Home / ಜಿಲ್ಲೆ / ಬೆಂಗಳೂರು / ಉಚಿತವಾಗಿ ಮನೆಬಾಗಿಲಿಗೆ ಬರಲಿದೆ ಜನನ ಮತ್ತು ಮರಣ ಪ್ರಮಾಣ ಪತ್ರ ……..

ಉಚಿತವಾಗಿ ಮನೆಬಾಗಿಲಿಗೆ ಬರಲಿದೆ ಜನನ ಮತ್ತು ಮರಣ ಪ್ರಮಾಣ ಪತ್ರ ……..

Spread the love

ಬೆಂಗಳೂರು, – ಜನನ ಮತ್ತು ಮರಣ ಪ್ರಮಾಣ ಪತ್ರಗಳನ್ನು ಸಾರ್ವಜನಿಕರಿಗೆ ಉಚಿತವಾಗಿ ಅಂಚೆ ಮೂಲಕ ಮನೆಗಳಿಗೆ ತಲುಪಿಸುವ ವಿನೂತನ ಕಾರ್ಯಕ್ರಮಕ್ಕೆ ಬಿಬಿಎಂಪಿ ಚಾಲನೆ ನೀಡಿದೆ. ಬಜೆಟ್‍ನಲ್ಲಿ ಈ ವಿಷಯ ಪ್ರಸ್ತಾಪಿಸಿರುವ ಎಲ್.ಶ್ರೀನಿವಾಸ್ ಅವರು ಸಾರ್ವಜನಿಕ ಆರೋಗ್ಯ ಕಾಪಾಡಲು ಹೆಚ್ಚಿನ ಒತ್ತು ನೀಡಲಾಗಿದೆ ಎಂದು ತಿಳಿಸಿದ್ದಾರೆ.

ಪಾಲಿಕೆ ನಿರ್ವಹಿಸುತ್ತಿರುವ ಆಸ್ಪತ್ರೆಗಳಲ್ಲಿ ಒಬ್ಬ ನೆಫ್ರೋಲಾಜಿಸ್ಟ್ ಗಳನ್ನು ನೇಮಕ ಮಾಡಿ ಆಯಾ ಆಸ್ಪತ್ರೆಗಳಲ್ಲಿ ಉಚಿತ ಡಯಾಲಿಸಿಸ್ ಸೇವೆ ಒದಗಿಸಲು ಈ ಬಾರಿ 16 ಕೋಟಿ ರೂ.ಗಳನ್ನು ಮೀಸಲಿರಿಸಲಾಗಿದೆ ಎಂದರು.

ಬಡ ಹೃದಯ ರೋಗಿಗಳಿಗೆ ಉಚಿತ ಸ್ಟಂಟ್ ಅಳವಡಿಕೆ, ಆಂಜಿಯೋಪ್ಲಾಸ್ಟಿ ಚಿಕಿತ್ಸೆಗೆ 4 ಕೋಟಿ ಅನುದಾನ, ವಾಯುಮಾಲಿನ್ಯ ಶುದ್ಧೀಕರಣ ಘಟಕಗಳ ಸ್ಥಾಪನೆಗೆ ಒಂದು ಕೋಟಿ ಅನುದಾನ, ಆರೋಗ್ಯ ವಿಭಾಗದಲ್ಲಿ ಸೇವೆ ಸಲ್ಲಿಸುತ್ತಿರುವ ಲಿಂಕ್ ವರ್ಕರ್ಸ್‍ಗಳಿಗೆ ಪ್ರತಿ ತಿಂಗಳು ಒಂದು ಸಾವಿರ ರೂ.ಗಳ ಸಂಭಾವನೆ ಹೆಚ್ಚಿಸಲಾಗುವುದು.

ಬೊಮ್ಮನಹಳ್ಳಿ ವಲಯದಲ್ಲಿ 5 ಕೋಟಿ ರೂ. ವೆಚ್ಚದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ ಸ್ಥಾಪಿಸುವುದರ ಜತೆಗೆ ಆರೋಗ್ಯ ವಿಭಾಗಕ್ಕೆ ಈ ಬಾರಿ 131.78 ಕೋಟಿ ರೂ.ಗಳನ್ನು ನಿಗದಿಪಡಿಸಲಾಗಿದೆ ಎಂದರು.


Spread the love

About Laxminews 24x7

Check Also

ಬುಧವಾರದಂದು ಪ್ರಧಾನಿಗಳು ಆಗಮಿಸುವ ಸ್ಥಳವನ್ನು ಪರಿಶೀಲಿಸಿದ : ಬಾಲಚಂದ್ರ & ರಮೇಶ್ ಜಾರಕಿಹೊಳಿ

Spread the loveಬೆಳಗಾವಿ- ಪ್ರಧಾನಿ ನರೇಂದ್ರ ಮೋದಿಯವರು ಬೆಳಗಾವಿ ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್ ಅವರ ಪ್ರಚಾರಾರ್ಥವಾಗಿ ಬೆಳಗಾವಿಗೆ ಬರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ