Breaking News

ಬೆಳಗಾವಿಯಲ್ಲಿ ಇಂದಿರಾ ಕ್ಯಾಂಟೀನ್ ಉದ್ಘಾಟನೆಗಾಗಿ ಕಿತ್ತಾಡಿಕೊಂಡ ಕಾಂಗ್ರೆಸ್–ಬಿಜೆಪಿ ಕಾರ್ಯಕರ್ತರು

Spread the love

ಬೆಳಗಾವಿ: ಬೆಳಗಾವಿ ಜಿಲ್ಲೆಯ ರಾಯಬಾಗ ಪಟ್ಟಣದಲ್ಲಿ ಇಂದು ನಡೆದ ಇಂದಿರಾ ಕ್ಯಾಂಟೀನ್ ಉದ್ಘಾಟನಾ ಸಮಾರಂಭದ ವೇಳೆ ಕಾಂಗ್ರೆಸ್ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ಕೆಲಕಾಲ ವಾಗ್ವಾದ ನಡೆಯಿತು.

ಕಾರ್ಯಕ್ರಮವನ್ನು ಪ್ರೊಟೋಕಾಲ್ ಪ್ರಕಾರ ನಡೆಸಬೇಕು ಎಂದು ಬಿಜೆಪಿ ಕಾರ್ಯಕರ್ತರು ಆಗ್ರಹಿಸಿದರು. ಈ ವಿಚಾರವಾಗಿ ಎರಡೂ ಪಕ್ಷಗಳ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದಿದ್ದು, ಸ್ಥಳದಲ್ಲಿ ಕೆಲಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾಯಿತು.

ನಂತರ ಸ್ಥಳದಲ್ಲಿದ್ದ ಪೊಲೀಸ್ ಅಧಿಕಾರಿಗಳು ಹಾಗೂ ಹಿರಿಯರು ಮಧ್ಯಪ್ರವೇಶಿಸಿ ಎರಡೂ ಪಕ್ಷಗಳ ಕಾರ್ಯಕರ್ತರನ್ನು ಸಮಾಧಾನಪಡಿಸಿದರು.ಇದಾದ ಬಳಿಕ ಕಾರ್ಯಕ್ರಮವು ಮುಂದುವರಿಯಿತು.


Spread the love

About Laxminews 24x7

Check Also

ರೈತರ ಕುಟುಂಬಗಳ ಸಂಕಷ್ಟಕ್ಕೆ ಸ್ಪಂದಿಸಿದ ಲಕ್ಷ್ಮೀ ಹೆಬ್ಬಾಳಕರ್: ಪರಿಹಾರದ ಚೆಕ್ ವಿತರಣೆ, ಸಾಂತ್ವನ

Spread the loveಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ವಿವಿಧ ಗ್ರಾಮಗಳಲ್ಲಿ ರೈತರು ಆತ್ಮಹತ್ಯೆ ಮಾಡಿಕೊಂಡಿರುವ ಹಾಗೂ ಆಕಸ್ಮಿಕವಾಗಿ ಸಾವನ್ನಪ್ಪಿರುವ ಕುಟುಂಬಗಳಿಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ