Breaking News

ಪಂಚರಾಜ್ಯಗಳ ಚುನಾವಣೆ : ಬಿಜೆಪಿ ಅಭೂತಪೂರ್ವ ಗೆಲುವಿನ ಖುಷಿ ಹಂಚಿಕೊoಡ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

Spread the love

 

 

ಬೆಂಗಳೂರು : ಪಂಚರಾಜ್ಯಗಳ ಚುನಾವಣಾ ಫಲಿತಾಂಶ ಪ್ರಕಟವಾದ ಬೆನ್ನಲ್ಲೆ ಮಧ್ಯಾಹ್ನ ಭೋಜನದ ನಂತರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಆಡಳಿತ ಪಕ್ಷದ ಮೊಗಸಾಲೆ(ಅಸೆಂಬ್ಲಿ ಲಾಂಜ್)ಯಲ್ಲಿ ಬಿಜೆಪಿ ಶಾಸಕರು ಮತ್ತು ಮಾಧ್ಯಮ ಮಿತ್ರರೊಂದಿಗೆ ಗೆಲುವಿನ ಸಂಭ್ರಮವನ್ನು ಹಂಚಿಕೊoಡರು.

 

ಇತ್ತೀಚೆಗೆ ಜರುಗಿದ 5 ರಾಜ್ಯಗಳ ಚುನಾವಣೆಯಲ್ಲಿ ಉತ್ತರ ಪ್ರದೇಶ, ಮಣಿಪುರ, ಗೋವಾ ಮತ್ತು ಉತ್ತರಾಖಂಡ ರಾಜ್ಯಗಳಲ್ಲಿ ಬಿಜೆಪಿ ಸ್ಪಷ್ಟ ಬಹುಮತ ಪಡೆದುಕೊಂಡಿದೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇತರೇ ಬಿಜೆಪಿ ಶಾಸಕರೊಂದಿಗೆ ಕೆಲಹೊತ್ತು ಚುನಾವಣೆಗೆ ಸಂಬoಧಿಸಿದ ವಿಷಯಗಳನ್ನು ಚರ್ಚಿಸಿ ಬಿಜೆಪಿ ಪಕ್ಷದ ಸಾಧನೆಗೆ ಮೆಚ್ಚುಗೆ ವ್ಯಕ್ತಪಡಿಸಿ ಖುಷಿಗೆ ಕಾರಣರಾದರು. ಇದಕ್ಕೆ ಮಾಧ್ಯಮ ಮಿತ್ರರೂ ಕೂಡ ಸಾಕ್ಷಿಯಾದರು.

ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ ಶಾ ಅವರ ಜನಪರ ಆಡಳಿತಕ್ಕೆ ಇಡೀ ದೇಶವೇ ಮೆಚ್ಚಿದೆ. ದೇಶವನ್ನು ಜಗತ್ತಿನಲ್ಲಿಯೇ ಬಲಾಢ್ಯ ಹಾಗೂ ಪ್ರಗತಿಶೀಲ ರಾಷ್ಟçವನ್ನಾಗಿ ಮಾಡುವ ಸಂಕಲ್ಪ ತೊಟ್ಟಿರುವ ಪ್ರಧಾನಿ ನರೇಂದ್ರ ಮೋದಿ ಅವರ ದೂರ ದೃಷ್ಟಿಯ ಆಡಳಿತಕ್ಕೆ ಜನಮನ್ನಣೆ ದೊರೆತಿದೆ. ಈ ಚುನಾವಣೆ ಫಲಿತಾಂಶ ಮುಂದೆ ನಡೆಯುವ ವಿಧಾನಸಭಾ ಹಾಗೂ ಲೋಕಸಭಾ ಚುನಾವಣೆಗಳಿಗೆ ದಿಕ್ಷÆಚಿಯಾಗಲಿದೆ ಎಂದು ಬೊಮ್ಮಾಯಿ ಹೇಳಿದರು.

 

ಪಂಚರಾಜ್ಯಗಳ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವು ದಾಖಲಿಸಿರುವ ಹಿನ್ನೆಲೆಯಲ್ಲಿ ಖುಷಿಯಲ್ಲಿರುವ ಕೆಎಂಎಫ್ ಅಧ್ಯಕ್ಷ ಮತ್ತು ಬಿಜೆಪಿ ಹಿರಿಯ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದರು.

 

ಈ ಸಂದರ್ಭದಲ್ಲಿ ಮಾಜಿ ಸಚಿವ ಶ್ರೀಮಂತ ಪಾಟೀಲ, ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ, ಮಹೇಶ ಕುಮಠಳ್ಳಿ, ಎ.ಎಸ್. ಪಾಟೀಲ ನಡಹಳ್ಳಿ ಸೇರಿದಂತೆ ಅನೇಕ ಬಿಜೆಪಿ ಶಾಸಕರು ಉಪಸ್ಥಿತರಿದ್ದರು.


Spread the love

About Laxminews 24x7

Check Also

ಗೋಲಿಹಳ್ಳಿಯ ಶ್ರೀ ಶಿವ ಮಂದಿರದಲ್ಲಿ ನೂತನ ಶಿವ ಮುಖವಾಡ ಮತ್ತು ನಂದಿ ಮೂರ್ತಿ ಪ್ರತಿಷ್ಠಾಪನೆ

Spread the love ಗೋಲಿಹಳ್ಳಿಯ ಶ್ರೀ ಶಿವ ಮಂದಿರದಲ್ಲಿ ನೂತನ ಶಿವ ಮುಖವಾಡ ಮತ್ತು ನಂದಿ ಮೂರ್ತಿ ಪ್ರತಿಷ್ಠಾಪನೆ ಖಾನಾಪೂರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ