ಬೆಂಗಳೂರು: ಜಿಬಿಎ ವ್ಯಾಪ್ತಿಯಲ್ಲಿ ಸೆಪ್ಟೆಂಬರ್ 14ರಂದು ಮಾಂಸ ಮಾರಾಟ ಸಂಪೂರ್ಣವಾಗಿ ನಿಷೇಧಿಸಲಾಗಿದೆ.
ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆ ಸೋಮವಾರ (ಸೆ.14) ಬೆಂಗಳೂರಿನಲ್ಲಿ ಮಾಂಸ ಮಾರಾಟಕ್ಕೆ ಬ್ರೇಕ್ ಹಾಕಲಾಗಿದೆ.
ಗಣೇಶ ಚತುರ್ಥಿ ಹಬ್ಬದ ಪ್ರಯುಕ್ತ ನಗರದ ಕಸಾಯಿಖಾನೆಗಳಲ್ಲಿ ಪ್ರಾಣಿವಧೆ ನಡೆಸುವಂತಿಲ್ಲ. ಅಲ್ಲದೇ, ಮಾಂಸದ ಅಂಗಡಿಗಳು ಹಾಗೂ ಮಳಿಗೆಗಳಲ್ಲೂ ಮಾಂಸ ಮಾರಾಟಕ್ಕೆ ನಿರ್ಬಂಧ ವಿಧಿಸಲಾಗಿದೆ. ಹೀಗಾಗಿ ಸೆಪ್ಟೆಂಬರ್ 14ರಂದು ಜಿಬಿಎ ವ್ಯಾಪ್ತಿಯಲ್ಲಿ ಮಾಂಸ ಮಾರಾಟ ಮತ್ತು ಪ್ರಾಣಿವಧೆ ಸಂಪೂರ್ಣ ಬಂದ್ ಆಗಲಿದೆ.
Laxmi News 24×7