Breaking News
Home / new delhi / ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಪ್ರಯತ್ನದಿಂದ ಅವರಾದಿ-ತಿಮ್ಮಾಪೂರ ರಸ್ತೆ ಅಭಿವೃದ್ಧಿಗೆ 18 ಕೋಟಿ ರೂ ಅನುದಾನ ಮಂಜೂರು 

ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಪ್ರಯತ್ನದಿಂದ ಅವರಾದಿ-ತಿಮ್ಮಾಪೂರ ರಸ್ತೆ ಅಭಿವೃದ್ಧಿಗೆ 18 ಕೋಟಿ ರೂ ಅನುದಾನ ಮಂಜೂರು 

Spread the love

*ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಪ್ರಯತ್ನದಿಂದ ಅವರಾದಿ-ತಿಮ್ಮಾಪೂರ ರಸ್ತೆ ಅಭಿವೃದ್ಧಿಗೆ 18 ಕೋಟಿ ರೂ ಅನುದಾನ ಮಂಜೂರು

 

ಮೂಡಲಗಿ  ತಾಲೂಕಿನ ಅವರಾದಿ ಗ್ರಾಮದಲ್ಲಿ ಲೋಕೋಪಯೋಗಿ ಇಲಾಖೆಯಿಂದ ಮಂಜೂರಾದ 18 ಕೋಟಿ ರೂ ವೆಚ್ಚದ ಅವರಾದಿ-ತಿಮ್ಮಾಪೂರ ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ಈ ರಸ್ತೆ ಕಾಮಗಾರಿಯಿಂದ ಅವರಾದಿಯಿಂದ ಹಳೇಯರಗುದ್ರಿ, ಹೊಸಯರಗುದ್ರಿ ಮೂಲಕ ತಿಮ್ಮಾಪೂರ ರಸ್ತೆ ಅಭಿವೃದ್ಧಿಯಾಗಲಿದೆ ಎಂದು ಅವರು ಹೇಳಿದರು.

ಶಾಸಕ ಹಾಗೂ ನಮ್ಮೆಲ್ಲರ ನೆಚ್ಚಿನ ನಾಯಕರಾಗಿರುವ ಬಾಲಚಂದ್ರ ಜಾರಕಿಹೊಳಿ ಅವರು ಇಷ್ಟು ದೊಡ್ಡಮೊತ್ತದ ಕಾಮಗಾರಿಯನ್ನು ನೆರವೇರಿಸಲು ಅವಕಾಶ ಮಾಡಿಕೊಟ್ಟಿದ್ದಾರೆ. 18 ಕೋಟಿ ರೂ. ಮೊತ್ತದ ರಸ್ತೆ ಕಾಮಗಾರಿಯನ್ನು ನನ್ನಿಂದ ನೆರವೇರಿಸಲು ಅನುವು ಮಾಡಿಕೊಟ್ಟ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರಿಗೆ ಸದಾ ಋಣಿಯಾಗಿರುವುದಾಗಿ ಸವಿತಾ ನಾಯಿಕ ಇದೇ ಸಂದರ್ಭದಲ್ಲಿ ತಿಳಿಸಿದರು.

ಅವರಾದಿಯಿಂದ ತಿಮ್ಮಾಪೂರವರೆಗಿನ 10 ಕಿ.ಮೀ ರಸ್ತೆಯು ಹದಗೆಟ್ಟಿದ್ದರಿಂದ ಸಾರ್ವಜನಿಕ ಸಂಚಾರಕ್ಕೆ ಅಡಚಣೆಯಾಗಿತ್ತು. ಈ ವಿಷಯವನ್ನು ಬಾಲಚಂದ್ರ ಜಾರಕಿಹೊಳಿ ಅವರ ಗಮನಕ್ಕೆ ಅವರಾದಿ ಹಾಗೂ ಸುತ್ತಮುತ್ತಲಿನ ಮುಖಂಡರುಗಳು ತಂದಾಗ ಲೋಕೋಪಯೋಗಿ ಇಲಾಖೆಯಿಂದ ಈ ಕಾಮಗಾರಿಗೆ ಅನುದಾನ ನೀಡಿದರು. ರಸ್ತೆ ಕಾಮಗಾರಿ ಗುಣಮಟ್ಟದಿಂದ ನಡೆಯಬೇಕು ಎಂದು ಅಧಿಕಾರಿಗಳಿಗೆ ಶಾಸಕರು ಸೂಚನೆ ನೀಡಿದ್ದಾರೆಂದು ಅವರು ತಿಳಿಸಿದರು.

ಈ ಸಂದರ್ಭದಲ್ಲಿ ಗ್ರಾಪಂ ಮಾಜಿ ಅಧ್ಯಕ್ಷ ಎಂ.ಎಂ. ಪಾಟೀಲ, ಜಿಪಂ ಮಾಜಿ ಸದಸ್ಯ ಗೋವಿಂದ ಕೊಪ್ಪದ, ನಿಂಗಪ್ಪಗೌಡ ನಾಡಗೌಡ, ಗ್ರಾಪಂ ಉಪಾಧ್ಯಕ್ಷ ಸಂಜುಗೌಡ ಪಾಟೀಲ, ನ್ಯಾಯವಾದಿ ಮಲ್ಲನಗೌಡ ಪಾಟೀಲ, ಕಲ್ಲಪ್ಪ ರಂಜಣಗಿ, ಶ್ರೀಶೈಲ ಭಜಂತ್ರಿ, ಮಾರುತಿ ಹರಿಜನ, ಪ್ರಭಾಶುಗರ ನಿರ್ದೇಶಕ ಗಿರೀಶ ಹಳ್ಳೂರ, ಸಿದ್ಧಾರೂಢ ಮಬನೂರ, ಎಚ್.ಎಸ್. ಪಾಟೀಲ, ಅರ್ಜುನಗೌಡ ಪಾಟೀಲ, ತಮ್ಮಾಣೆಪ್ಪ ಬಿ.ಪಾಟೀಲ, ರಾಮಣ್ಣಾ ಕಾಳಶೆಟ್ಟಿ, ಶಂಕರ ಹವಳೆಪ್ಪಗೋಳ, ಹನಮಂತಗೌಡ ಚನ್ನಾಳ, ಭೀಮಶಿ ಬಿ.ಪಾಟೀಲ, ಸಂಗಪ್ಪ ಕಂಟಿಕಾರ, ಹನಮಂತ ಡೊಂಬರ, ಚತ್ರಪ್ಪ ಮೇತ್ರಿ, ಪಿಡಿಓ ಶಿವಲೀಲಾ ದಳವಾಯಿ, ಗುತ್ತಿಗೆದಾರ ಸುಧಾಕರ ಶೆಟ್ಟಿ ಸೇರಿದಂತೆ ಅವರಾದಿ, ಹಳೇಯರಗುದ್ರಿ, ಹೊಸಯರಗುದ್ರಿ ಮತ್ತು ತಿಮ್ಮಾಪೂರ ಗ್ರಾಮಗಳ ಮುಖಂಡರು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

 


Spread the love

About Laxminews 24x7

Check Also

ನೇಹಾ ಕೊಲೆ ಪ್ರಕರಣದ ಆರೋಪಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಆಗ್ರಹಿಸಿ ಮುಸ್ಲಿಂ ಸಮುದಾಯದಿಂದ ಪ್ರತಿಭಟನೆ

Spread the loveಹುಬ್ಬಳ್ಳಿ : ಕಾಂಗ್ರೆಸ್ ಕಾರ್ಪೊರೇಟರ್ ಪುತ್ರಿ ನೇಹಾ ಹಿರೇಮಠ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತನಾಗಿರುವ ಆರೋಪಿ ಫಯಾಝ್‌ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ