Breaking News

ಮಹೇಶ್ ಕುಮಟಳ್ಳಿ, ಶ್ರೀಮಂತ ಪಾಟೀಲ್, ರಮೇಶ್ ಜಾರಕಿಹೊಳಿಗೆ ಸಚಿವ ಸ್ಥಾನ ನೀಡಲು ಮನವಿ ಮಾಡುತ್ತೇವೆ: ಬಾಲಚಂದ್ರ ಜಾರಕಿಹೊಳಿ

Spread the love

 

 

ರಮೇಶ್​ ಜಾರಕಿಹೊಳಿ ಮತ್ತು ಬಾಲಚಂದ್ರ ಜಾರಕಿಹೊಳಿ

ದೆಹಲಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭೇಟಿಗೆ ನವದೆಹಲಿಯ ಕರ್ನಾಟಕ ಭವನಕ್ಕೆ ಜಾರಕಿಹೊಳಿ ಸಹೋದರರು ಆಗಮಿಸಿದ್ದಾರೆ. ನಾವು ಬೇರೆ ಕೆಲಸದ ವಿಚಾರವಾಗಿ ನವದೆಹಲಿಗೆ ಬಂದಿದ್ದೇವೆ. ಸಿಎಂ ಬಂದಿದ್ದಾರೆಂದು ಗೊತ್ತಾಯ್ತು. ಹಾಗಾಗಿ, ಭೇಟಿಗೆ ಆಗಮಿಸಿದ್ದೇವೆ ಎಂದು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿಕೆ ನೀಡಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭೇಟಿಯಾಗಿ ಹೋಗುತ್ತೇವೆ. ಮಹೇಶ್ ಕುಮಟಳ್ಳಿ, ಶ್ರೀಮಂತ ಪಾಟೀಲ್, ರಮೇಶ್ ಜಾರಕಿಹೊಳಿ​ಗೆ ಸಚಿವ ಸ್ಥಾನ ನೀಡುವಂತೆ ಮನವಿ ಮಾಡುತ್ತೇವೆ. ಮೂವರಿಗೂ ಸಚಿವ ಸ್ಥಾನ ನೀಡುವಂತೆ ಸಿಎಂ ಬೊಮ್ಮಾಯಿ ಭೇಟಿಯಾಗಿ ಮನವಿ ಮಾಡುತ್ತೇವೆ ಎಂದು ನವದೆಹಲಿಯಲ್ಲಿ ಬಾಲಚಂದ್ರ ತಿಳಿಸಿದ್ದಾರೆ.

 

ಜಾರಕಿಹೊಳಿ ಸಹೋದರರಾದ ರಮೇಶ್ ಜಾರಕಿಹೊಳಿ, ಬಾಲಚಂದ್ರ ಜಾರಕಿಹೊಳಿ ನವದೆಹಲಿಗೆ ಆಗಮಿಸಿದ್ದಾರೆ. ಶ್ರೀಮಂತ ಪಾಟೀಲ್ ಹಾಗೂ ಮಹೇಶ್ ಕುಮಟಹಳ್ಳಿ ಜತೆ ಜಾರಕಿಹೊಳಿ ಸಹೋದರರು ದೆಹಲಿಗೆ ಆಗಮಿಸಿದ್ದಾರೆ.


Spread the love

About Laxminews 24x7

Check Also

ತೀರ್ಥಹಳ್ಳಿಯ ಮಹಿಷಿಯ ಉತ್ತರಾದಿ ಮಠದಲ್ಲಿ ಕಳ್ಳತನ – ಕೆಲವೇ ಗಂಟೆಯಲ್ಲಿ 1 ಕೋಟಿ ಮೌಲ್ಯದ ಚಿನ್ನದ 16 ಹಲಗಾರತಿ ವಶಕ್ಕೆ

Spread the loveಶಿವಮೊಗ್ಗ: ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಮಹಿಷಿಯ ಉತ್ತರಾದಿ ಮಠದಲ್ಲಿ ನಡೆದ ಕಳ್ಳತನ ಪ್ರಕರಣವನ್ನ ಕೆಲವೇ ಗಂಟೆಯಲ್ಲಿ ಬೇಧಿಸುವಲ್ಲಿ ತೀರ್ಥಹಳ್ಳಿಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ