Breaking News

ಕಳೆದ 15 ವರ್ಷದಲ್ಲಿ ಪರಪ್ಪನ ಅಗ್ರಹಾರ ಕಾರಗೃಹದಲ್ಲಿದ್ದ 11 ಕೈದಿಗಳು ಎಸ್ಕೇಪ್‌

Spread the love

ಬೆಂಗಳೂರು: ಕಳೆದ 15 ವರ್ಷಗಳಲ್ಲಿ ಬೆಂಗಳೂರು ಕೇಂದ್ರ ಪರಪ್ಪನ ಅಗ್ರಹಾರ ಕಾರಗೃಹದಲ್ಲಿದ್ದ ಸುಮಾರು 11 ಮಂದಿ ಕೈದಿಗಳು ಪೆರೋಲ್‌ ನೆಪದಲ್ಲಿ ಹೊರಹೋದವರು ಇದುವರೆಗೂ ಪತ್ತೆಯಾಗಿಲ್ಲ ಎಂಬ ಮಾಹಿತಿ ಬಹಿರಂಗವಾಗಿದೆ. ಈ ಸಂಬಂಧ ಪ್ರಕರಣ ಪ್ರಕರಣ ದಾಖಲಾಗಿದ್ದು, ಅವರಿಗಾಗಿ ಹುಡುಕಾಟ ನಡೆಯುತ್ತಿದೆ ಎಂದು ಜೈಲಿನ ಮೂಲಗಳು ತಿಳಿಸಿವೆ.

ಕೊಲೆ, ಸುಲಿಗೆ, ಕೊಲೆ ಯತ್ನ, ದರೋಡೆ ಸೇರಿ ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ ಜೈಲು ಶಿಕ್ಷೆ ಅನುಭವಿಸುತ್ತಿದ್ದ 11 ಮಂದಿ ಕೈದಿಗಳು ಪೆರೋಲ್‌ ಮೇಲೆ ಹೊರ ಹೋಗಿ ಜೈಲಿಗೆ ವಾಪಸ್‌ ಬಾರದೆ, ಪೊಲೀಸರಿಗೂ ಸಿಗದೆ ತಲೆಮರೆಸಿಕೊಂಡಿದ್ದಾರೆ.

ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ ಹಾಗೂ ತುಮಕೂರು ಜಿಲ್ಲಾ ವ್ಯಾಪ್ತಿಗಳಲ್ಲಿ ವಿವಿಧ ಅಪರಾಧಗಳಲ್ಲಿ ಭಾಗಿಯಾಗಿ ಶಿಕ್ಷೆ ಅನುಭವಿಸುವ ಸಾವಿರಾರು ಕೈದಿಗಳಿದ್ದಾರೆ. ಈ ಪೈಕಿ 2004 ರಿಂದ 2019ರವರೆಗೆ ಪೆರೋಲ್‌ ಮೇಲೆ ಹೊರ ಹೋಗಿದ್ದ 11 ಮಂದಿ ಕೈದಿಗಳು ಪರಾರಿಯಾಗಿದ್ದಾರೆ. ಈ ಸಂಬಂಧ ಜೈಲಿನ ಅಧಿಕಾರಿಗಳು ಸಂಬಂಧಿಸಿದ ಪೊಲೀಸ್‌ ಠಾಣೆಗಳಿಗೆ ಮಾಹಿತಿ ನೀಡಿದರೂ ಪತ್ತೆ ಕಾರ್ಯದಲ್ಲಿ ಪ್ರಗತಿ ಕಂಡಿಲ್ಲ ಎಂದು ಮೂಲಗಳು ತಿಳಿಸಿವೆ.

 

ವರ್ಷಕ್ಕೆ 3 ಬಾರಿ ಪೆರೋಲ್‌:
ಸಜಾಬಂಧಿಗಳಿಗೆ ವರ್ಷಕ್ಕೆ 3 ತಿಂಗಳು ಪೆರೋಲ್‌ ಮೇಲೆ ಜೈಲಿನಿಂದ ಹೊರ ಹೋಗಲು ಅವಕಾಶವಿದೆ. ವರ್ಷಕ್ಕೆ 90ದಿನಗಳು ಹೊರಗೆ ಇರಬಹುದು. ಒಂದೇ ಬಾರಿ ಮೂರು ತಿಂಗಳು ಸಿಗದಿದ್ದರೂ ಹಂತ-ಹಂತವಾಗಿ ಪೆರೋಲ್‌ ರಜೆ ಪಡೆಯಬಹುದು. ಅದೇ ರೀತಿ ಪರಾರಿಯಾಗಿರುವ 11 ಮಂದಿಗೆ ಪೆರೋಲ್‌ ಗೆ ಕಾರಾಗೃಹ ಇಲಾಖೆ ಅನುಮತಿ ನೀಡಿತ್ತು. ಅದೇ ಅವಕಾಶವನ್ನು ದುರ್ಬಳಕೆ ಮಾಡಿಕೊಂಡ ಅವರು ಪೆರೋಲ್‌ ಪಡೆದು ಪರಾರಿಯಾಗಿದ್ದಾರೆ.

ಪರಾರಿಯಾಗಿರುವ ಕೈದಿಗಳ ಶಿಕ್ಷೆ ಅವಧಿ ಮುಗಿದರೂ ಪೆರೋಲ್‌ ನಿಯಮ ಉಲ್ಲಂಘನೆ ಆರೋಪದ ಮೇಲೆ ಅವರ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ಹೀಗಾಗಿ ಒಂದು ವೇಳೆ ಅವರು ಸಿಕ್ಕಿಬಿದ್ದರೆ ಕಾರಾಗೃಹ ಇಲಾಖೆಯಿಂದ ಸಿಗಬಹುದಾದ ಎಲ್ಲ ಸೌಲಭ್ಯಗಳು ರದ್ದಾಗಲಿವೆ ಎಂದು ಮೂಲಗಳು ತಿಳಿಸಿವೆ.


Spread the love

About Laxminews 24x7

Check Also

ಎಲ್ಲ ಧರ್ಮಕ್ಕಿಂತ ಮಾನವ ಧರ್ಮವೇ ಮೇಲು: ಸಿಎಂ

Spread the loveಮೈಸೂರು: ದಯೆಯೇ ಧರ್ಮದ ಮೂಲವಯ್ಯ, ದಯೆಯಿಲ್ಲದ ಧರ್ಮ ಯಾವುದಯ್ಯ ಎಂದು ಬಸವಣ್ಣನವರು ಧರ್ಮದ ಕುರಿತು ವ್ಯಾಖ್ಯಾನ ಮಾಡಿದ್ದಾರೆ. ಎಲ್ಲ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ