Breaking News
Home / ಜಿಲ್ಲೆ / ಬೆಳಗಾವಿ / ಗೋಕಾಕ / . ಚಿದಾನಂದ ಮೂರ್ತಿ ಅವರ ನಿಧನಕ್ಕೆ ಕರ್ನಾಟಕ ಹಾಲು ಮಹಾಮಂಡಳಿ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಸಂತಾಪ ಸೂಚಿಸಿದ್ದಾರೆ.

. ಚಿದಾನಂದ ಮೂರ್ತಿ ಅವರ ನಿಧನಕ್ಕೆ ಕರ್ನಾಟಕ ಹಾಲು ಮಹಾಮಂಡಳಿ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಸಂತಾಪ ಸೂಚಿಸಿದ್ದಾರೆ.

Spread the love

ಗೋಕಾಕ: ಕನ್ನಡ ಭಾಷೆಗೆ ಶಾಸ್ತ್ರೀಯ ಸ್ಥಾನಮಾನ ನೀಡುವಲ್ಲಿ ಶ್ರಮಿಸಿದ ನಾಡಿನ ಹಿರಿಯ ಸಂಶೋಧಕ, ಇತಿಹಾಸಕಾರ ಮತ್ತು ಕನ್ನಡಪರ ಹೋರಾಟಗಾರರಾಗಿದ್ದ ಡಾ. ಚಿದಾನಂದ ಮೂರ್ತಿ ಅವರ ನಿಧನಕ್ಕೆ ಕರ್ನಾಟಕ ಹಾಲು ಮಹಾಮಂಡಳಿ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಸಂತಾಪ ಸೂಚಿಸಿದ್ದಾರೆ.
ಸಂಶೋಧನಾ ಕ್ಷೇತ್ರದಲ್ಲಿ ವಿಶಿಷ್ಟ ಸೇವೆ ಸಲ್ಲಿಸಿ ಮಹತ್ತರ ಸಾಧನೆ ಮಾಡಿದ ಡಾ.ಚಿದಾನಂದ ಮೂರ್ತಿ ಅವರು ಬಸವಣ್ಣನವರ ಬಗ್ಗೆ ಹಲವು ಕೃತಿಗಳನ್ನು ರಚನೆ ಮಾಡಿದ್ದಾರೆ. ಜೊತೆಗೆ ಕನ್ನಡ ಶಾಸನಗಳ ಸಾಂಸ್ಕೃತಿಕ ಅಧ್ಯಯನ ನಡೆಸಿದ್ದಾರೆ. ಚಿಮೂ ನಿಧನದಿಂದ ಕನ್ನಡ ನಾಡಿಗೆ ಅಪಾರ ಹಾನಿಯಾಗಿದೆ. ಮೃತರ ಕುಟುಂಬದಲ್ಲಾದ ದುಃಖದಲ್ಲಿ ನಾವು ಸಹಭಾಗಿಯಾಗಿ ಚಿಮೂ ಅವರ ಆತ್ಮಕ್ಕೆ ಚಿರಶಾಂತಿ ನೀಡಲೆಂದು ಭಗವಂತನಲ್ಲಿ ಪ್ರಾರ್ಥಿಸುವುದಾಗಿ ಶಾಸಕ ಮತ್ತು ಮಾಜಿ ಸಚಿವ ಬಾಲಚಂದ್ರ ಜಾರಕಿಹೊಳಿ ಅವರು ತಮ್ಮ ಸಂತಾಪ ಸೂಚಕದಲ್ಲಿ ತಿಳಿಸಿದ್ದಾರೆ.


Spread the love

About Laxminews 24x7

Check Also

ಹಲ್ಲೆಗೊಳಗಾದ ಬಿಜೆಪಿ ಮುಖಂಡನ ಆರೋಗ್ಯ ವಿಚಾರಿಸಿದ ವಿಜಯೇಂದ್ರ; ಆರೋಪಿಗಳನ್ನು ಬಂಧಿಸುವಂತೆ ಆಗ್ರಹ

Spread the loveಬೆಳಗಾವಿ : ಬಿಜೆಪಿ ಮುಖಂಡನ ಮೇಲೆ ಹಲ್ಲೆ ನಡೆಸಿದ ಪ್ರಕರಣದಲ್ಲಿ ಇಂದು ರಾತ್ರಿಯೇ ಎಂಎಲ್ಸಿ ಚನ್ನರಾಜ ಹಟ್ಟಿಹೊಳಿ ಸೇರಿದಂತೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ