Breaking News

ಬಂಟ್ವಾಳದ ಅಬ್ದುಲ್ ರೆಹಮಾನ್ ಹತ್ಯೆ ಕೇಸ್‌ – ಕಲ್ಲಡ್ಕ ಪ್ರಭಾಕರ್ ಭಟ್​​ಗೆ ನೋಟಿಸ್

Spread the love

ಮಂಗಳೂರು: ಬಂಟ್ವಾಳ ಅಬ್ದುಲ್ ರೆಹಮಾನ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್‌ಎಸ್ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್​ ಅವರಿಗೆ ಪೊಲೀಸರು ನೊಟೀಸ್ ಜಾರಿ ಮಾಡಿದ್ದಾರೆ.

ಕಳೆದ ವರ್ಷ ಮೇ 25 ರಂದು ಬಂಟ್ವಾಳದಲ್ಲಿ ಅಬ್ದುಲ್ ರಹಿಮಾನ್ ಹತ್ಯೆ ನಡೆದಿತ್ತು. ಈ ಹತ್ಯೆ ವೇಳೆ ಆರೋಪಿಗಳ ಜೊತೆ ಕಲ್ಲಡ್ಕ ಪ್ರಭಾಕರ್ ಭಟ್ ಅವರು ನಿರಂತರ ಫೋನ್ ಸಂಪರ್ಕದಲ್ಲಿದ್ದರು ಎಂಬ ಮಾಹಿತಿ ಹಿನ್ನೆಲೆಯಲ್ಲಿ ಬಂಟ್ವಾಳ ಗ್ರಾಮಾಂತರ ಠಾಣೆ ಪೊಲೀಸರು ಅವರಿಗೆ ನೋಟಿಸ್ ಜಾರಿ ಮಾಡಿದ್ದಾರೆ. ಸೆ.26 ರಂದು ಮನೆಯಲ್ಲೇ ವಿಚಾರಣೆಗೆ ನಡೆಸುವುದಾಗಿ ಪೊಲೀಸರು ನೋಟಿಸ್‌ನಲ್ಲಿ ಸೂಚಿಸಿದ್ದಾರೆ.

ಪೊಲೀಸರ ಈ ಕ್ರಮಕ್ಕೆ ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಇದರ ಹಿಂದೆ ವ್ಯವಸ್ಥಿತ ಸಂಚು ಇದೆ ಎಂದು ಆರೋಪಿಸಿವೆ. ಅಬ್ದುಲ್ ರೆಹಮಾನ್ ಹತ್ಯೆಗೂ ಕಲ್ಲಡ್ಕ ಪ್ರಭಾಕರ್ ಭಟ್‌ಗೆ ಏನು ಸಂಬಂಧ? ಕಾಂಗ್ರೆಸ್ ರಾಜಕೀಯ ಪ್ರೇರಿತವಾಗಿ ಹಿಂದೂ ಸಂಘಟನೆಯನ್ನು ಟಾರ್ಗೆಟ್ ಮಾಡುತ್ತಿದೆ ಎಂದು ವಿಹೆಚ್​ಪಿ ಮುಖಂಡ ಶರಣ್ ಪಂಪ್ ವೆಲ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವಿಚಾರಣೆ ನೆಪದಲ್ಲಿ ಅವರನ್ನು ಬಂಧಿಸುವ ಹುನ್ನಾರ ನಡೆಯುತ್ತಿದೆ. ಎರಡು ಚಾರ್ಜ್​​ಶೀಟ್ ಆದ ಪ್ರಕರಣದಲ್ಲಿ ವಿಚಾರಣೆ ಅಗತ್ಯ ಏನಿದೆ? ಎಂದು ಪ್ರಶ್ನಿಸಿದ್ದಾರೆ. ಬಿ‌.ಸಿ.ರೋಡ್ ಚಲೋ ಹಮ್ಮಿಕೊಂಡ ಬೆನ್ನಲ್ಲೇ ಈ ನೋಟಿಸ್ ನೀಡಲಾಗಿದೆ. ಇದು ಹಿಂದೂಗಳ ಧ್ವನಿಯನ್ನು ಅಡಗಿಸುವಂತಹ ಪ್ರಯತ್ನ. ಕಲ್ಲಡ್ಕ ಪ್ರಭಾಕರ​ ಭಟ್​ಗೆ ಕೊಟ್ಟ ನೋಟಿಸ್​ ಹಿಂಪಡೆಯಿರಿ. ಇಲ್ಲದಿದ್ರೆ ಹಿಂದೂ ಕಾರ್ಯಕರ್ತರು ಬೀದಿಗಿಳಿಯುತ್ತಾರೆ ಎಂದು ಎಚ್ಚರಿಕೆ ನೀಡಿದ್ದಾರೆ.


Spread the love

About Laxminews 24x7

Check Also

ಬರಪೀಡಿತ ಎಂದು ಘೋಷಿಸದ್ದಕ್ಕೆ ರಾಜೀನಾಮೆ ಸಲ್ಲಿಸಿದೆ – ಕ್ಷೇತ್ರದ ಜನರಿಗಾಗಿ ರಾಜಕೀಯ ನಿವೃತ್ತಿಗೂ ಸಿದ್ಧ: ಯಶವಂತರಾಯಗೌಡ

Spread the loveವಿಜಂಯಪುರ: 188 ತಾಲೂಕುಗಳು ಘೋಷಣೆ ಆದಾಗಲೂ, ವಿಜಯಪುರ ಜಿಲ್ಲೆಯ 13 ತಾಲೂಕುಗಳ ಪೈಕಿ 11 ಘೋಷಣೆ ಆದರೂ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ