Breaking News

ದೂರವಾಣಿ ಮೂಲಕ ಗೋಕಾಕ ಹಾಗೂ ಮೂಡಲಗಿ ತಾಲೂಕಿನ ಟಾಸ್ಕ್‍ಪೋರ್ಸ್ ಸಭೆ ನಡೆಸಿದ ಬಾಲಚಂದ್ರ ಜಾರಕಿಹೊಳಿ.

Spread the love

ಗೋಕಾಕ: ಕೊವಿಡ್ ಸೋಂಕಿತರ ಅನುಕೂಲಕ್ಕಾಗಿ ಗೋಕಾಕ ತಾಲೂಕಿಗೆ ಆಕ್ಸಿಜನ್ ಪ್ಲಾಂಟ್ ಮಂಜೂರಾಗಿದ್ದು, ಇದರಿಂದ ಗೋಕಾಕ ಹಾಗೂ ಮೂಡಲಗಿ ತಾಲೂಕಿನ ಸೋಂಕಿತರಿಗೆ ತ್ವರಿತಗತಿಯಲ್ಲಿ ಸೌಲಭ್ಯ ಸಿಗಲಿದೆ ಎಂದು ಕಹಾಮ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು.
ಇಲ್ಲಿಯ ಎನ್.ಎಸ್.ಎಫ್. ಅತಿಥಿ ಗೃಹದ ಆವರಣದಲ್ಲಿ ಕೋವಿಡ್ ಸಂಬಂಧ ಗೋಕಾಕ್ ಮತ್ತು ಮೂಡಲಗಿ ತಾಲೂಕುಗಳ ಟಾಸ್ಕ್‍ಫೆÇೀರ್ಸ್ ಸಭೆಯನ್ನು ದೂರವಾಣಿ ಮೂಲಕ ನಡೆಸಿದ ಅವರು, ಕೊರೋನಾ ನಿಯಂತ್ರಣಕ್ಕೆ ಎಲ್ಲರೂ ಶ್ರಮಿಸಬೇಕು. ಕೊರೋನಾ ಹರಡದಂತೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಬೇಕೆಂದು ಅವರು ಹೇಳಿದರು.
ಬಹುತೇಕ ಸೋಂಕಿತರಿಗೆ ಆಕ್ಸಿಜನ್ ಕೊರತೆ ಎದುರಾಗುತ್ತಿದೆ. ಇದನ್ನು ಸಮರ್ಥವಾಗಿ ಎದುರಿಸಲು ಈಗಾಗಲೇ ಗೋಕಾಕ ಸಾರ್ವಜನಿಕ ಆಸ್ಪತ್ರೆ, ಮಲ್ಲಾಪುರ ಪಿ.ಜಿಯ ಮೋರಾರ್ಜಿ ದೇಸಾಯಿ ವಸತಿ ಶಾಲೆ ಮತ್ತು ಮೂಡಲಗಿಯ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಆಕ್ಸಿಜನ್ ಬೆಡ್‍ಗಳ ವ್ಯವಸ್ಥೆ ಮಾಡಿರುವುದಾಗಿ ಅವರು ಹೇಳಿದರು. ಜೊತೆಗೆ ಈ ಮೂರು ಕೊವಿಡ್ ಆಸ್ಪತ್ರೆಗಳಲ್ಲಿ ಸೋಂಕಿತರಿಗೆ ರಾಮಬಾಣವಾಗಿರುವ ರೆಮ್‍ಡೆಸಿವರ್ ಕೂಡ ಅಗತ್ಯವಿರುವಷ್ಟು ಲಭ್ಯ ಇವೆ. ಸೋಂಕಿತರಿಗೆ ಸದಾ ಕಾಲವೂ ಆಕ್ಸಿಜನ್ ಕೊರತೆ ಎದುರಾಗದಂತೆ ಅಧಿಕಾರಿಗಳು ನೋಡಿಕೊಳ್ಳಬೇಕು. ಸೋಂಕಿತರ ಆರೈಕೆಯಲ್ಲಿ ಯಾವುದೇ ಲೋಪವಾಗಬಾರದು ಎಂದು ಅವರು ತಿಳಿಸಿದರು.
ಕೋವಿಡ್ ಲಕ್ಷಣಗಳು ಕಂಡು ಬಂದಲ್ಲಿ ತಕ್ಷಣವೇ ವೈದ್ಯರನ್ನು ಭೆಟ್ಟಿಯಾಗಿ ಚಿಕಿತ್ಸೆ ಪಡೆದುಕೊಳ್ಳಬೇಕು. ಅಗತ್ಯವಿದ್ದರμÉ್ಟೀ ಮಾತ್ರ ಅಸ್ಪತ್ರೆಗಳಿಗೆ ದಾಖಲಾಗಬೇಕು. ರೋಗ ಲಕ್ಷಣಗಳು ಕಂಡು ಬಂದಿದ್ದರೂ ಅಂಥವರು ವಿಳಂಬವಾಗಿ ಆಸ್ಪತ್ರೆಗಳಿಗೆ ದಾಖಲಾಗುತ್ತಿದ್ದಾರೆ. ಇದರಿಂದಾಗಿಯೇ ಜೀವಹಾನಿಗಳು ಸಂಭವಿಸುತ್ತಿವೆ ಎಂದು ಹೇಳಿದರು.
ಕೋವಿಡ್ ಲಸಿಕೆಗಳನ್ನು ಇದುವರೆಗೆ ಉಭಯ ತಾಲೂಕಿನಲ್ಲಿ ಕೇವಲ ಶೇ. 38 ರಷ್ಟು ಜನರು ಹಾಕಿಸಿಕೊಂಡಿದ್ದಾರೆ. ಶೇ. 100 ರಷ್ಟು ಜನರು ಈ ಲಸಿಕೆಗಳನ್ನು ಹಾಕಿಸಿಕೊಳ್ಳಬೇಕು. ಸ್ಥಳೀಯ ಗ್ರಾಮ, ಪಟ್ಟಣ, ಪುರಸಭೆಯ ವ್ಯಾಪ್ತಿ ಮಟ್ಟದಲ್ಲಿ ಸಾರ್ವಜನಿಕರಿಗೆ ಈ ಬಗ್ಗೆ ತಿಳುವಳಿಕೆ ಮೂಡಿಸಲು ಅಧಿಕಾರಿಗಳು ಯತ್ನಿಸಬೇಕು. ಮಹಾಮಾರಿ ಕೊರೋನಾ ಎರಡನೇ ಅಲೆಯನ್ನು ತಡೆಯಲಿಕ್ಕೆ ಜಾಗೃತಿ ಅಭಿಯಾನವನ್ನು ಯಶಸ್ವಿಯಾಗಿ ಮುಂದುವರೆಸಿಕೊಂಡು ಹೋಗುವಂತೆ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ಗೋಕಾಕ್ ತಹಶೀಲ್ದಾರ ನವೀನ ಹುಲ್ಲೂರ, ಮೂಡಲಗಿ ತಹಶೀಲ್ದಾರ ಡಾ. ಮೋಹನ ಭಸ್ಮೆ, ಗೋಕಾಕ ಡಿವೈಎಸ್ಪಿ ಜಾವೇದ ಇನಾಂದಾರ, ತಾಲೂಕಾ ವೈದ್ಯಾಧಿಕಾರಿ ಡಾ. ಮುತ್ತಣ್ಣಾ ಕೊಪ್ಪದ, ಗೋಕಾಕ ಸರಕಾರಿ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಡಾ. ರವೀಂದ್ರ ಆಂಟಿನ್, ಹಿರಿಯ ವೈದ್ಯ ಡಾ. ಆರ್.ಎಸ್. ಬೆಣಚಿನಮರ್ಡಿ, ಗೋಕಾಕ ನಗರಸಭೆ ಪೌರಾಯುಕ್ತ ಶಿವಾನಂದ ಹಿರೇಮಠ, ಮೂಡಲಗಿ ಬಿಇಓ ಅಜೀತ ಮನ್ನಿಕೇರಿ, ಸಿಪಿಐಗಳಾದ ಗೋಪಾಲ ರಾಠೋಡ, ಶ್ರೀಶೈಲ ಬ್ಯಾಕೋಡ, ಸತೀಶ ಕಣ್ವೆಶ್ವರ, ಶಾಸಕರ ಆಪ್ತ ಸಹಾಯಕ ನಾಗಪ್ಪ ಶೇಖರಗೋಳ, ಸಿಡಿಪಿಓ ವೈ. ಎಂ. ಗುಜನಟ್ಟಿ, ಬಿಸಿಎಂ ಅಧಿಕಾರಿ ಆರ್. ಕೆ. ಬಿಸಿರೊಟ್ಟಿ ಸೇರಿದಂತೆ ಹಲವು ತಾಲೂಕಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.


Spread the love

About Laxminews 24x7

Check Also

ಭಕ್ತಾದಿಗಳಿಗೆ ಮೂಲಭೂತ ಸೌಕರ್ಯ ಒದಗಿಸಿ ; ಕೊಲ್ಲಾಪುರ ಜಿಲ್ಲಾ ರೇಣುಕಾ ಭಕ್ತ ಸಂಘಟನೆಯ ಆಗ್ರಹ

Spread the loveಭಕ್ತಾದಿಗಳಿಗೆ ಮೂಲಭೂತ ಸೌಕರ್ಯ ಒದಗಿಸಿ ; ಕೊಲ್ಲಾಪುರ ಜಿಲ್ಲಾ ರೇಣುಕಾ ಭಕ್ತ ಸಂಘಟನೆಯ ಆಗ್ರಹ ಇಂದು ಬೆಳಗಾವಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ