ಪೌರತ್ವ ತಿದ್ದುಪಡಿ ಕಾಯ್ದೆ ಅಲ್ಪಸಂಖ್ಯಾತರ ವಿರುದ್ಧವಲ್ಲ:ಕೆಎಮ್‍ಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ
ಅಲ್ಪಸಂಖ್ಯಾತರ ಸಂಕಷ್ಟಗಳ ಪರಿಹಾರಕ್ಕಾಗಿ ಪೌರತ್ವ ತಿದ್ದುಪಡಿ ವಿಧೇಯಕ ಅನುಷ್ಠಾನ/ ದೇಶದ ಸಮಗ್ರ ಹಿತ ದೃಷ್ಠಿಯಿಂದ ಈ ವಿಧೇಯಕವನ್ನು ಭಾರತೀಯರೆಲ್ಲರೂ ಒಪ್ಪಿಕೊಳ್ಳಬೇಕಾಗಿದೆ/“ಪೌರತ್ವ
ತಿದ್ದುಪಡಿ ಕಾಯ್ದೆ”ಯ ಅಭಿಯಾನದಲ್ಲಿ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿಕೆ
ಪೌರತ್ವ ತಿದ್ದುಪಡಿ ಕಾಯ್ದೆ ಬಗ್ಗೆ ಜನಜಾಗೃತಿ ಮೂಡಿಸಬೇಕಿದೆ,ಈ ದಿಸೆಯಲ್ಲಿ ಪ್ರತಿ ಮನೆ ಮನೆಗೆ ಹೋಗಿ ಜನರಲ್ಲಿ ಪೌರತ್ವ ಬಗ್ಗೆತಿಳುವಳಿಕೆ ಮೂಡಿಸಬೇಕು, ದೇಶದ ಹಿತದೃಷ್ಠಿಯಿಂದ ಕೇಂದ್ರ ಸರಕಾರ ಪೌರತ್ವ ತಿದ್ದುಪಡಿ ವಿಧೇಯಕವನ್ನು ಜಾರಿಗೆ ತಂದಿರುವದು ಒಳ್ಳೆಯ ಬೆಳವಣಿಗೆಯಾಗಿದೆ ಎಂದು ಕೆಎಮ್‍ಎಫ್ ಅಧ್ಯಕ್ಷ ಹಾಗೂಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು.
ಮಂಗಳವಾರ ದಂದು ಇಲ್ಲಿಯ ಶಿವಬೋಧರಂಗ ಸೋಸೈಟಿಯ ಸಭಾ ಭವನದಲ್ಲಿ ಅರಭಾವಿ ಮಂಡಲ ಬಿಜೆಪಿಯಿಂದ ಹಮ್ಮಿಕೊಳ್ಳಲಾಗಿದ್ದ “ಪೌರತ್ವ
ತಿದ್ದುಪಡಿ ಕಾಯ್ದೆ”ಯ ಅಭಿಯಾನದಲ್ಲಿ ಪಾಲ್ಗೊಂಡು ಮಾತನಾಡಿದ ಅವರು ಈ ಕಾಯ್ದೆ ಜಾರಿಯಿಂದ ಅಲ್ಪಸಂಖ್ಯಾತರಿಗೆ ಯಾವುದೇ ತೊಂದರೆಯಿಲ್ಲವೆಂದು ಸ್ಪಷ್ಟಪಡಿಸಿದರು.ರಾಷ್ಟ್ರೀಯ ಹಿತಾಸಕ್ತಿಯ ವಿಷಯಗಳನ್ನು ಜನರ ಮುಂದಿಟ್ಟುಕೊಂಡು ಸಂಪೂರ್ಣ ಬಹುಮತದೊಂದಿಗೆ ಅಧಿಕಾರಕ್ಕೆ ಬಂದಿರುವ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರಕಾರ ಇಡಿ
ದೇಶದ ಎಲ್ಲ ಜನರ ಹಿತಕ್ಕನುಗುಣವಾಗಿ ಹಲವಾರು ಕಲ್ಯಾಣ ಪರ ಯೋಜನೆಗಳನ್ನು ಹಾಕಿಕೊಂಡಿದೆ. ನೆರೆ ರಾಷ್ಟ್ರಗಳಲ್ಲಿನ ಕಿರುಕುಳ ಅನುಭವಿಸಿ ನಿರಾಶ್ರಿತರಾಗಿ ಬಂದ ಅಲ್ಪಸಂಖ್ಯಾತರ ಸಂಕಷ್ಟಗಳ ಪರಿಹಾರಕ್ಕಾಗಿ ಕೇಂದ್ರ ಗೃಹ ಸಚಿವ ಅಮಿತ ಶಾ ಅವರ ಸಾರಥ್ಯದಲ್ಲಿ ಪೌರತ್ವ ತಿದ್ದುಪಡಿ ವಿಧೇಯಕವನ್ನು ಅನುಷ್ಠಾನ ಮಾಡಲಾಗಿದೆ. ದೇಶದ ಸಮಗ್ರ ಹಿತ ದೃಷ್ಠಿಯಿಂದ ಈ ವಿಧೇಯಕವನ್ನು ಭಾರತೀಯರೆಲ್ಲರೂ ಒಪ್ಪಿಕೊಳ್ಳಬೇಕಾಗಿದೆ. ಇದು ಅಲ್ಪಸಂಖ್ಯಾತರ ವಿರುದ್ಧವಲ್ಲ.ಅವರ ಸುರಕ್ಷತೆಗಾಗಿ ಇದನ್ನು ಜಾರಿಗೆ ತಂದಿದ್ದಾರೆ. ಇದರಲ್ಲಿ ವಿರೋಧ ಪಕ್ಷಗಳು ಅಲ್ಪಸಂಖ್ಯಾತರ ಹೆಸರಿನಲ್ಲಿ ರಾಜಕೀಯ ಮಾಡುತ್ತಾ
ಅಲ್ಪಸಂಖ್ಯಾತ ಸಮುದಾಯವನ್ನು ದಿಕ್ಕು ತಪ್ಪಿಸುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಹೇಳಿದರು.
ನಮ್ಮ ದೇಶದ ಗಡಿಗಳನ್ನು ರಕ್ಷಿಸುವುದು ಹಾಗೂ
ಒಳನುಸುಳುವಿಕೆಯನ್ನು ನಿಲ್ಲಿಸುವುದು ಪ್ರತಿಯೊಬ್ಬರ ಆದ್ಯ ಕರ್ತವ್ಯವಾಗಿದೆ. ದೇಶದೊಳಗೆ ಬಂದವರಿಗೆಲ್ಲ ಪೌರತ್ವ ನೀಡುವುದು ಸಾಧ್ಯವಿಲ್ಲವೆಂದು ಅವರು ಹೇಳಿದರು.
ನ್ಯಾಯವಾದಿ ಅರುಣ ಕುಲಕರ್ಣಿ ಮಾತನಾಡಿ ಈ ವಿಧೇಯಕದಿಂದಾಗಿ ದೇಶದಲ್ಲಿ ಮಹತ್ತರ ಬದಲಾವಣೆಯಾಗುತ್ತಿದೆ, ಇದರಿಂದ ಮುಸ್ಲಿಂರ
ನಾಗರಿಕತ್ವಕ್ಕೆ ಯಾವುದೇ ಧಕ್ಕೆಯಾಗುವದಿಲ್ಲ ಆದರೆ ಇದನ್ನೇ ಕಾಂಗ್ರೇಸ್ ಮತ್ತು ಅದರ ಮಿತ್ರಪಕ್ಷಗಳು ಅಸ್ತ್ರವನ್ನಾಗಿ ಬಳಸಿ ಮುಸ್ಲಿಂರನ್ನು ಎತ್ತಿಕಟ್ಟುವ ಕೆಲಸ ಮಾಡುತ್ತಿರುವುದನ್ನು ಟೀಕಿಸಿದರು. ಪಾಕಿಸ್ತಾನ, ಆಪಘಾನಿಸ್ತಾನ ಮತ್ತು ಬಾಂಗ್ಲಾದೇಶಗಳಲ್ಲಿ ಧಾರ್ಮಿಕ
ಅಲ್ಪಸಂಖ್ಯಾತರು ಎಂಬ ಕಾರಣಕ್ಕಾಗಿ ಶೋಷಣೆಗೊಳಗಾಗಿ ಭಾರತದಲ್ಲಿ ನಿರಾಶ್ರಿತರಾಗಿ ನಿಂತಿರುವ 2014 ಕ್ಕಿಂತ ಮೊದಲು ಭಾರತಕ್ಕೆ ಪ್ರವೇಶಿಸಿದ
ಹಿಂದು, ಭೌದ್ಧ, ಪಾರ್ಶಿ, ಸಿಖ್ಖ, ಜೈನ್, ಕ್ರ್ತೈಸ್ತರಿಗೆ ಪೌರತ್ವವನ್ನು ನೀಡಲಾಗುತ್ತಿದೆ ಎಂದರು.
ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಗುರುಪಾದ ಕಳ್ಳಿ, ಜಿ.ಪಂ ಸದಸ್ಯ ಗೋವಿಂದ ಕೊಪ್ಪದ, ಅರಭಾವಿ ಬಿಜೆಪಿ ಮಂಡಲ ಅಧ್ಯಕ್ಷ ಮಹಾದೇವ ಶೆಕ್ಕಿ, ಸುಭಾಸ ಪಾಟೀಲ ಮತ್ತಿತರರು ವೇದಿಕೆಯಲ್ಲಿದ್ದರು.