ಬಿಬಿಎಂಪಿ ಸ್ಥಾಯಿ ಸಮಿತಿ ಚುನಾವಣೆ ಸಂದರ್ಭದಲ್ಲಿ ಅಸಮಾಧಾನ

Spread the love

  ಬಿಬಿಎಂಪಿ ಸ್ಥಾಯಿ ಸಮಿತಿ ಚುನಾವಣೆ ಸಂದರ್ಭದಲ್ಲಿ ಅಸಮಾಧಾನ ಭುಗಿಲೆದ್ದಿದ್ದು, ಆಡಳಿತಾರೂಢ ಬಿಜೆಪಿ ಸದಸ್ಯರೇ ತಮ್ಮ ನಾಯಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಘಟನೆ ನಡೆದಿದೆ.

ಬೆಂಗಳೂರು, ಜ.18- ಬಿಬಿಎಂಪಿ ಸ್ಥಾಯಿ ಸಮಿತಿ ಚುನಾವಣೆ ಸಂದರ್ಭದಲ್ಲಿ ಅಸಮಾಧಾನ ಭುಗಿಲೆದ್ದಿದ್ದು, ಆಡಳಿತಾರೂಢ ಬಿಜೆಪಿ ಸದಸ್ಯರೇ ತಮ್ಮ ನಾಯಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಘಟನೆ ನಡೆದಿದೆ. ಮಾಜಿ ಸಚಿವ ಆರ್.ಅಶೋಕ್, ಶಾಸಕ ಸತೀಶ್‍ರೆಡ್ಡಿ ನಡುವೆ ಸ್ಥಾಯಿ ಸಮಿತಿ ಚುನಾವಣೆ ಸದಸ್ಯರ ಆಯ್ಕೆ ಸಂಬಂಧ ಮಾತಿನ ಚಕಮಕಿ ನಡೆದಿದ್ದು, ತಮ್ಮ ತಮ್ಮ ಬೆಂಬಲಿಗರನ್ನು ಸ್ಥಾಯಿ ಸಮಿತಿಗೆ ಆಯ್ಕೆ ಮಾಡಲು ಪೈಪೋಟಿ ಏರ್ಪಟ್ಟು ಕೊನೆ ಕ್ಷಣದವರೆಗೂ ಚುನಾವಣೆ ಕುತೂಹಲ ಮೂಡಿಸಿತ್ತು.

ಸ್ಥಾಯಿ ಸಮಿತಿ ಅಧ್ಯಕ್ಷ ವಂಚಿತ ಬಿಜೆಪಿ ಸದಸ್ಯರು ತಮ್ಮ ನಾಯಕರ ವಿರುದ್ಧ ಹರಿಹಾಯ್ದರು. ಕೆಲವು ಮಹಿಳಾ ಸದಸ್ಯರು ಕಣ್ಣೀರಿಟ್ಟು ಮುಖಂಡರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.ಇತ್ತೀಚೆಗೆ ಬಿಜೆಪಿಗೆ ಸೇರ್ಪಡೆಗೊಂಡ ಶಾಸಕರ ಬೆಂಬಲಿಗರಿಗೆ ಹೆಚ್ಚು ಆದ್ಯತೆ ನೀಡಲಾಗಿದೆ. ನಿಷ್ಠಾವಂತ ಬಿಜೆಪಿ ಸದಸ್ಯರನ್ನು ಕಡೆಗಣಿಸಲಾಗಿದೆ ಎಂದು ಸಚಿವ ಅಶೋಕ್ ವಿರುದ್ಧ ಬಹಿರಂಗವಾಗಿಯೇ ಸದಸ್ಯರಿಂದ ತೀವ್ರ ಆಕ್ರೋಶ ವ್ಯಕ್ತವಾಯಿತು. ಈ ಸಂದರ್ಭದಲ್ಲಿ ನಾಯಕರು ತಮ್ಮ ಅಸಹಾಯಕತೆ ವ್ಯಕ್ತಪಡಿಸಿ ಹೈಕಮಾಂಡ್‍ನತ್ತ ಬೊಟ್ಟು ಮಾಡಿ ತೋರಿಸಿದರು.

Advertisement


Spread the love

About Laxminews 24x7

Check Also

17 ಪಿಎಸ್‌ಐಗಳ ವರ್ಗಾವಣೆ

Spread the loveಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಮಹಾನಗರ ವ್ಯಾಪ್ತಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ 17 ಪೊಲೀಸ್ ಸಬ್ ಇನ್ಸಪೆಕ್ಟರ್‌ಗಳನ್ನು (ಪಿಎಸ್‌ಐ) ನಗರದ ವಿವಿಧ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ