Breaking News

ಬಿಬಿಎಂಪಿ ಬಜೆಟ್ ನಲ್ಲಿ ಬಿಜೆಪಿ ಶಾಸಕರಿರುವ ಕ್ಷೇತ್ರಗಳಿಗೆ ಬಂಪರ್ …….

Spread the love

ಬೆಂಗಳೂರು, ಏ.20- ಹದಿನೈದನೇ ಹಣಕಾಸು ಯೋಜನೆಯಡಿ ಮೀಸಲಿಟ್ಟಿರುವ 558 ಕೋಟಿ ರೂ.ಗಳ ವಿಶೇಷ ಅನುದಾನದಲ್ಲಿ ಬಿಜೆಪಿ ಶಾಸಕರಿರುವ ಕ್ಷೇತ್ರಗಳಿಗೆ ಬಂಪರ್ ಹಣ ಮೀಸಲಿರಿಸಲಾಗಿದೆ. ಬಿಜೆಪಿ ಶಾಸಕರಿರುವ 15 ವಿಧಾನಸಭಾ ಕ್ಷೇತ್ರಗಳಿಗೆ 558 ಕೋಟಿ ರೂ.ಗಳಲ್ಲಿ 190 ಕೋಟಿ ರೂ.ಗಳ ಅನುದಾನ ಹಂಚಿಕೆ ಮಾಡಲಾಗಿದೆ.

ಮೇಯರ್ ಗೌತಮ್ ಕುಮಾರ್ ಅವರ ವಾರ್ಡ್‍ಗೆ 40 ಕೋಟಿ, ಉಪ ಮೇಯರ್ ವಾರ್ಡ್‍ಗೆ 10 ಕೋಟಿ, ಆಡಳಿತ ಪಕ್ಷದ ನಾಯಕರಿಗೆ 20 ಕೋಟಿ, ಅನುದಾನ ನೀಡಿದ್ದರೆ ಕಾಂಗ್ರೆಸ್ ಪಕ್ಷದ ನಾಯಕರಿಗೆ 7 ಕೋಟಿ, ಜೆಡಿಎಸ್ ಪಕ್ಷದ ನಾಯಕರಿಗೆ 7 ಕೋಟಿ ಅನುದಾನ ಹಂಚಿಕೆ ಮಾಡಲಾಗಿದೆ.

ಬಿಬಿಎಂಪಿಗೆ ಸೀಮಿತವಾದ ಪ್ರತ್ಯೇಕ ಪೌರ ನಿಗಮ ಕಾಯ್ದೆ ರೂಪಿಸುವ ವಿಷಯವನ್ನು ಈ ಬಾರಿಯ ಬಜೆಟ್‍ನಲ್ಲಿ ಪ್ರಸ್ತಾಪಿಸಲಾಗಿದೆ. ಮುಖ್ಯಮಂತ್ರಿಗಳ ನವ ನಗರೋತ್ಥಾನ ಯೋಜನೆಯಡಿಯಲ್ಲಿ 8,344 ಕೋಟಿ ರೂ.ಗಳ ಕಾಮಗಾರಿ ಯೋಜನೆ ಆರಂಭಕ್ಕೆ ಕ್ರಿಯಾ ಯೋಜನೆ ರೂಪಿಸಲಾಗಿದೆ.

ಶುಭ್ರ ಬೆಂಗಳೂರು ಯೋಜನೆಯಡಿ 999 ಕೋಟಿ ರೂ.ಗಳ ಅನುದಾನದಲ್ಲಿ ಬೆಂಗಳೂರು ನಗರವನ್ನು ಘನ ತ್ಯಾಜ್ಯ ನಿರ್ವಹಣೆಯಲ್ಲಿ ಮಾದರಿ ನಗರವನ್ನಾಗಿ ಮಾರ್ಪಡಿಸುವ ಸಂಕಲ್ಪ ಮಾಡಲಾಗಿದೆ.

15 ನೆ ಹಣಕಾಸು ಆಯೋಗದ ಅನುದಾನದಲ್ಲಿ ಪ್ರಸಕ್ತ ಸಾಲಿನಲ್ಲಿ 558 ಕೋಟಿ ರೂ. ಅನುದಾನ ಹಂಚಿಕೆ ಮಾಡಲಾಗಿದ್ದು, ಶುಭ್ರ ಬೆಂಗಳೂರು ಯೋಜನೆಯಡಿಯಲ್ಲಿ ಕೆರೆಗಳ ಸಮಗ್ರ ಬೆಂಗಳೂರು ಅಭಿವೃದ್ಧಿಗೆ 100 ಕೋಟಿ ರೂ.ಗಳ ಕ್ರಿಯಾ ಯೋಜನೆಗೆ ಬೆಂಗಳೂರು ನಗರದ ಬೃಹತ್ ಕಾಲುವೆಗಳ ಅಭಿವೃದ್ಧಿಗೆ 200 ಕೋಟಿ , 110 ಹಳ್ಳಿಗಳ ರಸ್ತೆ ದುರಸ್ತೀಕರಣ , ನೀರಿನ ಪೈಪ್‍ಲೈನ್ ಅಳವಡಿಕೆಗೆ ಸಾವಿರ ಕೋಟಿ ರೂ.ಗಳ ಕ್ರಿಯಾ ಯೋಜನೆ ರೂಪಿಸಲಾಗಿದ್ದು , ಪ್ರಸಕ್ತ ಸಾಲಿನಲ್ಲಿ 500 ಕೋಟಿ ರೂ. ಅನುದಾನದ ನೀಡಲಾಗಿದೆ.

ಅಂಡರ್‍ಗ್ರೌಂಡ್ ವಾಹನ ಪಾರ್ಕಿಂಗ್ ಯೋಜನೆಗಳನ್ನು ಖಾಸಗಿ ಸಹಭಾಗಿತ್ವದಲ್ಲಿ ಕೈಗೆತ್ತಿಕೊಳ್ಳಲು ಅನುದಾನ ನೀಡುವುದರ ಜತೆಗೆ ಗಂಭೀರ ಸಂಚಾರ ದಟ್ಟಣೆ ಹೆಚ್ಚಿರುವ ಪ್ರದೇಶಗಳಲ್ಲಿ ಸಂಚಾರ ಸಾಮಥ್ರ್ಯ ಹೆಚ್ಚಿಸಲು ಕ್ರಮ ಕೈಗೊಳ್ಳಲಾಗಿದೆ.


Spread the love

About Laxminews 24x7

Check Also

1200 ರೈತರ ಆತ್ಮಹತ್ಯೆ: ಕಾಂಗ್ರೆಸ್ ಆಡಳಿತದಲ್ಲಿ ರೈತರ ಜೀವಕ್ಕಿಲ್ಲ ಬೆಲೆ- ಪ್ರಹ್ಲಾದ್ ಜೋಶಿ

Spread the love ಬೆಂಗಳೂರು ಜುಲೈ 26: ರಾಜ್ಯದಲ್ಲಿ ಕಳೆದ 15 ತಿಂಗಳಲ್ಲಿ 1200ಕ್ಕೂ ಹೆಚ್ಚು ರೈತರು ಆತ್ಮಹತ್ಯೆಗೆ ಶರಣಾಗಿದ್ದಾರೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ