಾ, ನವಜಾ ಹಾಗೂ …

Read More »

“ಲಕ್ಷ’ದಲ್ಲಿ “ಸಾವಿರ’ ಮಂದಿಗೆ ಮಾತ್ರ “ಯುವನಿಧಿ’ ಭಾಗ್ಯ

ಮಂಗಳೂರು: ರಾಜ್ಯ ಸರಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾಗಿರುವ “ಯುವನಿಧಿ’ ಆರಂಭದಲ್ಲೇ ಹಿನ್ನಡೆ ಕಾಣುತ್ತಿದ್ದು, ನೋಂದಾಯಿತ “ಲಕ್ಷ’ ಫಲಾನುಭವಿಗಳ ಪೈಕಿ ಹಣ ದೊರೆಯುತ್ತಿರುವುದು ಕೆಲವು “ಸಾವಿರ’ ಮಂದಿಗೆ ಮಾತ್ರ! ಯೋಜನೆಯ ಫಲಾನುಭವಿಗಳು “ತಾನು ನಿರುದ್ಯೋಗಿ, ವ್ಯಾಸಂಗ ಮುಂದುವರಿಸುತ್ತಿಲ್ಲ ಹಾಗೂ ಸ್ವಉದ್ಯೋಗಿಯಾಗಿಲ್ಲ’ ಎಂದು ಪ್ರತಿ ತಿಂಗಳ 25ನೇ ತಾರೀಕಿನೊಳಗೆ ಕಡ್ಡಾಯವಾಗಿ ಸ್ವಯಂ ಘೋಷಣೆ ಪ್ರಮಾಣಪತ್ರವನ್ನು ಜಿಲ್ಲಾ ಉದ್ಯೋಗಾಧಿಕಾರಿಗೆ ನೀಡಬೇಕು ಎಂದು ಇತ್ತೀಚೆಗೆ ರಾಜ್ಯ ಸರಕಾರ ಹೊಸ ಆದೇಶ ನೀಡಿತ್ತು. ಆದರೆ ಸಾಕಷ್ಟು ಮಂದಿ …

Read More »

ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕದ ಪ್ರಮುಖ ನಿರೀಕ್ಷೆಗಳೇನು?

2024: ಇಂದು (ಜುಲೈ 23) ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬಜೆಟ್ ಮಂಡನೆ ಮಾಡಲಿದ್ದಾರೆ. ಈ ಮೂಲಕ ಅವರು ಸತತ 7ನೇ ಬಾರಿಗೆ ಕೇಂದ್ರ ಬಜೆಟ್ ಮಂಡಿಸಿದ ದಾಖಲೆಯನ್ನು ಮುಡಿಗೇರಿಸಿಕೊಳ್ಳಲಿದ್ದಾರೆ. ಹಾಗೆಯೇ ಈ ಬಜೆಟ್‌ನಲ್ಲಿ ಹಲವರು ಹಲವು ನಿರೀಕ್ಷೆಗಳನ್ನಿಟ್ಟುಕೊಂಡಿದ್ದಾರೆ. ಹಾಗಾದರೆ ಪ್ರಮುಖವಾಗಿ ಕರ್ನಾಟಕದ ನಿರೀಕ್ಷೆಗಳೇನು ಎಂದು ಇಲ್ಲಿ ತಿಳಿಯಿರಿ. ರಾಜ್ಯದಲ್ಲಿ ವಿವಿಧ ಹಂತಗಳಲ್ಲಿರುವ ನೀರಾವರಿ ಯೋಜನೆಗಳಿಗೆ ಅನುಮತಿ ಮತ್ತು ಅನುದಾನ, ಹೊಸ ಮಾರ್ಗಗಳ ನಿರ್ಮಾಣ ಮತ್ತು ಇರುವ …

Read More »

ಶಿರೂರು ಗುಡ್ಡ ಕುಸಿತ ಪ್ರಕರಣ: 8 ದಿನಗಳ ನಂತರ ಮತ್ತೊಂದು ಮೃತದೇಹ ಪತ್ತೆ

ಕಾರವಾರ: ಉತ್ತರ ಕನ್ನಡ ಜಿಲ್ಲೆ ಅಂಕೋಲಾ ತಾಲೂಕಿನ ಶಿರೂರು ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಗುಡ್ಡ ಕುಸಿತ ಪ್ರಕರಣದಲ್ಲಿ 8 ದಿನಗಳ ಬಳಿಕ ಮತ್ತೊಂದು ಮೃತದೇಹ ಪತ್ತೆಯಾಗಿದೆ. ಗಂಗಾವಳಿ ನದಿಯ ಗಂಗೆಕೊಳ್ಳ ಸಮೀಪ ಮತ್ತೊಂದು ಶವ ಪತ್ತೆಯಾಗಿದೆ. ಅವರನ್ನು ಉಳುವರೆ ಗ್ರಾಮದ ವೃದ್ದೆ ಸಣ್ಣಿ ಹನುಮಂತ ಗೌಡ(61) ಎಂದು ಗುರುತಿಸಲಾಗಿದೆ. ಮಣ್ಣು ಕುಸಿದ ಸ್ಥಳ, ನದಿಯಲ್ಲಿ ಶೋಧ ಕಾರ್ಯಾಚರಣೆ ಮುಂದುವರೆದಿದೆ. ಹೆದ್ದಾರಿಯಲ್ಲಿ ಇದುವರೆಗೆ ಶೇಕಡ 70ರಷ್ಟು ಮಣ್ಣು ತೆಗೆಯಲಾಗಿದ್ದು, ಇಂದು …

Read More »

ಉಪಮುಖ್ಯಮಂತ್ರಿ ಕ್ಷೇತ್ರದಲ್ಲಿ ದಲಿತ ಯುವಕನ ಕೈ ಕಡಿದರು

ಉಪಮುಖ್ಯಮಂತ್ರಿ ಕ್ಷೇತ್ರದಲ್ಲಿ ದಲಿತ ಯುವಕನ ಕೈ ಕಡಿದರು ಕನಕಪುರ: ಮಾಳಗಾಳು ಗ್ರಾಮದಲ್ಲಿ ಒಕ್ಕಲಿಗ ಸಮುದಾಯದ ಯುವಕರ ಗುಂಪೊಂದು ಭಾನುವಾರ ರಾತ್ರಿ ಪರಿಶಿಷ್ಟ ಜಾತಿ ಯುವಕನ ಮುಂಗೈ ಕತ್ತರಿಸಿ ಹಾಕಿದೆ. ದಲಿತರ ಕಾಲೊನಿಗೆ ನುಗ್ಗಿದ ಗುಂಪು ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಹಾಗೂ ಕಾಂಗ್ರೆಸ್ ಮುಖಂಡ ವೈರಮುಡಿ ಅವರ ಪುತ್ರ ಅನೀಶ್ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದೆ. ಅನೀಶ್‌ ಎಡಗೈ ತುಂಡಾಗಿದ್ದು ಬೆಂಗಳೂರಿನ ಸೇಂಟ್ ಜಾನ್ಸ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹಲ್ಲೆಯಲ್ಲಿ ತೀವ್ರವಾಗಿ …

Read More »

ಕೃಷಿ ಕಾಯ್ದೆ ಹಿಂಪಡೆಯಲು ರೈತ ಸಂಘಟನೆಗಳ ಆಗ್ರಹ

ಬೆಳಗಾವಿ: ತಮಗೆ ಮಾರಕವಾದ ಮೂರು ಕೃಷಿ ಕಾಯ್ದೆಗಳನ್ನು ರದ್ದುಪಡಿಸಬೇಕು. ರೈತರ ಸಾಲ ಮನ್ನಾ ಮಾಡಬೇಕು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ನೇತೃತ್ವದಲ್ಲಿ ರೈತರು ನಗರದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು. ಇಲ್ಲಿನ ರಾಣಿ ಚನ್ನಮ್ಮನ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿಯವರೆಗೆ ಮೆರವಣಿಗೆ ನಡೆಸಿದ ಪ್ರತಿಭಟನಕಾರರು, ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ರಾಜ್ಯದ ವಿವಿಧ ಸಕ್ಕರೆ ಕಾರ್ಖಾನೆಗಳು …

Read More »

ಪ್ರಾಮಾಣಿಕ ಅಧಿಕಾರಿ ಮೇಲೆ ಕ್ರಮವಾಗದಿರಲಿ: ರೈತ ಸಂಘಟನೆಗಳ ಆಗ್ರಹ

ಬೆಳಗಾವಿ: ‘ವಿವಿಧ ರೈತ ಸಂಘಟನೆಯವರು ಭೂದಾಖಲೆಗಳ ಇಲಾಖೆ ಬೆಳಗಾವಿ ಉಪನಿರ್ದೇಶಕರಿಗೆ ತೊಂದರೆ ನೀಡುತ್ತಿದ್ದಾರೆ. ಆದರೆ, ಪ್ರಾಮಾಣಿಕ ಅಧಿಕಾರಿಗೆ ಯಾವ ತೊಂದರೆಯಾಗದಂತೆ ಕ್ರಮ ವಹಿಸಬೇಕು’ ಎಂದು ಆಗ್ರಹಿಸಿ ರಾಷ್ಟ್ರೀಯ ರೈತ ಸಂಘ ಹಾಗೂ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಕಾರ್ಯಕರ್ತರು ಜಿಲ್ಲಾಡಳಿತಕ್ಕೆ ಸೋಮವಾರ ಮನವಿ ಸಲ್ಲಿಸಿದರು.   ‘ಭೂದಾಖಲೆಗಳ ಇಲಾಖೆ ಉಪನಿರ್ದೇಶಕರು ನಿಯಮಾನುಸಾರ ಕೆಲಸ ಮಾಡುತ್ತಿದ್ದಾರೆ. ಹಲವು ಪ್ರಕರಣಗಳ ವಿಚಾರಣೆ ನಡೆಸಿ, ರೈತರಿಗೆ ಅನ್ಯಾಯವಾಗದಂತೆ ಕ್ರಮ ವಹಿಸಿದ್ದಾರೆ. …

Read More »

ಬೈಲಹೊಂಗಲ: ಅಭಿವೃದ್ಧಿ ನಿಗಮಕ್ಕೆ ಅನುದಾನ ನೀಡಲು ಆಗ್ರಹ

ಬೈಲಹೊಂಗಲ: ನೂತನವಾಗಿ ಘೋಷಣೆ ಮಾಡಿರುವ ನದಾಫ-ಪಿಂಜಾರ ಹಾಗೂ ಇತರೆ 13 ಜಾತಿಗಳ ಅಭಿವೃದ್ಧಿ ನಿಗಮಕ್ಕೆ ಅನುದಾನ ನೀಡುವಂತೆ ಒತ್ತಾಯಿಸಿ ನದಾಫ, ಪಿಂಜಾರ ಸಮಾಜ ತಾಲ್ಲೂಕು ಘಟಕದ ಸದಸ್ಯರು ಶಿರಸ್ಥೇದಾರ ರಾಘವೇಂದ್ರ ಪೂಜಾರ ಅವರಿಗೆ ಸೋಮವಾರ ಮನವಿ ಸಲ್ಲಿಸಿದರು. ನದಾಫ-ಪಿಂಜಾರ ತಾಲ್ಲೂಕು ಘಟಕದ ಅಧ್ಯಕ್ಷ ಅಬ್ದುಲಕಲಾಮ ಆಜಾದ ನದಾಫ ಮಾತನಾಡಿ, ರಾಜ್ಯದಲ್ಲಿ 22‌ಲಕ್ಷಕ್ಕೂ ಅಧಿಕ ಸಂಖ್ಯೆ ಹೊಂದಿರುವ ಪಿಂಜಾರ,ನದಾಫ ಜನಾಂಗವು ಸಾಮಾಜಿಕ,ಔದ್ಯೋಗಿಕ, ಶೈಕ್ಷಣಿಕ,ರಾಜಕೀಯ ಕ್ಷೇತ್ರ ಸೇರಿದಂತೆ ಅತ್ಯಂತ ಶೋಷಣೆ ಯಿಂದ ನಲುಗುತ್ತಿದೆ. ಪ್ರವರ್ಗ-1 …

Read More »

ಅಕ್ರಮ ಸಂಬಂಧ ಶಂಕೆ: ಯುವಕನ ಕೊಲೆ

ಮೂಡಲಗಿ: ತಾಲ್ಲೂಕಿನ ಲಕ್ಷ್ಮೇಶ್ವರ ಕ್ರಾಸ್‌ ಬಳಿ ಸೋಮವಾರ ಮಾರಕಾಸ್ತ್ರದಿಂದ ಕೊಚ್ಚಿ ಯುವಕನೊಬ್ಬನ ಕೊಲೆ ಮಾಡಲಾಗಿದೆ. ಲಕ್ಷ್ಮೇಶ್ವರದ ಮೌಲಾಸಾಬ್‌ ಯಾಸೀನ್‌ ಮೋಮಿನ್‌(22) ಮೃತರು. ‘ತನ್ನ ಪತ್ನಿ ಶಿಲ್ಪಾ ಅವರೊಂದಿಗೆ ಮೌಲಾಸಾಬ್‌ ಅಕ್ರಮ ಸಂಬಂಧ ಹೊಂದಿದ್ದಾರೆ ಎಂದು ಶಂಕಿಸಿ, ಸುಣಧೋಳಿಯ ಅಮೋಘ ಢವಳೇಶ್ವರ ಕೊಲೆ ಮಾಡಿದ್ದಾನೆ’ ಎಂದು ಪೊಲೀಸರು ತಿಳಿಸಿದ್ದಾರೆ. ಮೌಲಾಸಾಬ್‌ ಹಾಗೂ ಶಿಲ್ಪಾ ಬೈಕ್‌ ಮೇಲೆ ಹೊರಟಿದ್ದರು. ಅವರನ್ನು ತಡೆದ ಆರೋಪಿ, ಮಾರಕಾಸ್ತ್ರದಿಂದ ಇಬ್ಬರ ಮೇಲೂ ಹಲ್ಲೆ ಮಾಡಿದ. ಮೌಲಾಸಾಬ್‌ ಸ್ಥಳದಲ್ಲೇ ಮೃತಪಟ್ಟರು. …

Read More »