Breaking News

ಕೆಪಿಸಿಸಿ ನೂತನ ಅಧ್ಯಕ್ಷರಾಗಿ ಬಿ.ಕೆ ಹರಿಪ್ರಸಾದ್‌ ನೇಮಕ

Spread the love

ಬೆಂಗಳೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಸಮಿತಿ ಅಧ್ಯಕ್ಷರಾಗಿ ಬಿ.ಕೆ ಹರಿಪ್ರಸಾದ್‌ ಅವರನ್ನ ನೇಮಕ ಮಾಡಿ ಎಐಸಿಸಿ ಅಧಿಕೃತ ಆದೇಶ ಹೊರಡಿಸಿದೆ.

WhatsApp Image 2026 06 03 at 20.41.00

ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್‌ ಅಧಿಕಾರ ಸ್ವೀಕರಿದ ಬೆನ್ನಲ್ಲೇ ಕೆಪಿಸಿಸಿ ಸ್ಥಾನಕ್ಕೆ ರಾಜೀನಾಮೆ ನೀಡಿದರು. ಹೀಗಾಗಿ ತೆರವಾದ ಸ್ಥಾನಕ್ಕೆ ಬಿ.ಕೆ ಹರಿಪ್ರಸಾದ್ ಅವರನ್ನ ತಕ್ಷಣದಿಂದ ಜಾರಿಗೆ ಬರುವಂತೆ ನೇಮಕ ಮಾಡಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅಧಿಕೃತ ಆದೇಶ ಹೊರಡಿಸಿದ್ದಾರೆ.

ಅಲ್ಲದೇ ನಿರ್ಗಮಿತ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರ ಕೊಡುಗೆಗಳನ್ನ ಪಕ್ಷವು ಶ್ಲಾಘಿಸುತ್ತದೆ ಎಂದು ಸ್ಮರಿಸಿದ್ದಾರೆ.
ಇದಕ್ಕೂ ಮುನ್ನವೇ ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ನಡೆಯಲಿರುವ ಚುನಾವಣೆಗೆ ಕಾಂಗ್ರೆಸ್‌ ಅಭ್ಯರ್ಥಿಗಳನ್ನು ಘೋಷಿಸಿತ್ತು. ಬಿ.ಕೆ.ಹರಿಪ್ರಸಾದ್ , ಪಿ.ವಿ.ಮೋಹನ, ತಿಪ್ಪಣ್ಣ ಕಮಕನೂರು, ಮಳವಳ್ಳಿ ಶಿವಣ್ಣಗೆ ಅವರಿಗೆ ಹೈಕಮಾಂಡ್‌ ಟಿಕೆಟ್‌ ಘೋಷಣೆ ಮಾಡಿದೆ.


Spread the love

About Laxminews 24x7

Check Also

ವಂದೇ ಮಾತರಂನ ಮೊದಲ 2 ಚರಣ ಮಾತ್ರ ಹಾಡಬೇಕು – ಸರ್ಕಾರದ ಆದೇಶ ಪ್ರಶ್ನಿಸಿ ಹೈಕೋರ್ಟ್‌ಗೆ PIL

Spread the loveಬೆಂಗಳೂರು: ವಂದೇ ಮಾತರಂ  ಹಾಡಿನ ವಿವಾದ ರಾಜ್ಯ ಹೈಕೋರ್ಟ್  ಮೆಟ್ಟಿಲೇರಿದೆ. ಮೊದಲ 2 ಚರಣ ಮಾತ್ರ ಹಾಡಬೇಕು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ