Breaking News

ಗೂಡಂಗಡಿಗಳ ಸ್ವಚ್ಛತೆಗೆ ಮಹಾಪಾಲಿಕೆ ಸ್ಥಾಯಿ ಸಮಿತಿ ಅಧ್ಯಕ್ಷೆ ಲಕ್ಷ್ಮೀ ರಾಠೋಡ್ ಖಡಕ್ ಸೂಚನೆ

Spread the love

ಬೆಳಗಾವಿ: ನಗರದಲ್ಲಿರುವ ಗೂಡಂಗಡಿಗಳಲ್ಲಿ ಸ್ವಚ್ಚತೆಯ ಬಗ್ಗೆ ಪಾಲಿಕೆಯ ಅಧಿಕಾರಿಗಳು ಜಾಗೃತಿ ಮೂಡಿಸಬೇಕು ಎಂದು ಮಹಾನಗರ ಪಾಲಿಕೆ ಸ್ಥಾಯಿ ಸಮಿತಿ ಅಧ್ಯಕ್ಷೆ ಲಕ್ಷ್ಮೀ ರಾಠೋಡ್ ಸೂಚನೆ ನೀಡಿದರು‌. ಸೋಮವಾರ ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ನಡೆದ ಸ್ಥಾಯಿ ಸಮಿತಿ ಸಭೆಯಲ್ಲಿ ಮಾತನಾಡಿದರು.

ನಗರದಲ್ಲಿರುವ ಗೂಡಂಗಡಿಗಳಲ್ಲಿ ಸ್ವಚ್ಚತೆಯ ಬಗ್ಗೆ ಅರಿವು ಮೂಡಿಸಲು ಆರೋಗ್ಯ ಇಲಾಖೆಯಿಂದ ಕ್ರಮ‌ ಕೈಗೊಳ್ಳಬೇಕು. ಖೋಕಾ ಅಂಗಡಿಯಲ್ಲಿ ಸ್ವಚ್ಚತೆಯ ಕುರಿತು ಜಾಗೃತಿ ಮೂಡಿಸುವ ಕೆಲಸವನ್ನು ಪಾಲಿಕೆಯಿಂದ ಮಾಡಬೇಕು ಎಂದರು. ನಗರದಲ್ಲಿರುವ ಬಡಾವಣೆಗಳಲ್ಲಿ ಸ್ವಚ್ಚತೆಯ ಬಗ್ಗೆ ಸಂಬಂಧಿಸಿದವರಿಗೆ ಜಾಗೃತಿ ಮೂಡಿಸಬೇಕು. ಸ್ವಚ್ಚತೆ ಇಟ್ಟುಕೊಳ್ಳದವ ಬಡಾವಣೆವರಿಗೆ ಮುಲ್ಲಾಜಿಲ್ಲದೆ ‌ನೋಟಿಸ್ ಜಾರಿ ಮಾಡಬೇಕು ಎಂದರು. ನಗರದಲ್ಲಿ ಅತಿಕ್ರಮಣ ಮಾಡಿಕೊಂಡು ವ್ಯಾಪಾರ‌ ನಡೆಸುವ ವ್ಯಾಪಾರಿಗಳಿಗೆ ನೋಟಿಸ್ ನೀಡಿ ಅವುಗಳನ್ನು ತೆರವು ಮಾಡಬೇಕೆಂದು ತಿಳಿಸಿದರು. ಸಭೆಯಲ್ಲಿ ಮಹಾನಗರಪಾಲಿಕೆ ಆಡಳಿತ ಪಕ್ಷದ ನಾಯಕ ಹನುಮಂತ ಕೊಂಗಾಲಿ, ಪಾಲಿಕೆ ಉಪ ಆಯುಕ್ತ ಉದಯಕುಮಾರ ತಳವಾರ, ಪಾಲಿಕೆ ಕೌನ್ಸಿಲ್ ಕಾರ್ಯದರ್ಶಿ ಪ್ರಿಯಾಂಕಾ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.


Spread the love

About Laxminews 24x7

Check Also

ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನದ ಪೂರ್ವಭಾವಿ ಸಭೆ

Spread the loveಬೆಳಗಾವಿ: ನವದೆಹಲಿಯ ಅಂತಾರಾಷ್ಟ್ರೀಯ ಕಾರ್ಮಿಕ ಸಂಸ್ಥೆಯು ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನಕ್ಕಾಗಿ ಬೆಳಗಾವಿ ಜಿಲ್ಲೆಯನ್ನು ಪ್ರಾಯೋಗಿಕವಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ