Breaking News

ʻಬಸವ ಮಂಟಪʼ ಕೃತಿ ಬ್ಯಾನ್‌ – ಕಾನೂನು ಅಭಿಪ್ರಾಯ ಪಡೆದು ಕ್ರಮ ವಹಿಸಲು ಸಿಎಸ್‌ಗೆ ಸಿಎಂ ಸೂಚನೆ

Spread the love

ಬೆಂಗಳೂರು: 12ನೇ ಶತಮಾನದ ಕ್ರಾಂತಿಕಾರಿ ಭಕ್ತಿ ಭಂಡಾರಿ ಬಸವಣ್ಣ ವಿರುದ್ಧ ಅಮೆರಿಕ ಮೂಲದ ಲೇಖಕ ರವಿ ಹಂಜ್  ಬರೆದಿರುವ ಪುಸ್ತಕ ʻಬಸವ ಮಂಟಪʼ ಬ್ಯಾನ್‌ ಮಾಡಲು ಇಂದಿನ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ಡಿಸಿಎಂ ಪರಮೇಶ್ವರ್‌ ತಿಳಿಸಿದ್ದಾರೆ.

ಈ ಮಧ್ಯೆ ರವಿ ಹಂಜ್‌ ಅವರ ʻಬಸವ ಮಂಟಪʼ ಕೃತಿ ಬ್ಯಾನ್‌ ಮಾಡುವ ಸಂಬಂಧ ಕಾನೂನು ಅಭಿಪ್ರಾಯ ಪಡೆಯಲು ಸಿಎಂ ಡಿಕೆ ಶಿವಕುಮಾರ್‌ ಅವರು, ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್‌ ಅವರಿಗೆ ಸೂಚನೆ ನೀಡಿದ್ದಾರೆ ಎಂದು ತಿಳಿದುಬಂದಿದೆ.

ಬಸವ ಸಮಿತಿ ಅಧ್ಯಕ್ಷ ಅರವಿಂದ ಜತ್ತಿ ಅವರು ನೀಡಿದ ದೂರನ್ನು ಆಧರಿಸಿ ಸಿಎಸ್‌ಗೆ ಮುಖ್ಯಮಂತ್ರಿಗಳು ಸೂಚನೆ ನೀಡಿದ್ದಾರೆ. ದೂರಿನ‌ ಪ್ರತಿಯಲ್ಲಿ ಲಿಂಗಾಯತ ಸಚಿವರು, ಶಾಸಕರ ಸಹಿಯೂ ಇದೆ. ಸಚಿವರಾದ ಎಂ.ಬಿ ಪಾಟೀಲ್, ಬಸವರಾಜ ರಾಯರೆಡ್ಡಿ, ಶರಣಪ್ರಕಾಶ್‌ ಪಾಟೀಲ್, ಈಶ್ವರ್ ಖಂಡ್ರೆ, ಎಸ್.ಎಸ್ ಮಲ್ಲಿಕಾರ್ಜುನ ಮುಂತಾದವರ ಸಹಿಯೂ ಇದೆ.

ಕೃತಿ ಬ್ಯಾನ್ ಮಾಡುವ ಸಂಬಂಧ ಕಾನೂನು ಅಭಿಪ್ರಾಯ ಪಡೆಯುವಂತೆ ಹಾಗೂ ಸಂಬಂಧಿಸಿದ ವ್ಯಕ್ತಿಗಳ ವಿರುದ್ಧ ಕ್ರಮ ವಹಿಸಲು ಸಿಎಂ ಸೂಚನೆ ನೀಡಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ. ಸದ್ಯದಲ್ಲೇ ಈ ಸಂಬಂಧ ರಾಜ್ಯ ಸರ್ಕಾರ ಅಧಿಕೃತ ಘೋಷಣೆ ಹೊರಡಿಸುವ ಸಾಧ್ಯತೆಯೂ ಇದೆ ಎನ್ನಲಾಗಿದೆ. ಇದನ್ನೂ ಓದಿ: 

ರವಿ ಹಂಜ್‌ ವಿರುದ್ಧದ ಆರೋಪವೇನು?
ಪುಸ್ತಕದಲ್ಲಿ ಸಾಮಾಜಿಕ ಸುಧಾರಕ ಬಸವಣ್ನನವರ ಚಾರಿತ್ರ್ಯ ವಧೆ ಮಾಡಿರುವ ಆರೋಪ ಮಾಡಲಾಗಿದೆ. ಬಸವಣ್ಣನವರನ್ನ ಕೊಲೆಗಾರನ ರೀತಿ ಬಿಂಬಿಸಿರುವ ಲೇಖಕ ಬಿಜ್ಜಳನ ಹತ್ಯೆಯಲ್ಲಿ ಬಸವಣ್ಣನ ಪಾತ್ರ ಎಂದಿದ್ದಾರೆ. ಸದ್ಯ ಇದು ವೀರಶೈವ ಲಿಂಗಾಯತ  ಸಮುದಾಯದವರನ್ನ ಕೆರಳಿಸಿದೆ. ಲೇಖಕ ರವಿ ಹಂಜ್ ಆಕ್ರೋಶ ಹೊರಹಾಕಿದ್ದು, ಪುಸ್ತಕಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ತಮ್ಮ ಲೇಖನಕ್ಕೆ ವ್ಯಾಪಕ ವಿರೋಧ ವ್ಯಕ್ತವಾದ ಬೆನ್ನಲ್ಲೇ ಲೇಖಕ ರವಿ ಹಂಜ್ ಸ್ಪಷ್ಟನೆ ನೀಡಿದ್ದಾರೆ. ʻಪಬ್ಲಿಕ್‌ ಟಿವಿʼ ಜೊತೆಗೆ ಮಾತನಾಡಿರುವ ಅವರು, ವೀರಶೈವ ಲಿಂಗಾಯತ ಒಂದೇ ಅನ್ನೋದಷ್ಟೇ ನನ್ನ ವಾದ. ಧರ್ಮ ವಿರೋಧಿಗಳು ನನ್ನ ವಾದ ಒಪ್ಪೋದಿಲ್ಲ. ಬಸವಣ್ಣನ ವಚನಗಳ ಬಗ್ಗೆ ಆರೋಪ ಮಾಡಿದ್ದವರೂ ಓದಿಕೊಂಡಿಲ್ಲ. ನನ್ನ ಹೇಳಿಕೆಗೆ ನಾನು ಈಗಲೂ ಬದ್ಧನಿದ್ದೇನೆ. ಯಾವುದೇ ದೂರು ನೀಡಿದರೂ ಎದುರಿಸಲು ಸಿದ್ಧನಿದ್ದೇನೆ ಎಂದು ಹೇಳಿದ್ದಾರೆ.


Spread the love

About Laxminews 24x7

Check Also

ಚುನಾವಣೆಯನ್ನು ಬಹಿಷ್ಕರಿಸುವುದಿಲ್ಲ, ವ್ಯವಸ್ಥೆಯೊಳಗೇ ಹೋರಾಟ: ರಾಹುಲ್ ಗಾಂಧಿ

Spread the loveನವದೆಹಲಿ: ವಿರೋಧ ಪಕ್ಷಗಳು ಚುನಾವಣೆಯನ್ನು ಬಹಿಷ್ಕರಿಸುವುದಿಲ್ಲ. ಬದಲಾಗಿ, ಚುನಾವಣಾ ಪ್ರಕ್ರಿಯೆಯಲ್ಲಿ ಭಾಗವಹಿಸುವ ಮೂಲಕವೇ ಪ್ರಜಾಪ್ರಭುತ್ವದ ಹಕ್ಕುಗಳಿಗಾಗಿ ಹೋರಾಟ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ