Breaking News

ಬೈಲಹೊಂಗಲ: ಶಬ್ದ ಮಾಲಿನ್ಯಕ್ಕೆ ಕಡಿವಾಣ — ಟ್ರ್ಯಾಕ್ಟರ್‌ಗಳ ಸೌಂಡ್ ಸಿಸ್ಟಮ್ ವಶ

Spread the love

ಬೈಲಹೊಂಗಲ ಪಟ್ಟಣದಲ್ಲಿ ಶಬ್ದ ಮಾಲಿನ್ಯ ನಿಯಂತ್ರಣಕ್ಕೆ ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ. ಟ್ರ್ಯಾಕ್ಟರ್‌ಗಳಲ್ಲಿ ಅನಧಿಕೃತವಾಗಿ ಸೌಂಡ್ ಸಿಸ್ಟಮ್ ಅಳವಡಿಸಿಕೊಂಡು ಭಾರೀ ಶಬ್ದ ಮಾಡುತ್ತಾ ಸಾರ್ವಜನಿಕರಿಗೆ ಹಾಗೂ ರಸ್ತೆ ಸವಾರರಿಗೆ ತೊಂದರೆ ಉಂಟು ಮಾಡುತ್ತಿದ್ದವರ ವಿರುದ್ಧ ಬೈಲಹೊಂಗಲ ಪೊಲೀಸ್ ಠಾಣೆಯವರು ಪ್ರಕರಣ ದಾಖಲಿಸಿದ್ದಾರೆ.

ಪರಿಶೀಲನೆ ವೇಳೆ ನಿಯಮ ಉಲ್ಲಂಘನೆ ಮಾಡುತ್ತಿರುವ ಟ್ರ್ಯಾಕ್ಟರ್‌ಗಳನ್ನು ಪತ್ತೆಹಚ್ಚಿ, ಅವುಗಳಲ್ಲಿ ಅಳವಡಿಸಿದ್ದ ಸೌಂಡ್ ಸಿಸ್ಟಮ್‌ಗಳನ್ನು ವಶಪಡಿಸಿಕೊಂಡಿದ್ದಾರೆ. ಶಬ್ದ ಮಾಲಿನ್ಯದಿಂದ ಜನರಿಗೆ ಆಗುವ ತೊಂದರೆಯನ್ನು ಮನಗಂಡು ಇಂತಹ ಕಾರ್ಯಾಚರಣೆ ಮುಂದುವರೆಯಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಾರ್ವಜನಿಕರು ಟ್ರಾಫಿಕ್ ನಿಯಮಗಳನ್ನು ಪಾಲಿಸಬೇಕು ಹಾಗೂ ಶಾಂತಿ-ಸುವ್ಯವಸ್ಥೆಗೆ ಧಕ್ಕೆ ಉಂಟುಮಾಡುವ ಚಟುವಟಿಕೆಗಳಿಂದ ದೂರವಿರಬೇಕು ಎಂದು ಪೊಲೀಸ್ ಇಲಾಖೆ ಮನವಿ ಮಾಡಿದೆ.


Spread the love

About Laxminews 24x7

Check Also

ಸಿಎಂ ಸ್ಥಾನ ಬದಲಾವಣೆ ಚರ್ಚೆ ಸಹಜ

Spread the loveಬೆಳಗಾವಿ : ಎಲ್ಲ ಸರ್ಕಾರದಲ್ಲೂ ಸಿಎಂ ಬದಲಾವಣೆ ಚರ್ಚೆಗಳಾಗಿವೆ. ಬಿಜೆಪಿ ಅವಧಿಯಲ್ಲಿ ಮುಖ್ಯಮಂತ್ರಿ ಬದಲಾವಣೆಯಾಗಿದೆ. ಎಲ್ಲ ಸರ್ಕಾರದಲ್ಲೂ ಸಿಎಂ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ