Breaking News

ನೂತನ ಸಿಎಂ ಬೊಮ್ಮಾಯಿ ಅವರಿಗೆ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅಭಿನಂದನೆ

Spread the love

 

ಗೋಕಾಕ : ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿರುವ ಬಸವರಾಜ ಬೊಮ್ಮಾಯಿ ಅವರಿಗೆ ಕೆಎಂಎಫ್ ಅಧ್ಯಕ್ಷರೂ ಆಗಿರುವ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಅಭಿನಂದನೆ ಸಲ್ಲಿಸಿದ್ದಾರೆ.

ಬೊಮ್ಮಾಯಿ ಅವರು ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಸರ್ವಾನುಮತದಿಂದ ಆಯ್ಕೆಯಾಗಿರುವುದರಿಂದ ಸರ್ಕಾರ ಮತ್ತು ಭಾರತೀಯ ಜನತಾ ಪಾರ್ಟಿಯ ಸಂಘಟನೆ ಹೆಚ್ಚು ಬಲಶಾಲಿಯಾಗಲಿದೆ. ಕ್ರಿಯಾಶೀಲ ವ್ಯಕ್ತಿತ್ವದ ಸ್ನೇಹಜೀವಿಯಾಗಿರುವ ಬೊಮ್ಮಾಯಿ ಅವರಿಂದ ರಾಜ್ಯ ಮತ್ತಷ್ಟು ಅಭಿವೃದ್ಧಿ ಕಾಣಲಿದೆ. ಇವರ ಆಯ್ಕೆಯಿಂದ ನಮ್ಮ ಉತ್ತರ ಕರ್ನಾಟಕಕ್ಕೂ ಹೆಚ್ಚಿನ ಅನುಕೂಲವಾಗಲಿದೆ. ಈ ಹಿಂದಿನ ಬಿಜೆಪಿ ಸರ್ಕಾರದಲ್ಲಿ ಗೃಹ, ಜಲಸಂಪನ್ಮೂಲ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆಗಳ ಸಚಿವರಾಗಿ ಉತ್ತಮ ಕೆಲಸ ನಿರ್ವಹಿಸಿದ್ದಾರೆ. ಉತ್ತಮ ಸಂಸದೀಯ ಪಟು ಆಗಿರುವ ಬಸವರಾಜ ಬೊಮ್ಮಾಯಿ ಅವರಿಗೆ ಮತ್ತೊಮ್ಮೆ ಅಭಿನಂದನೆಗಳನ್ನು ಸಲ್ಲಿಸುತ್ತೇನೆಂದು ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದ್ದಾರೆ.

 


Spread the love

About Laxminews 24x7

Check Also

ಧರ್ಮದ ರಕ್ಷಣೆ ನಾವು ಮಾಡಿದರೆ ಮಾತ್ರ ನಮ್ಮನ್ನು ಧರ್ಮ ರಕ್ಷಣೆ ಮಾಡುತ್ತೆ ಡಾ. ಅಭಿನವ ಸ್ವಾಮೀಜಿ ಅಭಿಮತ

Spread the loveಗಡಿ ರಕ್ಷಣೆ ಮಾಡುವ ಸೈನಿಕರು ಧರ್ಮರಕ್ಷಣೆ ಮಾಡಬಹುದು ಎಂಬರಕ್ಕೆ ಉದಾಹರಣೆ ಅಂದರೆ ಸೈನಿಕರು ಕಾಗವಾಡದಲ್ಲಿ ಕಟ್ಟಿಸಿದ ವಿಠ್ಠಲ- …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ