Breaking News

ನನ್ನನ್ನು ಮುಗಿಸಲು ಮುಧೋಳ-ಬೆಂಗಳೂರಿಂದ ಗ್ಯಾಂಗ್​ ಬಂದಿತ್ತು: ಹೊಸ ಬಾಂಬ್​ ಸಿಡಿಸಿದ ಯತ್ನಾಳ್​

Spread the love

ವಿಜಯಪುರ: ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ದೊಡ್ಡ ಪಕ್ಷವಾಗಿ ಹೊರಹೊಮ್ಮುವ ಮೂಲಕ ರಾಜ್ಯ ರಾಜಕಾರಣಕ್ಕೆ ಸಂದೇಶ ರವಾನಿಸಿದೆ. ಆದರೆ, ಈ ಚುನಾವಣೆಯಲ್ಲಿ ನನ್ನನ್ನು ಹಣಿಯಲು ಕಳ್ಳರ ಗ್ಯಾಂಗ್ ಮನೆಯಲ್ಲಿಯೇ ಕುಳಿತು ತಂತ್ರ ಮಾಡಿದೆ. ಮಾತ್ರವಲ್ಲ, ಮುಧೋಳ ಮತ್ತು ಬೆಂಗಳೂರಿನಿಂದಲೂ ಬಂದಿದ್ದರು ಎಂದು ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್​ ಬಾಂಬ್ ಸಿಡಿಸಿದ್ದಾರೆ.

ಮಂಗಳವಾರ ಸುದ್ದಿಗಾರರ ಜತೆ ಮಾತನಾಡಿದ ಯತ್ನಾಳ್​, ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಜಯ ಸಾಧಿಸಿದೆ. ಈ ಹಿಂದೆ ಯಾವ ಪಕ್ಷಕ್ಕೂ 17 ಸ್ಥಾನ ಬಂದಿರಲಿಲ್ಲ. ಇದೀಗ ಹೆಚ್ಚು ಸ್ಥಾನ ಬಂದಿದ್ದು ನೋಡಿದರೆ ಜನ ಅಭಿವೃದ್ಧಿ ಮತ್ತು ಹಿಂದುತ್ವನ್ನು ಒಪ್ಪಿಕೊಂಡಿದ್ದಾರೆ ಎಂದರು.

 

ಈಗಾಗಲೇ ಪಕ್ಷೇತರರ ಪೈಕಿ ಓರ್ವ ಬಿಜೆಪಿ ಸೇರ್ಪಡೆ ಆಗಿದ್ದಾರೆ. ಇನ್ನೂ ಇಬ್ಬರು ಬಿಜೆಪಿ ಸೇರ್ಪಡೆಯಾಗಲಿದ್ದಾರೆ. ಯಾರದೇ ಹಂಗಿಲ್ಲದೆ ಮೇಯರ್-ಉಪಮೇಯರ್ ಮಾಡುತ್ತೇವೆ. ಈ ಗೆಲುವು ರಾಜ್ಯದ ರಾಜಕಾರಣದಲ್ಲಿ ಪ್ರಭಾವ ಬೀರುತ್ತದೆ. ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ ಬಹುಮತ ಸಿಗುತ್ತದೆ ಎಂದರು.

 

ಇನ್ನು ಮಹಾನಗರ ಪಾಲಿಕೆ ಚುನಾವಣೆಯಲ್ಲಿ ತಮ್ಮ ವರ್ಚಸ್ಸು ತಗ್ಗಿಸಲು ಮನೆಯಲ್ಲಿಯೇ ಕುಳಿತು ಕುತಂತ್ರ ನಡೆಸಿದ ಗ್ಯಾಂಗ್ ಇನ್ಮುಂದೆ ಮನೆಯಲ್ಲಿಯೇ ಕುಳಿತಿರಲಿ. ಜನ ಅವರಿಗೆ ಬುದ್ಧಿ ಕಲಿಸಿದ್ದಾರೆ ಎಂದ ಯತ್ನಾಳ್​, ಬೆಂಗಳೂರು, ಮುಧೋಳದಿಂದ ಯತ್ನಾಳ್​ನನ್ನು ಮುಗಿಸಲು ಬಂದಿದ್ದರು. ಬೆಂಗಳೂರು, ಮುಧೋಳದಿಂದ ಸಹಾಯ ಹಸ್ತ (ಹಣ) ಕೂಡ ಬಂದಿತ್ತು. ಆದರೆ, ಜನ ಹುಚ್ಚರಲ್ಲ ಎಂದರು.


Spread the love

About Laxminews 24x7

Check Also

ಶಿವಾಜಿನಗರದಲ್ಲಿ GBA ಅಧಿಕಾರಿಗಳ ಮೇಲೆ ಹಲ್ಲೆ; ಬೆಳಗ್ಗೆಯೇ ದಾಳಿ ಪ್ಲಾನ್, 11 ಮಂದಿ ಅರೆಸ್ಟ್

Spread the loveಬೆಂಗಳೂರು: ಶಿವಾಜಿನಗರದಲ್ಲಿ  ಫುಟ್‌ಪಾತ್ ತೆರವು ಕಾರ್ಯಾಚರಣೆ ವೇಳೆ GBA ಅಧಿಕಾರಿಗಳ ಮೇಲೆ ನಡೆದ ಹಲ್ಲೆ ಪ್ರಕರಣದಲ್ಲಿ ಹೊಸ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ