Breaking News
Home / ಜಿಲ್ಲೆ / ಬೆಳಗಾವಿ / ಗೋಕಾಕ / ನಿಮ್ಮ ಜೀವ ಉಳಿಸಿಕೊಳ್ಳಲು ಏಪ್ರೀಲ್ 14ರ ವರೆಗೆ ಮನೆಯಿಂದ ಆಚೆ ಬರಬೇಡಿ.:ಶಾಸಕ ಬಾಲಚಂದ್ರ ಜಾರಕಿಹೊಳಿ

ನಿಮ್ಮ ಜೀವ ಉಳಿಸಿಕೊಳ್ಳಲು ಏಪ್ರೀಲ್ 14ರ ವರೆಗೆ ಮನೆಯಿಂದ ಆಚೆ ಬರಬೇಡಿ.:ಶಾಸಕ ಬಾಲಚಂದ್ರ ಜಾರಕಿಹೊಳಿ

Spread the love

ಗೋಕಾಕ: ನಿಮ್ಮ ಜೀವ ಉಳಿಸಿಕೊಳ್ಳಲು ಏಪ್ರೀಲ್ 14ರ ವರೆಗೆ ಮನೆಯಿಂದ ಆಚೆ ಬರಬೇಡಿ. ಮನೆಯಲ್ಲಿಯೇ ಉಳಿದುಕೊಂಡು ಕೊರೋನಾ ವೈರಸ್ ತಡೆಗಟ್ಟಲು ಸರ್ಕಾರದೊಂದಿಗೆ ಕೈ ಜೋಡಿಸಿ ಎಂದು ಕರ್ನಾಟಕ ಹಾಲು ಮಹಾಮಂಡಳಿ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಸಾರ್ವಜನಿಕರಲ್ಲಿ ಮನವಿ ಮಾಡಿಕೊಂಡಿದ್ದಾರೆ.

ಗುರುವಾರ ಸಂಜೆ ಪತ್ರಿಕಾ ಪ್ರಕಟನೆ ನೀಡಿರುವ ಅವರು, ಮಹಾಮಾರಿ ಕೊರೋನಾ ಸೋಂಕಿನಿಂದ ದೇಶವನ್ನು ರಕ್ಷಿಸಲು ಕೇಂದ್ರ ಹಾಗೂ ರಾಜ್ಯ ಸರ್ಕಾರ ಮಹತ್ವದ ನಿರ್ಧಾರಗಳನ್ನು ಕೈಗೊಂಡಿವೆ. ಅವುಗಳನ್ನು ಚಾಚೂ ತಪ್ಪದೇ ಪಾಲಿಸುವಂತೆ ಅವರು ಸಾರ್ವಜನಿಕರಲ್ಲಿ ಕೋರಿದ್ದಾರೆ.

ಪ್ರಧಾನಿ ನರೇಂದ್ರ ಮೋದಿಯವರು ಈಗಾಗಲೇ ಇಡೀ ಭಾರತ ದೇಶವನ್ನೇ ಲಾಕ್ ಡೌನ್ ಮಾಡಿದ್ದಾರೆ. 21 ದಿವಸದ ವರೆಗೆ ಸಾರ್ವಜನಿಕರು ಮನೆಯಿಂದ ಹೊರ ಬರದಂತೆ ಕರೆ ನೀಡಿದ್ದಾರೆ. ಅವರ ಕರೆಯನ್ನು ನಾವೆಲ್ಲರೂ ಪಾಲಿಸಬೇಕಿದೆ. ಇದರಿಂದ ಕೊರೋನಾ ವೈರಸ್ ಬರುವದನ್ನು ತಡೆಯಲು ಏಕೈಕ ಮಾರ್ಗವೇ ಮನೆಯಲ್ಲಿ ಉಳಿದುಕೊಳ್ಳುವದು ಎಂದು ಹೇಳಿದ್ದಾರೆ.

ಅಗತ್ಯ ಕೆಲಸವಿದ್ದಾಗ ಮಾತ್ರ ಹೊರಗೆ ಬನ್ನಿ. ಅನಾವಶ್ಯಕವಾಗಿ ಗುಂಪು ಗುಂಪಾಗಿ ತಿರುಗಾಡಬೇಡಿ. ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಿ. ಪ್ರತಿ ವ್ಯಕ್ತಿಯಿಂದ ಹರಡುವ ಸಾಂಕ್ರಾಮಿಕ ರೋಗದ ವಿರುದ್ಧ ಹೋರಾಟ ಮಾಡಬೇಕಾದರೇ ನಮ್ಮಲ್ಲಿ ತಿಳುವಳಿಕೆ ಅಗತ್ಯವಾಗಿದೆ. ಇದನ್ನು ಎಲ್ಲರೂ ಗಂಭೀರವಾಗಿ ಪರಿಗಣಿಸಬೇಕು. ಹಗುರವಾಗಿ ತಿಳಿದುಕೊಂಡರೇ ಪ್ರಾಣಕ್ಕೆ ಅಪಾಯ ಬರುವದು ಖಚಿತ ಎಂದು ತಿಳಿಸಿದ್ದಾರೆ.


Spread the love

About Laxminews 24x7

Check Also

ವನ್ಯಜೀವಿಗಳ ದಾಹ ತೀರಿಸುವ ಕೃತಕ ನೀರಿನ ತೊಟ್ಟಿಗಳು

Spread the loveಹಾನಗಲ್: ಕಡು ಬೇಸಿಗೆ ನಾಡಿನೆಲ್ಲೆಡೆ ಕುಡಿಯುವ ನೀರಿಗೆ ಅಭಾವ ಸೃಷ್ಟಿಸಿದೆ. ಕಾಡಿನಲ್ಲಿ ವನ್ಯ ಜೀವಿಗಳು ಅನುಭವಿಸುತ್ತಿರುವ ಸಂಕಷ್ಟ ಅರಿತ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ