Breaking News

ಕಲಬುರಗಿಯಲ್ಲಿ 2 ವರ್ಷದ ಬಾಲಕಿಗೆ ಕೊರೊನಾ ಪಾಸಿಟಿವ್

Spread the love

ಕಲಬುರಗಿ: ಯಾವುದೇ ಕೊರೊನಾ ಸೋಂಕಿತ ವ್ಯಕ್ತಿಯ ಜೊತೆಗೆ ಸಂಪರ್ಕ ಹೊಂದಿರದ ಎರಡು ವರ್ಷದ ಹೆಣ್ಣು ಮಗುವಿಗೆ ಕೊರೊನಾ ಪಾಸಿಟಿವ್ ಬಂದಿದ್ದು, ಜಿಲ್ಲೆಯ ಜನರನ್ನು ತೀವ್ರ ಆತಂಕಕ್ಕೀಡು ಮಾಡಿದೆ.

ಚಿತ್ತಾಪುರ ತಾಲೂಕಿನ ವಾಡಿಯಲ್ಲಿ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದ ಉತ್ತರ ಪ್ರದೇಶ ಮೂಲದ ವ್ಯಕ್ತಿಯ ಮಗಳಿಗೆ ಕೊರೊನಾ ಸೋಂಕು ಹರಡಿದೆ ಎಂದು ಶಾಸಕ, ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

ಪ್ರಿಯಾಂಕ್ ಖರ್ಗೆ ಅವರು ಇಂದು  ಟ್ವಿಟ್ಟರ್ ಹಾಗೂ ಫೇಸ್‍ಬುಕ್‍ನಲ್ಲಿ ಈ ಮಾಹಿತಿಯನ್ನು ಹಾಕಿಕೊಂಡಿದ್ದಾರೆ. ಹೀಗಾಗಿ ಅವರು ಗ್ರಾಮದಲ್ಲಿ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲು ಸ್ಥಳೀಯ ಅಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸೂಚಿಸುವುದಾಗಿ ತಿಳಿಸಿದ್ದಾರೆ.

ಕೊರೊನಾ ಸೋಂಕಿತ ಬಾಲಕಿ ಶನಿವಾರ ಸಂಜೆ ಮನೆ ಮುಂದೆ ಆಟವಾಡಿಕೊಂಡಿದ್ದಾಗ ಗಾಯ ಮಾಡಿಕೊಂಡಿದ್ದಳು.  ಬಳಿಕ ಕಲಬುರಗಿ ಜಿಲ್ಲಾಸ್ಪತ್ರೆಯಲ್ಲಿ ದಾಖಲಿಸಿ ಕೊರೊನಾ ಟೆಸ್ಟ್ ಮಾಡಿಸಿದಾಗ ರಿಪೋರ್ಟ್ ಪಾಸಿಟಿವ್ ಇರುವುದಾಗಿ ತಿಳಿದು ಬಂದಿತು. ಮುಂಜಾಗ್ರತಾ ಕ್ರಮವಾಗಿ ತಹಶೀಲ್ದಾರ್ ಉಮಾಕಾಂತ, ತಾಲೂಕು ವೈದ್ಯಾಧಿಕಾರಿ ಮೇಕನ್, ಡಿವೈಎಸ್‍ಪಿ ವೆಂಕನಗೌಡ ಪಾಟೀಲ, ಸಿಪಿಐ ಪಂಚಾಕ್ಷರಿ ಸಾಲಿಮಠ ಅವರು ತಮ್ಮ ಸಿಬ್ಬಂದಿಯೊಂದಿಗೆ ಆಗಮಿಸಿ ಮನೆಯ ಇತರ ಸದಸ್ಯರನ್ನು ವಿಚಾರಣೆ ನಡೆಸಿ ಸುತ್ತಲೂ ಬ್ಯಾರಿಕೇಡ್ ಹಾಕಿ ಬಿಗಿ ಬಂದೋಬಸ್ತ್ ಏರ್ಪಡಿಸಿದ್ದಾರೆ.

About Laxminews 24x7

Check Also

ಎಲ್‌ಪಿಜಿ ಸಿಲಿಂಡರ್‌ಗೆ ರಾತ್ರಿಯಿಡೀ ಕ್ಯೂ ಕೂತ ಜನ

Spread the loveಬೆಂಗಳೂರು: ಮಧ್ಯಪ್ರಾಚ್ಯ ಯುದ್ಧದಿಂದ ಜಗತ್ತಿನಲ್ಲಿ ʻಎನರ್ಜಿ ಎಮರ್ಜೆನ್ಸಿʼ  ಸೃಷ್ಟಿ ಆಗಿಬಿಡುತ್ತಾ ಅನ್ನೋ ಕಳವಳ ಹೆಚ್ಚಾಗ್ತಿದೆ. ಕೊರೊನಾ ಬಳಿಕ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ