Breaking News
Home / new delhi / ನೆರೆ ಪ್ರವಾಹ ಸಂಬಂಧ ಪೂರ್ವಭಾವಿಯಾಗಿ ಅಧಿಕಾರಿಗಳ ಸಭೆ ನಡೆಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ.

ನೆರೆ ಪ್ರವಾಹ ಸಂಬಂಧ ಪೂರ್ವಭಾವಿಯಾಗಿ ಅಧಿಕಾರಿಗಳ ಸಭೆ ನಡೆಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ.

Spread the love

 

ಗೋಕಾಕ : ನೆರೆಯ ಮಹಾರಾಷ್ಟ್ರ ಹಾಗೂ ಕಳೆದ ಒಂದು ವಾರದಿಂದ ವ್ಯಾಪಕವಾಗಿ ಮಳೆ ಸುರಿಯುತ್ತಿದೆ. ಪ್ರಸಕ್ತ ಸ್ಥಿತಿಯಲ್ಲಿ ಪ್ರವಾಹ ಭೀತಿ ಎದುರಾಗಿಲ್ಲ. ಆದರೂ ನದಿ ತೀರದ ಗ್ರಾಮಗಳ ಜನರ ಸುರಕ್ಷತೆಗಾಗಿ ಮುಂಜಾಗ್ರತೆ ಕ್ರಮಗಳನ್ನು ಕೈಗೊಳ್ಳುವಂತೆ ಅರಭಾವಿ ಶಾಸಕ ಮತ್ತು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಶುಕ್ರವಾರ ಸಂಜೆ ತಮ್ಮ ಗೃಹ ಕಛೇರಿಯಲ್ಲಿ ನೆರೆ ಪ್ರವಾಹ ಸಂಬಂಧ ನಡೆದ ಅಧಿಕಾರಿಗಳ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಪ್ರವಾಹ ಭೀತಿ ಎದುರಿಸಲು ತಾಲೂಕಾ ಆಡಳಿತ ಸೂಕ್ತ ಕ್ರಮಗಳನ್ನು ಈಗಿಂದಲೇ ತೆಗೆದುಕೊಳ್ಳುವಂತೆ ಸೂಚನೆ ನೀಡಿದರು.

 

ಮಹಾರಾಷ್ಟ್ರ ಹಾಗೂ ಜಿಲ್ಲೆಯಲ್ಲಿ ನಿರಂತರವಾಗಿ ಮಳೆಯಾಗುತ್ತಲೇ ಇದೆ. ಇದರಿಂದ ಹಿರಣ್ಯಕೇಶಿ, ಮಾರ್ಕಂಡೆಯ ನದಿಗಳು ಮತ್ತು ಬಳ್ಳಾರಿ ನಾಲಾದಿಂದ ಅಪಾರ ಪ್ರಮಾಣದಲ್ಲಿ ಘಟಪ್ರಭಾ ನದಿಗೆ ನೀರು ಬರುತ್ತಿದೆ. ಘಟಪ್ರಭಾ ನದಿ ತೀರದ ಜನರಲ್ಲಿ ಪ್ರವಾಹ ಭೀತಿ ಎದುರಾಗುತ್ತಿದ್ದರೂ ನಮ್ಮ ಅವಳಿ ತಾಲೂಕುಗಳಿಗೂ ಸಮಸ್ಯೆ ಎದುರಾಗಬಹುದು. ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಅಧಿಕಾರಿಗಳು ಕರ್ತವ್ಯ ನಿರ್ವಹಿಸಬೇಕು. ನದಿ ತೀರದ ಸಾರ್ವಜನಿಕರ ಸುರಕ್ಷತೆಗಾಗಿ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಬೇಕೆಂದು ಅವರು ಸೂಚಿಸಿದರು.

ನಿರಂತರ ಮಳೆಯಿಂದಾಗಿ ಶನಿವಾರದ ಮಾಹಿತಿ ಪ್ರಕಾರ ಹಿರಣ್ಯಕೇಶಿ ನದಿಗೆ 20946 ಕ್ಯೂಸೆಕ್ಸ್, ಮಾರ್ಕಂಡೇಯ ನದಿಗೆ 3110 ಕ್ಯೂಸೆಕ್ಸ್, ಬಳ್ಳಾರಿ ನಾಲಾ 3500 ಕ್ಯೂಸೆಕ್ಸ್ ನೀರು ಘಟಪ್ರಭಾ ನದಿಗೆ ಹರಿದು ಬರುತ್ತಿದೆ. ಹಿಡಕಲ್ ಜಲಾಶಯದಲ್ಲಿ 11.45 ಟಿಎಂಸಿ ನೀರು ಸಂಗ್ರಹವಿದ್ದು, ಜಲಾಶಯಕ್ಕೆ 39515 ಕ್ಯೂಸೆಕ್ಸ್ ನೀರು ಹರಿದು ಬರುತ್ತಿದೆ. ಪ್ರಸಕ್ತ ಸನ್ನಿವೇಶದಲ್ಲಿ ನಮ್ಮ ನದಿ ತೀರದ ಗ್ರಾಮಗಳಿಗೆ ಯಾವುದೇ ಆತಂಕವಿಲ್ಲವಾದರೂ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲು ಅವಶ್ಯವಾಗಿದೆ. ಅಧಿಕಾರಿಗಳು ಈ ನಿಟ್ಟಿನಲ್ಲಿ ಅಗತ್ಯವಿರುವ ಎಲ್ಲ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುವಂತೆ ಅವರು ಸೂಚಿಸಿದರು.

 

ಈ ನದಿಗಳ ಒಳಹರಿವು ಹೆಚ್ಚಾಗುತ್ತಿರುವುದರಿಂದ ಸಣ್ಣ ಸಣ್ಣ ಸೇತುವೆಗಳು ಈಗಾಗಲೇ ಮುಳುಗಡೆಯಾಗಿವೆ. ಇದರಿಂದ ಘಟಪ್ರಭಾ ನದಿ ತೀರದ ಗ್ರಾಮಗಳ ನಾಗರೀಕರು ಪ್ರವಾಹದ ಆತಂಕದಲ್ಲಿದ್ದಾರೆ. ನೋಡಲ್ ಅಧಿಕಾರಿಗಳನ್ನು ನೇಮಿಸಬೇಕು. ಜನರನ್ನು ರಕ್ಷಿಸಲು ಮುಂಚಿತವಾಗಿಯೇ ಎನ್‍ಡಿಆರ್‍ಎಫ್ ಮತ್ತು ಎಸ್‍ಡಿಆರ್‍ಎಫ್ ಬೋಟ್‍ಗಳನ್ನು ವ್ಯವಸ್ಥೆ ಮಾಡುವಂತೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಬೈಲಹೊಂಗಲ ಉಪವಿಭಾಗಾಧಿಕಾರಿ ಡಾ.ಶಶಿಧರ ಬಗಲಿ, ಗೋಕಾಕ ತಹಶೀಲ್ದಾರ ಪ್ರಕಾಶ ಹೊಳೆಪ್ಪಗೋಳ, ಗೋಕಾಕ ತಾಪಂ ಇಓ ರಾಜೇಶ ಬೆನವಾಡಕರ, ಮೂಡಲಗಿ ತಹಶೀಲ್ದಾರ ಡಿ.ಜೆ. ಮಹಾತ, ಗೋಕಾಕ ಟಿಎಚ್‍ಓ ಡಾ.ಮುತ್ತಣ್ಣ ಕೊಪ್ಪದ, ಮೂಡಲಗಿ ಗ್ರೇಡ್-2 ತಹಶೀಲ್ದಾರ ಶಿವಾನಂದ ಬಬಲಿ, ಗೋಕಾಕ ಸಾರ್ವಜನಿಕ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಡಾ.ರವೀಂದ್ರ ಆಂಟಿನ್, ಶಿಶು ಅಭಿವೃದ್ಧಿ ಯೋಜನಾಧಿಕಾರಿ ವಾಯ್.ಎಂ. ಗುಜನಟ್ಟಿ, ಮೂಡಲಗಿ ಬಿಇಓ ಅಜೀತ ಮನ್ನಿಕೇರಿ, ಮೂಡಲಗಿ ಸಿಪಿಐ ವೆಂಕಟೇಶ ಮುರನಾಳ, ಮೂಡಲಗಿ ತಾಪಂ ಸಹಾಯಕ ನಿರ್ದೇಶಕ ಸಂಗಮೇಶ ರೊಡ್ಡನವರ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.


Spread the love

About Laxminews 24x7

Check Also

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

Spread the love ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತೊಮ್ಮೆ ರಾಜ್ಯಕ್ಕೆ ಭೇಟಿ ನೀಡುತ್ತಿದ್ದು, ಚಿಕ್ಕಬಳ್ಳಾಪುರ ಹಾಗೂ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ