Breaking News

ಸಂಪುಟ ವಿಸ್ತರಣೆ, ಬೆಳಗಾವಿ ರಹಸ್ಯ ಸಭೆ; ಸಿಎಂ ನೀಡಿದ ಪ್ರತಿಕ್ರಿಯೆಯೇನು?

Spread the love

ಬೆಂಗಳೂರು: ಸಚಿವ ಸಂಪುಟ ವಿಸ್ತರಣೆ ವಿಚಾರ ರಾಜ್ಯ ರಾಜಕೀಯ ಚಟುವಟಿಕೆ ಮತ್ತೆ ಗರಿಗೆದರಲು ಕಾರಣವಾಗಿದ್ದು, ಮಾರ್ಚ್ ಮೊದಲ ವಾರದಲ್ಲಿ ಸಂಪುಟ ವಿಸ್ತರಣೆ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ. ಆದರೆ ಇದಕ್ಕೆ ವಿರೋಧ ವ್ಯಕ್ತಪಡಿಸಿರುವ ಸಚಿವಾಕಾಂಕ್ಷಿಗಳು ಮಾರ್ಚ್ ನಲ್ಲಿ ಬೇಡ ಸಂಪುಟ ವಿಸ್ತರಣೆ ಈಗಲೇ ಮಾಡಬೇಕು ಎಂದು ಆಗ್ರಹಿಸಿದ್ದಾರೆ.

 

ಸಂಪುಟ ವಿಸ್ತರಣೆ ವಿಚಾರವಾಗಿ ಪ್ರತಿಕ್ರಿಯಿಸಿರುವ ಸಿಎಂ ಬಸವರಾಜ್ ಬೊಮ್ಮಾಯಿ, ಸದ್ಯಕ್ಕೆ ನಾಲ್ಕು ಸ್ಥಾನಗಳು ಖಾಲಿ ಇದೆ. ಅದನ್ನು ಯಾವಾಗ ಭರ್ತಿ ಮಾಡಬೇಕು ಎಂಬುದು ವರಿಷ್ಠರಿಗೆ ಗಮನಕ್ಕಿದೆ. ಹೈಕಮಾಂಡ್ ನನ್ನನ್ನು ಕರೆದು ಮಾತಾಡಿದಾಗ ಎಲ್ಲ ವಿವರ ನೀಡುತ್ತೇನೆ ಎಂದರು.

 

ಇನ್ನು ನಿಗಮ ಮಂಡಳಿ ಬಗ್ಗೆ ಯಾವುದೇ ಪ್ರಸ್ತಾವನೆ ಬಂದಿಲ್ಲ. ಪಕ್ಷದ ನಾಯಕರೆಲ್ಲ ಚರ್ಚಿಸಿ ಬಳಿಕ ಪ್ರಸ್ತಾವನೆ ಸಲ್ಲಿಸುತ್ತಾರೆ. ಜನವರಿ 25ರಂದು ಕೋವಿಡ್ ಸಭೆ ಕುರಿತು ಇದೆ. ಇಂದು ಬಿಬಿಎಂಪಿ ಸಭೆ ಕರೆಯಲಾಗಿದೆ ಎಂದು ತಿಳಿಸಿದರು.


Spread the love

About Laxminews 24x7

Check Also

ಈ ವರ್ಷ 5 ಸಾವಿರ ಸರ್ಕಾರಿ ಶಾಲೆಗಳಲ್ಲಿ ಎಲ್​​ಕೆಜಿ, ಯುಕೆಜಿ ಕಾರ್ಯಾರಂಭ: ಸಚಿವ ಮಧು ಬಂಗಾರಪ್ಪ

Spread the love ಬೆಂಗಳೂರು: ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ದಾಖಲಾತಿ ಪ್ರಮಾಣ ಹೆಚ್ಚಿಸಲು ಹಾಗೂ ಗುಣಮಟ್ಟದ ಶಿಕ್ಷಣ ನೀಡುವುದು ಸರ್ಕಾರದ ಆದ್ಯತೆಯಾಗಿದ್ದು, …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ