Breaking News

ಬಸವ ಜನ್ಮಭೂಮಿಯಲ್ಲಿ ಸಂಭ್ರಮದ ಬಸವ ಜಯಂತಿ; ಗೌರವ ಸಲ್ಲಿಸಿಸ ಗಣ್ಯರು

Spread the love

ಬಸವ ಜಯಂತಿ ನಿಮಿತ್ತ ಈ ದಿನ ವಿಜಯಪುರ ನಗರದಲ್ಲಿನ ಬಸವಣ್ಣನವರ ಪುತ್ಥಳಿಗೆ ವಿವಿಧ ಗಣ್ಯರು ಭಕ್ತಿಯಿಂದ ಮಾಲಾರ್ಪಣೆ ಮಾಡಿದರು. ಆ ಮೇರು ಪುರುಷನ ಆದರ್ಶಗಳು ಹಾಗೂ ವಚನ ಸಂದೇಶಗಳನ್ನು ಸ್ಮರಿಸುತ್ತಾ ನಮಸ್ಕರಿಸಿದರು. ವಿಜಯಪುರ ಜಿಲ್ಲೆಯ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ, ಶಾಸಕ ಬಸನಗೌಡ ಪಾಟೀಲ ಯತ್ನಾಳ, ಮಹಾನಗರ ಪಾಲಿಕೆ ಮೇಯರ್ ಎಂ.ಎಸ್.ಕರಡಿ ಸೇರಿದಂತೆ ಹಲವು ಗಣ್ಯರು ಗೌರವ ಸಲ್ಲಿಸಿದರು. ವಿಶ್ವಗುರು ಬಸವಣ್ಣನವರ ಜನ್ಮಸ್ಥಳ ಬಸವನ ಬಾಗೇವಾಡಿಯಿಂದ ಬಸವ ಜ್ಯೋತಿಯನ್ನು ಹಿಡಿದು, ವಿಜಯಪುರ ಬಸವೇಶ್ವರ ವೃತ್ತದವರೆಗೆ ಪಾದಯಾತ್ರೆ ಕೈಗೊಂಡಿದ್ದ ವಿಜಯಪುರ ಸೈಕ್ಲಿಂಗ್ ಗ್ರೂಪ್ ಸದಸ್ಯರನ್ನು, ವಿವಿಧ ಸಂಘಟನೆಗಳ ಕಾರ್ಯಕರ್ತರನ್ನು ಹಾಗೂ ನೂರಾರು ಬಸವಭಕ್ತರನ್ನು ಈ ಸಂದರ್ಭದಲ್ಲಿ ಆತ್ಮೀಯವಾಗಿ ಸ್ವಾಗತಿಸಲಾಯಿತು‌ ಈ ಐತಿಹಾಸಿಕ ಪಾದಯಾತ್ರೆಯಲ್ಲಿ ಹೆಜ್ಜೆ ಹಾಕಿದ ಉತ್ಸಾಹಿಗಳಿಗೆ ಪ್ರಮಾಣ ಪತ್ರಗಳನ್ನು ವಿತರಿಸಿ ಗೌರವಿಸಿದರು. ಭಕ್ತಿಪೂರ್ವಕ ಪಾದಯಾತ್ರೆಯು ನಮ್ಮ ನಾಡಿನಲ್ಲಿ ಬಸವ ತತ್ವದ ಜಾಗೃತಿಯನ್ನು ಮತ್ತಷ್ಟು ಹೆಚ್ಚಿಸಲಿ ಎಂಬ ಆಶಯ ವ್ಯಕ್ತವಾಯಿತು.


Spread the love

About Laxminews 24x7

Check Also

ನಮ್ಮದು ಸಣ್ಣ ಪಕ್ಷ, ನಾವ್ಯಾಕೆ ಕಾಂಗ್ರೆಸ್ ಶಾಸಕರನ್ನ ಆಪರೇಷನ್ ಮಾಡೋಣ: ಹೆಚ್‌ಡಿಕೆ

Spread the loveಬೆಂಗಳೂರು: ನಮ್ಮದು ಸಣ್ಣ ಪಕ್ಷ ನಾವ್ಯಾಕೆ ಕಾಂಗ್ರೆಸ್  ಶಾಸಕರನ್ನ ಆಪರೇಷನ್ ಮಾಡೋಣ ಎಂದು ಕೇಂದ್ರ ಸಚಿವ ಕುಮಾರಸ್ವಾಮಿ  …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ