Breaking News

ಬಳ್ಳಾರಿ:2 ರೂ. ಬೆಲೆಯ ಮೆಂಥೋಪ್ಲಸ್ ಡಬ್ಬಿಯನ್ನ ನುಂಗಿ 9 ತಿಂಗಳ ಮಗುವೊಂದು ಸಾವನ್ನಪ್ಪಿದೆ.

Spread the love

ಬಳ್ಳಾರಿ: ನೆಗಡಿ, ತಲೆನೋವು ಕಾಣಿಸಿಕೊಂಡಾಗ ಬಳಕೆ ಮಾಡುವ 2 ರೂ. ಬೆಲೆಯ ಮೆಂಥೋಪ್ಲಸ್ ಡಬ್ಬಿಯನ್ನ ನುಂಗಿ 9 ತಿಂಗಳ ಮಗುವೊಂದು ಸಾವನ್ನಪ್ಪಿದೆ.

ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ನಿಡುಗುರ್ತಿ ಗ್ರಾಮದಲ್ಲಿ ಗುರುವಾರ ರಾತ್ರಿ ಈ ಘಟನೆ ನಡೆದಿದೆ. ಕರಿಬಸವಯ್ಯ ಹಾಗೂ ನಿಂಗಮ್ಮ ಅವರ ಮೊದಲ ಮಗಳು 9 ತಿಂಗಳ ಮಗು ಭಾರತಿ ಆಟ ಆಡುತ್ತಾ ಡಬ್ಬಿಯನ್ನು ನುಂಗಿದ್ದು, ಅದು ಗಂಟಲಲ್ಲಿ ಸಿಲುಕಿ ಮೃತಪಟ್ಟಿದ್ದಾಳೆ. ಗುರುವಾರ ರಾತ್ರಿ ಮಗುವಿನ ತಾಯಿ ಮನೆಯ ಕೆಲಸ ಮಾಡುತ್ತಿರುವಾಗ ಮನೆಯ ಮುಂದೆ ಮಕ್ಕಳೊಂದಿಗೆ ಮಗು ಆಟವಾಡುತ್ತಿತ್ತು. ಈ ವೇಳೆ ಆಕಸ್ಮಾತ್ ಆಗಿ ಮೆಂಥೋಪ್ಲಸ್ ಡಬ್ಬಿಯನ್ನು ಮಗು ನುಂಗಿ ನರಳಾಡಲು ಆರಂಭಿಸಿದೆ.

ತಕ್ಷಣವೇ ಕೂಡ್ಲಿಗಿ ಸರ್ಕಾರಿ ಆಸ್ಪತ್ರೆಗೆ ಮಗುವನ್ನು ದಾಖಲಿಸಲು ಪೋಷಕರು ಮುಂದಾದಾಗ ಮಾರ್ಗ ಮಧ್ಯದಲ್ಲೇ ಮಗು ಸಾವನ್ನಪ್ಪಿದೆ. ಮಗುವನ್ನು ಕಳೆದುಕೊಂಡ ತಾಯಿಯ ಆಕ್ರಂದನ ಮುಗಿಲು ಮುಟ್ಟಿದ್ದು, ಈ ಕುರಿತು ಕೂಡ್ಲಿಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಎಂಆರ್​ಪಿ ಬಾರ್​ನಲ್ಲಿ ಹೆಚ್ಚಿನ ಹಣ ವಸೂಲಿ ಹಿನ್ನಲೆ ರೊಚ್ಚಿಗೆದ್ದ ಮದ್ಯಪ್ರಿಯರಿಂದ ಬಾರ್ ಮುಂದೆಯೇ ಪ್ರತಿಭಟನೆ

Spread the loveಚಾಮರಾಜನಗರ, ಫೆಬ್ರವರಿ 05: ಎಂಆರ್​ಪಿ ಬಾರ್​ನಲ್ಲಿ ಹೆಚ್ಚಿನ ಹಣ ವಸೂಲಿ ಹಿನ್ನಲೆ ರೊಚ್ಚಿಗೆದ್ದ ಮದ್ಯಪ್ರಿಯರಿಂದ ಬಾರ್ ಮುಂದೆಯೇ ಪ್ರತಿಭಟನೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ