ಬೆಳಗಾವಿ: ಎಸ್ಸೆಸ್ಸೆಲ್ಸಿ ಪರೀಕ್ಷೆ ವೇಳೆಯಲ್ಲಿ ವಿದ್ಯಾರ್ಥಿಗಳನ್ನು ಪರೀಕ್ಷಾ ಕೇಂದ್ರಕ್ಕೆ ಸುರಕ್ಷಿತವಾಗಿ ಕರೆತರುವ ಕೆಲಸ ನಿರ್ವಹಿಸಿದ ಸಾರಿಗೆ ಇಲಾಖೆಯ ಸಿಬ್ಬಂದಿಗಳಿಗೆ ಬಡಸ ಹಾಗೂ ಬೆಂಡಿಗೇರಿ ಗ್ರಾಮದ ವಿದ್ಯಾರ್ಥಿಗಳು ಶುಕ್ರವಾರ ಸನ್ಮಾನಿಸಿ, ಗೌರವಿಸಿದ್ದಾರೆ.
ಕೊರೊನಾ ಆತಂಕದ ನಡುವೆಯೇ ವಿದ್ಯಾರ್ಥಿಗಳ ಪರೀಕ್ಷೆ ಬರೆದಿದ್ದಾರೆ. ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಪರೀಕ್ಷೆ ಕೇಂದ್ರಕ್ಕೆ ತೆರಳಲು ಸಹಕಾರಿಯಾದ ಸಾರಿಗೆ ಇಲಾಖೆಯ ಸಿಬ್ಬಂದಿಗಳ ಕಾರ್ಯವನ್ನು ಗ್ರಾಮಸ್ಥರು, ವಿದ್ಯಾರ್ಥಿಗಳು ಬಣ್ಣಿಸಿ, ಸನ್ಮಾನಿಸಿದ್ದರು. ಈ ವೇಳೆ ಮಾಸ್ಕ್, ಸ್ಯಾನಿಟೈಸರ್ ಬಳಸುವ ಮೂಲಕ ಸರ್ಕಾರದ ನಿಯಮಗಳನ್ನು ಪಾಲಿಸಿದ್ದಾರೆ.
ಎಸ್ಸೆಸ್ಸೆಲ್ಸಿ ಪರೀಕ್ಷೆ ವಿದ್ಯಾರ್ಥಿಗಳ ಜೀವನದ ಪ್ರಮುಖ ಗಟ್ಟವಾಗಿದೆ. ಕೊರೊನಾ ಸೋಂಕು ಆತಂಕದ ನಡುವೆ ಸಾರಿಗೆ ಇಲಾಖೆ ಸಿಬ್ಬಂದಿಗಳು ತಮ್ಮ ಜೀವನವನ್ನು ಲೆಕ್ಕಿಸದೆ, ನಮ್ಮ ಮಕ್ಕಳನ್ನು ಪರೀಕ್ಷಾ ಕೇಂದ್ರಕ್ಕೆ ಬಿಡುವ ಕೆಲಸ ಮಾಡಿರುವುದು ಶ್ಲಾಘನೀಯವಾಗಿದ್ದು ಎಂದು ಪೋಷಕರು ಹೇಳಿದರು.
ಇನ್ನೂ ಕೆಎಸ್ ಆರ್ ಟಿಸಿಯ ಡಿಸಿ ಎಂ.ಆರ್.ಹುಂಜಿ ಅವರು ತಮ್ಮ ಸಿಬ್ಬಂದಿಗಳ ಕಾರ್ಯಕ್ಕೆ ಪ್ರಶಂಸೆ ವ್ಯಕ್ತ ಪಡಿಸಿದ್ದಾರೆ.