Breaking News

ಆಯುಷ್‌ ಅಣಕು ಸೀಟು ಹಂಚಿಕೆ ಫಲಿತಾಂಶ ಪ್ರಕಟ; ಅ.14ರವರೆಗೆ ಆಯ್ಕೆ ಬದಲಿಸಲು ಅವಕಾಶ – ಕೆಇಎ

Spread the love

ಬೆಂಗಳೂರು: ಆಯುರ್ವೇದ ಮತ್ತು ಹೋಮಿಯೋಪತಿ ಕೋರ್ಸ್‌ಗಳ ಮೊದಲ ಸುತ್ತಿನ ಅಣಕು ಸೀಟು ಹಂಚಿಕೆ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ  ಇಂದು ಪ್ರಕಟಿಸಿದೆ. ಅಣಕು ಫಲಿತಾಂಶದಲ್ಲಿ ಒಟ್ಟು 4,842 ಅಭ್ಯರ್ಥಿಗಳಿಗೆ ಸೀಟು ಹಂಚಿಕೆ ಮಾಡಲಾಗಿದೆ.

ಅಣಕು ಸೀಟು ಹಂಚಿಕೆಯ ಫಲಿತಾಂಶ ಪರಿಶೀಲಿಸಿದ ಬಳಿಕ ಅಭ್ಯರ್ಥಿಗಳು ತಮ್ಮ ಆಯ್ಕೆಗಳಲ್ಲಿ ಬದಲಾವಣೆ ಮಾಡಿಕೊಳ್ಳಲು ಕೆಇಎ ಅವಕಾಶ ನೀಡಿದೆ. ಅಕ್ಟೋಬರ್‌ 14ರ ಬೆಳಿಗ್ಗೆ 11 ಗಂಟೆಯವರೆಗೆ ಈಗಾಗಲೇ ದಾಖಲಿಸಿರುವ ಆಯ್ಕೆಗಳನ್ನು ಬದಲಿಸಬಹುದು. ಹೊಸ ಆಯ್ಕೆಗಳನ್ನು ಸೇರಿಸಲು ಅಥವಾ ಅಗತ್ಯವಿಲ್ಲದ ಆಯ್ಕೆಗಳನ್ನು ಅಳಿಸಲು ಕೂಡ ಅವಕಾಶವಿದೆ.

ಇದುವರೆಗೆ ಇಚ್ಛೆ ಅಥವಾ ಆಯ್ಕೆಗಳನ್ನು ದಾಖಲಿಸದ ಅಭ್ಯರ್ಥಿಗಳು ಸಹ ನಿಗದಿತ ಅವಧಿಯೊಳಗೆ ಹೊಸದಾಗಿ ಆಯ್ಕೆಗಳನ್ನು ದಾಖಲಿಸಬಹುದು ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಎಚ್‌. ಪ್ರಸನ್ನ ತಿಳಿಸಿದ್ದಾರೆ.

ಅಭ್ಯರ್ಥಿಗಳು ಅಣಕು ಫಲಿತಾಂಶವನ್ನು ಗಮನದಲ್ಲಿಟ್ಟುಕೊಂಡು ತಮ್ಮ ಆಯ್ಕೆಗಳನ್ನು ಪರಿಶೀಲಿಸಬೇಕು. ಈ ಪ್ರಕ್ರಿಯೆ ಪೂರ್ಣಗೊಂಡ ಬಳಿಕವೇ ಆಯುಷ್‌ ಕೋರ್ಸ್‌ಗಳ ಮೊದಲ ಸುತ್ತಿನ ನೈಜ ಸೀಟು ಹಂಚಿಕೆ ಫಲಿತಾಂಶ ಪ್ರಕಟಿಸಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.


Spread the love

About Laxminews 24x7

Check Also

ಮುಂದುವರಿದ ಮಹದೇವಪ್ಪ ಮುನಿಸು – ಸಿದ್ರಾಮಯ್ಯಗೆ ಆಹ್ವಾನವಿಲ್ಲದೇ ʻಸಂವಿಧಾನ ದಿನʼ ಆಚರಣೆ

Spread the loveಮೈಸೂರು: ಆಪ್ತ ಮಿತ್ರರಾಗಿದ್ದ ಮಾಜಿ ಸಿಎಂ ಸಿದ್ದರಾಮಯ್ಯ  ಹಾಗೂ ಮಾಜಿ ಸಚಿವ ಹೆಚ್‌.ಸಿ ಮಹದೇವಪ್ಪ  ಅವರ ನಡುವಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ