Breaking News

ನೆಲಮಂಗಲ ಬಳಿ ಲಾರಿಗೆ ಕಾರು ಡಿಕ್ಕಿ: ಅಂತ್ಯ ಸಂಸ್ಕಾರಕ್ಕೆ ತೆರಳುತ್ತಿದ್ದ ಮೂವರ ದುರ್ಮರಣ

Spread the love

ನೆಲಮಂಗಲ: ನಿಯಂತ್ರಣ ತಪ್ಪಿದ ಕಾರು ಪಕ್ಕದ ರಸ್ತೆಗೆ ನುಗ್ಗಿ ಗ್ಯಾಸ್ ಲ್ಯಾರಿಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ದಾರುಣವಾಗಿ ಮೃತಪಟ್ಟಿರುವ ಘಟನೆ ನೆಲಮಂಗಲ-ಕುಣಿಗಲ್ ಹೆದ್ದಾರಿಯಲ್ಲಿ ಸಂಭವಿಸಿದೆ.

ಮೃತಪಟ್ಟವರನ್ನು ಬೆಂಗಳೂರು ಪೀಣ್ಯಾ ಪೊಲೀಸ್ ಠಾಣೆ ವ್ಯಾಪ್ತಿಯ ಮಂಜುನಾಥ್ ನಗರದ ಪುರುಷೋತ್ತಮ್ ,ಚಂದು ಮತ್ತು ನವೀನ್ ಎಂದು ಗುರುತಿಸಲಾಗಿದೆ. ಗಂಭೀರ ಗಾಯಗೊಂಡಿರುವ ತುಮಕೂರು ಜಿಲ್ಲೆಯ ತಿಪಟೂರು ನಿವಾಸಿ ಆದಿತ್ಯ ಎಂಬುವನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಚೇತನ್, ನವೀನ್, ಚಂದು ಮತ್ತು ಆದಿ ಇಟಿಯೋಸ್ ಕಾರಿನಲ್ಲಿ ಕುಣಿಗಲ್ ಕಡೆಗೆ ಹೋಗುತ್ತಿದ್ದರು. ನೆಲಮಂಗಲ ಸಂಚಾರಿ ಠಾಣೆ ವ್ಯಾಪ್ತಿಯ ಬೆಂಗಳೂರು-ಕುಣಿಗಲ್ ಬೈಪಾಸ್ ರಸ್ತೆಯ ಬಿಪಿ ಇಂಡಿಯನ್ ಶಾಲೆ ಮುಂಭಾಗ ಇವರ ಕಾರು ನಿಯಂತ್ರಣ ತಪ್ಪಿ ಏಕಾಏಕಿ ಡಿವೈಡರ್ ಹಾರಿ ಪಕ್ಕದ ರಸ್ತೆಗೆ ನುಗ್ಗಿ ಈ ಮಾರ್ಗದಲ್ಲಿ ಬರುತ್ತಿದ್ದ ಗ್ಯಾಸ್ ಲಾರಿಗೆ ಕಾರು ಅಪ್ಪಳಿಸಿದ್ದರಿಂದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ನೆಲಮಂಗಲ ಸಂಚಾರಿ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಕಾರಿನಿಂದ ಮೃತದೇಹಗಳನ್ನು ಹೊರತೆಗೆಯಲು ಸುಮಾರು 2 ತಾಸು ಸಮಯ ಬೇಕಾಯಿತು. ಇನ್ನೂ ಘಟನೆ ಬಗ್ಗೆ ವಿವರಿಸಿರುವ ಲಾರಿ ಚಾಲಕ ವೇಣುಗೋಪಾಲ್, ಎದುರುಗಡೆಯಿಂದ ವೇಗವಾಗಿ ಬರುತ್ತಿದ್ದ ಕಾರನ್ನು ನೋಡಿ ನಾನು ಬ್ರೇಕ್ ಹಾಕಿದೆ, ಆದಾಗ್ಯು ಕಾರು ನನ್ನ ಲಾರಿಯ ಮುಂದಿನ ಚಕ್ರಕ್ಕೆ ಬಂದು ಅಪ್ಪಳಿಸಿತು, ಇದರಿಂದ ನನಗೆ ಆಘಾತವಾಯಿತು ಎಂದು ಹೇಳಿದ್ದಾರೆ. ಲಾರಿ ಬೆಂಗಳೂರಿನಿಂದ ಯಡಿಯೂರು ಕಡೆಗೆ ಹೋಗುತ್ತಿತ್ತು, ಮೃತರಿದ್ದ ಕಾರು ಕುಣಿಗಲ್ ನಲ್ಲಿ ಅಂತ್ಯ ಸಂಸ್ಕಾರಕ್ಕೆ ತೆರಳುತ್ತಿದ್ದರು.

ಸುದ್ದಿ ತಿಳಿಯುತ್ತಿದ್ದಂತೆ ನೆಲಮಂಗಲ ಸಂಚಾರಿ ಠಾಣೆ ಸಿಪಿಐ ವೀರೇಂದ್ರ ಪ್ರಸಾದ್ ತಮ್ಮ ಸಿಬ್ಬಂದಿಗಳೊಂದಿಗೆ ಸ್ಥಳಕ್ಕೆ ದೌಡಾಯಿಸಿ ಕಾರಿನಲ್ಲಿ ಸಿಕ್ಕಿಕೊಂಡಿದ್ದ ಗಾಯಾಳುವನ್ನು ತಕ್ಷಣ ಹೊರಗೆ ಕರೆತಂದು ಆಸ್ಪತ್ರೆಗೆ ದಾಖಲಿಸಿದ್ದಾರೆ.

*ಹೆಚ್ಚಿನ ಸುದ್ದಿಗಾಗಿ ಲಕ್ಷ್ಮಿ ನ್ಯೂಸ್ ಚಾನಲ್ ಅನ್ನ subscribe ಹಾಗೂ ಕ್ಷಣ ಕ್ಷಣದ ಸುದ್ದಿಗಳಿಗಾಗಿ ಲಕ್ಷ್ಮಿ ನ್ಯೂಸ್ ವೆಬ್ ಸೈಟ್ ಫಾಲೋ ಮಾಡಿ*??


Spread the love

About Laxminews 24x7

Check Also

ಸ್ನಾನದ ಕೋಣೆಯಲ್ಲಿ ಕಾಲು ಜಾರಿ ಬಿದ್ದು ಹಿರಿಯ ನಟ ಉಮೇಶ್ ಅಸ್ವಸ್ಥ, ಆಸ್ಪತ್ರೆಗೆ ದಾಖಲು

Spread the loveಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ ಎಂ.ಎಸ್‌.ಉಮೇಶ್‌ ಅವರು ಮನೆಯ ಸ್ನಾನದ ಕೋಣೆಯಲ್ಲಿ ಕಾಲು ಜಾರಿ ಬಿದ್ದು ಗಾಯಗೊಂಡಿದ್ದು, …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ