Breaking News

ಅರಭಾವಿ ಕ್ಷೇತ್ರದ ರಸ್ತೆಗಳು ಹಾಗೂ ದೇವಸ್ಥಾನಗಳ ಅಭಿವೃದ್ಧಿಗೆ 52 ಕೋಟಿ ರೂ. ಅನುದಾನ ಬಿಡುಗಡೆ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

Spread the love

 

ಗೋಕಾಕ : ಅರಭಾವಿ ಮತಕ್ಷೇತ್ರದ ರಸ್ತೆಗಳ ಅಭಿವೃದ್ಧಿಗಾಗಿ 50 ಕೋಟಿ ರೂ. ಹಾಗೂ ದೇವಸ್ಥಾನಗಳ ಜೀರ್ಣೋದ್ಧಾರಕ್ಕಾಗಿ 2 ಕೋಟಿ ರೂ.ಗಳು ಸೇರಿ ಒಟ್ಟು 52 ಕೋಟಿ ರೂ. ಅನುದಾನ ಬಿಡುಗಡೆಯಾಗಿದೆ ಎಂದು ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದ್ದಾರೆ.

ಕ್ಷೇತ್ರದಲ್ಲಿರುವ ರಸ್ತೆಗಳ ಸುಧಾರಣೆಗಾಗಿ ಲೋಕೋಪಯೋಗಿ ಇಲಾಖೆಯ ಒಟ್ಟು 34.53 ಕಿ.ಮೀ ರಸ್ತೆಗಳ ಸುಧಾರಣೆಗಾಗಿ 32 ಕೋಟಿ ರೂ. ಮತ್ತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ ರಾಜ್ ಇಲಾಖೆಯ 35.30 ಕಿ.ಮೀ ರಸ್ತೆ ಸುಧಾರಣೆಗಾಗಿ 18 ಕೋಟಿ ರೂ. ಅನುದಾನ ಬಿಡುಗಡೆಗೊಂಡಿದೆ. ಹಾಗೂ ಕ್ಷೇತ್ರದಲ್ಲಿರುವ 22 ದೇವಸ್ಥಾನಗಳ ಜೀರ್ಣೋದ್ಧಾರಕ್ಕಾಗಿ ಮುಜರಾಯಿ ಇಲಾಖೆಯಿಂದ 2 ಕೋಟಿ ರೂ. ಅನುದಾನ ಬಿಡುಗಡೆಯಾಗಿದೆ ಎಂದು ಬಾಲಚಂದ್ರ ಜಾರಕಿಹೊಳಿ ಹೇಳಿದ್ದಾರೆ.

ಅರಭಾವಿ ಮತಕ್ಷೇತ್ರದ ರಸ್ತೆಗಳ ಅಭಿವೃದ್ಧಿಗಾಗಿ ಮತ್ತು ದೇವಸ್ಥಾನಗಳ ಜೀರ್ಣೋದ್ಧಾರಕ್ಕಾಗಿ ಒಟ್ಟು 52 ಕೋಟಿ ರೂ.ಗಳ ವಿಶೇಷ ಅನುದಾನ ನೀಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಕೃತಜ್ಞತೆ ಸಲ್ಲಿಸಿದ್ದಾರೆ.

ಸಿಎಂ ಬೊಮ್ಮಾಯಿ ಅವರಿಗೆ ಶುಭಾಷಯ : 62ನೇ ಹುಟ್ಟುಹಬ್ಬದ ಸಂಭ್ರಮದಲ್ಲಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ದೂರವಾಣಿ ಮೂಲಕ ಶುಭಾಷಯ ಕೋರಿದ್ದಾರೆ.

 


Spread the love

About Laxminews 24x7

Check Also

ಶಿಕ್ಷಿಸುವುದಕ್ಕಿಂತ ಸರಿಯಾದ ದಾರಿಗೆ ತರೋದೇ ನಮ್ಮ ಧರ್ಮ: ನಿಂದಿಸಿದ ಮಕ್ಕಳನ್ನು ಕ್ಷಮಿಸಿದ ಮೋದಿ

Spread the loveನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಘಟನೆ ಮತ್ತು ತಮ್ಮ ಹಾಗೂ ತಮ್ಮ ದಿವಂಗತ ತಾಯಿಯವರ ವಿರುದ್ಧ ವ್ಯಕ್ತವಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ