Breaking News

ಬೆಳಗಾವಿಯ 26 ಪ್ರದೇಶದಲ್ಲಿ ನಿಷೇಧಾಜ್ಞೆ ಜಾರಿ ಮಾಡಿದ ಕಮಿಷನರ್

Spread the love

  1. ಬೆಳಗಾವಿ: ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ವಿವಿಧ ಇಲಾಖೆಗಳಲ್ಲಿನ ಖಾಲಿ ಹುದ್ದೆಗಳ ನೇರ ನೇಮಕಾತಿಗಾಗಿ ಇಂದು (ನ.21) ಬೆಳಗಾವಿ ನಗರದಲ್ಲಿ ನಡೆಯಲಿರುವ ಸ್ಪರ್ಧಾತ್ಮಕ ಪರೀಕ್ಷೆಯ ಹಿನ್ನೆಲೆಯಲ್ಲಿ ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ಕಾರಾಗೃಹ ಇಲಾಖೆ, ಕೆಇಎ, ಕ್ರೈಸ್ ಹಾಗೂ ಶಾಲಾ ಶಿಕ್ಷಣ ಇಲಾಖೆಯಲ್ಲಿನ ಉಳಿಕೆ ಮೂಲ ವೃಂದದ ವಿವಿಧ ಹುದ್ದೆಗಳ ನೇಮಕಾತಿಗಾಗಿ ಮಧ್ಯಾಹ್ನ 3 ಗಂಟೆಯಿಂದ ಸಂಜೆ 4.30ರವರೆಗೆ ನಗರದ ಒಟ್ಟು 26 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ.

ಪರೀಕ್ಷೆಗಳು ಸುಗಮವಾಗಿ ಹಾಗೂ ಶಾಂತಿಯುತವಾಗಿ ನಡೆಯುವ ಉದ್ದೇಶದಿಂದ ಎಲ್ಲ ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ವಿಧಿಸಿ ನಗರ ಪೊಲೀಸ್ ಆಯುಕ್ತ ಪ್ರಕಾಶ್ ನಿಕಮ್ ಆದೇಶ ಹೊರಡಿಸಿದ್ದಾರೆ.

 


Spread the love

About Laxminews 24x7

Check Also

ಮಗನನ್ನೇ ಹತ್ಯೆಗೈದ ಮಲತಂದೆ, ರೂಮ್ ಲಾಕ್ ಮಾಡಿ ಎಸ್ಕೇಪ್: ಮೃತದೇಹದೊಂದಿಗೆ ಮೂರು ದಿನ ಕಳೆದ ತಾಯಿ

Spread the loveಮಗನನ್ನೇ ಹತ್ಯೆಗೈದ ಮಲತಂದೆ: ರೂಮ್ ಲಾಕ್ ಮಾಡಿ ಎಸ್ಕೇಪ್: ಮೃತದೇಹದೊಂದಿಗೆ ಮೂರು ದಿನ ಕಳೆದ ತಾಯಿ ಮಲತಂದೆಯೊಬ್ಬ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ