Breaking News

ಮಾರ್ಕೆಟ್ ಠಾಣಾ ವ್ಯಾಪ್ತಿಯಲ್ಲಿ ಪೊಲೀಸ್ ಪಥಸಂಚಲನ

Spread the love

ಸೆಪ್ಟೆಂಬರ್ 3ರಂದು ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆ ಹಿನ್ನೆಲೆ ಮಾರ್ಕೆಟ್ ಪೊಲೀಸ್ ಠಾಣಾ ವ್ಯಾಪ್ತಿಯ ಪ್ರಮುಖ ರಸ್ತೆಗಳಲ್ಲಿ ಪೊಲೀಸರು ಪಥಸಂಚಲನ ನಡೆಸುವ ಮೂಲಕ ಚುನಾವಣೆ ವೇಳೆ ಶಾಂತತೆ ಕಾಪಾಡುವಂತೆ ಸಾರ್ವಜನಿಕರಿಗೆ ಜಾಗೃತಿ ಮೂಡಿಸಿದರು.

 

 

ಹೌದು ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆ ವೇಳೆ ಯಾವುದೇ ಅಹಿತಕರ ಘಟನೆ ಸಂಭವಿಸದಂತೆ ಪೊಲೀಸರು ಕಟ್ಟು ನಿಟ್ಟಿನ ಕ್ರಮ ಕೈಗೊಂಡಿದ್ದಾರೆ. ಅಲ್ಲದೇ ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ಸಂಬಂಧ ಮಂಗಳವಾರ ಸಂಜೆ ಆರು ಗಂಟೆ ಸುಮಾರಿಗೆ ಮಾರ್ಕೆಟ್ ಪೊಲೀಸ್ ಠಾಣೆಯಿಂದ ಆರಂಭವಾದ ಪಥಸಂಚಲನಕ್ಕೆ ಡಿಸಿಪಿ ಡಾ.ವಿಕ್ರಮ್ ಆಮ್ಟೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಎಸಿಪಿ ಸದಾಶಿವ ಕಟ್ಟಿಮನಿ, ಸಿಪಿಐ ಮಲ್ಲಿಕಾರ್ಜುನ ತುಳಸಿಗೇರಿ ಸೇರಿದಂತೆ ಕೆಎಸ್‍ಆರ್‍ಪಿ, ಮಾರ್ಕೆಟ್ ಠಾಣೆ ಪೊಲೀಸ್ ಸಿಬ್ಬಂದಿ ಭಾಗಿಯಾಗಿದ್ದರು.

 

 

ಮಾರ್ಕೆಟ್ ಪೊಲೀಸ್ ಠಾಣೆಯಿಂದ ಆರಂಭವಾದ ಪೊಲೀಸ್ ಪಥಸಂಚಲನ ಚವ್ಹಾಟ ಗಲ್ಲಿ, ಭಡಕಲಗಲ್ಲಿ, ಖಡಕ್ ಗಲ್ಲಿ, ಜಾಲಗಾರ ಗಲ್ಲಿ, ಶಾಸ್ತ್ರಿ ಚೌಕ್, ದರ್ಬಾರ್ ಗಲ್ಲಿ, ಖಂಜರ್ ಗಲ್ಲಿ ಸ್ಕೂಲ್ ರೋಡ್, ಗ್ರೀನ್ ತಾಜ್ ಹೋಟೆಲ್, ಶನಿವಾರ ಕೂಟ, ಮಾಳಿ ಗಲ್ಲಿ, ಕಸಾಯಿ ಗಲ್ಲಿ, ಖಡೇಬಜಾರ್ ಮಾರ್ಗವಾಗಿ ಆಗಮಿಸಿ ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ಅಂತ್ಯವಾಯಿತು. ಮಾರ್ಗದುದ್ದಕ್ಕೂ ಯಾವುದೇ ಭಯ ಇಲ್ಲದೇ, ಮುಕ್ತವಾಗಿ ಮತ ಚಲಾಯಿಸುವಂತೆ ಸಾರ್ವಜನಿಕರಿಗೆ ಪೊಲೀಸರು ಅರಿವು ಮೂಡಿಸಿದರು.

 

 


Spread the love

About Laxminews 24x7

Check Also

ಕನಿಷ್ಠ ವೇತನಕ್ಕೆ ಒತ್ತಾಯಿಸಿ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಮನವಿ

Spread the loveಬೆಳಗಾವಿ: ರಾಜ್ಯದ ಅನುಸೂಚಿತ ಉದ್ದಿಮೆಗಳಿಗೆ ಕನಿಷ್ಠ ವೇತನ ಪ್ರಕಟಿಸಬೇಕಂದು ಒತ್ತಾಯಿಸಿ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದ ವತಿಯಿಂದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ