Breaking News

ಬಾಗಲಕೋಟೆ: ಬಾವಿಗೆ ಬಿದ್ದು ವ್ಯಕ್ತಿ ದಾರುಣ ಸಾವು – ಗಿಡ ಕತ್ತರಿಸುವಾಗ ತಪ್ಪಿದ ಆಯ

Spread the love

ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನಲ್ಲಿ ದುರದೃಷ್ಟಕರ ಘಟನೆಯೊಂದು ನಡೆದಿದೆ. ಬಾವಿಯ ಪಕ್ಕದಲ್ಲಿದ್ದ ಗಿಡವನ್ನು ಕತ್ತರಿಸುತ್ತಿದ್ದ ವ್ಯಕ್ತಿಯೊಬ್ಬ ಆಯತಪ್ಪಿ ಬಾವಿಗೆ ಬಿದ್ದು ಮೃತಪಟ್ಟಿದ್ದಾರೆ. ಅಗ್ನಿಶಾಮಕ ದಳದವರು ಮೃತದೇಹವನ್ನು ಹೊರತೆಗೆದಿದ್ದು, ಸ್ಥಳದಲ್ಲಿ ಶೋಕದ ವಾತಾವರಣ ನಿರ್ಮಾಣವಾಗಿದೆ.

ಬಾದಾಮಿ ತಾಲೂಕಿನ ಮುಷ್ಠಿಗೇರಿ ಗ್ರಾಮದಲ್ಲಿ ಸೋಮಲಿಂಗಪ್ಪ ದ್ಯಾಮಣ್ಣವರ್ (50) ಎಂಬವರು ಬಾವಿಗೆ ಬಿದ್ದು ಸಾವನ್ನಪ್ಪಿದ ದುರ್ದೈವಿ. ಸೋಮಲಿಂಗಪ್ಪ ಅವರು ಆಳವಾದ ಬಾವಿಯ ಪಕ್ಕದಲ್ಲಿದ್ದ ಗಿಡವನ್ನು ಕತ್ತರಿಸಲು ಪ್ರಯತ್ನಿಸುತ್ತಿದ್ದಾಗ, ಆಯತಪ್ಪಿ ಬಾವಿಯೊಳಗೆ ಬಿದ್ದಿದ್ದಾರೆ ಎಂದು ಶಂಕಿಸಲಾಗಿದೆ. ವಿಷಯ ತಿಳಿದು ಕೂಡಲೇ ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ, ತೀವ್ರ ಕಾರ್ಯಾಚರಣೆ ನಡೆಸಿ ಮೃತದೇಹವನ್ನು ಹೊರತೆಗೆದರಾದರೂ, ಅಷ್ಟೊತ್ತಿಗಾಗಲೇ ಅವರು ಬಾವಿಯಲ್ಲಿಯೇ ಉಸಿರು ಚೆಲ್ಲಿದ್ದರು. ಮೃತದೇಹವನ್ನು ಶವಪರೀಕ್ಷೆಗಾಗಿ ಬಾದಾಮಿ ತಾಲೂಕು ಆಸ್ಪತ್ರೆಗೆ ರವಾನಿಸಲಾಗಿದ್ದು, ಈ ಸಂಬಂಧ ಕೆರೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ನಮ್ಮದು ಸಣ್ಣ ಪಕ್ಷ, ನಾವ್ಯಾಕೆ ಕಾಂಗ್ರೆಸ್ ಶಾಸಕರನ್ನ ಆಪರೇಷನ್ ಮಾಡೋಣ: ಹೆಚ್‌ಡಿಕೆ

Spread the loveಬೆಂಗಳೂರು: ನಮ್ಮದು ಸಣ್ಣ ಪಕ್ಷ ನಾವ್ಯಾಕೆ ಕಾಂಗ್ರೆಸ್  ಶಾಸಕರನ್ನ ಆಪರೇಷನ್ ಮಾಡೋಣ ಎಂದು ಕೇಂದ್ರ ಸಚಿವ ಕುಮಾರಸ್ವಾಮಿ  …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ