ಕೊರೊನಾ ಸೋಂಕು ಹರಡುವ ಭೀತಿ ಹಿನ್ನೆಲೆ ರಾಜ್ಯಾದ್ಯಂತ ಲಾಕ್ ಡೌನ್ ಹೇರಲಾಗಿದ್ದು ಅನಾವಶ್ಯಕವಾಗಿ ಓಡಾಡುವರನ್ನ ತಡೆಯಲು ಪೊಲೀಸರನ್ನ ನಿಯೋಜನೆ ಮಾಡಲಾಗಿದೆ. ಆದರೆ ಕರ್ತವ್ಯ ನಿರತರಾದ ಪೊಲೀಸ್ ಅಧಿಕಾರಿಗಳ ಮೇಲೆ ಹಲ್ಲೆಗೆ ಯತ್ನಿಸಲಾಗಿದೆ.
ಬಾಗಲಕೋಟೆ ಜಿಲ್ಲೆ ಬಾದಾಮಿ ತಾಲೂಕಿನ ಮುತ್ತಲಗೇರಿ ಗ್ರಾಮದಲ್ಲಿ ಕರ್ತವ್ಯ ನಿರತ ಪೊಲೀಸ್ ಅಧಿಕಾರಿ ಮೇಲೆ ಹಲ್ಲೆಗೆ ಯತ್ನ ನಡೆಸಲಾಗಿದೆ.
.
ಲಾಕ್ ಡೌನ್ ಉಲ್ಲಂಘಿಸಿ ಗ್ರಾಮದಲ್ಲಿ ಬೇಕಾಬಿಟ್ಟಿ ಒಡಾಡುತ್ತಿದ ಜನರಿಗೆ ತಿಳಿ ಹೇಳಿದ ಪೊಲೀಸರ ಜೊತೆ ಗ್ರಾಮಸ್ಥರು ವಾಗ್ವಾದ ನಡೆಸಿ ಸಮವಸ್ತ್ರ ಹಿಡಿದು ಎಳೆದಾಡಿದ್ದಾರೆ. ಅಲ್ಲದೆ ಮುತ್ತಲಗೇರಿ ಗ್ರಾಮದ ಕುಟುಂಬಸ್ಥರು ಲಾಠಿ ಕಸಿದು ಪೊಲೀಸ್ ಮೇಲೆ ಹಲ್ಲೆ ಮಾಡಲು ಮುಂದಾಗಿದ್ದರು.
ಇದೀಗ 5 ಜನರ ಮೇಲೆ ಬಾದಾಮಿ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದ್ದು, ನಾಲ್ವರನ್ನ ವಶಕ್ಕೆ ಪಡೆದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
