Breaking News

ಬಿಯರ್ ಸಾಗಿಸುತ್ತಿದ್ದ ಲಾರಿ ಪಲ್ಟಿ – 15 ಲಕ್ಷ ಮೌಲ್ಯದ ಮದ್ಯ ಮಣ್ಣುಪಾಲು

Spread the love

ಹಾಸನ: ಇಲ್ಲಿನ ದೊಡ್ಡಪುರ ಗ್ರಾಮದ ಬಳಿ ಬಿಯರ್  ಸಾಗಿಸುತ್ತಿದ್ದ ಲಾರಿ ಪಲ್ಟಿಯಾಗಿ ಸುಮಾರು 15 ಲಕ್ಷ ರೂ. ಮೌಲ್ಯದ ಮದ್ಯ ಮಣ್ಣುಪಾಲಾಗಿದೆ.

ಹಾಸನ  ನಗರದ ಕೈಗಾರಿಕಾಭಿವೃದ್ಧಿ ಪ್ರದೇಶದಲ್ಲಿರುವ ವುಡ್ ಪಿಕರ್ ಕಂಪನಿಯಿಂದ ಕೊಪ್ಪಳಕ್ಕೆ 1100 ಬಿಯರ್ ಬಾಟಲ್ ತುಂಬಿದ ಲಾರಿ ತೆರಳುತ್ತಿತ್ತು. ದೊಡ್ಡಪುರ ಗ್ರಾಮದ ಬಳಿ ಲಾರಿಯ ಟೈಯರ್ ಬ್ಲಾಸ್ಟ್ ಆಗಿ, ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಮೇಲೆ ಹತ್ತಿ ಪಲ್ಟಿಯಾಗಿದೆ.

ಲೆಜೆಂಡ್, ರಾಯಲ್, ಪವರ್ ಕೂಲ್, ಸನ್ನಿ ಬೀಚಸ್ ಕಂಪನಿಯ ಬಿಯರ್‌ಗಳು ಬಾಟೆಲ್‌ಗಳು , ಟಿನ್‌ಗಳು ರಸ್ತೆಯಲ್ಲೆಲ್ಲಾ ಚೆಲ್ಲಾಡಿವೆ. ಒಂದು ಬದಿಯ ರಸ್ತೆ ಸಂಚಾರ ಸಂಪೂರ್ಣ ಬಂದ್ ಆಗಿದೆ. ಸ್ಥಳಕ್ಕೆ ಹಾಸನ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


Spread the love

About Laxminews 24x7

Check Also

ವಂದೇ ಮಾತರಂನ ಮೊದಲ 2 ಚರಣ ಮಾತ್ರ ಹಾಡಬೇಕು – ಸರ್ಕಾರದ ಆದೇಶ ಪ್ರಶ್ನಿಸಿ ಹೈಕೋರ್ಟ್‌ಗೆ PIL

Spread the loveಬೆಂಗಳೂರು: ವಂದೇ ಮಾತರಂ  ಹಾಡಿನ ವಿವಾದ ರಾಜ್ಯ ಹೈಕೋರ್ಟ್  ಮೆಟ್ಟಿಲೇರಿದೆ. ಮೊದಲ 2 ಚರಣ ಮಾತ್ರ ಹಾಡಬೇಕು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ