Breaking News

ಸಂತೇಬೆನ್ನೂರು ಸುತ್ತಮುತ್ತ ಕರಡಿಗಳ ಹಾವಳಿ – ಅರಣ್ಯ ಇಲಾಖೆ ವಿರುದ್ಧ ರೈತರ ಆಕ್ರೋಶ

Spread the love

ದಾವಣಗೆರೆ: ಚನ್ನಗಿರಿ ತಾಲೂಕಿನ ಸಂತೇಬೆನ್ನೂರು  ಸುತ್ತಮುತ್ತ ಕರಡಿಗಳ (Bears) ಹಾವಳಿ ಹೆಚ್ಚಾಗಿದೆ. ಇದರಿಂದ ಗ್ರಾಮಸ್ಥರಲ್ಲಿ ಆತಂಕ ಹೆಚ್ಚಿದೆ.

ಸಂತೇಬೆನ್ನೂರು, ಕುಳೇನೂರು ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳ ಹೊಲ ಗದ್ದೆಗಳಲ್ಲಿ ಕರಡಿಗಳು ನಿರಂತರವಾಗಿ ಸಂಚಾರ ಮಾಡುತ್ತಿವೆ. ಮೆಕ್ಕೆಜೋಳದ ಹೊಲಗಳಲ್ಲಿ ಕರಡಿಗಳ ಓಡಾಟ ಕಂಡು ರೈತರು ಬೆಚ್ಚಿ ಬಿದ್ದಿದ್ದಾರೆ. ಮುಂಜಾನೆ ಹೊಲಕ್ಕೆ ತೆರಳಿದ್ದ ರೈತರಿಗೆ (Farmers) ಕರಡಿಗಳ ದರ್ಶನವಾಗಿದ್ದು, ಈ ದೃಶ್ಯವನ್ನು ಗ್ರಾಮಸ್ಥರು ಮೊಬೈಲ್‌ನಲ್ಲಿ ಸೆರೆಹಿಡಿದಿದ್ದಾರೆ.

ಅಡಿಕೆ ತೋಟಗಳ ಡ್ರಿಪ್ ಪೈಪ್ ಹಾಗೂ ಗೇಟ್‌ಗಳನ್ನು ಕರಡಿಗಳು ಕಿತ್ತುಹಾಕುತ್ತಿವೆ. ನಿರಂತರ ಕರಡಿಗಳ ಸಂಚಾರದಿಂದ ತೋಟಗಳಿಗೆ ತೆರಳಲು ರೈತರು ಹಿಂದೇಟು ಹಾಕುತ್ತಿದ್ದಾರೆ. ಕರಡಿಗಳ ಹಾವಳಿ ಬಗ್ಗೆ ಹಲವು ಬಾರಿ ಮಾಹಿತಿ ನೀಡಿದರೂ ಅರಣ್ಯ ಇಲಾಖೆ (Forest Department) ನಿರ್ಲಕ್ಷ್ಯ ವಹಿಸಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಕರಡಿಗಳನ್ನು ಸೆರೆಹಿಡಿದು ಸುರಕ್ಷಿತವಾಗಿ ಕಾಡಿಗೆ ಸ್ಥಳಾಂತರಿಸುವಂತೆ ಗ್ರಾಮಸ್ಥರ ಆಗ್ರಹಿಸಿದ್ದಾರೆ.


Spread the love

About Laxminews 24x7

Check Also

ಪ್ರದೀಪ್ ಈಶ್ವರ್ ಕುಟುಂಬಕ್ಕೆ ಮಹಾಲಕ್ಷ್ಮಿಯ ಆಗಮನ – ತಂದೆಯಾದ ಸಂಭ್ರಮದಲ್ಲಿ ಶಾಸಕ

Spread the loveಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಪ್ರದೀಪ್ ಈಶ್ವರ್ ಅವರ ಕುಟುಂಬದಲ್ಲಿ ಸಂಭ್ರಮ ಮನೆ ಮಾಡಿದೆ. ಶಾಸಕ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ