Breaking News

60 ವರ್ಷ ಮೇಲ್ಪಟ್ಟವರು ಹೊರಬರದಂತೆ ರಾಜ್ಯದಲ್ಲಿ ಕಾನೂನು

Spread the love

ಬೆಂಗಳೂರು(ಜು.06): ರಾಜ್ಯದಲ್ಲಿ ಕೊರೋನಾ ನಿಯಂತ್ರಣಕ್ಕೆ ಬರುವವರೆಗೂ ಕಿಡ್ನಿ, ಲಿವರ್‌, ಹೃದಯ ಸಂಬಂಧಿ ಸಮಸ್ಯೆ ಸೇರಿದಂತೆ ಪೂರ್ವ ಆರೋಗ್ಯ ಸಮಸ್ಯೆಗಳನ್ನು ಹೊಂದಿರುವ 60 ವರ್ಷ ಮೇಲ್ಪಟ್ಟವರು ಮನೆಯಿಂದ ಹೊರಬರಬಾರದೆಂಬ ಕಾನೂನು ರೂಪಿಸುವ ಚಿಂತನೆ ನಡೆಸುತ್ತಿದ್ದೇವೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ ತಿಳಿಸಿದ್ದಾರೆ.


ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಈವರೆಗೆ ಕೋವಿಡ್‌ನಿಂದ ಮೃತಪಟ್ಟವರ ಪೈಕಿ ಬಹುತೇಕ ಮಂದಿ 60 ವರ್ಷ ಮೇಲ್ಪಟ್ಟವರು ಹಾಗೂ ಈಗಾಗಲೇ ಪೂರ್ವ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದವರಾಗಿದ್ದಾರೆ. ಹಾಗಾಗಿ ಅವರ ಸುರಕ್ಷತೆ ದೃಷ್ಟಿಯಿಂದ ಕೊರೋನಾ ನಿಯಂತ್ರಣವಾಗುವವರೆಗೆ ಅಂತಹವರನ್ನು ಮನೆಯಿಂದ ಹೊರಬರದಂತೆ ತಡೆಯಲು ಕಾನೂನು ತರಲು ವಿಚಾರ ಮಾಡುತ್ತಿದ್ದೇವೆ ಎಂದರು.
ಕೋವಿಡ್‌ ಸಾಮಾಜಿಕ ಪಿಡುಗಲ್ಲ. ಸೋಂಕು ಬಂದವರೆಲ್ಲರೂ ಸಾವನ್ನಪ್ಪುವುದಿಲ್ಲ. ಈವರೆಗೆ ಶೇ.60ರಷ್ಟುಮಂದಿ ಗುಣಮುಖರಾಗಿದ್ದಾರೆ. ಇತ್ತೀಚೆಗೆ ಸೋಂಕು ಹೆಚ್ಚುತ್ತಿರುವುದರಿಂದ ಗುಣಮುಖರ ಸಂಖ್ಯೆ ಕಡಿಮೆಯಾಗಿದೆ. ಹಾಗಾಗಿ ಯಾರೂ ಆತಂಕಪಡದೆ ಧೈರ್ಯವಾಗಿ ಎದುರಿಸಬೇಕು. ಸರ್ಕಾರದ ಮಾರ್ಗಸೂಚಿಗಳನ್ನು ಅನುಸರಿಸುವ ಮೂಲಕ ಕೊವಿಡ್‌ ನಿಯಂತ್ರಣಕ್ಕೆ ಪ್ರತಿಯೊಬ್ಬರೂ ಕೈಜೋಡಿಸಬೇಕು’ ಎಂದು ಮನವಿ ಮಾಡಿದರು


Spread the love

About Laxminews 24x7

Check Also

ಭಕ್ತಾದಿಗಳಿಗೆ ಮೂಲಭೂತ ಸೌಕರ್ಯ ಒದಗಿಸಿ ; ಕೊಲ್ಲಾಪುರ ಜಿಲ್ಲಾ ರೇಣುಕಾ ಭಕ್ತ ಸಂಘಟನೆಯ ಆಗ್ರಹ

Spread the loveಭಕ್ತಾದಿಗಳಿಗೆ ಮೂಲಭೂತ ಸೌಕರ್ಯ ಒದಗಿಸಿ ; ಕೊಲ್ಲಾಪುರ ಜಿಲ್ಲಾ ರೇಣುಕಾ ಭಕ್ತ ಸಂಘಟನೆಯ ಆಗ್ರಹ ಇಂದು ಬೆಳಗಾವಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ